ಬಿಡುಗಡೆಗೆ ಸಿದ್ದವಾಗಿರುವ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

2020ರ ಆಟೋ ಎಕ್ಸ್‌ಪೋದಲ್ಲಿ ಕೆಯುವಿ100 ಎಲೆಕ್ಟ್ರಿಕ್ ಕಾರು ಬಿಡುಗಡೆಗೊಳಿಸಿ ಮಾರಾಟಕ್ಕೆ ಅಧಿಕೃತ ಚಾಲನೆ ನೀಡಿರುವ ಮಹೀಂದ್ರಾ ಸಂಸ್ಥೆಯು ಶೀಘ್ರದಲ್ಲೇ ಮತ್ತೊಂದು ಎಲೆಕ್ಟ್ರಿಕ್ ಕಾರು ಆವೃತ್ತಿಯಾದ ಇಎಕ್ಸ್‌ಯುವಿ300 ಬಿಡುಗಡೆಗೆ ಭರ್ಜರಿ ಸಿದ್ದತೆ ನಡೆಸಿದೆ.

ಬಿಡುಗಡೆಗೆ ಸಿದ್ದವಾಗಿರುವ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಮಹೀಂದ್ರಾ ಸಂಸ್ಥೆಯು ಸದ್ಯ ಹೊಸ ನಿಯಮಗಳಿಗೆ ಅನುಗುಣವಾಗಿ ತನ್ನ ಭವಿಷ್ಯದ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ಸುರಕ್ಷತೆ ನೀಡುವ ಉದ್ದೇಶದಿಂದ ಈ ಹಿಂದಿನ ಇ2ಓ ಪ್ಲಸ್ ಕಾರಿನ ಉತ್ಪಾದನೆ ಸ್ಥಗಿತಗೊಳಿಸಿ ಹೊಸ ಕಾರು ಉತ್ಪನ್ನಗಳ ಮೇಲೆ ಹೆಚ್ಚಿನ ಗಮನಹರಿಸುತ್ತಿದೆ. ಗ್ರಾಹಕರ ಬೇಡಿಕೆಯೆಂತೆ ವಿಶೇಷ ಫೀಚರ್ಸ್ ಮತ್ತು ಅತ್ಯುತ್ತಮ ಬ್ಯಾಟರಿ ಆಯ್ಕೆ ಹೊಂದಲಿರುವ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಭಾರೀ ಪ್ರಮಾಣದ ಹೂಡಿಕೆ ಮಾಡಿದೆ.

ಬಿಡುಗಡೆಗೆ ಸಿದ್ದವಾಗಿರುವ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಕೆಯುವಿ100 ಎಲೆಕ್ಟ್ರಿಕ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 8.25 ಲಕ್ಷ ಬೆಲೆಯೊಂದಿಗೆ ಬಿಡುಗಡೆಯಾಗಿದ್ದು, 40kW ಎಲೆಕ್ಟ್ರಿಕ್ ಮೋಟಾರ್ ಪ್ರತಿ ಚಾರ್ಜ್‌ಗೆ 150 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಬಿಡುಗಡೆಗೆ ಸಿದ್ದವಾಗಿರುವ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಆದರೆ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಮಾದರಿಯು ತುಸು ದುಬಾರಿ ಬೆಲೆಯೊಂದಿಗೆ ಅತಿ ಹೆಚ್ಚು ಮೈಲೇಜ್ ಪ್ರೇರಿತ ಲೀಥಿಯಂ ಅಯಾನ್ ಬ್ಯಾಟರಿ ಬಳಕೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಹೊಸ ಕಾರಿನ ಕುರಿತಂತೆ ಮಹೀಂದ್ರಾ ಸಂಸ್ಥೆಯು ಕೆಲವು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದೆ.

ಬಿಡುಗಡೆಗೆ ಸಿದ್ದವಾಗಿರುವ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ನೆಕ್ಸಾನ್‌ಗಿಂತಲೂ ಅತ್ಯುತ್ತಮ ಮೈಲೇಜ್

ಸದ್ಯ ಮಾರುಕಟ್ಟೆಗೆ ಪ್ರವೇಶಿಸುತ್ತಿರುವ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರು ಮಾದರಿಯು ಟಾಟಾದ ನೆಕ್ಸಾನ್ ಎಲೆಕ್ಟ್ರಿಕ್ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದ್ದು, ನೆಕ್ಸಾನ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆ ಹೊಂದಿದೆ. ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ 30.2 kWh ಲೀಥಿಯಂ ಅಯಾನ್ ಬ್ಯಾಟರಿಯನ್ನು ಅಳವಡಿಸಲಾಗಿದ್ದು, ಇದು ಪ್ರತಿ ಚಾರ್ಜ್‌ಗೆ 312 ಕಿ.ಮೀ ಮೈಲೇಜ್ ನೀಡುತ್ತದೆ.

ಬಿಡುಗಡೆಗೆ ಸಿದ್ದವಾಗಿರುವ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಆದರೆ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರು ನೆಕ್ಸಾನ್ ಮಾದರಿಯಲ್ಲೇ ಬೆಲೆ ಪಡೆದುಕೊಳ್ಳಲಿದ್ದರೂ ನೆಕ್ಸಾನ್ ಕಾರಿಗಿಂತಲೂ ಹೆಚ್ಚು ಮೈಲೇಜ್ ಹೊಂದಿದ್ದು, ಪ್ರತಿ ಚಾರ್ಜ್‌ಗೆ 350ಕಿ.ಮೀ ನಿಂದ 370ಕಿ.ಮೀ ಮೈಲೇಜ್ ರೇಂಜ್ ಹೊಂದಿರಲಿದೆಯೆಂತೆ.

ಬಿಡುಗಡೆಗೆ ಸಿದ್ದವಾಗಿರುವ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಮೈಲೇಜ್ ಮಾಹಿತಿ ಹೊರತಾಗಿ ಲೀಥಿಯಂ ಅಯಾನ್ ಬ್ಯಾಟರಿ ಮಾಹಿತಿಯನ್ನು ಮಾಹಿತಿ ಬಿಟ್ಟುಕೊಡದ ಮಹೀಂದ್ರಾ ಸಂಸ್ಥೆಯು ಶೀಘ್ರದಲ್ಲೇ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸುವುದಾಗಿ ಹೇಳಿಕೊಂಡಿದ್ದು, ಹೊಸ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ರೂ.15 ಲಕ್ಷದಿಂದ ರೂ.17 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಬಿಡುಗಡೆಗೆ ಸಿದ್ದವಾಗಿರುವ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಜೊತೆಗೆ ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ ಸಾಮಾನ್ಯ ಎಕ್ಸ್‌ಯುವಿ300 ಮಾದರಿಯೆಂತೆ ಬಹುತೇಕ ಪ್ರೀಮಿಯಂ ಸೌಲಭ್ಯಗಳನ್ನು ಒದಗಿಸಲು ನಿರ್ಧರಿಸಿರುವ ಮಹೀಂದ್ರಾ ಸಂಸ್ಥೆಯು ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರಿಗೂ ಪೈಪೋಟಿ ನೀಡುವ ತವಕದಲ್ಲಿದೆ.

ಬಿಡುಗಡೆಗೆ ಸಿದ್ದವಾಗಿರುವ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಜೆಡ್ಎಸ್ ಎಲೆಕ್ಟ್ರಿಕ್ ಕಾರು 44.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 340 ಕಿ.ಮೀ ಮೈಲೇಜ್ ಹೊಂದಿದ್ದು, ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 20.58 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು 23.58 ಲಕ್ಷ ಬೆಲೆ ಹೊಂದಿದೆ. ಜೊತೆಗೆ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.

ಬಿಡುಗಡೆಗೆ ಸಿದ್ದವಾಗಿರುವ ಮಹೀಂದ್ರಾ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?

ಇದೀಗ ಬಿಡುಗಡೆಯಾಗುತ್ತಿರುವ ಎಕ್ಸ್‌ಯುವಿ 300 ಎಲೆಕ್ಟ್ರಿಕ್ ಮಾದರಿಯು ನೆಕ್ಸಾನ್ ಮತ್ತು ಜೆಡ್ಎಸ್ ಎಲೆಕ್ಟ್ರಿಕ್ ಕಾರಿಗಿಂತಲೂ ಉತ್ತಮ ಮೈಲೇಜ್‌ನೊಂದಿಗೆ ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾಗುತ್ತಿದ್ದು, ಹೊಸ ಕಾರು ಮುಂಬರುವ ಜೂನ್ ಅಥವಾ ಜುಲೈ ಹೊತ್ತಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

Most Read Articles

Kannada
English summary
Mahindra XUV300 electric range motor details. Read in Kannada.
Story first published: Thursday, February 20, 2020, 17:27 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X