ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಎಕ್ಸ್‌ಯುವಿ300 ಹೊಸ ಟರ್ಬೋ ವರ್ಷನ್
2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಮಹೀಂದ್ರಾ ಎಕ್ಸ್‌ಯುವಿ300 ಸ್ಪೋರ್ಟ್ಜ್ ಆವೃತ್ತಿಯು ಇದೀಗ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಕಾರು ಅನಾವರಣಗೊಂಡ ನಂತರ ಮೊದಲ ಬಾರಿಗೆ ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ.

ಬೆಂಗಳೂರಿನ ಹೊರವಲಯದಲ್ಲಿ ನ್ಯೂ ಜನರೇಷನ್ ಎಕ್ಸ್‌ಯುವಿ500 ಕಾರಿನ ಜೊತೆಯಲ್ಲಿ ಎಕ್ಸ್‌ಯುವಿ300 ಸ್ಪೋರ್ಟ್ಜ್ ಮಾದರಿ ಕೂಡಾ ರೋಡ್ ಟೆಸ್ಟಿಂಗ್ ನಡೆಸುತ್ತಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಹೊಸ ರಸ್ತೆಗಿಳಿಯುವ ಸಿದ್ದತೆಯಲ್ಲಿದೆ. ಹೊಸ ಕಾರಿನಲ್ಲಿ ಸಾಮಾನ್ಯ ಮಾದರಿಯ ಪೆಟ್ರೋಲ್ ಎಂಜಿನ್ ಹೊರತುಪಡಿಸಿ ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ಹೊಸದಾಗಿ ಅಭಿವೃದ್ದಿಗೊಳಿಸಲಾದ 1.2-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಜೋಡಣೆ ಹೊಂದಿದ್ದು, ಅತಿ ಹೆಚ್ಚು ಬಿಎಚ್‌ಪಿ ಉತ್ಪಾದನಾ ವೈಶಿಷ್ಟ್ಯತೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಹೊಸದಾಗಿ ಅಭಿವೃದ್ದಿಗೊಳಿಸಲಾಗಿರುವ 1.2-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಎಂಸ್ಟಾಲಿನ್ ಎಂದು ಹೆಸರಿಸಿರುವ ಮಹೀಂದ್ರಾ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿರುವ ಸಾಮಾನ್ಯ ಮಾದರಿಯ 1.2-ಲೀಟರ್ ಪೆಟ್ರೋಲ್ ಎಂಜಿನ್‌ಗಿಂತಲೂ ಹೆಚ್ಚು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಳಿಸಲಾಗಿದೆ.

ಹೊಸ ಎಂಜಿನ್ ಅನ್ನು ಸ್ಪೋರ್ಟ್ಜ್ ವರ್ಷನ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರು ಮುಂಬರುವ ಅಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿದೆ. ಹೊಸ ಎಂಜಿನ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಲಿದೆ.

ಹೊಸ ಎಂಜಿನ್ ಮಾದರಿಯು 130-ಬಿಎಚ್‌ಪಿ ಮತ್ತು 230-ಎನ್ಎಂ ಟಾರ್ಕ್ ಉತ್ಪಾದನಾ ಸಾಮಾರ್ಥ್ಯ ಪಡೆದುಕೊಂಡಿದ್ದು, ಇದು ಎಕ್ಸ್‌ಯುವಿ300 ಸಾಮಾನ್ಯ ಪೆಟ್ರೋಲ್ ಮಾದರಿಗಿಂತಲೂ 20-ಬಿಎಚ್‌ಪಿ ಹೆಚ್ಚುವರಿಯಾಗಿ ಉತ್ಪಾದನೆ ಮಾಡಬಲ್ಲದು.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಸಾಮಾನ್ಯ ಆವೃತ್ತಿಯಲ್ಲಿ ಪೆಟ್ರೋಲ್ ಮಾದರಿಯು 1.2-ಲೀಟರ್ ಎಂಜಿನ್‍ನೊಂದಿಗೆ 110-ಬಿಎಚ್‌ಪಿ ಸಾಮರ್ಥ್ಯವನ್ನು ಹೊಂದಿದ್ದು, ಸಾಮಾನ್ಯ ಪೆಟ್ರೋಲ್ ಆವೃತ್ತಿಗಿಂತಲೂ ಹೊಸ ಕಾರು ಹೆಚ್ಚುವರಿಯಾಗಿ ರೂ.80 ಸಾವಿರದಿಂದ ರೂ. 1 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆಯಲಿದೆ.

ಹಾಗೆಯೇ ಹೊಸ ಕಾರನ್ನು ಸ್ಪೋರ್ಟ್ಜ್ ಮಾದರಿಯಾಗಿ ಗುರುತಿಸಿಕೊಳ್ಳಲು ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದ್ದು, ಸ್ಪೋರ್ಟಿ ಗ್ರಾಫಿಕ್ಸ್ ಮತ್ತು ಕಾರಿನ ಒಳಭಾಗದಲ್ಲಿ ರೆಡ್ ಲೈನ್‌ಗಳನ್ನು ಬಳಕೆ ಮಾಡಿರುವುದು ಆಕರ್ಷಣಿವಾಗಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಹೊಸ ಎಂಜಿನ್ ಮಾದರಿಯನ್ನು ಕೇವಲ ಎಕ್ಸ್‌ಯುವಿ300 ಸ್ಪೋರ್ಟ್ಜ್ ವರ್ಷನ್‌ನಲ್ಲಿ ಮಾತ್ರವಲ್ಲದೇ ಮುಂಬರುವ ಫೋರ್ಡ್ ಹೊಸ ಇಕೋಸ್ಪೋರ್ಟ್ಸ್ ಆವೃತ್ತಿಯಲ್ಲೂ ಇದೇ ಎಂಜಿನ್ ಅನ್ನು ಬಳಕೆ ಮಾಡಲಾಗುತ್ತಿದ್ದು, ಸಹಭಾಗಿತ್ವ ಯೋಜನೆಯಲ್ಲಿ ಕಾರು ಉತ್ಪಾದನೆ ಮಾಡುತ್ತಿರುವ ಫೋರ್ಡ್ ಮತ್ತು ಮಹೀಂದ್ರಾ ಸಂಸ್ಥೆಯು ಹೊಸ ಎಂಜಿನ್ ಅನ್ನು ವಿವಿಧ ಕಾರು ಮಾದರಿಗಳಲ್ಲಿ ಬಳಕೆ ಮಾಡಿಕೊಳ್ಳಲಿವೆ.


Click it and Unblock the Notifications








