ಶೀಘ್ರದಲ್ಲೇ ಬಿಗ್ ಸರ್ಪ್ರೈಸ್ ನೀಡಲಿದೆ ಎಂದು ಬಲೆನೊ ಕಾರಿನ ಟೀಸರ್ ಬಿಡುಗಡೆಗೊಳಿಸಿದ ಮಾರುತಿ ಸುಜುಕಿ
ಮಾರುತಿ ಸುಜುಕಿ ಕಂಪನಿಯು ತನ್ನ ಜನಪ್ರಿಯ ಬಲೆನೊ ಹ್ಯಾಚ್‌ಬ್ಯಾಕ್‌ನ ಹೊಸ ಟೀಸರ್ ವೀಡಿಯೋವನ್ನು ಬಿಡುಗಡೆಗೊಳಿಸಿದೆ. ಬಲೆನೊ ಹ್ಯಾಚ್‌ಬ್ಯಾಕ್ ಮಾರುತಿ ಸುಜುಕಿ ಕಾರುಗಳ ಸರಣಿಯಲ್ಲಿ ಅತ್ಯಂತ ಯಶಸ್ವಿ ಮಾದರಿಗಳಲ್ಲಿ ಒಂದಾಗಿದೆ.

ಮಾರುತಿ ಸುಜುಕಿ ಕಂಪನಿಯ ನೆಕ್ಸಾ ಎಕ್ಸ್‌ಪಿರಿಯನ್ಸ್ ಸಾಮಾಜಿಕ ಮಾಧ್ಯಮ ಪೇಜ್ ನಲ್ಲಿ ಬಲೆನೊ ಹ್ಯಾಚ್‌ಬ್ಯಾಕ್‌ನ ಹೊಸ ಟೀಸರ್ ವೀಡಿಯೋದಲ್ಲಿ ಬಿಡುಗಡೆಗೊಳಿಸಲಾಗಿದೆ. ಬಲೆನೊ ಟೀಸರ್ ವೀಡಿಯೋದಲ್ಲಿ 'ಎ ಬಿಗ್ ಸರ್ಪ್ರೈಸ್ ಕಮಿಂಗ್ ಸೂನ್ ಎಂಬ'ಟ್ಯಾಗ್‌ಲೈನ್ ಅನ್ನು ಹೊಂದಿದೆ. ಇದು ಮಾರುತಿ ಸುಜುಕಿ ಶೀಘ್ರದಲ್ಲೇ ಬಲೆನೊ ಹ್ಯಾಚ್‌ಬ್ಯಾಕ್‌ನಲ್ಲಿ ಅತ್ಯಾಕರ್ಷಕ ನವೀಕರಣವನ್ನು ಪರಿಚಯಿಸಲಿದ್ದಾರೆ ಎಂದು ಇದು ಸ್ಪಷ್ಟವಾಗಿ ಸೂಚಿಸುತ್ತದೆ.

ನವೀಕರಣದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ನ್ಯೂ ಜನರೇಷನ್ ಹ್ಯುಂಡೈ ಐ20 ಕಾರಿಗೆ ಪೈಪೋಟಿ ನೀಡಲು ಇಂಡೋ-ಜಪಾನೀಸ್ ಬ್ರ್ಯಾಂಡ್ ಬಲೆನೊ ಹ್ಯಾಚ್‌ಬ್ಯಾಕ್‌ನ ಹೊಸ ಸ್ಪೆಷಲ್ ಎಡಿಷನ್ ಅನ್ನು ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ನ್ಯೂ ಜನರೇಷನ್ ಹ್ಯುಂಡೈ ಐ20 ಕಾರಿನಲ್ಲಿ 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಮಾರುತಿ ಸುಜುಕಿ 1.0-ಲೀಟರ್ ಬೂಸ್ಟರ್‌ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಬಲೆನೊ ಹ್ಯಾಚ್‌ಬ್ಯಾಕ್‌ನೊಂದಿಗೆ ಮರಳಿ ತರಬಹುದು.

ಕಂಪನಿಯು ಈ ವರ್ಷದ ಆರಂಭದಲ್ಲಿ ಬೂಸ್ಟರ್‌ಜೆಟ್ ಎಂಜಿನ್ ಅನ್ನು ಸ್ಥಗಿತಗೊಳಿಸಿತ್ತು. ಈ ಎಂಜಿನ್ 100.5 ಬಿಹೆಚ್‌ಪಿ ಪವರ್ ಮತ್ತು 150 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತಿತ್ತು. 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮೂಲಕ ಪವರ್ ಅನ್ನು ಮುಂದಿನ ಚಕ್ರಗಳಿಗೆ ರವಾನಿಸಲಾಗುತ್ತದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (ಎಂಎಸ್ಐಎಲ್) 2015ರ ಅಕ್ಟೋಬರ್ ತಿಂಗಳಲ್ಲಿ ಬಲೆನೊ ಬಿ2 ವಿಭಾಗದ ಹ್ಯಾಚ್‌ಬ್ಯಾಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು.

ಈ ಬಲೆನೊ ಹ್ಯಾಚ್‌ಬ್ಯಾಕ್ ಅನ್ನು ಮಾರುತಿ ಸುಜುಕಿ ಕಂಪನಿಯ ಪ್ರೀಮಿಯಂ ನೆಕ್ಸಾ ಡೀಲರ್ ಮೂಲಕ ಮಾರಾಟ ಮಾಡಲಾಗುತ್ತಿದೆ. ವರ್ಷಗಳಲ್ಲಿ ಬಲೆನೊ ಕಾರುಗಳ ಮಾರಾಟವು ಉತ್ತಮ ಬೆಳವಣಿಗೆಯನ್ನು ಸಾಧಿಸುತ್ತಿದೆ. ಬಲೆನೊ ಹ್ಯಾಚ್‌ಬ್ಯಾಕ್ ಐದನೇ ತಲೆಮಾರಿನ ಹರ್ಟೆಕ್ಟ್ ಅರ್ಟಿಟೆಕ್ಜರ್ ಅನ್ನು ಆಧರಿಸಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಬಾಲೆನೊ ಭಾರತೀಯ ಮಾರುಕಟ್ಟೆಗೆ ಪಾದಾರ್ಪಣೆ ಮಾಡಿ ಕೇವಲ ಅರ್ಧ ದಶಕವಾಗಿದೆ. ಇಂಡೋ-ಜಪಾನೀಸ್ ತಯಾರಕ ಮಾರುತಿ ಸುಜುಕಿ ತನ್ನ ಬಲೆನೊ ಕಾರು ಭಾರತದಲ್ಲಿ ಎಂಟು ಲಕ್ಷ ಮಾರಾಟದ ಮೈಲಿಗಲ್ಲು ಸಾಧಿಸಿದೆ. ದೇಶದಲ್ಲಿ ಆತಿ ಹೆಚ್ಚು ವೇಗವಾಗಿ ಮಾರಾಟವಾಗುವ ಹ್ಯಾಚ್‌ಬ್ಯಾಕ್ ಆಗಿದೆ.

ಬಲೆನೊ ಕಾರು ಆಸ್ಟ್ರೇಲಿಯಾ, ಯುರೋಪ್, ಲ್ಯಾಟಿನ್ ಅಮೆರಿಕ, ಆಫ್ರಿಕಾ, ಮಧ್ಯಪ್ರಾಚ್ಯ ಮತ್ತು ಆಗ್ನೇಯ ಏಷ್ಯಾದಂತಹ ಅನೇಕ ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗೆ ರಫ್ತು ಮಾಡಲಾಗುತ್ತದೆ. ಬಲೆನೊ ಕೇವಲ 59 ತಿಂಗಳಲ್ಲಿ ಎಂಟು ಲಕ್ಷ ಮಾರಾಟದ ಮೈಲಿಗಲ್ಲು ತಲುಪಿದೆ.

ಜನಪ್ರಿಯ ಮಾರುತಿ ಸುಜುಕಿ ಬಲೆನೊ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಎಲೈಟ್ ಐ20, ಟಾಟಾ ಆಲ್ಟ್ರೊಜ್, ಫೋಕ್ಸ್‌ವ್ಯಾಗನ್ ಪೊಲೊ ಮತ್ತು ಹೋಂಡಾ ಜಾಝ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications