ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾರಾಟದಲ್ಲಿ ಹೊಸ ದಾಖಲೆ

2019ರ ಫೆಬ್ರುವರಿ 15ರಂದು ಬಿಡುಗಡೆಗೊಂಡಿದ್ದ ಮಹೀಂದ್ರಾ ಹೊಚ್ಚ ಹೊಸ ಕಾರು ಮಾದರಿಯಾದ ಎಕ್ಸ್‌ಯುವಿ300 ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಸದ್ಯ ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು, ಬಿಡುಗಡೆಯಾಗಿ ಒಂದು ವರ್ಷದ ಸನಿಹದಲ್ಲಿರುವಾಗ 40 ಸಾವಿರ ಯುನಿಟ್ ಮಾರಾಟಗೊಂಡಿದೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾರಾಟದಲ್ಲಿ ಹೊಸ ದಾಖಲೆ

ಡಿಸೆಂಬರ್ ಅಂತ್ಯಕ್ಕೆ ಮಹೀಂದ್ರಾ ಸಂಸ್ಥೆಯು ಒಟ್ಟು 40,503 ಯುನಿಟ್ ಎಕ್ಸ್‌ಯುವಿ300 ಮಾರಾಟ ಮಾಡಿದ್ದು, ಶೀಘ್ರದಲ್ಲೇ ಬಿಎಸ್-6 ಆವೃತ್ತಿಯನ್ನು ಬಿಡುಗಡೆಗೊಳಿಸಲು ಭರ್ಜರಿ ಸಿದ್ದತೆ ನಡೆಸಿದೆ. ಎಕ್ಸ್‌ಯುವಿ300 ಕಾರು ಪೆಟ್ರೋಲ್ ಮಾದರಿಯು ಈಗಾಗಲೇ ಬಿಎಸ್-6 ನಿಯಮ ಅನುಗುಣವಾಗಿ ಉನ್ನತೀಕರಣಗೊಂಡಿದ್ದು, ಡೀಸೆಲ್ ಮಾದರಿಯು ಮುಂದಿನ ತಿಂಗಳು ಫೆಬ್ರುವರಿ ಮಧ್ಯಂತರದಲ್ಲಿ ಖರೀದಿಗೆ ಲಭ್ಯವಾಗಲಿದೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾರಾಟದಲ್ಲಿ ಹೊಸ ದಾಖಲೆ

ಬಿಎಸ್-6 ಎಕ್ಸ್‌ಯುವಿ300 ಪೆಟ್ರೋಲ್ ಮಾದರಿಯು ಬಿಎಸ್-4 ಮಾದರಿಗಿಂತಲೂ ರೂ.20 ಸಾವಿರ ಹೆಚ್ಚುವರಿ ಬೆಲೆಯೊಂದಿಗೆ ಬಿಡುಗಡೆಯಾಗಿದ್ದು, ಡೀಸೆಲ್ ಮಾದರಿ ಮಾತ್ರ ದುಬಾರಿ ಬೆಲೆ ಪಡೆದುಕೊಳ್ಳಲಿದೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾರಾಟದಲ್ಲಿ ಹೊಸ ದಾಖಲೆ

ಹೊಸ ನಿಯಮದ ಪ್ರಕಾರ, ಪೆಟ್ರೋಲ್ ಕಾರುಗಳಿಂತ ಡೀಸೆಲ್ ಎಂಜಿನ್‌ನಲ್ಲಿ ಸಾಕಷ್ಟು ಬದಲಾವಣೆಗಳಾಗಬೇಕಿದ್ದು, ಹೊಸ ತಂತ್ರಜ್ಞಾನ ಪ್ರೇರಣೆಯಿಂದಾಗಿ ಪೆಟ್ರೋಲ್ ಕಾರುಗಳು ಪ್ರಸ್ತುತ ಬೆಲೆಗಿಂತ ರೂ.10 ಸಾವಿರದಿಂದ ರೂ.30 ಸಾವಿರ ತನಕ ಮತ್ತು ಡೀಸೆಲ್ ಕಾರುಗಳು ರೂ.80 ಸಾವಿರದಿಂದ ರೂ.1.50 ಲಕ್ಷ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾರಾಟದಲ್ಲಿ ಹೊಸ ದಾಖಲೆ

ಇದೀಗ ಬಿಡುಗಡೆಯಾಗಬೇಕಿರುವ ಎಕ್ಸ್‌ಯುವಿ300 ಡೀಸೆಲ್ ಮಾದರಿ ಕೂಡಾ ರೂ.1 ಲಕ್ಷದ ತನಕ ಹೆಚ್ಚುವರಿ ಬೆಲೆ ಪಡೆಯುವ ಸಾಧ್ಯತೆಗಳಿದ್ದು, ಇದೇ ಕಾರಣಕ್ಕೆ ಹಲವಾರು ಕಾರು ಉತ್ಪಾದನಾ ಸಂಸ್ಥೆಗಳು ಸಣ್ಣ ಗಾತ್ರದ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯನ್ನೇ ತೆಗದುಹಾಕುತ್ತಿವೆ. ಆದರೆ ಡೀಸೆಲ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ ಸಂಸ್ಥೆಯು ಬೆಲೆ ಏರಿಕೆಯ ನಡುವೆಯೂ ಡೀಸೆಲ್ ಎಂಜಿನ್ ಆಯ್ಕೆ ಮುಂದುವರಿಸಲು ನಿರ್ಧರಿಸಿದ್ದು, ಶೀಘ್ರದಲ್ಲೇ ಹೊಸ ಕಾರು ಬಿಡುಗಡೆಗೊಳಿಸಲಿದೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾರಾಟದಲ್ಲಿ ಹೊಸ ದಾಖಲೆ

ಇನ್ನು ಎಕ್ಸ್‌ಯುವಿ300 ಕಾರು ಮಾದರಿಯು ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಗಳಲ್ಲಿ ಡಬ್ಲ್ಯು4, ಡಬ್ಲ್ಯು6, ಡಬ್ಲ್ಯು8 ಮತ್ತು ಡಬ್ಲ್ಯು8 ಆಪ್ಷನ್ ಎನ್ನುವ ಪ್ರಮುಖ ಐದು ವೆರಿಯೆಂಟ್‌ಗಳನ್ನು ಹೊಂದಿದ್ದು, ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ. 8.10 ಲಕ್ಷದಿಂದ ಟಾಪ್ ಎಂಡ್ ಮಾದರಿಯು 12.69 ಲಕ್ಷ ಬೆಲೆ ಪಡೆದುಕೊಂಡಿದೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾರಾಟದಲ್ಲಿ ಹೊಸ ದಾಖಲೆ

ಎಕ್ಸ್‌ಯುವಿ300 ಡಿಸೇಲ್ ಕಾರಿನಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಆಯ್ಕೆಗಳನ್ನು ನೀಡಲಾಗಿದ್ದು, 1.5-ಲೀಟರ್ ಡೀಸೆಲ್ ಮತ್ತು 1.2-ಲೀಟರ್ ಪೆಟ್ರೋಲ್ ಎಂಜಿನ್‌ ಮೂಲಕ ಅತ್ಯುತ್ತಮ ಇಂಧನ ಕಾರ್ಯಕ್ಷಮತೆ ಹೊಂದಿದೆ.

MOST READ: ಮಾಲಿನ್ಯ ತಗ್ಗಿಸಲು ಬೆಂಗಳೂರು ದಂಪತಿಯ ಕಾರ್ಯವನ್ನು ಮೆಚ್ಚಲೇಬೇಕು..!

ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾರಾಟದಲ್ಲಿ ಹೊಸ ದಾಖಲೆ

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿಗಳಲ್ಲಿ ವಿಶೇಷ ಎನ್ನಿಸುವ ಎಕ್ಸ್‌ಯುವಿ300 ಮಾದರಿಯು ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್, ಕ್ರೋಮ್ ಬಳಕೆ, ಬೂಟ್ ಲಿಡ್, ಡ್ಯುಯಲ್ ಟೋನ್ ಇಂಟಿರಿಯರ್, ಎಸಿ ವೆಂಟ್ಸ್, ಲೆದರ್ ವ್ಯಾರ್ಪ್ ಸ್ಟಿರಿಂಗ್ ವೀಲ್ಹ್, ರಿಯರ್ ಪಾರ್ಕಿಂಗ್ ಕ್ಯಾಮೆರಾ ಹೊಂದಿದೆ.

MOST READ: ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..!

ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾರಾಟದಲ್ಲಿ ಹೊಸ ದಾಖಲೆ

ಜೊತೆಗೆ ಫ್ರಂಟ್ ಪಾರ್ಕಿಂಗ್ ಸೆನ್ಸಾರ್‍, ದೊಡ್ಡದಾದ ಇನ್ಪೋಟೈನ್‌ಮೆಂಟ್ ಸಿಸ್ಟಂ ಹೊಂದಿರಲಿದೆ. ಜೊತೆಗೆ ಮಲ್ಟಿ ಇನ್ಫಾರ್ಮೆಷನ್ ಡಿಸ್‌ಪ್ಲೇ, ಸ್ಟಾಪ್/ಸ್ಟಾರ್ಟ್ ಬಟನ್, ರಿಯರ್ ಸೀಟ್ ಆರ್ಮ್‌ ರೆಸ್ಟ್, ಕ್ರೂಸ್ ಕಂಟ್ರೋಲ್, 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್, ಸನ್‌ರೂಫ್, ಸ್ಮಾರ್ಟ್ ವಾಚ್ ಕನೆಕ್ಟಿವಿಟಿ ಸೇರಿದಂತೆ ಹಲವು ಫೀಚರ್ಸ್‌ಗಳು ಇದರಲ್ಲಿವೆ.

MOST READ: ಬರಲಿದೆ ದುಬಾರಿ ಬೆಲೆಯ ಹಾರಾಡುವ ಬೈಕ್..!

ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾರಾಟದಲ್ಲಿ ಹೊಸ ದಾಖಲೆ

ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, ಇಬಿಡಿ, ಸೀಟ್ ಬೆಲ್ಟ್ ಸೆನ್ಸಾರ್, ಪವರ್ ಫೋರ್ಡ್ ರಿಯರ್ ವ್ಯೂ ಒಆರ್‌ವಿಎಂಎಸ್, ಹಿಲ್ ಹೋಲ್ಡ್ ಅಸಿಸ್ಟ್, 7 ಏರ್‌ಬ್ಯಾಗ್, ಟು ಜೋನ್ ಕ್ಲೈಮೆಟ್ ಕಂಟ್ರೋಲ್, ಹೈಟ್ ಅಡ್ಜೆಸ್ಟ್ ಸೀಟ್ ಬೆಲ್ಟ್, ಪ್ರತಿ ಸೀಟುಗಳಲ್ಲೂ ಸೀಟ್ ಬೆಲ್ಟ್ ಸೆನ್ಸಾರ್, ISOFIX ಚೈಲ್ಡ್ ಸೀಟ್ ಮೌಂಟ್ ಸೌಲಭ್ಯವು ಎಕ್ಸ್‌ಯುವಿ300 ಕಾರಿನಲ್ಲಿರಲಿವೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾರಾಟದಲ್ಲಿ ಹೊಸ ದಾಖಲೆ

ಈ ಮೂಲಕ ಟಾಟಾ ನೆಕ್ಸಾನ್ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಉತ್ತಮ ಪೈಪೋಟಿ ನೀಡುತ್ತಿರುವ ಎಕ್ಸ್‌ಯುವಿ300 ಮಾದರಿಯು ಬಿಎಸ್-6 ನಂತರ ಮತ್ತಷ್ಟು ಬಲಿಷ್ಠ ಎಂಜಿನ್‌ನೊಂದಿಗೆ ರಸ್ತೆಗಿಳಿಯಲಿದೆ.

More from DriveSpark

Article Published On: Saturday, January 4, 2020, 8:45 [IST]
English summary
Mahindra XUV300 Sales Crosses 40,000 Units Since Launch. Read more in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+