ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಮಹೀಂದ್ರಾ ಕಂಪನಿಯ ಎಕ್ಸ್‌ಯುವಿ300 ಕಾಂಪ್ಯಾಕ್ಟ್ ಎಸ್‍ಯುವಿಯು ಕಳೆದ ಆರು ವರ್ಷಗಳಿಂದ ಸತತವಾಗಿ ಗ್ಲೋಬಲ್ ಎನ್‌ಸಿಎಪಿಯಲ್ಲಿ ಸುರಕ್ಷತಾ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಈ ಮಹೀಂದ್ರಾ ಎಕ್ಸ್‌ಯುವಿ300 ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಕಾಂಪ್ಯಾಕ್ಟ್ ಎಸ್‍ಯುವಿಗಳಲ್ಲಿ ಒಂದಾಗಿದೆ.

ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

2014 ಮತ್ತು 2020ರ ನಡುವೆ ಗ್ಲೋಬಲ್ ಎನ್‌ಸಿಎಪಿಯಲ್ಲಿ ಪರೀಕ್ಷಿಸಿದಎಲ್ಲಾ ಮಹೀಂದ್ರಾ ಎಕ್ಸ್‌ಯುವಿ300 ಸುರಕ್ಷಿತ 'ಮೇಡ್-ಇನ್-ಇಂಡಿಯಾ' ಕಾರು ಎಂಬ ಬೀರುದನ್ನು ಮೂಡಿಗೇರಿಸಿಕೊಂಡಿದೆ. ಕಳೆದ ಆರು ವರ್ಷಗಳಲ್ಲಿ ಗ್ಲೋಬಲ್ ಎನ್‌ಸಿಎಪಿಯಲ್ಲಿ ಟೆಸ್ಟ್ ನಡೆಸಿದ ಒಟ್ಟು 38 ವಾಹನಗಳ ನಡುವೆ ಮಹೀಂದ್ರಾ ಎಕ್ಸ್‌ಯುವಿ 300 ಅತಿ ಹೆಚ್ಚು ಸುರಕ್ಷಾತ ರೇಟಿಂಗ್ ಪಾಯಿಂಟ್ ಅನ್ನು ಪಡೆದುಕೊಂಡಿದೆ. ಮಹೀಂದ್ರಾ ಎಕ್ಸ್‌ಯುವಿ 300 ಕಾಂಪ್ಯಾಕ್ಟ್ ಎಸ್‍ಯುವಿಯು ಅಡಾಲ್ಟ್ ಆಕ್ಯುಪೆನ್ಸಿ ಮತ್ತು ಚೈಲ್ಡ್ ಆಕ್ಯುಪೆನ್ಸಿ ವಿಭಾಗದಲ್ಲಿ ನಾಲ್ಕು-ಸ್ಟಾರ್ ರೇಟಿಂಗ್ ಅನ್ನು ಪಡೆದುಕೊಂಡಿತು.

ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಮಹೀಂದ್ರಾ ಎಕ್ಸ್‌ಯುವಿ300 ಕಾಂಪ್ಯಾಕ್ಟ್-ಎಸ್‌ಯುವಿಯಲ್ಲಿ ಸುರಕ್ಷತೆಗಾಗಿ ಏಳು-ಏರ್‌ಬ್ಯಾಗ್‌ಗಳು, ಎಲ್ಲಾ 4-ಚಕ್ರಗಳಲ್ಲಿ ಡಿಸ್ಕ್ ಬ್ರೇಕ್‌ಗಳು, ಒಆರ್‌ವಿಎಂ, ಫ್ರಂಟ್ ಪಾರ್ಕಿಂಗ್ ಸೆನ್ಸರ್ ಮತ್ತು ಇನ್ನು ಹಲವು ಫೀಚರುಗಳನ್ನು ಒಳಗೊಂಡಿದೆ.

MOST READ: ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ನಿಸ್ಸಾನ್ ಮ್ಯಾಗ್ನೆಟ್ ಎಸ್‍ಯುವಿ

ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಮಹೀಂದ್ರಾ ಎಕ್ಸ್‌ಯುವಿ300 ಕಾರನ್ನು ಈ ವರ್ಷದ ಆರಂಭದಲ್ಲಿ ಜರ್ಮನಿಯಲ್ಲಿ ಗ್ಲೋಬಲ್ ಎನ್‌ಸಿಎಪಿಯಲ್ಲಿ ಅಧಿಕೃತವಾಗಿ ಪರೀಕ್ಷಿಸಿತು. ಜಿಎನ್‌ಸಿಎಪಿಯಿಂದ 'ಸೇಫರ್ ಚಾಯ್ಸ್ ಅವಾರ್ಡ್' ಪಡೆದ ಭಾರತದ ಏಕೈಕ ಕಾರು ಇದಾಗಿದೆ.

ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಮಹೀಂದ್ರಾ ಲಿಮಿಟೆಡ್‌ನ ಆಟೋಮೋಟಿವ್ ವಿಭಾಗದ ಸಿಇಒ ವೀಜಯ್ ನಕ್ರಾ ಅವರು ಮಾತನಾಡಿ, ಇದು ನಮಗೆ ಹೆಮ್ಮೆಯ ಕ್ಷಣವಾಗಿದೆ. ಈ ವರ್ಷದ ಆರಂಭದಲ್ಲಿ ಎಕ್ಸ್‌ಯುವಿ 300 ಅನ್ನು ಜಿಎನ್‌ಸಿಎಪಿ ಭಾರತದಲ್ಲಿ ಸುರಕ್ಷಿತ ವಾಹನವೆಂಬ ಬಿರುದು ಲಭಿಸಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಕಳೆದ ಆರು ವರ್ಷಗಳಿಂದ ಇದು ಸುರಕ್ಷತಾ ವಾಹನವಾಗಿದೆ. ಎಕ್ಸ್‌ಯುವಿ300 ಎಸ್‍ಯುವಿಯು ಹೆಚ್ಚು ಸುರಕ್ಷತೆಯನ್ನು ಹೊಂದಿರುವುದರಿಂದ ದೇಶಿಯ ಮಾರುಕಟ್ಟೆಯಲ್ಲಿ ಜನರಿಗೆ ಮಹೀಂದ್ರಾ ವಾಹನಗಳ ಮೇಲೆ ಹೆಚ್ಚಿನ ನಂಭಿಕೆಯನ್ನು ಮೂಡಿಸುತ್ತದೆ ಎಂದು ಹೇಳಿದರು.

ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಮಹೀಂದ್ರಾ ಎಕ್ಸ್‌ಯುವಿ300 ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್ ಮತ್ತು ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಗೆ ಪೈಪೋಟಿಯನ್ನು ನೀಡುತ್ತದೆ.

MOST READ: ಇತಿಹಾಸದ ಪುಟ ಸೇರಿದ ಫೋಕ್ಸ್‌ವ್ಯಾಗನ್ ಎಮಿಯೊ ಕಾರು

ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಇನ್ನು 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಮಹೀಂದ್ರಾ ಎಕ್ಸ್‌ಯುವಿ300 ಸ್ಪೋರ್ಟ್ಜ್ ಆವೃತ್ತಿಯು ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿದೆ. ಇತ್ತೀಚೆಗೆ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿತ್ತು.

ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಚೈಲ್ಡ್ ಆಕ್ಯುಪೆನ್ಸಿ ವಿಭಾಗದಲ್ಲಿ ನಾಲ್ಕು-ಸ್ಟಾರ್ ರೇಟಿಂಗ್ ಪಡೆದ ಮೊದಲ ‘ಮೇಡ್-ಇನ್-ಇಂಡಿಯಾ' ವಾಹನ ಮಹೀಂದ್ರಾ ಎಕ್ಸ್‌ಯುವಿ300 ಆಗಿದೆ. ಮಹೀಂದ್ರಾ ಎಕ್ಸ್‌ಯುವಿ 300 ಸ್ಪೋರ್ಟ್ಜ್ ಆವೃತ್ತಿಯು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ.

Most Read Articles

Kannada
English summary
Mahindra XUV300 Tops Global NCAP Safety Rankings. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X