ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಮಹೀಂದ್ರಾ ಎಕ್ಸ್‌ಯುವಿ 500

ಮಹೀಂದ್ರಾ ಕಂಪನಿಯು ತನ್ನ ಬಿಎಸ್-6 ಎಕ್ಸ್‌ಯುವಿ 500 ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ, ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಎಸ್‍ಯುವಿಯ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.13.20 ಲಕ್ಷಗಳಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಮಹೀಂದ್ರಾ ಎಕ್ಸ್‌ಯುವಿ 500

ಮಹಿಂದ್ರಾ ಕಂಪನಿಯು ಒಂದು ವಾರದ ಹಿಂದೆ ಭಾರತೀಯ ಮಾರುಕಟ್ಟೆಯಲ್ಲಿ ಈ ಎಸ್‍ಯುವಿಗಾಗಿ ಅಧಿಕೃತವಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿತ್ತು. ಬಿಎಸ್-6 ಎಕ್ಸ್‌ಯುವಿ 500 ಎಸ್‍ಯುವಿಗಾಗಿ ಟೋಕನ್ ಮೊತ್ತ ರೂ.5,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಪ್ರಸ್ತುತ ದೇಶದಲ್ಲಿ ಕರೋನಾ ಭೀತಿಯಿಂದ ದೇಶಾದ್ಯಂತ ಲಾಕ್‌ಡೌನ್ ಇದೆ. ಇದರಿಂದಾಗಿ ಲಾಕ್‌ಡೌನ್ ಅವಧಿ ಕಳೆದ ಬಳಿಕ ಈ ಎಸ್‍ಯುವಿಯನ್ನು ವಿತರಿಸಬಹುದು.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಮಹೀಂದ್ರಾ ಎಕ್ಸ್‌ಯುವಿ 500

ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಎಸ್‍ಯುವಿಯು ಡಬ್ಲ್ಯು5, ಡಬ್ಲ್ಯು7, ಡಬ್ಲ್ಯು9 ಮತ್ತು ಡಬ್ಲ್ಯು11 (ಒ) ಎಂಬ ನಾಲ್ಕು ರೂಪಾಂತರಗಳಲ್ಲಿ ಲಭ್ಯವಿರಲಿದೆ. ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಎಸ್‍ಯುವಿಯ ಬೇಸ್ ಮಾದರಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.13.20 ಲಕ್ಷ ಗಳಾದರೆ, ಟಾಪ್ ಸ್ಪೇಕ್ ಡಬ್ಲ್ಯು11 (ಒ) ರೂಪಾಂತರದ ಬೆಲೆಯು ರೂ.17.70 ಲಕ್ಷಗಳಾಗಿದೆ.

MOST READ: ಬಿಡುಗಡೆಯಾಯ್ತು ಬಿಎಸ್-6 ಮಹೀಂದ್ರಾ ಸ್ಕಾರ್ಪಿಯೋ ಎಸ್‍‍‍ಯುವಿ

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಮಹೀಂದ್ರಾ ಎಕ್ಸ್‌ಯುವಿ 500

2020ರ ಮಹೀಂದ್ರಾ ಎಕ್ಸ್‌ಯುವಿ 500 ಎಸ್‍ಯುವಿಯ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಈ ಹೊಸ ಎಕ್ಸ್‌ಯುವಿ 500 ಎಸ್‍ಯುವಿಯಲ್ಲಿ 2.2-ಲೀಟರ್ ಎಂಹಾಕ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಿದ್ದಾರೆ. ಈ ಎಂಜಿನ್ 155 ಬಿಹೆಚ್‍ಪಿ ಪವರ್ ಮತ್ತು 360 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಆರು-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಅನ್ನು ಅಳವಡಿಸಲಾಗಿದೆ,

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಮಹೀಂದ್ರಾ ಎಕ್ಸ್‌ಯುವಿ 500

ಈ ಎಂಜಿನ್ ಮುಂಭಾಗದ ಟಯರ್ ಗಳಿಗೆ ಪವರ್ ಕಳುಹಿಸುತ್ತದೆ. ಮಹೀಂದ್ರಾ ಕಂಪನಿಯು ಮುಂದಿನ ತಲೆಮಾರಿನ ಎಕ್ಸ್‌ಯುವಿ 500 ಎಸ್‍ಯುವಿಯನ್ನು ಅಭಿವೃದ್ದಿಪಡಿಸುವುದರಲ್ಲಿ ನಿರತರಾಗಿದ್ದಾರೆ. ಈ ಮುಂದಿನ ತಲೆಮಾರಿನ ಎಕ್ಸ್‌ಯುವಿ 500 ಎಸ್‍ಯುವಿಯು ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಬಹುದು.

MOST READ: ಇತಿಹಾಸದ ಪುಟ ಸೇರಿದ ಫೋಕ್ಸ್‌ವ್ಯಾಗನ್ ಎಮಿಯೊ ಕಾರು

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಮಹೀಂದ್ರಾ ಎಕ್ಸ್‌ಯುವಿ 500

2020ರ ಮಹೀಂದ್ರಾ ಎಕ್ಸ್‌ಯುವಿ 500 ಎಸ್‍ಯುವಿಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಹೊಸ ಎಸ್‍ಯುವಿಯಲ್ಲಿ ಗ್ರಿಲ್ ಕ್ರೋಮ್, ಸ್ಪ್ಲಿಟ್ ಟೈಲ್ ಲೈಟ್ಸ್, ಎಲ್ಇಡಿ ಡಿಆರ್ಎಲ್, ಪ್ರೊಜೆಕ್ಟರ್ ಹೆಡ್ ಲ್ಯಾಂಪ್, ಟ್ವಿನ್ ಎಕ್ಸಾಸ್ಟ್, ರಿಯರ್ ಸ್ಪಾಯ್ಲರ್ ಮತ್ತು ಸ್ಟೈಲಿಶ್ ಡೈಮಂಡ್-ಕಟ್ ಅಲಾಯ್ ವ್ಹೀಲ್ ಅನ್ನು ಹೊಂದಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಮಹೀಂದ್ರಾ ಎಕ್ಸ್‌ಯುವಿ 500

2020ರ ಮಹೀಂದ್ರಾ ಎಕ್ಸ್‌ಯುವಿ 500 ಎಸ್‍ಯುವಿಯು ಪ್ಲಶ್ ಲೆದರ್, ಅಪ್ಹೋಲ್ಸ್ಟರಿ, ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಿರುವ ದೊಡ್ಡ ಟಚ್ ಸ್ಕ್ರೀನ್ ಇನ್ಪೋಟೇನೆಮೆಂಟ್ ಸಿಸ್ಟಂ, ಕೀಲೆಸ್ ಎಂಟ್ರಿ, ಎಲೆಕ್ಟ್ರಿಕ್ ಸನ್‍ ಸನ್‌ರೂಫ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ಎಲೆಕ್ಟ್ರಿಕ್ ಆಗಿ ಹೊಂದಾಣಿಕೆ ಮಾಡಬಹುದುದಾದ ಡ್ರೈವರ್ ಸೀಟ್, ಡ್ಯುಯಲ್ ಏರ್‌ಬ್ಯಾಗ್, ಬ್ರೇಕ್ ಅಸಿಸ್ಟ್, ಸೀಟ್‌ಬೆಲ್ಟ್ ರಿಮೈಂಡರ್ ಮತ್ತು ಇತರ ಫೀಚರ್ ಗಳನ್ನು ಹೊಂದಿರುತ್ತದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಮಹೀಂದ್ರಾ ಎಕ್ಸ್‌ಯುವಿ 500

ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಎಸ್‍ಯುವಿಯು 4,585 ಎಂಎಂ ಉದ್ದ, 1,890 ಎಂಎಂ ಅಗಲ ಮತ್ತು 1,785 ಎಂಎಂ ಎತ್ತರವನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯು 2,700 ವ್ಹೀಲ್ ಬೇಸ್ ಅನ್ನು ಹೊಂದಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಮಹೀಂದ್ರಾ ಎಕ್ಸ್‌ಯುವಿ 500

ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಎಸ್‍ಯುವಿಯು ಕಿಯಾ ಸೆಲ್ಟೋಸ್, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್, ಹ್ಯುಂಡೈ ಕ್ರೆಟಾ, ಜೀಪ್ ಕಂಪಾಸ್ ಮತ್ತು ಫೋಕ್ಸ್ ವ್ಯಾಗನ್ ಟಿ-ರಾಕ್ ಎಸ್‍ಯುವಿಯುಗಳಿಗೆ ಪೈಪೋಟಿ ನೀಡುತ್ತದೆ.

Article Published On: Thursday, April 30, 2020, 11:25 [IST]
English summary
Mahindra XUV500 BS6 Launched In India: Prices Start At Rs 13.20 Lakh. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+