90 ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಮಾರುತಿ ಎರ್ಟಿಗಾ

ಕಳೆದ ಮಾರ್ಚ್ ತಿಂಗಳ ಮಾರಾಟದ ವರದಿಯಲ್ಲಿ ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿಯ ಕಾರುಗಳ ಮಾರಾಟದಲ್ಲಿ ಭಾರಿ ಕುಸಿತವನ್ನು ಕಂಡಿದೆ. ಕಳೆದ ಮಾರ್ಚ್ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯು ತಮ್ಮ ಕಾರುಗಳ ಮಾರಾಟದಲ್ಲಿ 47% ರಷ್ಟು ಭಾರಿ ಕುಸಿತವನ್ನು ಕಂಡಿದೆ.

90 ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಮಾರುತಿ ಎರ್ಟಿಗಾ

ಕಳೆದ ಮಾರ್ಚ್ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯು ಒಟ್ಟು 83,792 ಕಾರುಗಳು ಮಾರಾಟವಾಗಿವೆ. ಇದರಲ್ಲಿ ರಫ್ತು ಮಾಡಲಾದ ಕಾರುಗಳ ಸಂಖ್ಯೆಯು ಒಳಗೊಂಡಿದೆ. ಮಾರ್ಚ್ 2019-20ರ ಆರ್ಥಿಕ ವರ್ಷದ ಅಂತ್ಯದಲ್ಲಿ ಮಾರುತಿ ಸುಜುಕಿ ಕಂಪನಿಯು ವರ್ಷದಲ್ಲಿ ಒಟ್ಟು 15,63,297 ಕಾರುಗಳನ್ನು ಮಾರಟ ಮಾಡಿದೆ. ಮಾರುತಿ ಸುಜುಕಿ ಕಂಪನಿಯ ಕಾರುಗಳ ಮಾರಾಟದಲ್ಲಿ ಕುಸಿತ ಕಾಣಲು ಪ್ರಮುಖ ಕಾರಣ ಕರೋನಾ ವೈರಸ್ ಆಗಿದೆ.

90 ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಮಾರುತಿ ಎರ್ಟಿಗಾ

ಮಾರುತಿ ಸುಜುಕಿ ಕಂಪನಿಯ ಒಟ್ಟು ಮಾರಾಟದಲ್ಲಿ ಕುಸಿತ ಕಂಡಿರುವ ವೇಳೆಯಲ್ಲಿ ಮಾರುತಿ ಎರ್ಟಿಗಾ ಕಾರು ಉತ್ತಮವಾಗಿ ಮಾರಾಟವಾಗುತ್ತಿದೆ. ಮಾರುತಿ ಎರ್ಟಿಗಾ ಕಾರಿನ ಮಾರಾಟದಲ್ಲಿ ಏರಿಕೆಯನ್ನು ಕಂಡಿದೆ.

90 ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಮಾರುತಿ ಎರ್ಟಿಗಾ

2019-20ರ ಆರ್ಥಿಕ ವರ್ಷದ ಅಂತ್ಯದಲ್ಲಿ ಮಾರುತಿ ಸುಜುಕಿಯ ಎರ್ಟಿಗಾ ಕಾರಿನ 90,547 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಇನ್ನು 2018-2019ರ ಆರ್ಥಿಕ ವರ್ಷದಲ್ಲಿ 65,263 ಯುನಿಟ್‌ಗಳನ್ನು ಮಾರಾಟವಾಗಿತ್ತು. 2018-2019ರ ಆರ್ಥಿಕ ವರ್ಷವನ್ನು ಹೋಲಿಸಿದರೆ ಶೇ.39 ರಷ್ಟು ಹೆಚ್ಚಾಗಿದೆ.

90 ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಮಾರುತಿ ಎರ್ಟಿಗಾ

ಮಾರುತಿ ಸುಜುಕಿ ಕಂಪನಿಯ ಸರಣಿಯಲ್ಲಿ ಜನಪ್ರಿಯ ಕಾರುಗಳಲ್ಲಿ ಎರ್ಟಿಗಾ ಕೂಡ ಒಂದಾಗಿದೆ. ಮಾರುತಿ ಸುಜುಕಿ ಇಂಡಿಯಾ ಕಳೆದ ನಾಲ್ಕು ವರ್ಷಗಳ ಹಿಂದೆ ಎರ್ಟಿಗಾ ಮಾದರಿಯನ್ನು ಬಿಡುಗಡೆಗೊಳಿಸಿತ್ತು. ಎರ್ಟಿಗಾ ಎಂಪಿವಿಯು ದೇಶಿಯ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನಸೆಳೆಯುವಲ್ಲಿ ಯಶ್ವಸಿಯಾಗಿದೆ. ಮಾರುತಿ ಸುಜುಕಿ ಎರ್ಟಿಗಾ ಮಾದರಿಯು ಹರ್ಟೆಕ್ಟ್ ಪ್ಲಾಟ್‌ಫಾರ್ಮ್ ವಿನ್ಯಾಸವನ್ನು ಆಧರಿಸಿದೆ.

90 ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಮಾರುತಿ ಎರ್ಟಿಗಾ

ಮಾರುಕಟ್ಟೆಯಲ್ಲಿರುವ ಎರ್ಟಿಗಾ ಎಂ‍ಪಿವಿ ಕಾರು, ಮುಂಭಾಗದಲ್ಲಿ ಕ್ರೋಮ್ ಸ್ಟ್ರಿಪ್‍‍ನೊಂದಿಗೆ ಜೋಡಿಸಲಾದ ಹೊಸ ಗ್ರಿಲ್ ಮತ್ತು ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್‍ ಅನ್ನು ಹೊಂದಿದೆ. ಹಾಗೆಯೇ ಫ್ಲೋಟಿಂಗ್ ರೂಫ್ ವಿನ್ಯಾಸ, 15-ಇಂಚಿನ ಅಲಾಯ್ ವ್ಹೀಲ್‍‍ಗಳು ಮತ್ತು ಕಾರಿನ ಹಿಂಭಾಗದಲ್ಲಿ 'ಎಲ್' ಆಕಾರದ ಟೇಲ್ ಲೈಟ್ ಅನ್ನು ಹೊಂದಿದೆ.

90 ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಮಾರುತಿ ಎರ್ಟಿಗಾ

ಮಾರುಕಟ್ಟೆಯಲ್ಲಿರುವ ಎರ್ಟಿಗಾದಲ್ಲಿ 7-ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೇನ್‍‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಆಂಡ್ರಾಯ್ಡ್ ಆಟೋ, ಆ್ಯಪಲ್ ಕಾರ್ ಪ್ಲೇ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯನ್ನು ನೀಡಲಾಗಿದೆ.

90 ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಮಾರುತಿ ಎರ್ಟಿಗಾ

ಎರ್ಟಿಗಾ ಎಂಪಿವಿಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಎಬಿಎಸ್, ಇಬಿಡಿ, ಐಎಸ್‍ಓಫಿಕ್ಸ್ ಚೈಲ್ಡ್ ಸೀಟ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಇದಲ್ಲದೆ ಹೈ ಎಂಡ್ ಮಾದರಿಗಳಲ್ಲಿ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ವಾರ್ನಿಂಗ್ ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್ ಅನ್ನು ನೀಡಲಾಗಿದೆ.

90 ಸಾವಿರ ಯುನಿಟ್ ಮಾರಾಟ ದಾಖಲೆ ಕಂಡ ಮಾರುತಿ ಎರ್ಟಿಗಾ

ಮಾರುತಿ ಸುಜುಕಿ ಕಂಪನಿಯು ತನ್ನ ಜನಪ್ರಿಯ ಕಾರುಗಳಲ್ಲಿ ಒಂದಾದ ಎರ್ಟಿಗಾ ಎಂಪಿವಿಯನ್ನು ಬಿ‍ಎಸ್ 6 ಎಂಜಿನ್‍‍ನಲ್ಲಿ ಬಿಡುಗಡೆಗೊಳಿಸಿತ್ತು. ಈ ಕಾರು ಎಸ್- ಸಿಎನ್‍‍ಜಿ ಆವೃತ್ತಿಯಾಗಿರುವುದು ವಿಶೇಷ. ಸಿ‍ಎನ್‍‍ಜಿ ಆಯ್ಕೆ ಹೊಂದಿರುವ ಬಿ‍ಎಸ್ 6 ಎಂಜಿನ್‍‍ನ ಎರ್ಟಿಗಾ ಎಂಪಿವಿಯ ಬೆಲೆ ರೂ.8.95 ಲಕ್ಷಗಳಾಗಿದೆ.

Article Published On: Wednesday, April 8, 2020, 11:17 [IST]
English summary
Over 90,000 Maruti Ertiga Sold In FY19-20 In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+