ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಎಕ್ಸ್‌ಯುವಿ300 ಕಾರಿಗೆ ಹೆಚ್ಚಿದ ಬೇಡಿಕೆ

ಮಹೀಂದ್ರಾ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಎಕ್ಸ್‌ಯುವಿ300 ಮಾದರಿಯು ಮೇ ಅವಧಿಯ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ವೆನ್ಯೂ ಮತ್ತು ಮಾರುತಿ ವಿಟಾರಾ ಬ್ರೆಝಾ ಕಾರುಗಳನ್ನು ಹಿಂದಿಕ್ಕಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಎಕ್ಸ್‌ಯುವಿ300 ಕಾರಿಗೆ ಹೆಚ್ಚಿದ ಬೇಡಿಕೆ

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಮೊದಲ ಬಾರಿಗೆ ಅಗ್ರಸ್ಥಾನಕ್ಕೇರಿರುವ ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾದರಿಯು 1,257 ಯುನಿಟ್ ಮಾರಾಟವಾಗಿದ್ದು, ವಿಟಾರಾ ಬ್ರೆಝಾ, ವೆನ್ಯೂ ಕಾರಿಗಿಂತಲೂ ಹೆಚ್ಚು ಬೇಡಿಕೆ ಪಡೆದುಕೊಂಡಿದೆ. ಮೇ ಅವಧಿಯ ಕಾರು ಮಾರಾಟ ಪಟ್ಟಿಯಲ್ಲಿ ವೆನ್ಯೂ ಕಾರು 1,242 ಯುನಿಟ್ ಮಾರಾಟಗೊಂಡಿದ್ದರೆ, ನೆಕ್ಸಾನ್ ಕಾರು 6,23 ಯನಿಟ್ ಮತ್ತು ಬ್ರೆಝಾ ಕಾರು ಕೇವಲ 572 ಯುನಿಟ್ ಮಾರಾಟಗೊಂಡಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಎಕ್ಸ್‌ಯುವಿ300 ಕಾರಿಗೆ ಹೆಚ್ಚಿದ ಬೇಡಿಕೆ

ಸಾಮಾನ್ಯವಾಗಿ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುತ್ತಿದ್ದ ಮಾರುತಿ ಸುಜುಕಿ ಬ್ರೆಝಾ ಮತ್ತು ಹ್ಯುಂಡೈ ವೆನ್ಯೂ ಕಾರುಗಳು ಇದೇ ಮೊದಲ ಬಾರಿಗೆ ಗ್ರಾಹಕರ ಬೇಡಿಕೆಯಲ್ಲಿ ಕುಸಿತ ಕಂಡಿದ್ದು, ಎಕ್ಸ್‌ಯುವಿ300 ಕಾರು ಹೆಚ್ಚು ಬೇಡಿಕೆ ಪಡೆದುಕೊಂಡಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಎಕ್ಸ್‌ಯುವಿ300 ಕಾರಿಗೆ ಹೆಚ್ಚಿದ ಬೇಡಿಕೆ

ಇನ್ನು ಆಟೋ ಉದ್ಯಮ ಸೇರಿದಂತೆ ಎಲ್ಲಾ ವಲಯದಲ್ಲೂ ಕರೋನಾ ವೈರಸ್ ಮಹಾಮಾರಿಯಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದ್ದು, ವ್ಯಾಪಾರ ಅಭಿವೃದ್ದಿಯು ಇದೀಗ ಹೊಸ ಸವಾಲಾಗಿ ಪರಿಣಮಿಸಿದೆ. ಸದ್ಯಕ್ಕೆ ಆಟೋ ಉದ್ಯಮಕ್ಕೆ ಕೆಲವು ವಿನಾಯ್ತಿಗಳನ್ನು ನೀಡಲಾಗಿದ್ದರೂ ಕೂಡಾ ವಾಹನ ಖರೀದಿದಾರರು ಇಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಎಕ್ಸ್‌ಯುವಿ300 ಕಾರಿಗೆ ಹೆಚ್ಚಿದ ಬೇಡಿಕೆ

ಲಾಕ್‌ಡೌನ್‌ನಿಂದ ಬಹುತೇಕ ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಉದ್ಯೋಗದ ಅಭದ್ರತೆ ಇದೀಗ ಅತಿ ದೊಡ್ಡ ಸಮಸ್ಯೆಯಾಗಿ ಕಾಡತೋಡಗಿದೆ. ಹೀಗಿರುವಾಗ ಹೊಸ ವಾಹನಗಳ ಮಾರಾಟವನ್ನು ಸರಿದಾರಿಗೆ ತರಲು ಯತ್ನಿಸುತ್ತಿರುವ ಆಟೋ ಕಂಪನಿಯು ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದು, ಹೊಸ ವಾಹನ ಖರೀದಿದಾರರಿಗೆ ಇಎಂಐ ದರಗಳನ್ನು ತಗ್ಗಿಸಿ ಅತಿ ಸುಲಭವಾದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಎಕ್ಸ್‌ಯುವಿ300 ಕಾರಿಗೆ ಹೆಚ್ಚಿದ ಬೇಡಿಕೆ

ಲಾಕ್‌ಡೌನ್‌ಗೂ ಮೊದಲು ಬುಕ್ಕಿಂಗ್ ಮಾಡಿ ವಾಹನ ಖರೀದಿಯ ಸಂಭ್ರಮದಲ್ಲಿದ್ದ ಗ್ರಾಹಕರು ಇದೀಗ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿದ್ದು, ಮಾರಾಟ ಮಳಿಗೆಗಳು ಪುನಾರಂಭಗೊಂಡ ನಂತರವೂ ವಾಹನ ಖರೀದಿ ಬದಲು ಬುಕ್ಕಿಂಗ್ ಹಣ ವಾಪಸ್ ನೀಡುವಂತೆ ಬೇಡಿಕೆಯಿಡುತ್ತಿರುವುದು ಆಟೋ ಕಂಪನಿಗಳನ್ನು ಚಿಂತೆಗೀಡು ಮಾಡಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಎಕ್ಸ್‌ಯುವಿ300 ಕಾರಿಗೆ ಹೆಚ್ಚಿದ ಬೇಡಿಕೆ

ಇದರಿಂದ ಗ್ರಾಹಕರನ್ನು ಸೆಳೆಯಲು ಆಟೋ ಕಂಪನಿಗಳು ಅತಿ ಸುಲಭವಾದ ಸಾಲಸೌಲಭ್ಯಗಳನ್ನು ನೀಡುತ್ತಿದ್ದು, ಮಹೀಂದ್ರಾ ಕೂಡಾ ತನ್ನ ಜನಪ್ರಿಯ ಎಸ್‌ಯುವಿ ಕಾರುಗಳ ಮೇಲೆ ವಿಶೇಷ ಆಫರ್‌ಗಳನ್ನು ನೀಡಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಎಕ್ಸ್‌ಯುವಿ300 ಕಾರಿಗೆ ಹೆಚ್ಚಿದ ಬೇಡಿಕೆ

ಎಸ್‌ಯುವಿ ಕಾರುಗಳನ್ನು ಖರೀದಿಸುವ ಗ್ರಾಹಕರು ಸದ್ಯಕ್ಕೆ ಯಾವುದೇ ಹಣಪಾವತಿ ಮಾಡದೆ ಕಾರಿನ ಮಾಲೀಕತ್ವದ ಹೊಂದಬಹುದಾಗಿದ್ದು, 2021ರ ಜನವರಿಯಿಂದ ಇಎಂಐ ಅನ್ವಯವಾಗುವಂತೆ ಸಾಲ ಸೌಲಭ್ಯ ನೀಡಲಾಗುತ್ತಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಎಕ್ಸ್‌ಯುವಿ300 ಕಾರಿಗೆ ಹೆಚ್ಚಿದ ಬೇಡಿಕೆ

ಹಾಗೆಯೇ ವಾರ್ಷಿಕವಾಗಿ ರೂ.7.75 ರಷ್ಟು ಬಡ್ಡಿದರದಲ್ಲಿ ಸಾಲಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಪ್ರತಿ ಲಕ್ಷಕ್ಕೆ ರೂ.1,234 ಇಎಂಐ ನಿಗದಿಪಡಿಸಲಾಗಿದೆ. ಸಾಲ ಮರುಪಾವತಿಗಾಗಿ ಗರಿಷ್ಠ ಎಂಟು ವರ್ಷಗಳ ಕಾಲಾವಕಾಶ ನೀಡಲಾಗಿದ್ದು, ಶೇ.100ರಷ್ಟು ಆನ್ ರೋಡ್ ಸಾಲಸೌಲಭ್ಯ ದೊರೆಯುತ್ತದೆ. ಇದು ಕೂಡಾ ಮಹೀಂದ್ರಾ ಹೊಸ ಕಾರುಗಳ ಮಾರಾಟ ಸುಧಾರಿಸಲು ಪ್ರಮುಖ ಕಾರಣವಾಗಿದೆ ಎನ್ನಬಹುದು.

More from DriveSpark

Article Published On: Saturday, June 6, 2020, 12:32 [IST]
English summary
Mahindra XUV300 Sales Beats Hyundai Venue & Maruti Vitara Brezza: Best-Selling Compact-SUV In May. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+