ಟಾಟಾ ನೆಕ್ಸಾನ್ ನಂತರ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಮಹೀಂದ್ರಾ ಎಕ್ಸ್‌ಯುವಿ300

ಹೊಸ ವಾಹನಗಳ ಮಾರಾಟದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ದೇಶದ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಗಳಾದ ಟಾಟಾ ಮೋಟಾರ್ಸ್ ಮತ್ತು ಮಹೀಂದ್ರಾ ಸಂಸ್ಥೆಯು ಪ್ರಯಾಣಿಕರ ಸುರಕ್ಷತೆಯತ್ತ ವಿಶೇಷ ಗಮನಹರಿಸಿದ್ದು, ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಇದೀಗ ಮಹೀಂದ್ರಾ ಎಕ್ಸ್‌ಯುವಿ 300 ಕಾರು ಗರಿಷ್ಠ ರೇಟಿಂಗ್‌ನೊಂದಿಗೆ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಟಾಟಾ ನೆಕ್ಸಾನ್ ನಂತರ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಮಹೀಂದ್ರಾ ಎಕ್ಸ್‌ಯುವಿ300

ಹೌದು, ಮಹೀಂದ್ರಾ ನಿರ್ಮಾಣದ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ಎಕ್ಸ್‌ಯುವಿ 300 ಕಾರು ಪ್ರಯಾಣಿಕ ಸುರಕ್ಷತಾ ವಿಭಾಗದಲ್ಲಿ 5 ಸ್ಟಾರ್ ರೇಟಿಂಗ್ ಗಿಟ್ಟಿಸಿಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲಿ ಈ ಮೊದಲು ಟಾಟಾ ನೆಕ್ಸಾನ್ ನಂತರ ಇದೀಗ ಎಕ್ಸ್‌ಯುವಿ 300 ಕೂಡಾ ಗರಿಷ್ಠ ರೇಟಿಂಗ್ ಪಡೆದುಕೊಂಡ ಎರಡನೇ ಕಾರು ಮಾದರಿಯಾಗಿದೆ.

ಟಾಟಾ ನೆಕ್ಸಾನ್ ನಂತರ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಮಹೀಂದ್ರಾ ಎಕ್ಸ್‌ಯುವಿ300

#SAFERCARSFORINDIA ಅಭಿಯಾನದಡಿ ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳ ಅಸಲಿಯತ್ತು ಬಯಲು ಮಾಡುತ್ತಿರುವ ಗ್ಲೋಬಲ್ ಎನ್‌ಸಿಎಪಿ ಸಂಸ್ಥೆಯು ಮಹೀಂದ್ರಾ ಎಕ್ಸ್‌ಯುವಿ 300 ಕಾರು ಮಾದರಿಗೆ ಗರಿಷ್ಠ ರೇಟಿಂಗ್ ನೀಡಿದೆ.

ಟಾಟಾ ನೆಕ್ಸಾನ್ ನಂತರ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಮಹೀಂದ್ರಾ ಎಕ್ಸ್‌ಯುವಿ300

ಪ್ರತಿ ಹೊಸ ಕಾರು ಮಾದರಿಗಳಿಗೂ ಪ್ರಯಾಣಿಕರ ಸುರಕ್ಷಾ ವಿಚಾರವಾಗಿ ಜಾಗತಿಕ ಪ್ರಮಾಣ ಪತ್ರದ ಅವಶ್ಯಕತೆಯಿದ್ದು, ಎಕ್ಸ್‌ಯುವಿ300 ಪಡೆದುಕೊಳ್ಳುತ್ತಿರುವ ಉತ್ತಮ ರೇಟಿಂಗ್‌ನಿಂದಾಗಿ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಎಂಬುವುದು ಖಾತ್ರಿಯಾಗಿದೆ.

ಟಾಟಾ ನೆಕ್ಸಾನ್ ನಂತರ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಮಹೀಂದ್ರಾ ಎಕ್ಸ್‌ಯುವಿ300

ಇನ್ನು ಮಹೀಂದ್ರಾ ಸಂಸ್ಥೆಯು ಸದ್ಯ ಬಿಎಸ್-6 ಎಂಜಿನ್‌ನೊಂದಿಗೆ ತನ್ನ ಪ್ರಮುಖ ಎಸ್‌ಯುವಿ ಕಾರುಗಳ ನ್ಯೂ ಜನರೇಷನ್ ಮಾದರಿಗಳನ್ನು ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರುಗಳ ಎಂಜಿನ್ ಮತ್ತು ಪ್ರೀಮಿಯಂ ಫೀಚರ್ಸ್‌ಗಳಲ್ಲಿ ಮಾತ್ರವಲ್ಲದೇ ಪ್ರಮಾಣಿಕರ ಸುರಕ್ಷತೆಯಲ್ಲೂ ಗಮರ್ನಾಹ ಬದಲಾವಣೆ ತಂದಿದೆ. ಭಾರತದಲ್ಲಿ ಸದ್ಯ ಬಿಎಸ್-4(ಭಾರತ್ ಸ್ಟೇಜ್) ವೈಶಿಷ್ಟ್ಯತೆಯುಳ್ಳ ವಾಹನಗಳು ಮಾತ್ರ ಮಾರಾಟಗೊಳ್ಳುತ್ತಿದ್ದು, ಇದು ಕೂಡಾ ಮುಂಬರುವ 1ರಿಂದ ನಿಷೇಧಗೊಂಡು ಬಿಎಸ್-6 ನಿಯಮವು ಜಾರಿಗೆ ಬರಲಿದೆ.

ಹೀಗಾಗಿ ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಮಹೀಂದ್ರಾ ಸೇರಿದಂತೆ ಬಹುತೇಕ ಸಂಸ್ಥೆಗಳು ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳನ್ನು ಬಿಡುಗಡೆಗೊಳಿಸುತ್ತಿದ್ದು, ಎಕ್ಸ್‌ಯುವಿ300 ಕಾರು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಅಂಕಗಳಿಸಿರುವುದು ಮಹೀಂದ್ರಾ ಸಂಸ್ಥೆಗೆ ಮತ್ತಷ್ಟು ಜನಪ್ರಿಯತೆ ತಂದುಕೊಡಲಿದೆ.

ಟಾಟಾ ನೆಕ್ಸಾನ್ ನಂತರ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಮಹೀಂದ್ರಾ ಎಕ್ಸ್‌ಯುವಿ300

ಇನ್ನು ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಹೊಸ ಕಾರುಗಳಲ್ಲಿ ಹಲವಾರು ಹೊಸ ಸುರಕ್ಷಾ ಸೌಲಭ್ಯಗಳನ್ನು ನೀಡಲಾಗಿದ್ದು, ಬಿಡುಗಡೆಗೆ ಸಿದ್ದವಾಗಿರುವ ಮಹೀಂದ್ರಾ ನ್ಯೂ ಜನರೇಷನ್ ಪ್ರತಿ ಕಾರುಗಳು ಸಹ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗಮನಸೆಳೆಯುವ ವಿಶ್ವಾಸದಲ್ಲಿವೆ.

ಟಾಟಾ ನೆಕ್ಸಾನ್ ನಂತರ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಮಹೀಂದ್ರಾ ಎಕ್ಸ್‌ಯುವಿ300

ಮಾಹಿತಿಗಳ ಪ್ರಕಾರ, ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಟಿಯುವಿ300 ಪ್ಲಸ್ ಮತ್ತು ಥಾರ್ ಕಾರುಗಳಲ್ಲಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳಿವೆ.

ಟಾಟಾ ನೆಕ್ಸಾನ್ ನಂತರ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಮಹೀಂದ್ರಾ ಎಕ್ಸ್‌ಯುವಿ300

ಹಾಗೆಯೇ 6 ಏರ್‌ಬ್ಯಾಗ್‌ಗಳು(ಟಾಪ್ ಎಂಡ್‌ಗಳಲ್ಲಿ), ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

ಟಾಟಾ ನೆಕ್ಸಾನ್ ನಂತರ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಮಹೀಂದ್ರಾ ಎಕ್ಸ್‌ಯುವಿ300

ಇದರೊಂದಿಗೆ ಕಾರು ಕಳ್ಳತನಗಳಿಗೆ ಬ್ರೇಕ್ ಹಾಕಲು ಜಿಯೋ ಫೆನ್ಸ್ ಅಲರ್ಟ್ ಸೇರಿದಂತೆ ಸೆಂಟರ್ ಲಾಕಿಂಗ್ ಸಿಸ್ಟಂ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಒಟ್ಟಿನಲ್ಲಿ ಪ್ರಯಾಣಿಕರ ಸುರಕ್ಷೆತೆಗಾಗಿ ಗರಿಷ್ಠ ಮಟ್ಟದಲ್ಲಿ ಸುರಕ್ಷಾ ಸೌಲಭ್ಯ ಗಳನ್ನು ಅಳವಡಿಸಿರುವುದೇ ಹೊಸ ಕಾರುಗಳ ಪ್ರಮುಖ ಆಕರ್ಷಣೆಯಾಗಲಿದೆ.

ಟಾಟಾ ನೆಕ್ಸಾನ್ ನಂತರ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದ ಮಹೀಂದ್ರಾ ಎಕ್ಸ್‌ಯುವಿ300

ಬೆಲೆಯಲ್ಲೂ ದುಬಾರಿಯಾಗಲಿವೆ ಹೊಸ ಕಾರುಗಳು

ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಮೇಲೆ ಪೆಟ್ರೋಲ್ ಕಾರುಗಳು ರೂ.10 ಸಾವಿರದಿಂದ ರೂ.30 ಸಾವಿರ ತನಕ ಮತ್ತು ಡೀಸೆಲ್ ಕಾರುಗಳು ರೂ.90 ಸಾವಿರದಿಂದ ರೂ. 2 ಲಕ್ಷದ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.

Most Read Articles

Kannada
English summary
Mahindra XUV300 receives highest 5-star safety rating from Global NCAP. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X