ಬಿಡುಗಡೆಯಾಯ್ತು ಬಿಎಸ್-6 ಮಾರುತಿ ಸುಜುಕಿ ಸಿಯಾಜ್ ಎಸ್ ಕಾರು

ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (ಎಂಎಸ್ಐಎಲ್) ಕಂಪನಿಯು ತನ್ನ ಹೊಸ ಸಿಯಾಜ್ ಎಸ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ. ಹೊಸ ಮಾರುತಿ ಸುಜುಕಿ ಸಿಯಾಜ್ ಎಸ್ ಟಾಪ್ ಸ್ಪೆಕ್ ಆಗಿದೆ. ಈ ಕಾರು ಆಲ್ಫಾ ರೂಪಾಂತರವನ್ನು ಆಧರಿಸಿದೆ ಮತ್ತು ಬಿಎಸ್-6 ಎಂಜಿನ್ ಅನ್ನು ಹೊಂದಿದೆ.

ಬಿಡುಗಡೆಯಾಯ್ತು ಬಿಎಸ್-6 ಮಾರುತಿ ಸುಜುಕಿ ಸಿಯಾಜ್ ಎಸ್ ಕಾರು

ಹೊಸ ಮಾರುತಿ ಸುಜುಕಿ ಸಿಯಾಜ್ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.10.08 ಲಕ್ಷಗಳಾಗಿದೆ. ಹೊಸ ಮಾರುತಿ ಸುಜುಕಿ ಸಿಯಾಜ್ ಎಸ್ ಕಾರು ಹಲವಾರು ಬದಲಾವಣೆಗಳೊಂದಿಗೆ ಬಿಡುಗಡೆಯಾಗಿದೆ. ಹೊಸ ಸಿ-ಸೆಗ್‍‍ಮೆಂಟ್ ಸೆಡಾನ್ ಹೆಚ್ಚು ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಹೊಸ ಸಿಯಾಜ್ ಎಸ್ ಕಾರು ಮೂರು ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಿದೆ. ಅವುಗಳು ಪ್ರೀಮಿಯಂ ಸಿಲ್ವರ್, ಸ್ನೋ ವೈಟ್ ಮತ್ತು ಸಾಂಗ್ರಿಯಾ ರೆಡ್ ಬಣ್ಣಗಳಾಗಿದೆ.

ಬಿಡುಗಡೆಯಾಯ್ತು ಬಿಎಸ್-6 ಮಾರುತಿ ಸುಜುಕಿ ಸಿಯಾಜ್ ಎಸ್ ಕಾರು

ಹೊಸ ಮಾರುತಿ ಸುಜುಕಿ ಸಿಯಾಜ್ ಎಸ್ ಕಾರಿನ ಕಾಸ್ಮೆಟಿಕ್‍ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಇದರಲ್ಲಿ ಬ್ಲ್ಯಾಕ್ ಒಆರ್‍‍ವಿಎಂ‍ಗಳು, ಕಪ್ಪು ಬಣ್ಣದ 16 ಇಂಚಿನ ಅಲಾಯ್ ವ್ಹೀಲ್‍‍ಗಳು, ಬೂಟ್ ಲಿಡ್ ಮತ್ತು ನವೀಕರಿಸಿದ ಫಾಂಗ್ ಲ್ಯಾಂಪ್‍ಗಳನ್ನು ಅಳವಡಿಸಲಾಗಿದೆ.

ಬಿಡುಗಡೆಯಾಯ್ತು ಬಿಎಸ್-6 ಮಾರುತಿ ಸುಜುಕಿ ಸಿಯಾಜ್ ಎಸ್ ಕಾರು

ಹೊಸ ಸಿಯಾಜ್ ಕಾರಿನ ಇಂಟಿರಿಯರ್‍‍ನಲ್ಲಿ ಕೂಡ ಹಲವಾರು ಸ್ಪೋರ್ಟಿ ನವೀಕರಣಗಳನ್ನು ಮಾಡಲಾಗಿದೆ. ಇದರಲ್ಲಿ ಡ್ಯಾಶ್‍‍ಬೋರ್ಡ್‍ನಲ್ಲಿ ಬ್ಲ್ಯಾಕ್ ಮತ್ತು ಸಿಲ್ವರ್ ಆಕ್ಸೆಂಟ್‍‍ಗಳು, ಡೋರ್ ಟ್ರಿಮ್ಸ್ ಮತ್ತು ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಕೂಡ ಸೇರಿವೆ.

ಬಿಡುಗಡೆಯಾಯ್ತು ಬಿಎಸ್-6 ಮಾರುತಿ ಸುಜುಕಿ ಸಿಯಾಜ್ ಎಸ್ ಕಾರು

ಮಾರುತಿ ಸಿಯಾಜ್ ಎಸ್‍ ಬಿಎಸ್-6 ಎಂಜಿನ್ ಅನ್ನು ಹೊಂದಿದೆ. ಮಾರುತಿ ಸಿಯಾಜ್ ಎಸ್ ಕಾರಿನಲ್ಲಿ ಬಿಎಸ್-6, 1.5 ಲೀಟರ್ ಕೆ 15 ಸೀರಿಸ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಎರ್ಟಿಗಾ ಕಾರಿನಲ್ಲಿಯೂ ಕೂಡ ಇದೇ ಮಾದರಿಯ ಎಂಜಿನ್ ಅನ್ನು ಅಳವಡಿಸಲಾಗಿದೆ.

ಬಿಡುಗಡೆಯಾಯ್ತು ಬಿಎಸ್-6 ಮಾರುತಿ ಸುಜುಕಿ ಸಿಯಾಜ್ ಎಸ್ ಕಾರು

ಈ ಎಂಜಿನ್ 104 ಬಿ‍‍ಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 5 ಸ್ಫೀಡ್ ಮ್ಯಾನುವಲ್ ಅಥವಾ 4 ಸ್ಪೀಡ್ ಟಾರ್ಕ್ ಕನ್ವಟರ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಮಾರುತಿ ಸುಜುಕಿಯ ಎಸ್‍‍ಹೆಚ್‍ವಿಎಸ್ ಸ್ಮಾರ್ಟ್ ಮೈಲ್ಡ್-ಹೈಬ್ರಿಡ್ ತಂತ್ರಜ್ಞಾನವನ್ನು ಹೊಂದಿದೆ.

ಬಿಡುಗಡೆಯಾಯ್ತು ಬಿಎಸ್-6 ಮಾರುತಿ ಸುಜುಕಿ ಸಿಯಾಜ್ ಎಸ್ ಕಾರು

ಮೇಲಿನ ಬದಲಾವಣೆಗಳ ಹೊರತಾಗಿ ಸಿಯಾಜ್ ಎಸ್ ಕಾರಿನಲ್ಲಿ ಇತರೆ ಯಾವುದೇ ಬದಲಾವಣೆಗಳಿಲ್ಲ. ಇನ್ನು ಸಿಯಾಜ್‍‍ನಲ್ಲಿ ದೊಡ್ಡ ಟಚ್‍‍ಸ್ಕ್ರೀನ್ ಇನ್ಫೋಟೆನ್‍‍ಮೆಂಟ್ ಸಿಸ್ಟಂ, ಕೀ ಲೆಸ್ ಎಂಟ್ರಿ, ಮಲ್ಟಿಪಲ್ ಏರ್‍‍ಬ್ಯಾಗ್‍, ಇಬಿ‍ಡಿಯೊಂದಿಗೆ ಎಬಿಎಸ್, ಆಟೋಮ್ಯಾಟಿಕ್ ಕ್ಲೈಮೆಂಟ್ ಮತ್ತು ಇತರ ಫೀಚರ್ಸ್‍‍ಗಳನ್ನು ಹೊಂದಿದೆ.

ಬಿಡುಗಡೆಯಾಯ್ತು ಬಿಎಸ್-6 ಮಾರುತಿ ಸುಜುಕಿ ಸಿಯಾಜ್ ಎಸ್ ಕಾರು

ಮಾರುತಿ ಸುಜುಕಿ ಸಿಯಾಜ್ ಎಸ್ ಕಾರು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಸಾರವಾಗಿ ಈ ಕಂಪನಿಯಿಂದ ಬಿಡುಗಡೆಯಾಗುತ್ತಿರುವ 11ನೇ ಮಾದರಿಯಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಸಿ-ಕ್ಲಾಸ್ ಸೆಡಾನ್ ಸೆಗ್‍‍ಮೆಂಟ್‍‍ನಲ್ಲಿ ಪೈಪೋಟಿ ಹೆಚ್ಚು ಇರುವುದರಿಂದ ಮಾರುತಿ ಸುಜುಕಿ ಕಂಪನಿಯು ತನ್ನ ಹೊಸ ಸಿಯಾಜ್ ಕಾರನ್ನು ಬಿಡುಗಡೆಗೊಳಿಸಲಾಗಿದೆ.

ಬಿಡುಗಡೆಯಾಯ್ತು ಬಿಎಸ್-6 ಮಾರುತಿ ಸುಜುಕಿ ಸಿಯಾಜ್ ಎಸ್ ಕಾರು

ದೇಶಿಯ ಮಾರುಕಟ್ಟೆಯಲ್ಲಿ ಸಿಯಾಜ್ ಎಸ್ ಕಾರು ಹೋಂಡಾ ಸಿಟಿ, ಸ್ಕೋಡಾ ರ‍್ಯಾಪಿಡ್ ಮತ್ತು ಫೋಕ್ಸ್ ವ್ಯಾಗನ್ ವೆಂಟೊ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ. ಬಿಎಸ್-6 ಎಂಜಿನ್‍‍ನೊಂದಿಗೆ ಆಕರ್ಷಕ ಬೆಲೆಯನ್ನು ಹೊಂದಿರುವುದರಿಂದ ಈ ಕಾರು ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು.

More from DriveSpark

Article Published On: Saturday, January 25, 2020, 15:47 [IST]
English summary
Maruti Suzuki Ciaz S Launched In India At Rs 10.08 Lakh: A BS6-Compliant Sport Variant Of The Ciaz. Read in Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+