ಬಿಎಸ್-6 ಮಾರುತಿ ಸುಜುಕಿ ಕಾರುಗಳ ಮೇಲೆ ಭರ್ಜರಿ ಆಫರ್
ಭಾರತದ ನಂ.1 ಕಾರು ಉತ್ಪಾದನಾ ಮತ್ತು ಮಾರಾಟ ಸಂಸ್ಥೆಯಾಗಿರುವ ಮಾರುತಿ ಸುಜುಕಿಯು ತನ್ನ ಬಿಎಸ್-6 ಕಾರುಗಳ ಮೇಲೆ ಭರ್ಜರಿ ಆಫರ್ ಅನ್ನು ಘೋಷಿಸಿದೆ. ಮಾರುತಿ ಸುಜುಕಿ ಕಂಪನಿಯು ತನ್ನ ಜನಪ್ರಿಯ ಕಾರುಗಳ ಮೇಲೆ ಬರೊಬ್ಬರಿ ರೂ.50 ಸಾವಿರಗಳವರೆಗೆ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ.

ಮಾರುತಿ ಸುಜುಕಿ ಕಂಪನಿಯು ತನ್ನ ಸರಣಿಯಲ್ಲಿರುವ ಜನಪ್ರಿಯ ಕಾರುಗಳಾದ ಸಿಯಾಜ್, ಬಲೆನೊ ಮತ್ತು ಇಗ್ನಿಸ್ ಮೇಲೆ ರಿಯಾಯಿತಿಯನ್ನು ಘೋಷಿಸಿದೆ. ಆದರೆ ಈ ರಿಯಾಯಿತಿಗಳು ಡೀಲರ್‍ಗಳನ್ನು ಅವಲಂಬಿಸಿವೆ. ಕೆಲವು ಡೀಲರ್‍ಗಳ ಬಳಿ ರಿಯಾಯಿತಿಯು ಭಿನ್ನವಾಗಿರುತ್ತದೆ. ಮಾರುತಿ ಸುಜುಕಿ ನೆಕ್ಸಾ ಡೀಲರ್‍ಗಳ ಬಳಿ ಇರುವ ಮಾರ್ಚ್ ತಿಂಗಳಿನ ರಿಯಾಯಿತಿಗಳ ಬಗ್ಗೆ ಮಾಹಿತಿ ಇಲ್ಲಿದೆ.

ಮಾರುತಿ ಸುಜುಕಿ ಸಿಯಾಜ್
ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (ಎಂಎಸ್ಐಎಲ್) ಕಂಪನಿಯು ತನ್ನ ಬಿಎಸ್-6 ಸಿಯಾಜ್ ಕಾರನ್ನು ಭಾರತದಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಇದೀಗ ಬಿಎಸ್-6 ಮಾರುತಿ ಸುಜುಕಿ ಸಿಯಾಜ್ ಕಾರಿನ ಮೇಲೆ ರೂ.50,000ಗಳವರೆಗೆ ಆಫರ್ ಅನ್ನು ಘೋಷಿಸಿದೆ.

ಮಾರುತಿ ಸಿಯಾಜ್ ಎಸ್ ಕಾರಿನಲ್ಲಿ ಬಿಎಸ್-6, 1.5 ಲೀಟರ್ ಕೆ 15 ಸೀರಿಸ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 104 ಬಿಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 5 ಸ್ಫೀಡ್ ಮ್ಯಾನುವಲ್ ಅಥವಾ 4 ಸ್ಪೀಡ್ ಟಾರ್ಕ್ ಕನ್ವಟರ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಮಾರುತಿ ಸುಜುಕಿ ಬಲೆನೊ
ಮಾರುತಿ ಸುಜುಕಿ ಬಲೆನೊ ಕಾರು ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರ ಲಭ್ಯವಿದೆ. ಇತ್ತೀಚೆಗೆ ಬಲೆನೊ ಕಾರಿನ ಡೀಸೆಲ್ ಆವೃತ್ತಿಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಬಿಎಸ್-6 ಮಾರುತಿ ಬಲೆನೊ ಪೆಟ್ರೋಲ್ ಆವೃತ್ತಿಯ ಮೇಲೆ ರೂ.45,000ಗಳವರೆಗೆ ರಿಯಾಯಿತಿಯನ್ನು ಘೋಷಿಸಿದೆ.

ಮಾರುತಿ ಬಲೆನೊ ಫ್ಯಾಮಿಲಿ ಹ್ಯಾಚ್‍ಬ್ಯಾಕ್ ಎಂದೇ ಪ್ರಸಿದ್ದಿಯಾಗಿದೆ. ಬಿಎಸ್-6 ಮಾರಿತಿ ಸುಜುಕಿ ಬಲೆನೊ ಕಾರಿನಲ್ಲಿ 1.2 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಮಾರುತಿ ಬಲೆನೊ ಕಾರು ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಅಲ್ಟ್ರೋಜ್, ಹೋಂಡಾ ಜಾಝ್ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಪೈಪೋಟಿ ನೀಡುತ್ತದೆ.

ಮಾರುತಿ ಸುಜುಕಿ ಇಗ್ನಿಸ್ ಫೇಸ್‍ಲಿಫ್ಟ್
ಮಾರುತಿ ಸುಜುಕಿ ಕಂಪನಿಯು ಬಹುನಿರೀಕ್ಷಿತ ಇಗ್ನಿಸ್ ಫೇಸ್‍ಲಿಫ್ಟ್ ಅನ್ನು ಹೊಸ ವಿನ್ಯಾಸ ಮತ್ತು ಹೊಸ ಬಣ್ಣಗಳ ಆಯ್ಕೆಯೊಂದಿಗೆ ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಬಿಎಸ್-6 ಮಾರುತಿ ಸುಜುಕಿ ಇಗ್ನಿಸ್ ಫೇಸ್‍ಲಿಫ್ಟ್ ಕಾರಿಗೆ ರೂ.35,000ಗಳವರೆಗೆ ಭರ್ಜರಿ ಆಫರ್ ಅನ್ನು ಘೋಷಿಸಿದೆ.

ಹೊಸ ಇಗ್ನಿಸ್ ಫೇಸ್‍ಲಿಫ್ಟ್ ಕಾರು 1.2 ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 6,000 ಆರ್‍ಪಿಎಂನಲ್ಲಿ 83 ಬಿಹೆಚ್‍ಪಿ ಪವರ್ ಮತ್ತು 4,200 ಆರ್‍ಪಿಎಂನಲ್ಲಿ 113 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಜೋಡಿಸಲಾಗಿದೆ. ಇದರೊಂದಿಗೆ 5 ಸ್ಪೀಡ್ ಎಎಂಟಿಯನ್ನು ಆಯ್ಕೆಯಾಗಿ ನೀಡಲಾಗಿದೆ. ಮಾರುತಿ ಸುಜುಕಿ ಇಗ್ನಿಸ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕಂಪನಿಯ ಹ್ಯಾಚ್‍ಬ್ಯಾಕ್‍ಗಳಿಗೆ ಪೈಪೋಟಿ ನೀಡಲಿದೆ.


Click it and Unblock the Notifications