ನ್ಯೂ ಜನರೇಷನ್ ಮಾದರಿಗಳೊಂದಿಗೆ ಹೊಸ ಬ್ರಾಂಡ್ ಲೋಗೋ ಬಿಡುಗಡೆ ಮಾಡಲಿದೆ ಮಹೀಂದ್ರಾ

ಕಾರು ಮಾರಾಟದಲ್ಲಿ ಹಲವಾರು ಹೊಸ ಬದಲಾವಣೆಗಳೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಮಹೀಂದ್ರಾ ಕಂಪನಿಯು ಕಾಲಕ್ಕೆ ತಕ್ಕಂತೆ ಹಲವಾರು ಮಾರ್ಪಾಡುಗಳನ್ನು ಅಳವಡಿಸಿಕೊಂಡಿದ್ದು, ಇದೀಗ ತನ್ನ ಬ್ರಾಂಡ್ ಲೋಗೋ ವಿನ್ಯಾಸವನ್ನು ಬದವಾಣೆಗೊಳಿಸಲು ಸಜ್ಜುಗೊಂಡಿದೆ.

ಹೊಸ ಬ್ರಾಂಡ್ ಲೋಗೋ ಬಿಡುಗಡೆ ಮಾಡಲಿದೆ ಮಹೀಂದ್ರಾ

ಬ್ರಾಂಡ್‌ನ ಹೊಸ ಲೋಗೋ ವಿನ್ಯಾಸವನ್ನು 2021ರ ಆರಂಭದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ನ್ಯೂ ಜನರೇಷನ್ ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೋದಲ್ಲಿ ಪರಿಚಯಿಸಲು ಸಜ್ಜಾಗಿದ್ದು, ಹೊಸ ಲೋಗೋ ಆಧುನಿಕ ವಾಹನಗಳ ಮಾದರಿಗಳ ವಿನ್ಯಾಸಕ್ಕೆ ಪೂರಕವಾಗಿರಲಿದೆ. ಹೊಸ ಲೋಗೋ ಕುರಿತು ಇದುವರೆಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲವಾದರೂ ಹೊಸ ಲೋಗೋ ನ್ಯೂ ಜನರೇಷನ್ ಮಾದರಿಗಳೊಂದಿಗೆ ಮತ್ತಷ್ಟು ಆಕರ್ಷಣೆ ಮಾಡಲಿದ್ದು, ನ್ಯೂ ಜನರೇಷನ್ ಕಾರು ಮಾದರಿಗಳು ಸಹ ಹಲವಾರು ಹೊಸ ಬದಲಾವಣೆಗಳೊಂದಿಗೆ ಅಭಿವೃದ್ದಿಗೊಳ್ಳುತ್ತಿವೆ.

ಹೊಸ ಬ್ರಾಂಡ್ ಲೋಗೋ ಬಿಡುಗಡೆ ಮಾಡಲಿದೆ ಮಹೀಂದ್ರಾ

ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೋ ಮಾದರಿಗಳನ್ನು ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸುತ್ತಿದ್ದು, ಇದೇ ವರ್ಷಾಂತ್ಯಕ್ಕೆ ಬಿಡುಗಡೆಯಾಗಬೇಕಿದ್ದ ಹೊಸ ಕಾರುಗಳು ಕರೋನಾ ವೈರಸ್ ಪರಿಣಾಮ 2021ಕ್ಕೆ ಮುಂದುಡಿಕೆ ಮಾಡಲಾಗಿದೆ.

ಹೊಸ ಬ್ರಾಂಡ್ ಲೋಗೋ ಬಿಡುಗಡೆ ಮಾಡಲಿದೆ ಮಹೀಂದ್ರಾ

ಇದರಲ್ಲಿ ಎಕ್ಸ್‌ಯುವಿ ಎರಡನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿರುವ ಎಕ್ಸ್‌ಯುವಿ500 ಕಾರು ಮಾದರಿಯು ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ಹೊಸ ಬ್ರಾಂಡ್ ಲೋಗೋ ಬಿಡುಗಡೆ ಮಾಡಲಿದೆ ಮಹೀಂದ್ರಾ

ಬಿಎಸ್-6 ಎಕ್ಸ್‌ಯುವಿ500 ಮಾದರಿಯು ಸದ್ಯ ಡೀಸೆಲ್ ಎಂಜಿನ್‌ನೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿದ್ದು, ನ್ಯೂ ಜನರೇಷನ್ ಮಾದರಿಯು ಪೆಟ್ರೋಲ್ ಎಂಜಿನ್ ಸೇರಿದಂತೆ ಹಲವು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸಿದ್ದತೆಯಲ್ಲಿದೆ. ಹೊಸ ಮಾಹಿತಿಗಳ ಪ್ರಕಾರ ರೋಡ್ ಟೆಸ್ಟಿಂಗ್ ವೇಳೆ ಹೊಸ ಎಕ್ಸ್‌ಯುವಿ500 ಕಾರು ಮಾದರಿಯಲ್ಲಿ ಪೂರ್ಣ ಪ್ರಮಾಣದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಜೊತೆಗೆ ಕಲರ್ ಟಿಎಫ್‌ಟಿ ಸೌಲಭ್ಯವನ್ನು ನೀಡಲಾಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಯಲ್ಲಿನ ಸೆಮಿ ಡಿಜಿಟಲ್ ಯುನಿಟ್‌ಗಿಂತಲೂ ಸಾಕಷ್ಟು ಆಕರ್ಷಕವಾಗಿದೆ.

ಹೊಸ ಬ್ರಾಂಡ್ ಲೋಗೋ ಬಿಡುಗಡೆ ಮಾಡಲಿದೆ ಮಹೀಂದ್ರಾ

ಹಾಗೆಯೇ ನ್ಯೂ ಜನರೇಷನ್ ಮಾದರಿಯಲ್ಲಿ ನವೀಕರಿಸಲಾದ ಮುಂಭಾಗದ ಗ್ರಿಲ್, ಹೊಸ ವಿನ್ಯಾಸದ ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಹಿಂಭಾಗದಲ್ಲಿ ನವೀಕರಿಸಲಾದ ಬಂಪರ್ ಪ್ರಮುಖ ಆಕರ್ಷಣೆಯಾಗಲಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಹೊಸ ಬ್ರಾಂಡ್ ಲೋಗೋ ಬಿಡುಗಡೆ ಮಾಡಲಿದೆ ಮಹೀಂದ್ರಾ

ಹೊಸ ಕಾರು ಪ್ರಸ್ತುತ ಮಾದರಿಗಿಂತಲೂ ಭಾರೀ ಬದಲಾವಣೆಯನ್ನು ಪಡೆದುಕೊಂಡಿದ್ದು, ನವೀಕೃತ ಮುಂಭಾಗದ ಗ್ರಿಲ್, ಬ್ಯಾನೆಟ್, ಬಂಪರ್ ಮತ್ತು ಎಲ್ಇಡಿ ಹೆಡ್‌ಲ್ಯಾಂಪ್ ಕ್ಲಸ್ಟರ್, ಹಿಂಭಾಗ ಬಂಪರ್, ಟೈಲ್‌ಗೆಟ್ ವಿನ್ಯಾಸವು ಆಕರ್ಷಕವಾಗಿರಲಿವೆ. ಹಾಗೆಯೇ ಕಾರಿನ ಒಳಭಾಗದ ತಾಂತ್ರಿಕ ಅಂಶಗಳಲ್ಲೂ ಸಾಕಷ್ಟು ಬದಲಾವಣೆಗೊಳಿಸಲಾಗಿದ್ದು, ವೆಂಟೆಲೆಟೆಡ್ ಆಸನ ಸೇರಿದಂತೆ ಹಲವು ಐಷಾರಾಮಿ ಫೀಚರ್ಸ್ ಹೊಸ ಕಾರಿನಲ್ಲಿರಲಿವೆ.

ಹೊಸ ಬ್ರಾಂಡ್ ಲೋಗೋ ಬಿಡುಗಡೆ ಮಾಡಲಿದೆ ಮಹೀಂದ್ರಾ

ಜೊತೆಗೆ ನ್ಯೂ ಜನರೇಷನ್ ಎಕ್ಸ್‌ಯುವಿ500 ಕಾರು ಮಾದರಿಯು 2.2 ಡೀಸೆಲ್ ಎಂಜಿನ್ ಜೊತೆ ಹೊಸ ಥಾರ್‌ನಲ್ಲಿ ನೀಡಲಾಗಿರುವ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಪಡೆದುಕೊಳ್ಳಲಿದ್ದು, ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಗಮನಸೆಳೆಯಲಿವೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಬ್ರಾಂಡ್ ಲೋಗೋ ಬಿಡುಗಡೆ ಮಾಡಲಿದೆ ಮಹೀಂದ್ರಾ

ಇದರ ಜೊತೆಗೆ ಸ್ಕಾರ್ಪಿಯೋದಲ್ಲಿ ಮಾದರಿಯ ವಿನ್ಯಾಸದಲ್ಲೂ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸಿರುವ ಮಹೀಂದ್ರಾ ಕಂಪನಿಯು ಡೀಸೆಲ್ ಮಾದರಿಯೊಂದಿಗೆ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ನೀಡುವ ಸಿದ್ದತೆಯಲ್ಲಿದ್ದು, ಹೊಸ ಕಾರುಗಳು 2021ರ ಮಾರ್ಚ್ ಒಳಗಾಗಿ ಮಾರುಕಟ್ಟೆ ಪ್ರವೇಶಿಸಲಿವೆ.

Article Published On: Wednesday, December 9, 2020, 13:19 [IST]
English summary
Mahindra Will Debut It's New Brand Logo Early Next Year. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+