ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದತೆ- ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಇಎಕ್ಸ್‌ಯುವಿ300

ದೆಹಲಿ ಆಟೋ ಎಕ್ಸ್‌ಪೋದಲ್ಲಿ ಕೆಯುವಿ100 ಎಲೆಕ್ಟ್ರಿಕ್ ಕಾರು ಬಿಡುಗಡೆಗೊಳಿಸಿ ಮಾರಾಟಕ್ಕೆ ಅಧಿಕೃತ ಚಾಲನೆ ನೀಡಿರುವ ಮಹೀಂದ್ರಾ ಸಂಸ್ಥೆಯು ಶೀಘ್ರದಲ್ಲೇ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರು ಬಿಡುಗಡೆಗೂ ಭರ್ಜರಿ ಸಿದ್ದತೆ ನಡೆಸಿದೆ.

ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದತೆ- ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಇಎಕ್ಸ್‌ಯುವಿ300

ಮಹೀಂದ್ರಾ ಸಂಸ್ಥೆಯು ಸದ್ಯ ಹೊಸ ನಿಯಮಗಳಿಗೆ ಅನುಗುಣವಾಗಿ ತನ್ನ ಭವಿಷ್ಯದ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ಸುರಕ್ಷತೆ ನೀಡುವ ಉದ್ದೇಶದಿಂದ ಈ ಹಿಂದಿನ ಇ2ಓ ಪ್ಲಸ್ ಕಾರಿನ ಉತ್ಪಾದನೆ ಸ್ಥಗಿತಗೊಳಿಸಿ ಹೊಸ ಕಾರು ಉತ್ಪನ್ನಗಳ ಮೇಲೆ ಹೆಚ್ಚಿನ ಗಮನಹರಿಸುತ್ತಿದೆ. ಗ್ರಾಹಕರ ಬೇಡಿಕೆಯೆಂತೆ ವಿಶೇಷ ಫೀಚರ್ಸ್ ಮತ್ತು ಅತ್ಯುತ್ತಮ ಬ್ಯಾಟರಿ ಆಯ್ಕೆ ಹೊಂದಲಿರುವ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಭಾರೀ ಪ್ರಮಾಣದ ಹೂಡಿಕೆ ಮಾಡಿದೆ.

ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದತೆ- ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಇಎಕ್ಸ್‌ಯುವಿ300

ಕೆಯುವಿ100 ಎಲೆಕ್ಟ್ರಿಕ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 8.25 ಲಕ್ಷ ಬೆಲೆಯೊಂದಿಗೆ ಬಿಡುಗಡೆಯಾಗಿದ್ದು, 40kW ಎಲೆಕ್ಟ್ರಿಕ್ ಮೋಟಾರ್ ಪ್ರತಿ ಚಾರ್ಜ್‌ಗೆ 150 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದತೆ- ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಇಎಕ್ಸ್‌ಯುವಿ300

ಆದರೆ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಮಾದರಿಯು ತುಸು ದುಬಾರಿ ಬೆಲೆಯೊಂದಿಗೆ ಅತಿ ಹೆಚ್ಚು ಮೈಲೇಜ್ ಪ್ರೇರಿತ ಲೀಥಿಯಂ ಅಯಾನ್ ಬ್ಯಾಟರಿ ಬಳಕೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಹೊಸ ಕಾರಿನ ಬ್ಯಾಟರಿ ಕ್ಷಮತೆ ಕುರಿತಂತೆ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸುತ್ತಿದೆ.

ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದತೆ- ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಇಎಕ್ಸ್‌ಯುವಿ300

ನೆಕ್ಸಾನ್‌ಗಿಂತಲೂ ಅತ್ಯುತ್ತಮ ಮೈಲೇಜ್

ಸದ್ಯ ಮಾರುಕಟ್ಟೆಗೆ ಪ್ರವೇಶಿಸುತ್ತಿರುವ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರು ಮಾದರಿಯು ಟಾಟಾದ ನೆಕ್ಸಾನ್ ಎಲೆಕ್ಟ್ರಿಕ್ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದ್ದು, ನೆಕ್ಸಾನ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆ ಹೊಂದಿದೆ. ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ 30.2 kWh ಲೀಥಿಯಂ ಅಯಾನ್ ಬ್ಯಾಟರಿಯನ್ನು ಅಳವಡಿಸಲಾಗಿದ್ದು, ಇದು ಪ್ರತಿ ಚಾರ್ಜ್‌ಗೆ 312 ಕಿ.ಮೀ ಮೈಲೇಜ್ ನೀಡುತ್ತದೆ.

ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದತೆ- ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಇಎಕ್ಸ್‌ಯುವಿ300

ಆದರೆ ಹೊಸದಾಗಿ ಬಿಡುಗಡೆಯಾಗುತ್ತಿರುವ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರು ನೆಕ್ಸಾನ್ ಮಾದರಿಯಲ್ಲೇ ಬೆಲೆ ಪಡೆದುಕೊಳ್ಳಲಿದ್ದರೂ ನೆಕ್ಸಾನ್ ಕಾರಿಗಿಂತಲೂ ಹೆಚ್ಚು ಮೈಲೇಜ್ ಹೊಂದಿದ್ದು, ಪ್ರತಿ ಚಾರ್ಜ್‌ಗೆ 350ಕಿ.ಮೀ ನಿಂದ 370ಕಿ.ಮೀ ಮೈಲೇಜ್ ರೇಂಜ್ ಹೊಂದಿರಲಿದೆಯೆಂತೆ.

ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದತೆ- ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಇಎಕ್ಸ್‌ಯುವಿ300

ಮೈಲೇಜ್ ಮಾಹಿತಿಯ ಹೊರತಾಗಿ ಲೀಥಿಯಂ ಅಯಾನ್ ಬ್ಯಾಟರಿ ವೈಶಿಷ್ಟ್ಯತೆಯ ಕುರಿತಾಗಿ ಯಾವುದೇ ಮಾಹಿತಿ ಬಿಟ್ಟುಕೊಡದ ಮಹೀಂದ್ರಾ ಸಂಸ್ಥೆಯು ಶೀಘ್ರದಲ್ಲೇ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸುವುದಾಗಿ ಹೇಳಿಕೊಂಡಿದ್ದು, ಹೊಸ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ರೂ.15 ಲಕ್ಷದಿಂದ ರೂ.17 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದತೆ- ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಇಎಕ್ಸ್‌ಯುವಿ300

ಜೊತೆಗೆ ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ ಸಾಮಾನ್ಯ ಎಕ್ಸ್‌ಯುವಿ300 ಮಾದರಿಯೆಂತೆ ಬಹುತೇಕ ಪ್ರೀಮಿಯಂ ಸೌಲಭ್ಯಗಳನ್ನು ಒದಗಿಸಲು ನಿರ್ಧರಿಸಿರುವ ಮಹೀಂದ್ರಾ ಸಂಸ್ಥೆಯು ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರಿಗೂ ಪೈಪೋಟಿ ನೀಡುವ ತವಕದಲ್ಲಿದೆ.

ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದತೆ- ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಇಎಕ್ಸ್‌ಯುವಿ300

ಜೆಡ್ಎಸ್ ಎಲೆಕ್ಟ್ರಿಕ್ ಕಾರು 44.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 340 ಕಿ.ಮೀ ಮೈಲೇಜ್ ಹೊಂದಿದ್ದು, ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 20.58 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು 23.58 ಲಕ್ಷ ಬೆಲೆ ಹೊಂದಿದೆ. ಜೊತೆಗೆ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.

ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದತೆ- ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಇಎಕ್ಸ್‌ಯುವಿ300

ಇದೀಗ ಬಿಡುಗಡೆಯಾಗುತ್ತಿರುವ ಎಕ್ಸ್‌ಯುವಿ 300 ಎಲೆಕ್ಟ್ರಿಕ್ ಮಾದರಿಯು ನೆಕ್ಸಾನ್ ಮತ್ತು ಜೆಡ್ಎಸ್ ಎಲೆಕ್ಟ್ರಿಕ್ ಕಾರಿಗಿಂತಲೂ ಉತ್ತಮ ಮೈಲೇಜ್‌ನೊಂದಿಗೆ ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾಗುತ್ತಿದ್ದು, ಹೊಸ ಕಾರು ಮುಂಬರುವ ಜೂನ್ ಅಥವಾ ಜುಲೈ ಹೊತ್ತಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

Article Published On: Saturday, February 29, 2020, 13:18 [IST]
English summary
Mahindra XUV300 Electric spy pics. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+