ಗ್ರಾಹಕರ ಕೈ ಸೇರಲು ಸಜ್ಜಾದ ನ್ಯೂ ಜನರೇಷನ್ ಮಾರುತಿ ಸುಜುಕಿ ಡಿಜೈರ್
ಕಳೆದ ಮಾರ್ಚ್ 20ರಂದು ಬಿಡುಗಡೆಗೊಂಡಿದ್ದ ಮಾರುತಿ ಸುಜುಕಿ ನಿರ್ಮಾಣದ ನ್ಯೂ ಜನರೇಷನ್ ಡಿಜೈರ್ ಕಾರು ಇದೀಗ ಗ್ರಾಹಕರ ಕೈ ಸೇರಲು ಸಜ್ಜಾಗಿದ್ದು, ಹೊಸ ಕಾರನ್ನು ಈಗಾಗಲೇ ದೇಶದ ಪ್ರಮುಖ ಡೀಲರ್ಸ್ ಯಾರ್ಡ್‌ಗಳಲ್ಲಿ ಸ್ಟಾಕ್ ಮಾಡುತ್ತಿರುವುದು ಕಂಡುಬಂದಿದೆ.

ಬಿಡುಗಡೆಯ ದಿನದಿಂದಲೇ ವಿತರಣೆ ಮಾಡುವ ಯೋಜನೆಯಲ್ಲಿದ್ದ ಮಾರುತಿ ಸುಜುಕಿಯು ಕರೋನಾ ವೈರಸ್ ಮಾಹಾಮಾರಿಯ ಹಿನ್ನಲೆ ವಿತರಣೆಯನ್ನು ಮುಂದೂಡಿಕೆ ಮಾಡಿತ್ತು. ಆದರೆ ವೈರಸ್ ಹೆಚ್ಚಾದಂತೆ ಲಾಕ್‌ಡೌನ್ ವಿಸ್ತರಣೆಯಾಗಿದ್ದರಿಂದ ಹೊಸ ಕಾರುಗಳ ಮಾರಾಟವು ಕೂಡಾ ಸಂಪೂರ್ಣವಾಗಿ ಬಂದ್ ಆಗಿತ್ತು. ಆದರೆ ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಹೊಸ ವಾಹನ ಮಾರಾಟವನ್ನು ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳ ಮೂಲಕ ಕೈಗೊಳ್ಳಬಹುದಾಗಿದ್ದು, ಮಾರುತಿ ಸುಜುಕಿ ಕೂಡಾ ಹೊಸ ಕಾರುಗಳ ಮಾರಾಟಕ್ಕೆ ಶೀಘ್ರದಲ್ಲೇ ಮರುಚಾಲನೆ ನೀಡಲಿದೆ.

ಇದಕ್ಕಾಗಿ ಹೊಸ ಕಾರುಗಳ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಿರುವ ಮಾರುತಿ ಸುಜುಕಿಯು ಹೊಸ ಡಿಜೈರ್ ಮಾದರಿಯನ್ನು ಸಹ ಡೀಲರ್ಸ್ ಯಾರ್ಡ್‌ಗಳಲ್ಲಿ ಸ್ಟಾಕ್ ಮಾಡುತ್ತಿದ್ದು, ಮುಂದಿನ ಕೆಲವೇ ದಿನಗಳಲ್ಲಿ ವಾಹನ ಮಾರಾಟವು ಚೇತರಿಕೆ ಕಾಣುವ ನೀರಿಕ್ಷೆಯಿದೆ.

ಇನ್ನು ದೇಶದ ನಂ.1 ಕಂಪ್ಯಾಕ್ಟ್ ಸೆಡಾನ್ ಆವೃತ್ತಿಯಾಗಿರುವ ಮಾರುತಿ ಸುಜುಕಿ ಡಿಜೈರ್ ಫೇಸ್‌ಲಿಫ್ಟ್ ಆವೃತ್ತಿಯು ನವೀಕೃತ ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಗೊಂಡಿದ್ದು, ಹೊಸ ಕಾರು ವಿನೂತನ ಡಿಸೈನ್‌ನೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದೆ.
MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಡಿಜೈರ್ ಫೇಸ್‌ಲಿಫ್ಟ್ ಆವೃತ್ತಿಯ ಸದ್ಯಕ್ಕೆ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಾಗಿದ್ದು, ನ್ಯೂ ಜನರೇಷನ್ ಬಲೆನೊದಲ್ಲಿ ಬಳಕೆ ಮಾಡಲಾಗಿರುವ ಕೆ12ಸಿ ಡ್ಯುಯಲ್ ಜೆಟ್ ಎಂಜಿನ್ ಪಡೆದುಕೊಂಡಿದೆ.

ಜೊತೆಗೆ ಹಳೆಯ ಆವೃತ್ತಿಗಿಂತಲೂ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಸ ಕಾರಿನಲ್ಲಿ ಜೋಡಿಸಲಾಗಿದ್ದು, ಬಿಎಸ್-4 ಆವೃತ್ತಿಗಿಂತಲೂ ಹೊಸ ಕಾರು ರೂ.6 ಸಾವಿರದಿಂದ ರೂ.21 ಸಾವಿರದಷ್ಟು ದುಬಾರಿ ಬೆಲೆ ಪಡೆದುಕೊಂಡಿದೆ.
MOST READ: ಎರಡು ಚಕ್ರಗಳಲ್ಲಿ ಚಲಿಸಿದ ಟ್ರಾಕ್ಟರ್, ಆನಂದ್ ಮಹೀಂದ್ರಾ ಹೇಳಿದ್ದೇನು?

ಡಿಜೈರ್ ಹೊಸ ಕಾರು ಪೆಟ್ರೋಲ್ ಎಂಜಿನ್‌ನೊಂದಿಗೆ ಮ್ಯಾನುವಲ್ ಮತ್ತು ಎಜಿಎಸ್(ಆಟೋ) ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.89 ಲಕ್ಷ ಮತ್ತು ಹೈ ಎಂಡ್ ಆವೃತ್ತಿಯು ರೂ. 8.81 ಲಕ್ಷ ಬೆಲೆ ಹೊಂದಿದೆ.

ಎಂಜಿನ್ ಸಾಮರ್ಥ್ಯ ಮತ್ತು ಮೈಲೇಜ್
ಸದ್ಯ ಬಿಎಸ್-6 ವೈಶಿಷ್ಟ್ಯತೆ 1.2-ಲೀಟರ್ ಫೋರ್ ಸಿಲಿಂಡರ್ ಕೆ12ಸಿ ಡ್ಯುಯಲ್‌ಜೆಟ್ ಪೆಟ್ರೋಲ್ ಎಂಜಿನ್ ಆಯ್ಕೆ ಮಾತ್ರ ಹೊಂದಿರುವ ಡಿಜೈರ್ ಫೇಸ್‌ಲಿಫ್ಟ್ ಕಾರು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 90-ಬಿಎಚ್‌ಪಿ ಉತ್ಪಾದನೆ ಮಾಡಬಲ್ಲದು.
MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಈ ಮೂಲಕ ಇಂಧನ ದಕ್ಷತೆಯಲ್ಲೂ ಗಮನಸೆಳೆದಿರುವ ಹೊಸ ಕಾರು ಪ್ರತಿ ಲೀಟರ್ ಪೆಟ್ರೋಲ್‌ಗೆ ಮ್ಯಾನುವಲ್ ಮಾದರಿಯು 23.26 ಕಿ.ಮೀ ಮತ್ತು ಆಟೋಮ್ಯಾಟಿಕ್ ಮಾದರಿಯು 24.12 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಹೊಸ ಕಾರಿನಲ್ಲಿ ಇಂಧನ ದಕ್ಷತೆಗಾಗಿ ಐಡೆಲ್ ಸ್ಟಾರ್ಟ್ ಮತ್ತು ಸ್ಟಾಪ್ ತಂತ್ರಜ್ಞಾನವನ್ನು ಬಳಕೆ ಮಾಡಲಾಗಿದ್ದು, ಇದು ಕಂಪ್ಯಾಕ್ಟ್ ಸೆಡಾನ್ ಆವೃತ್ತಿಗಳಲ್ಲೇ ಅತಿ ಹೆಚ್ಚು ಇಂಧನ ದಕ್ಷತೆ ಹೊಂದಿರುವ ಕಾರು ಮಾದರಿಯಾಗಿದೆ.
MOST READ: ಕರೋನಾ ವೈರಸ್: ಹೊಸ ವಿಧಾನದ ಮೂಲಕ ಜನರ ಬಳಿ ಬರಲಿರುವ ಪೊಲೀಸರು..

ಇನ್ನುಳಿದಂತೆ ಹೊಸ ಕಾರಿನ ಗ್ರಿಲ್ ಡಿಸೈನ್ ಅನ್ನು ಸಂಪೂರ್ಣವಾಗಿ ಬದಲಾಣೆಗೊಳಿಸಿರುವ ಕಾರಿನ ಆಕರ್ಷಣೆಯನ್ನು ಹೆಚ್ಚಿಸಿದ್ದು, ಹೊಸ ವಿನ್ಯಾಸದ ಫ್ರಂಟ್ ಬಂಪರ್ ಜೊತೆಗೆ ಹೊಸದಾದ ಫಾಗ್ ಲ್ಯಾಂಪ್ ಮತ್ತು ಡ್ಯುಯಲ್ ಟೋನ್ ಅಯಾಲ್ ವೀಲ್ಹ್ ನೀಡಲಾಗಿದೆ.
Source: Gaadiwaadi


Click it and Unblock the Notifications