ಬಿಎಸ್-6 ಮಹೀಂದ್ರಾ ಎಕ್ಸ್‌ಯುವಿ300 ಡೀಸೆಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಮಹೀಂದ್ರಾ ಕಂಪನಿಯು ತನ್ನ ಎಕ್ಸ್‌ಯುವಿ300 ಡೀಸೆಲ್ ಆವೃತ್ತಿಯನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಹೊಸ ಮಹೀಂದ್ರಾ ಎಕ್ಸ್‌ಯುವಿ300 ಡೀಸೆಲ್ ಆವೃತ್ತಿಯ ಮೈಲೇಜ್ ಮಾಹಿತಿಯು ಬಹಿರಂಗವಾಗಿದೆ.

ಬಿಎಸ್-6 ಮಹೀಂದ್ರಾ ಎಕ್ಸ್‌ಯುವಿ300 ಡೀಸೆಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಬಿಎಸ್-6 ಮಹೀಂದ್ರಾ ಎಕ್ಸ್‌ಯುವಿ 300 ಎಸ್‍ಯುವಿಯಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ, ಈ ಎಂಜಿನ್ ಹಿಂದಿನ ಮಾದರಿಯಂತೆ 117 ಬಿಹೆಚ್‍ಪಿ ಪವರ್ ಮತ್ತು 300 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಮತ್ತು ಎಎಂಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಅನ್ನು ಅಳವಡಿಸಲಾಗಿದೆ. ಇದರಲ್ಲಿ ಮ್ಯಾನುವಲ್ ಗೇರ್ ಬಾಕ್ಸ್ ಆವೃತ್ತಿಯು ಪ್ರತಿ ಲೀಟರ್ ಗೆ 20 ಕಿ,ಮೀ ಮೈಲೇಜ್ ಅನ್ನು ನೀಡುತ್ತದೆ.

ಬಿಎಸ್-6 ಮಹೀಂದ್ರಾ ಎಕ್ಸ್‌ಯುವಿ300 ಡೀಸೆಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಕರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್‌ಡೌನ್ ವಿಧಿಸಿರುವುದರಿಂದ ಈ ಹೊಸ ಎಸ್‍ಯುವಿಯನ್ನು ಆನ್‌ಲೈನ್ ಮೂಲಕ ಬಿಡುಗಡೆಗೊಳಿಸಿದ್ದರು. ಬಿಎಸ್-6 ಎಂಜಿನ್ ಹೊಂದಿರುವ ಎಕ್ಸ್‌ಯುವಿ300 ಡೀಸೆಲ್ ಮಾದರಿಯು ಬಿಎಸ್-4 ಆವೃತ್ತಿಗಿಂತಲೂ ಬೆಲೆಯಲ್ಲಿ ತುಸು ದುಬಾರಿಯಾಗಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಿಎಸ್-6 ಮಹೀಂದ್ರಾ ಎಕ್ಸ್‌ಯುವಿ300 ಡೀಸೆಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಹೊಸ ಎಕ್ಸ್‌ಯುವಿ300 ಡೀಸೆಲ್ ಆವೃತ್ತಿಯ ಪ್ರಾರಂಭಿಕ ಬೆಲೆಯು ಭಾರತದ ಎಕ್ಸ್‌ಶೋರೂಂ ಪ್ರಕಾರ ರೂ.8.69 ಲಕ್ಷಗಳಾಗಿದ್ದರೆ, ಟಾಪ್ ಎಂಡ್ ಎಕ್ಸ್‌ಯುವಿ300 ಮಾದರಿಯ ಬೆಲೆಯು ರೂ.12.69 ಲಕ್ಷಗಳಾಗಿದೆ.

ಬಿಎಸ್-6 ಮಹೀಂದ್ರಾ ಎಕ್ಸ್‌ಯುವಿ300 ಡೀಸೆಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಇನ್ನು ಎಕ್ಸ್‌ಯುವಿ300 ಎಸ್‍ಯುವಿ ಮಾದರಿಯು ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಗಳಲ್ಲಿ ಡಬ್ಲ್ಯು4, ಡಬ್ಲ್ಯು6, ಡಬ್ಲ್ಯು8 ಮತ್ತು ಡಬ್ಲ್ಯು8 ಆಪ್ಷನ್ ಎಂಬ ಪ್ರಮುಖ ಐದು ರೂಪಾಂತಗಳಲ್ಲಿ ಲಭ್ಯವಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಬಿಎಸ್-6 ಮಹೀಂದ್ರಾ ಎಕ್ಸ್‌ಯುವಿ300 ಡೀಸೆಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಎಕ್ಸ್‌ಯುವಿ300 ಎಸ್‌ಯುವಿಯಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್, ಕ್ರೋಮ್ ಬಳಕೆ, ಬೂಟ್ ಲಿಡ್, ಡ್ಯುಯಲ್ ಟೋನ್ ಇಂಟಿರಿಯರ್, ಎಸಿ ವೆಂಟ್ಸ್, ಲೆದರ್ ವ್ಯಾರ್ಪ್ ಸ್ಟಿರಿಂಗ್ ವೀಲ್ಹ್, ರಿಯರ್ ಪಾರ್ಕಿಂಗ್ ಕ್ಯಾಮೆರಾ ಹೊಂದಿದೆ

ಬಿಎಸ್-6 ಮಹೀಂದ್ರಾ ಎಕ್ಸ್‌ಯುವಿ300 ಡೀಸೆಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಈ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, ಇಬಿಡಿ, ಸೀಟ್ ಬೆಲ್ಟ್ ಸೆನ್ಸಾರ್, ಪವರ್ ಫೋರ್ಡ್ ರಿಯರ್ ವ್ಯೂ ಒಆರ್‌ವಿಎಂಎಸ್, ಹಿಲ್ ಹೋಲ್ಡ್ ಅಸಿಸ್ಟ್, 7 ಏರ್‌ಬ್ಯಾಗ್, ಟು ಜೋನ್ ಕ್ಲೈಮೆಟ್ ಕಂಟ್ರೋಲ್, ಹೈಟ್ ಅಡ್ಜೆಸ್ಟ್ ಸೀಟ್ ಬೆಲ್ಟ್ ಮತ್ತು ಚೈಲ್ಡ್ ಸೀಟ್ ಮೌಂಟ್ ಸೌಲಭ್ಯಗಳನ್ನು ಒಳಗೊಂಡಿವೆ.

MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಬಿಎಸ್-6 ಮಹೀಂದ್ರಾ ಎಕ್ಸ್‌ಯುವಿ300 ಡೀಸೆಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಇದರೊಂದಿಗೆ ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯು ತನ್ನ ಬಿಎಸ್-6 ಸ್ಕಾರ್ಪಿಯೋ ಎಸ್‍ಯುವಿಯನ್ನು ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಇದೀಗ ಮಹೀಂದ್ರಾ ಕಂಪನಿಯು ಮುಂದಿನ ತಲೆಮಾರಿನ ಥಾರ್, ಸ್ಕಾರ್ಪಿಯೋ ಮತ್ತು ಎಕ್ಸ್‌ಯುವಿ 500 ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಬಿಎಸ್-6 ಮಹೀಂದ್ರಾ ಎಕ್ಸ್‌ಯುವಿ300 ಡೀಸೆಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಮಹೀಂದ್ರಾ ಎಕ್ಸ್‌ಯುವಿ300 ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಕಾಂಪ್ಯಾಕ್ಟ್ ಎಸ್‍ಯುವಿಗಳಲ್ಲಿ ಒಂದಾಗಿದೆ. ಮಹೀಂದ್ರಾ ಎಕ್ಸ್‌ಯುವಿ300 ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ನೆಕ್ಸಾನ್ ಮತ್ತು ಮಾರುತಿ ಸುಜುಕಿ ಬ್ರೆಝಾ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
BS6 Mahindra XUV300 diesel-manual fuel economy revealed. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X