ಕರೋನಾ ಎಫೆಕ್ಟ್- ಎಕ್ಸ್‌ಯುವಿ300 ಸ್ಪೋರ್ಟ್ಜ್ ಕಾರು ಬಿಡುಗಡೆ ಮತ್ತೆ ಮುಂದೂಡಿಕೆ..

ಮಹೀಂದ್ರಾ ಕಂಪನಿಯು ಇದೇ ಎಪ್ರಿಲ್ ಅವಧಿಯಲ್ಲಿ ವಿವಿಧ ಮಾದರಿಯ ಕೆಲವು ಹೊಸ ಕಾರುಗಳ ಜೊತೆಗೆ ಬಿಎಸ್-6 ಆವೃತ್ತಿಗಳ ಬಿಡುಗಡೆಯ ಯೋಜನೆಯಲ್ಲಿತ್ತು. ಆದರೆ ಕರೋನಾ ವೈರಸ್ ಅಟ್ಟಹಾಸದಿಂದಾಗಿ ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿದ್ದರಿಂದ ಮಹೀಂದ್ರಾ ಸೇರಿದಂತೆ ಬಹುತೇಕ ಕಾರು ಕಂಪನಿಗಳು ಹೊಸ ವಾಹನಗಳ ಬಿಡುಗಡೆಯ ಯೋಜನೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿವೆ.

ಕರೋನಾ ಎಫೆಕ್ಟ್- ಎಕ್ಸ್‌ಯುವಿ300 ಸ್ಪೋರ್ಟ್ಜ್ ಕಾರು ಬಿಡುಗಡೆ ಮತ್ತೆ ಮುಂದೂಡಿಕೆ..

ಮಹೀಂದ್ರಾ ಕಂಪನಿಯು ಹೊಸದಾಗಿ ಬಿಡುಗಡೆ ಮಾಡಲಿರುವ ಕಾರುಗಳಲ್ಲಿ ಎಕ್ಸ್‌ಯುವಿ300 ಸ್ಟೋರ್ಟ್ಜ್ ಮಾದರಿಯು ಕೂಡಾ ಒಂದಾಗಿದ್ದು, ಈ ಹೊಸ ಕಾರನ್ನು ಕಳೆದ ಫೆಬ್ರುವರಿಯಲ್ಲಿ ನಡೆದಿದ್ದ 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಿ ಎಪ್ರಿಲ್ ಅಂತ್ಯಕ್ಕೆ ಬಿಡುಗಡೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ ಕರೋನಾ ವೈರಸ್ ಅಟ್ಟಹಾಸವು ಇಡೀ ವಿಶ್ವಾದ್ಯಂತ ಆತಂಕ ಸೃಷ್ಠಿ ಮಾಡಿದ್ದು, ಪರಿಸ್ಥಿತಿ ತಿಳಿಗೊಂಡ ನಂತರವಷ್ಟೇ ಆಟೋ ಉದ್ಯಮ ಚಟುವಟಿಕೆಗಳು ಪುನಾರಂಭಗೊಳ್ಳಲಿವೆ.

ಕರೋನಾ ಎಫೆಕ್ಟ್- ಎಕ್ಸ್‌ಯುವಿ300 ಸ್ಪೋರ್ಟ್ಜ್ ಕಾರು ಬಿಡುಗಡೆ ಮತ್ತೆ ಮುಂದೂಡಿಕೆ..

ಇನ್ನು ಕಾರು ಮಾರಾಟದಲ್ಲಿ ತನ್ನದೆ ವೈಶಿಷ್ಟ್ಯತೆ ಹೊಂದಿರುವ ಮಹೀಂದ್ರಾ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ತನ್ನ ಪ್ರಮುಖ ಕಾರುಗಳ ಎಂಜಿನ್ ಆಯ್ಕೆಯ ಬದಲಾವಣೆಯಲ್ಲಿ ಸಾಕಷ್ಟು ಆಸಕ್ತಿ ವಹಿಸಿದ್ದು, ಎಕ್ಸ್‌ಯುವಿ300 ಮಾದರಿಯಲ್ಲಿ ಮೊದಲ ಬಾರಿಗೆ ಪರ್ಫಾಮೆನ್ಸ್ ಮಾದರಿಯನ್ನು ಪರಿಚಯಿಸುತ್ತಿದೆ.

ಕರೋನಾ ಎಫೆಕ್ಟ್- ಎಕ್ಸ್‌ಯುವಿ300 ಸ್ಪೋರ್ಟ್ಜ್ ಕಾರು ಬಿಡುಗಡೆ ಮತ್ತೆ ಮುಂದೂಡಿಕೆ..

ಸಾಮಾನ್ಯ ಮಾದರಿಯ ಪೆಟ್ರೋಲ್ ಎಂಜಿನ್ ಹೊರತುಪಡಿಸಿ ಪರ್ಫಾಮೆನ್ಸ್ ಪ್ರಿಯರಿಗಾಗಿ 1.2-ಲೀಟರ್ ಪೆಟ್ರೋಲ್ ಎಂಜಿನ್‌ನಲ್ಲೇ ಅತಿ ಹೆಚ್ಚು ಬಿಎಚ್‌ಪಿ ಉತ್ಪಾದನಾ ವೈಶಿಷ್ಟ್ಯತೆಯ ಸ್ಪೋರ್ಟ್ಜ್ ವರ್ಷನ್ ಬಿಡುಗಡೆ ಮಾಡುತ್ತಿದೆ.

MOST READ: ಲಾಕ್‌ಡೌನ್ ಎಫೆಕ್ಟ್- ವಿನಾಯ್ತಿ ಸಿಕ್ಕರೂ ವಾಹನ ಉತ್ಪಾದನೆಗೆ ಮುಂದಾಗದ ಆಟೋ ಕಂಪನಿಗಳು

ಕರೋನಾ ಎಫೆಕ್ಟ್- ಎಕ್ಸ್‌ಯುವಿ300 ಸ್ಪೋರ್ಟ್ಜ್ ಕಾರು ಬಿಡುಗಡೆ ಮತ್ತೆ ಮುಂದೂಡಿಕೆ..

ಹೊಸದಾಗಿ ಅಭಿವೃದ್ದಿಗೊಳಿಸಲಾಗಿರುವ 1.2-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಎಂಸ್ಟಾಲಿನ್ ಎಂದು ಹೆಸರಿಸಿರುವ ಮಹೀಂದ್ರಾ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿರುವ ಸಾಮಾನ್ಯ ಮಾದರಿಯ 1.2-ಲೀಟರ್ ಪೆಟ್ರೋಲ್ ಎಂಜಿನ್‌ಗಿಂತಲೂ ಹೆಚ್ಚು ಸುಧಾರಿತ ತಂತ್ರಜ್ಞಾನದೊಂದಿಗೆ ಅಭಿವೃದ್ದಿಗೊಳಿಸಲಾಗಿದೆ. ಹೊಸ ಎಂಜಿನ್ ಅನ್ನು ಸ್ಪೋರ್ಟ್ಜ್ ವರ್ಷನ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರು ಮುಂಬರುವ ಜೂನ್ ಅಥವಾ ಜುಲೈನಲ್ಲಿ ಬಿಡುಗಡೆಯಾಗಲಿದೆ.

ಕರೋನಾ ಎಫೆಕ್ಟ್- ಎಕ್ಸ್‌ಯುವಿ300 ಸ್ಪೋರ್ಟ್ಜ್ ಕಾರು ಬಿಡುಗಡೆ ಮತ್ತೆ ಮುಂದೂಡಿಕೆ..

ಹೊಸ ಎಂಜಿನ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಲಿದ್ದು, 130-ಬಿಎಚ್‌ಪಿ ಮತ್ತು 230-ಎನ್ಎಂ ಟಾರ್ಕ್ ಉತ್ಪಾದನಾ ಸಾಮಾರ್ಥ್ಯ ಪಡೆದುಕೊಂಡಿದೆ.

MOST READ: ಲಾಕ್‌ಡೌನ್ ಸಂಕಷ್ಟ- ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5 ಸಾವಿರ ಪರಿಹಾರ..

ಕರೋನಾ ಎಫೆಕ್ಟ್- ಎಕ್ಸ್‌ಯುವಿ300 ಸ್ಪೋರ್ಟ್ಜ್ ಕಾರು ಬಿಡುಗಡೆ ಮತ್ತೆ ಮುಂದೂಡಿಕೆ..

ಹೊಸ ಎಂಜಿನ್ ಮಾದರಿಯನ್ನು ಕೇವಲ ಎಕ್ಸ್‌ಯುವಿ300 ಸ್ಪೋರ್ಟ್ಜ್ ವರ್ಷನ್‌ನಲ್ಲಿ ಮಾತ್ರವಲ್ಲದೇ ಮುಂಬರುವ ಫೋರ್ಡ್ ಹೊಸ ಇಕೋಸ್ಪೋರ್ಟ್ಸ್ ಆವೃತ್ತಿಯಲ್ಲೂ ಇದೇ ಎಂಜಿನ್ ಅನ್ನು ಬಳಕೆ ಮಾಡಲಾಗುತ್ತಿದ್ದು, ಸಹಭಾಗಿತ್ವ ಯೋಜನೆಯಲ್ಲಿ ಕಾರು ಉತ್ಪಾದನೆ ಮಾಡುತ್ತಿರುವ ಫೋರ್ಡ್ ಮತ್ತು ಮಹೀಂದ್ರಾ ಸಂಸ್ಥೆಯು ಹೊಸ ಎಂಜಿನ್ ಅನ್ನು ವಿವಿಧ ಕಾರು ಮಾದರಿಗಳಲ್ಲಿ ಬಳಕೆ ಮಾಡಿಕೊಳ್ಳಲಿವೆ.

ಕರೋನಾ ಎಫೆಕ್ಟ್- ಎಕ್ಸ್‌ಯುವಿ300 ಸ್ಪೋರ್ಟ್ಜ್ ಕಾರು ಬಿಡುಗಡೆ ಮತ್ತೆ ಮುಂದೂಡಿಕೆ..

ಇದಲ್ಲದೆ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ300 ಸ್ಪೋರ್ಟ್ಜ್ ಆವೃತ್ತಿಯನ್ನು ಪೆಟ್ರೋಲ್ ಮಾದರಿಯಲ್ಲಿ ಮಾತ್ರವೇ ಬಿಡುಗಡೆ ಮಾಡಲಿದ್ದು, ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲೇ ಇದು ಅತಿ ಹೆಚ್ಚು ಬಿಎಚ್‌ಪಿ ಉತ್ಪಾದನಾ ಆವೃತ್ತಿಯಾಗಿರಲಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಕರೋನಾ ಎಫೆಕ್ಟ್- ಎಕ್ಸ್‌ಯುವಿ300 ಸ್ಪೋರ್ಟ್ಜ್ ಕಾರು ಬಿಡುಗಡೆ ಮತ್ತೆ ಮುಂದೂಡಿಕೆ..

ಹಾಗೆಯೇ ಹೊಸ ಕಾರನ್ನು ಸ್ಪೋರ್ಟ್ಜ್ ಮಾದರಿಯಾಗಿ ಗುರುತಿಸಿಕೊಳ್ಳಲು ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದ್ದು, ಸ್ಪೋರ್ಟಿ ಗ್ರಾಫಿಕ್ಸ್ ಮತ್ತು ಕಾರಿನ ಒಳಭಾಗದಲ್ಲಿ ರೆಡ್ ಲೈನ್‌ಗಳನ್ನು ಬಳಕೆ ಮಾಡಿರುವುದು ಆಕರ್ಷಣಿವಾಗಿದೆ.

ಕರೋನಾ ಎಫೆಕ್ಟ್- ಎಕ್ಸ್‌ಯುವಿ300 ಸ್ಪೋರ್ಟ್ಜ್ ಕಾರು ಬಿಡುಗಡೆ ಮತ್ತೆ ಮುಂದೂಡಿಕೆ..

ಇನ್ನುಳಿದಂತೆ ಹೊಸ ಕಾರು ಸಾಮಾನ್ಯ ಕಾರಿನ ಮಾದರಿಯಲ್ಲೇ ತಾಂತ್ರಿಕ ಅಂಶಗಳನ್ನು ಹೊಂದಿದ್ದು, ಸಾಮಾನ್ಯ ಪೆಟ್ರೋಲ್ ಆವೃತ್ತಿಗಿಂತಲೂ ಹೊಸ ಕಾರು ಹೆಚ್ಚುವರಿಯಾಗಿ ರೂ.80 ಸಾವಿರದಿಂದ ರೂ. 1 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆಯಲಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಕರೋನಾ ಎಫೆಕ್ಟ್- ಎಕ್ಸ್‌ಯುವಿ300 ಸ್ಪೋರ್ಟ್ಜ್ ಕಾರು ಬಿಡುಗಡೆ ಮತ್ತೆ ಮುಂದೂಡಿಕೆ..

ಸಾಮಾನ್ಯ ಆವೃತ್ತಿಯಲ್ಲಿ ಪೆಟ್ರೋಲ್ ಮಾದರಿಯ 1.2-ಲೀಟರ್ ಎಂಜಿನ್‍‌ನೊಂದಿಗೆ 110-ಬಿಎಚ್‌ಪಿ ಸಾಮರ್ಥ್ಯವನ್ನು ಹೊಂದಿದ್ದು, ಹೊಸ ಸ್ಪೋರ್ಟ್ಜ್ ಆವೃತ್ತಿಯು ಹೆಚ್ಚುವರಿಯಾಗಿ 20-ಬಿಎಚ್‌ಪಿ ಉತ್ಪಾದನಾ ಗುಣಹೊಂದಿದೆ.

Most Read Articles

Kannada
English summary
Mahindra XUV300 Sportz Launch Delayed Due To Coronavirus. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X