Just In
- 8 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 9 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 9 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 9 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಗೆ ಸಿದ್ದವಾಗಿರುವ ಮಹೀಂದ್ರಾ ಎಕ್ಸ್ಯುವಿ300 ಎಲೆಕ್ಟ್ರಿಕ್ ಕಾರಿನ ಮೈಲೇಜ್ ಎಷ್ಟು ಗೊತ್ತಾ?
2020ರ ಆಟೋ ಎಕ್ಸ್ಪೋದಲ್ಲಿ ಕೆಯುವಿ100 ಎಲೆಕ್ಟ್ರಿಕ್ ಕಾರು ಬಿಡುಗಡೆಗೊಳಿಸಿ ಮಾರಾಟಕ್ಕೆ ಅಧಿಕೃತ ಚಾಲನೆ ನೀಡಿರುವ ಮಹೀಂದ್ರಾ ಸಂಸ್ಥೆಯು ಶೀಘ್ರದಲ್ಲೇ ಮತ್ತೊಂದು ಎಲೆಕ್ಟ್ರಿಕ್ ಕಾರು ಆವೃತ್ತಿಯಾದ ಇಎಕ್ಸ್ಯುವಿ300 ಬಿಡುಗಡೆಗೆ ಭರ್ಜರಿ ಸಿದ್ದತೆ ನಡೆಸಿದೆ.
ಮಹೀಂದ್ರಾ ಸಂಸ್ಥೆಯು ಸದ್ಯ ಹೊಸ ನಿಯಮಗಳಿಗೆ ಅನುಗುಣವಾಗಿ ತನ್ನ ಭವಿಷ್ಯದ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ಸುರಕ್ಷತೆ ನೀಡುವ ಉದ್ದೇಶದಿಂದ ಈ ಹಿಂದಿನ ಇ2ಓ ಪ್ಲಸ್ ಕಾರಿನ ಉತ್ಪಾದನೆ ಸ್ಥಗಿತಗೊಳಿಸಿ ಹೊಸ ಕಾರು ಉತ್ಪನ್ನಗಳ ಮೇಲೆ ಹೆಚ್ಚಿನ ಗಮನಹರಿಸುತ್ತಿದೆ. ಗ್ರಾಹಕರ ಬೇಡಿಕೆಯೆಂತೆ ವಿಶೇಷ ಫೀಚರ್ಸ್ ಮತ್ತು ಅತ್ಯುತ್ತಮ ಬ್ಯಾಟರಿ ಆಯ್ಕೆ ಹೊಂದಲಿರುವ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಭಾರೀ ಪ್ರಮಾಣದ ಹೂಡಿಕೆ ಮಾಡಿದೆ.
ಕೆಯುವಿ100 ಎಲೆಕ್ಟ್ರಿಕ್ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 8.25 ಲಕ್ಷ ಬೆಲೆಯೊಂದಿಗೆ ಬಿಡುಗಡೆಯಾಗಿದ್ದು, 40kW ಎಲೆಕ್ಟ್ರಿಕ್ ಮೋಟಾರ್ ಪ್ರತಿ ಚಾರ್ಜ್ಗೆ 150 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.
ಆದರೆ ಎಕ್ಸ್ಯುವಿ300 ಎಲೆಕ್ಟ್ರಿಕ್ ಮಾದರಿಯು ತುಸು ದುಬಾರಿ ಬೆಲೆಯೊಂದಿಗೆ ಅತಿ ಹೆಚ್ಚು ಮೈಲೇಜ್ ಪ್ರೇರಿತ ಲೀಥಿಯಂ ಅಯಾನ್ ಬ್ಯಾಟರಿ ಬಳಕೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಹೊಸ ಕಾರಿನ ಕುರಿತಂತೆ ಮಹೀಂದ್ರಾ ಸಂಸ್ಥೆಯು ಕೆಲವು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದೆ.
ನೆಕ್ಸಾನ್ಗಿಂತಲೂ ಅತ್ಯುತ್ತಮ ಮೈಲೇಜ್
ಸದ್ಯ ಮಾರುಕಟ್ಟೆಗೆ ಪ್ರವೇಶಿಸುತ್ತಿರುವ ಎಕ್ಸ್ಯುವಿ300 ಎಲೆಕ್ಟ್ರಿಕ್ ಕಾರು ಮಾದರಿಯು ಟಾಟಾದ ನೆಕ್ಸಾನ್ ಎಲೆಕ್ಟ್ರಿಕ್ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದ್ದು, ನೆಕ್ಸಾನ್ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆ ಹೊಂದಿದೆ. ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ 30.2 kWh ಲೀಥಿಯಂ ಅಯಾನ್ ಬ್ಯಾಟರಿಯನ್ನು ಅಳವಡಿಸಲಾಗಿದ್ದು, ಇದು ಪ್ರತಿ ಚಾರ್ಜ್ಗೆ 312 ಕಿ.ಮೀ ಮೈಲೇಜ್ ನೀಡುತ್ತದೆ.
ಆದರೆ ಎಕ್ಸ್ಯುವಿ300 ಎಲೆಕ್ಟ್ರಿಕ್ ಕಾರು ನೆಕ್ಸಾನ್ ಮಾದರಿಯಲ್ಲೇ ಬೆಲೆ ಪಡೆದುಕೊಳ್ಳಲಿದ್ದರೂ ನೆಕ್ಸಾನ್ ಕಾರಿಗಿಂತಲೂ ಹೆಚ್ಚು ಮೈಲೇಜ್ ಹೊಂದಿದ್ದು, ಪ್ರತಿ ಚಾರ್ಜ್ಗೆ 350ಕಿ.ಮೀ ನಿಂದ 370ಕಿ.ಮೀ ಮೈಲೇಜ್ ರೇಂಜ್ ಹೊಂದಿರಲಿದೆಯೆಂತೆ.
ಮೈಲೇಜ್ ಮಾಹಿತಿ ಹೊರತಾಗಿ ಲೀಥಿಯಂ ಅಯಾನ್ ಬ್ಯಾಟರಿ ಮಾಹಿತಿಯನ್ನು ಮಾಹಿತಿ ಬಿಟ್ಟುಕೊಡದ ಮಹೀಂದ್ರಾ ಸಂಸ್ಥೆಯು ಶೀಘ್ರದಲ್ಲೇ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸುವುದಾಗಿ ಹೇಳಿಕೊಂಡಿದ್ದು, ಹೊಸ ಕಾರಿನ ಬೆಲೆಯು ಎಕ್ಸ್ಶೋರೂಂ ಪ್ರಕಾರ ರೂ.15 ಲಕ್ಷದಿಂದ ರೂ.17 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.
ಜೊತೆಗೆ ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ ಸಾಮಾನ್ಯ ಎಕ್ಸ್ಯುವಿ300 ಮಾದರಿಯೆಂತೆ ಬಹುತೇಕ ಪ್ರೀಮಿಯಂ ಸೌಲಭ್ಯಗಳನ್ನು ಒದಗಿಸಲು ನಿರ್ಧರಿಸಿರುವ ಮಹೀಂದ್ರಾ ಸಂಸ್ಥೆಯು ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರಿಗೂ ಪೈಪೋಟಿ ನೀಡುವ ತವಕದಲ್ಲಿದೆ.
ಜೆಡ್ಎಸ್ ಎಲೆಕ್ಟ್ರಿಕ್ ಕಾರು 44.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಮೂಲಕ ಪ್ರತಿ ಚಾರ್ಜ್ಗೆ ಗರಿಷ್ಠ 340 ಕಿ.ಮೀ ಮೈಲೇಜ್ ಹೊಂದಿದ್ದು, ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 20.58 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು 23.58 ಲಕ್ಷ ಬೆಲೆ ಹೊಂದಿದೆ. ಜೊತೆಗೆ ಹಲವಾರು ಪ್ರೀಮಿಯಂ ಫೀಚರ್ಸ್ಗಳೊಂದಿಗೆ ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.
ಇದೀಗ ಬಿಡುಗಡೆಯಾಗುತ್ತಿರುವ ಎಕ್ಸ್ಯುವಿ 300 ಎಲೆಕ್ಟ್ರಿಕ್ ಮಾದರಿಯು ನೆಕ್ಸಾನ್ ಮತ್ತು ಜೆಡ್ಎಸ್ ಎಲೆಕ್ಟ್ರಿಕ್ ಕಾರಿಗಿಂತಲೂ ಉತ್ತಮ ಮೈಲೇಜ್ನೊಂದಿಗೆ ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾಗುತ್ತಿದ್ದು, ಹೊಸ ಕಾರು ಮುಂಬರುವ ಜೂನ್ ಅಥವಾ ಜುಲೈ ಹೊತ್ತಿಗೆ ಮಾರುಕಟ್ಟೆ ಪ್ರವೇಶಿಸಲಿದೆ.