ಮಾರುತಿ ಸುಜುಕಿ ಕಾರು ಮಾರಾಟದಲ್ಲಿ ಅಗ್ರ ಸ್ಥಾನಗಳಿಸಿದ ಎರ್ಟಿಗಾ

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಕಳೆದ ಮೇ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ಮೇ ತಿಂಗಳ ಮಾರುತಿ ಸುಜುಕಿ ಕಾರುಗಳ ಮಾರಾಟದಲ್ಲಿ ಎರ್ಟಿಗಾ ಎಂಪಿವಿಯು ಅಗ್ರ ಸ್ಥಾನವನ್ನು ಪಡೆದುಕೊಂಡಿದೆ.

ಮಾರುತಿ ಸುಜುಕಿ ಕಾರು ಮಾರಾಟದಲ್ಲಿ ಅಗ್ರ ಸ್ಥಾನಗಳಿಸಿದ ಎರ್ಟಿಗಾ

ಕಳೆದ ಮೇ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯು ಒಟ್ಟು 18,539 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಒಟ್ಟು ಮಾರಾಟದಲ್ಲಿ 13,865 ಯುನಿಟ್‌ಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದರೆ, 4,651 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ.ಇನ್ನು 23 ಯುನಿಟ್‌ಗಳು ಒಇಎಂ (ಟೊಯೊಟಾ ಗ್ಲಾಂಝಾ) ಆಗಿದೆ. ಮಾರುತಿ ಸುಜುಕಿ ಕಳೆದ ವರ್ಷದ ಮೇ ತಿಂಗಳ ಅವಧಿಗಯಲ್ಲಿ ಮಾರಾಟ ಮಾಡಿರುವುದಕ್ಕೆ ಹೋಲಿಸಿದರೆ ಶೇ.89 ಹೆಚ್ಚು ಕುಸಿತ ಕಂಡಿದೆ. ಕಳೆದ ವರ್ಷದ ಮೇ ತಿಂಗಳಲ್ಲಿ ಮಾರುತಿ ಸುಜುಕಿಯ 1,25,552 ಯುನಿಟ್‌ಗಳು ಮಾರಾಟವಾಗಿತ್ತು.

ಮಾರುತಿ ಸುಜುಕಿ ಕಾರು ಮಾರಾಟದಲ್ಲಿ ಅಗ್ರ ಸ್ಥಾನಗಳಿಸಿದ ಎರ್ಟಿಗಾ

ಮಾರುತಿ ಸುಜುಕಿ ಕಂಪನಿಯು ಮೇ 12ರಂದು ಮೊದಲ ಬಾರಿಗೆ ತಮ್ಮ ಮನೇಸರ್ ಘಟಕವನ್ನು ತೆರೆದರೆ, ಕೆಲವು ದಿನಗಳ ನಂತರ ಗುರುಗ್ರಾಮ್ ಘಟಕವನ್ನು ಆರಂಭಿಸಿದ್ದರು, ಸರ್ಕಾರದ ಅದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಮಾರುತಿ ಸುಜುಕಿ ಕಂಪನಿಯು ಉತ್ಪಾದನೆ ಮತ್ತು ಮಾರಾಟವನ್ನು ಆರಂಭಿಸಿದ್ದರು.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಮಾರುತಿ ಸುಜುಕಿ ಕಾರು ಮಾರಾಟದಲ್ಲಿ ಅಗ್ರ ಸ್ಥಾನಗಳಿಸಿದ ಎರ್ಟಿಗಾ

ಮಾರುತಿ ಸುಜುಕಿ ಕಂಪನಿಯು ತಮ್ಮ ಗುಜರಾತ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಕೂಡ ಉತ್ಪಾದನೆಯನ್ನು ಮೇ 25ರಂದು ಪುನಾರಂಭಿಸಿದ್ದರು. ಈ ಎಲ್ಲಾ ಮೂರು ಘಟಕದಲ್ಲಿ ಸರ್ಕಾರದ ಮಾರ್ಗಸೂಚಿಗಳು ಮತ್ತು ನಿಯಮಾವಳಿಗಳನ್ನು ಅನುಸರಿಸಿ ಉತ್ಪಾದನೆಯನ್ನು ಆರಂಭಿಸಿದ್ದರು.

ಮಾರುತಿ ಸುಜುಕಿ ಕಾರು ಮಾರಾಟದಲ್ಲಿ ಅಗ್ರ ಸ್ಥಾನಗಳಿಸಿದ ಎರ್ಟಿಗಾ

ಕಳೆದ ಮೇ ತಿಂಗಳಲ್ಲಿ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿಯ 2,353 ಎಂಪಿವಿಗಳು ಮಾರಾಟವಾಗಿದೆ, ನಂತರದ ಸ್ಥ್ಹಾನ ಮಾರುತಿ ಸುಜುಕಿ ಡಿಜೈರ್ ಗಳಿಸಿದೆ. ಕಳೆದ ಮೇ ತಿಂಗಳಲ್ಲಿ ಈ ಮಾರುತಿ ಡಿಜೈರ್ ಕಾರಿನ 2,215 ಯುನಿಟ್‌ಗಳು ಮಾರಾಟವಾಗಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಮಾರುತಿ ಸುಜುಕಿ ಕಾರು ಮಾರಾಟದಲ್ಲಿ ಅಗ್ರ ಸ್ಥಾನಗಳಿಸಿದ ಎರ್ಟಿಗಾ

ಮಾರುತಿ ಸುಜುಕಿ ಕಂಪನಿಯು ಎರ್ಟಿಗಾ ಎಂಪಿವಿಯನ್ನು ಡೀಸೆಲ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಎರ್ಟಿಗಾ ಎಂಪಿಯನ್ನು ಈ ವರ್ಷದ ಕೊನೆಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ಮಾರುತಿ ಸುಜುಕಿ ಕಾರು ಮಾರಾಟದಲ್ಲಿ ಅಗ್ರ ಸ್ಥಾನಗಳಿಸಿದ ಎರ್ಟಿಗಾ

ಮಾರುತಿ ಸುಜುಕಿ ಇಂಡಿಯಾ ತನ್ನ ಎರ್ಟಿಗಾ ಎಂಪಿವಿಯನ್ನು ಭಾರತದಲ್ಲಿ ಕೆಲವು ತಿಂಗಳ ಹಿಂದೆ ಸ್ಪಾಟ್ ಟೆಸ್ಟ್ ಕೂಡ ಮಾಡಲಾಗಿದೆ. ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಎರ್ಟಿಗಾ ಟೂರ್ ಎಂ, ಎಂಪಿವಿಯಲ್ಲಿ ಬಿಎಸ್-6 ಪ್ರೇರಿತ 1.5 ಲೀಟರಿನ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಮಾರುತಿ ಸುಜುಕಿ ಕಾರು ಮಾರಾಟದಲ್ಲಿ ಅಗ್ರ ಸ್ಥಾನಗಳಿಸಿದ ಎರ್ಟಿಗಾ

ಈ ಎಂಜಿನ್ 94 ಬಿ‍‍ಹೆಚ್‍‍ಪಿ ಪವರ್ ಮತ್ತು 225 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಮಾರುತಿ ಸುಜುಕಿ ಇಂಡಿಯಾ ಕಳೆದ ನಾಲ್ಕು ವರ್ಷಗಳ ಹಿಂದೆ ಎರ್ಟಿಗಾ ಮಾದರಿಯನ್ನು ಬಿಡುಗಡೆಗೊಳಿಸಿತ್ತು.

ಮಾರುತಿ ಸುಜುಕಿ ಕಾರು ಮಾರಾಟದಲ್ಲಿ ಅಗ್ರ ಸ್ಥಾನಗಳಿಸಿದ ಎರ್ಟಿಗಾ

ಎರ್ಟಿಗಾ ಎಂಪಿವಿಯು ದೇಶಿಯ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನಸೆಳೆಯುವಲ್ಲಿ ಯಶ್ವಸಿಯಾಗಿದೆ. ಮಾರುತಿ ಸುಜುಕಿ ಎರ್ಟಿಗಾ ಮಾದರಿಯು ಹರ್ಟೆಕ್ಟ್ ಪ್ಲಾಟ್‌ಫಾರ್ಮ್ ವಿನ್ಯಾಸವನ್ನು ಆಧರಿಸಿದೆ. ಮಾರುತಿ ಸುಜುಕಿ ಕಾರುಗಳ ಮಾರಾಟದಲ್ಲಿ ಎರ್ಟಿಗಾ ಹೆಚ್ಚಿನ ಕೊಡುಗೆಯನ್ನು ನೀಡುತ್ತಿದೆ.

Most Read Articles

Kannada
English summary
Maruti Ertiga Becomes Brand’s Top-selling Car In May 2020 In India. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X