ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ದೇಶದ ಮುಂಚೂಣಿ ಕಾರು ಮಾರಾಟ ಕಂಪನಿ ಮಾರುತಿ ಸುಜುಕಿಯು ಈಗಾಗಲೇ ಹಲವಾರು ಬದಲಾವಣೆಗಳೊಂದಿಗೆ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಅತಿ ಕಡಿಮೆ ಅವಧಿಯಲ್ಲಿ ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ಮಾಡಿದೆ.

ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಬಿಎಸ್-6 ಎಮಿಷನ್ ಪ್ರಕಾರ ಡೀಸೆಲ್ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆ ತಂದಿರುವ ಮಾರುತಿ ಸುಜುಕಿ ಕಂಪನಿಯು ಕಡಿಮೆ ಸಾಮರ್ಥ್ಯದ ಡೀಸೆಲ್ ಕಾರುಗಳ ಮಾರಾಟಕ್ಕೆ ಈಗಾಗಲೇ ಗುಡ್‌ಬೈ ಹೇಳಿದ್ದು, ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರುಗಳ ಮೇಲೆ ಹೆಚ್ಚು ಒತ್ತು ನೀಡುತ್ತಿದೆ. ಮಾಲಿನ್ಯ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ಹಲವು ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿರುವುದೇ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಲು ಪ್ರಮುಖ ಕಾರಣವಾಗಿದೆ.

ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಮಾರುತಿ ಸುಜುಕಿ ಮಾತ್ರವಲ್ಲದೆ ಬಹುತೇಕ ಕಾರು ಉತ್ಪಾದನಾ ಕಂಪನಿಗಳು ಕಡಿಮೆ ಸಾಮರ್ಥ್ಯದ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿದ್ದು, ಪೆಟ್ರೋಲ್ ಮತ್ತು ಸಿಎನ್‌ಜಿ ಕಾರುಗಳ ಮಾರಾಟವನ್ನು ಹೆಚ್ಚಿಸಿವೆ.

ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಸದ್ಯ ಮಾರುತಿ ಸುಜುಕಿ ಕಾರುಗಳಲ್ಲಿ ಡೀಸೆಲ್ ಎಂಜಿನ್ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದ್ದು, ಹೈ ಎಂಡ್ ಮಾದರಿಗಳಾದ ಎರ್ಟಿಗಾ, ಎರ್ಟಿಗಾ ಎಕ್ಸ್6, ವಿಟಾರಾ ಬ್ರೆಝಾ, ಎಸ್-ಕ್ರಾಸ್ ಮತ್ತು ಸಿಯಾಜ್ ಕಾರುಗಳಿಗೆ ಮಾತ್ರವೇ ಮುಂಬರುವ ದಿನಗಳಲ್ಲಿ ಹೊಸದಾಗಿ ಅಭಿವೃದ್ದಿಗೊಳಿಸಲಾಗಿ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಬಹುದಾದ ಸಾಧ್ಯತೆಗಳಿವೆ.

ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಕಾರುಗಳು ಪೆಟ್ರೋಲ್ ಮತ್ತು ಸಿಎನ್‌ಜಿ ಆವೃತ್ತಿಯಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಜನಪ್ರಿಯ ಕಾರು ಮಾದರಿಗಳಾದ ಆಲ್ಟೊ, ವ್ಯಾಗನ್‌ಆರ್, ಸೆಲೆರಿಯೊ ಮತ್ತು ಎರ್ಟಿಗಾ ಮಾದರಿಯಲ್ಲಿ ಸಿಎನ್‌ಜಿ ಮಾದರಿಗಳು ಖರೀದಿಗೆ ಲಭ್ಯವಿವೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

2019-20ರ ಆರ್ಥಿಕ ವರ್ಷದಲ್ಲಿ ಸಿಎನ್‌ಜಿ ಕಾರುಗಳ ಮಾರಾಟ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಮಾರುತಿ ಸುಜುಕಿಯು 1 ವರ್ಷದ ಅವಧಿಯಲ್ಲಿ 1,06,443 ಸಿಎನ್‌ಜಿ ಕಾರುಗಳನ್ನು ಮಾರಾಟ ಮಾಡಿದ್ದು, ಶೀಘ್ರದಲ್ಲೇ ಮತ್ತಷ್ಟು ಕಾರು ಮಾದರಿಗಳಲ್ಲಿ ಸಿಎನ್‌ಜಿ ಮಾದರಿಯನ್ನು ಜೋಡಣೆ ಮಾಡುವ ಯೋಜನೆಯಲ್ಲಿದೆ.

ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಮಾಲಿನ್ಯ ತಗ್ಗಿಸುವ ಉದ್ದೇಶದಿಂದಾಗಿ ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಮಾರಾಟವನ್ನು ತಗ್ಗಿಸಲಾಗುತ್ತಿದ್ದು, ಪರಿಸರಕ್ಕೆ ಪೂರಕರವಾದ ಸಿಎನ್‌ಜಿ, ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರುಗಳನ್ನು ಹೆಚ್ಚು ಅಭಿವೃದ್ದಿಗೊಳಿಸಲಾಗುತ್ತಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಈ ನಿಟ್ಟಿನಲ್ಲಿ ಹಂತಹಂತವಾಗಿ ಎಲ್ಲಾ ಕಾರು ಮಾದರಿಗಳಲ್ಲೂ ಅಧಿಕ ಮೈಲೇಜ್ ಪ್ರೇರಿತ ಸಿಎನ್‌ಜಿ ಆಯ್ಕೆಯನ್ನು ನೀಡುತ್ತಿರುವ ಮಾರುತಿ ಸುಜುಕಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆಲ್ಟೊ ಮಾದರಿಯನ್ನು ರೂ.4.11 ಲಕ್ಷಕ್ಕೆ, ಸೆಲೆರಿಯೊ ಮಾದರಿಯನ್ನು ರೂ.5.33 ಲಕ್ಷಕ್ಕೆ, ವ್ಯಾಗನ್‌ಆರ್ ಮಾದರಿಯನ್ನು ರೂ.4.99 ಲಕ್ಷಕ್ಕೆ ಮತ್ತು ಎರ್ಟಿಗಾ ಮಾದರಿಯನ್ನು 8.87 ಲಕ್ಷಕ್ಕೆ ಮಾರಾಟ ಮಾಡುತ್ತಿದೆ.

More from DriveSpark

Article Published On: Friday, June 5, 2020, 20:40 [IST]
English summary
Maruti CNG Car Sales FY2019 Cross 1 Lakh Milestone Details. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+