ಆಟೋ ಎಕ್ಸ್‌ಪೋ 2020: 18 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಮಹೀಂದ್ರಾ

ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ದೆಹಲಿ ಆಟೋ ಎಕ್ಸ್‌ಪೋ ಮುಂದಿನ ತಿಂಗಳು ಫೆಬ್ರುವರಿ 7ರಿಂದ ಆರಂಭವಾಗುತ್ತಿದ್ದು, ಮಹೀಂದ್ರಾ ಸಂಸ್ಥೆಯು ತನ್ನ ಹೊಸ ವಾಹನಗಳ ಮಾದರಿಗಳನ್ನು ಪ್ರದರ್ಶನಗೊಳಿಸಲು ಭರ್ಜರಿ ಸಿದ್ದತೆ ನಡೆಸಿದೆ.

ಆಟೋ ಎಕ್ಸ್‌ಪೋ 2020: 18 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಮಹೀಂದ್ರಾ

ಮಹೀಂದ್ರಾ ಸಂಸ್ಥೆಯು ಸದ್ಯ ಹೊಸ ವಾಹನಗಳ ಉತ್ಪಾದನೆಯಲ್ಲಿ ಮಹತ್ವದ ಬದಲಾವಣೆ ತರುತ್ತಿದ್ದು, ಬಿಎಸ್-6 ಮಾದರಿಗಳ ಜೊತೆಗೆ ವಿನೂತನ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ಈ ಬಾರಿಯ ಆಟೋ ಎಕ್ಸ್ ‌ಪೋದಲ್ಲಿ ಪ್ರದರ್ಶನಗೊಳಿಸಲಿದೆ. ಮಾಹಿತಿಗಳ ಪ್ರಕಾರ ಮಹೀಂದ್ರಾ ಸಂಸ್ಥೆಯು ಒಟ್ಟು 18 ವಾಹನಗಳನ್ನು ಪ್ರದರ್ಶನಗೊಳಿಸಲಿದ್ದು, ಇದರಲ್ಲಿ ಪ್ರಯಾಣಿಕರ ವಾಹನಗಳು ಮಾತ್ರವಲ್ಲದೇ ಕೆಲವು ವಾಣಿಜ್ಯ ಬಳಕೆಯ ವಾಹನಗಳು ಸಹ ಸೇರ್ಪಡೆಯಾಗಿವೆ.

ಆಟೋ ಎಕ್ಸ್‌ಪೋ 2020: 18 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಮಹೀಂದ್ರಾ

ಆದರೆ ಆಟೋ ಎಕ್ಸ್‌ಪೋ ಆರಂಭಕ್ಕೂ ಮುನ್ನ ಆಫ್ ರೋಡ್ ಕಾರು ಖರೀದಿದಾರರರೇ ನಿರಾಶೆ ಉಂಟು ಮಾಡಿರುವ ಮಹೀಂದ್ರಾ ಸಂಸ್ಥೆಯು ನ್ಯೂ ಜನರೇಷನ್ ಥಾರ್ ಹೊರತುಪಡಿಸಿ ಉಳಿದೆಲ್ಲಾ ಕಾರು ಮಾದರಿಗಳನ್ನು ಪ್ರದರ್ಶನಗೊಳಿಸುತ್ತಿದೆ.

ಆಟೋ ಎಕ್ಸ್‌ಪೋ 2020: 18 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಮಹೀಂದ್ರಾ

ನ್ಯೂ ಜನರೇಷನ್ ಥಾರ್ ಆವೃತ್ತಿಯನ್ನು 2020ರ ಆಟೋ ಎಕ್ಸ್‌ಪೋ ಪ್ರದರ್ಶನದಿಂದ ಕೈಬಿಟ್ಟಿರುವ ಬಗ್ಗೆ ಯಾವುದೇ ಮಾಹಿತಿಯನ್ನು ನೀಡದ ಮಹೀಂದ್ರಾ ಸಂಸ್ಥೆಯು ಸದ್ಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯಲ್ಲಿ ನಿರತವಾಗಿದ್ದು, ಆಟೋ ಎಕ್ಸ್‌ಪೋ ನಂತರ ಬಿಡುಗಡೆಯ ನೀರಿಕ್ಷೆಯಲ್ಲಿದ್ದ ಹೊಸ ಕಾರು ಇನ್ನಷ್ಟು ವಿಳಂಬವಾಗುವ ಸಾಧ್ಯತೆಗಳಿವೆ.

ಆಟೋ ಎಕ್ಸ್‌ಪೋ 2020: 18 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಮಹೀಂದ್ರಾ

ಇನ್ನು ಮಹೀಂದ್ರಾ ಸಂಸ್ಥೆಯು ಸದ್ಯ ಬಿಎಸ್-6 ಎಂಜಿನ್‌ನೊಂದಿಗೆ ತನ್ನ ಪ್ರಮುಖ ಎಸ್‌ಯುವಿ ಕಾರುಗಳ ನ್ಯೂ ಜನರೇಷನ್ ಮಾದರಿಗಳನ್ನು ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರುಗಳ ಎಂಜಿನ್ ಮತ್ತು ಪ್ರೀಮಿಯಂ ಫೀಚರ್ಸ್‌ಗಳಲ್ಲಿ ಮಾತ್ರವಲ್ಲದೇ ಪ್ರಮಾಣಿಕರ ಸುರಕ್ಷತೆಯಲ್ಲೂ ಗಮರ್ನಾಹ ಬದಲಾವಣೆ ತಂದಿದೆ. ಭಾರತದಲ್ಲಿ ಸದ್ಯ ಬಿಎಸ್-4(ಭಾರತ್ ಸ್ಟೇಜ್) ವೈಶಿಷ್ಟ್ಯತೆಯುಳ್ಳ ವಾಹನಗಳು ಮಾತ್ರ ಮಾರಾಟಗೊಳ್ಳುತ್ತಿದ್ದು, ಇದು ಕೂಡಾ ಮುಂಬರುವ ಏಪ್ರಿಲ್ 1ರಿಂದ ನಿಷೇಧಗೊಂಡು ಬಿಎಸ್-6 ನಿಯಮವು ಜಾರಿಗೆ ಬರಲಿದೆ.

ಆಟೋ ಎಕ್ಸ್‌ಪೋ 2020: 18 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಮಹೀಂದ್ರಾ

ಹೀಗಾಗಿ ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಮಹೀಂದ್ರಾ ಸೇರಿದಂತೆ ಬಹುತೇಕ ವಾಹನ ಉತ್ಪಾದನಾ ಸಂಸ್ಥೆಗಳು ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳನ್ನು ಬಿಡುಗಡೆಗೊಳಿಸುತ್ತಿದ್ದು, ಮಹೀಂದ್ರಾ ಕೂಡಾ ತನ್ನ ವಾಹನ ಮಾದರಿಗಳನ್ನು ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಲಿದೆ.

ಆಟೋ ಎಕ್ಸ್‌ಪೋ 2020: 18 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಮಹೀಂದ್ರಾ

ಪ್ರದರ್ಶನಗೊಳ್ಳುವ ಕಾರುಗಳಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಮರಾಜೋ, ಟಿಯುವಿ300 ಪ್ಲಸ್, ಟಿಯುವಿ300, ಎಕ್ಸ್‌ಯುವಿ500, ಎಕ್ಸ್‌ಯುವಿ300 ಮತ್ತು ನೆಕ್ಸ್ಟ್ ಜನರೇಷನ್ ಸ್ಕಾರ್ಪಿಯೋ, ಬೊಲೆರೊ ಪ್ರಮುಖವಾಗಿದ್ದು, ಇದರೊಂದಿಗೆ ಎಲೆಕ್ಟ್ರಿಕ್ ಆವೃತ್ತಿಗಳಾದ ಕೆಯುವಿ100 ಇವಿ, ಎಕ್ಸ್‌ಯುವಿ300 ಇವಿ ಸೇರಿದಂತೆ ಮತ್ತೆರಡು ಹೊಸ ಎಲೆಕ್ಟ್ರಿಕ್ ಕಾನ್ಸೆಪ್ಟ್‌ಗಳು ಭಾಗಿಯಾಗಲಿವೆ.

ಆಟೋ ಎಕ್ಸ್‌ಪೋ 2020: 18 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಮಹೀಂದ್ರಾ

ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಮಹೀಂದ್ರಾ ಹೊಸ ಕಾರುಗಳ ಎಂಜಿನ್ ಜೊತೆಗೆ ಪ್ರಯಾಣಿಕ ಸುರಕ್ಷತೆಗಾಗಿ ಹಲವಾರು ಹೊಸ ಸುರಕ್ಷಾ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಸ್ಟ್ಯಾಂಡರ್ಡ್ ಫೀಚರ್ಸ್‌ಗಳಾದ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ಆಟೋ ಎಕ್ಸ್‌ಪೋ 2020: 18 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಮಹೀಂದ್ರಾ

ಹಾಗೆಯೇ ಟಾಪ್ ಎಂಡ್‌ ಆವೃತ್ತಿಗಳಲ್ಲಿ 6 ಏರ್‌ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

ಆಟೋ ಎಕ್ಸ್‌ಪೋ 2020: 18 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಮಹೀಂದ್ರಾ

ಇದರೊಂದಿಗೆ ಕಾರು ಕಳ್ಳತನಗಳಿಗೆ ಬ್ರೇಕ್ ಹಾಕಲು ಜಿಯೋ ಫೆನ್ಸ್ ಅಲರ್ಟ್ ಸೇರಿದಂತೆ ಸೆಂಟರ್ ಲಾಕಿಂಗ್ ಸಿಸ್ಟಂ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಒಟ್ಟಿನಲ್ಲಿ ಪ್ರಯಾಣಿಕರ ಸುರಕ್ಷೆತೆಗಾಗಿ ಗರಿಷ್ಠ ಮಟ್ಟದಲ್ಲಿ ಸುರಕ್ಷಾ ಸೌಲಭ್ಯ ಗಳನ್ನು ಅಳವಡಿಸಿರುವುದೇ ಈ ಬಾರಿ ಹೊಸ ಕಾರುಗಳ ಪ್ರಮುಖ ಆಕರ್ಷಣೆಯಾಗಲಿದೆ.

Article Published On: Thursday, January 23, 2020, 17:34 [IST]
English summary
Mahindra will showcase 18 vehicle in auto expo. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+