ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಮಾರುತಿ ಸುಜುಕಿ ಕಂಪನಿಯ ಇಗ್ನಿಸ್ ಫೇಸ್‍‍ಲಿಫ್ಟ್ ಬಿಡುಗಡೆಯಾಗುವ ದಿನಾಂಕ ಬಹಿರಂಗವಾಗಿದೆ. ಜನಪ್ರಿಯ ಮಾರುತಿ ಸುಜುಕಿ ಕಂಪನಿಯ ಬಹುನಿರೀಕ್ಷಿತ ಕಾರುಗಳಲ್ಲಿ ಇದು ಒಂದಾಗಿದೆ. ಈ ಕಾರನ್ನು ಹೊಸ ವಿನ್ಯಾಸ ಮತ್ತು ಹೊಸ ಬಣ್ಣಗಳೊಂದಿಗೆ ಬಿಡುಗಡೆಗೊಳಿಸುತ್ತಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಇದೀಗ ಮಾರುತಿ ಸುಜುಕಿ ಕಂಪನಿಯು ಇಗ್ನಿಸ್ ಫೇಸ್‍‍ಲಿಫ್ಟ್ ಕಾರನ್ನು ಫೆಬ್ರವರಿ 7ರಂದು ಆಟೋ ಎಕ್ಸ್ ಪೋದಲ್ಲಿ ಬಿಡುಗಡೆಗೊಳಿಸಲಿದೆ. ಬಿಡುಗಡೆಯಾಗಲಿರುವ ಕಾರಿನ ಮುಂಭಾಗದಲ್ಲಿ ವಿಟಾರಾ ಬ್ರಿಝಾ ಕಾರಿನ ಮಾದರಿ ವಿನ್ಯಾಸವನ್ನು ಮಾಡಲಾಗಿದೆ. ಈ ಕಾರು ಸಿಗ್ಮಾ, ಡೆಲ್ಟಾ, ಝೆಲ್ಟಾ ಮತ್ತು ಅಲ್ಫಾ ಎಂಬ ನಾಲ್ಕು ವೆರಿಯೆಂಟ್‍‍ಗಳಲ್ಲಿ ಲಭ್ಯವಿದೆ. ಇಗ್ನಿಸ್ ಫೇಸ್‍‍ಲಿಫ್ಟ್ ಕಾರಿನಲ್ಲಿ ಯು-ಆಕಾರದ ಕ್ರೋಮ್‍ನೊಂದಿಗೆ ಹೊಸ ಗ್ರಿಲ್ ಆಕಾರದ ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್‍ಗಳನ್ನು ಅಳವಡಿಸಲಾಗಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಇದರೊಂದಿಗೆ ಪ್ರೊಜೆಕ್ಟರ್ ಹೆಡ್‍‍ಲೈಟ್‍ಗಳು ಹೊಸ ಮತ್ತು ಸ್ಕಿಡ್ ಪ್ಲೇಟ್ ಅನ್ನು ಹೊಂದಿವೆ. ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್ ಕಾರು 9 ಬಣ್ಣಗಳಲ್ಲಿ ಬಿಡುಗಡೆಯಾಗಲಿದೆ. ಇದರಲ್ಲಿ 6 ಸಿಂಗಲ್ ಟೋನ್ ಬಣ್ಣಗಳು ಮತ್ತು 3 ಡ್ಯುಯಲ್ ಟೋಣ ಬಣ್ಣಗಳಾಗಿರಲಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಹೊಸ ಇಗ್ನಿಸ್ ಕಾರು ಐಎಂ-4 ಕಾನ್ಸೆಪ್ಟ್ ಆಧರಿಸಿದೆ ಮತ್ತು ಹಳೆಯ ಸುಜುಕಿ ಮಾದರಿಗಳ ಕೆಲವು ವಿನ್ಯಾಸ ಅಂಶಗಳನ್ನು ಒಳಗೊಂಡಿದೆ. ಹಳೆ ಮಾದರಿಗೆ ಹೋಲಿಸಿದರೆ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಭಾರತದಲ್ಲಿ ಹೊಸದಾಗಿ ಪ್ರಾರಂಭಿಸಿದ ನೆಕ್ಸಾ ಪ್ರೀಮಿಯಂ ಮಳಿಗೆಗಳಲ್ಲಿ ಮಾರಾಟವಾಗಲಿರುವ ಮೂರನೇ ವಾಹನ ಇಗ್ನಿಸ್ ಆಗಬಹುದು. ಬಜೆಟ್ ಆಧಾರಿತ ಹ್ಯಾಚ್‍‍ಬ್ಯಾಕ್‍‍ಗಳಿಂದಾಗಿ ಮಾರುತಿ ಸುಜುಕಿ ಕಂಪನಿಯು ಹೆಚ್ಚು ಹೆಸರುವಾಸಿಯಾಗಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಇಗ್ನಿಸ್ ಕಾರನ್ನು ಮೊದಲ ಬಾರಿಗೆ 2016ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾಗಿತ್ತು. ಭಾರತೀಯ ಮಾರುಕಟ್ಟೆಯಲ್ಲಿ ನಂತರ ರಿಟ್ಜ್ ಕಾರಿನ ಬದಲಿಗೆ ಇಗ್ನಿಸ್ ಕಾರ್ ಅನ್ನು ಬಿಡುಗಡೆಗೊಳಿಸಲಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಹ್ಯಾಚ್‍‍ಬ್ಯಾಕ್ ಸೆಗ್‍‍ಮೆಂಟ್‍‍ನಲ್ಲಿ ಉತ್ತಮ ಪೈಪೋಟಿ ನಡೆಯುತ್ತಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಇದೇ ಕಾರಣದಿಂದ ಮಾರುತಿ ಸುಜುಕಿಯು ಎಸ್-ಪ್ರೆಸ್ಸೊ ಮತ್ತು ಮೂರನೇ ತಲೆಮಾರಿನ ವ್ಯಾಗನ್‍ಆರ್ ಕಾರುಗಳನ್ನು ಬಿಡುಗಡೆಗೊಳಿಸಿದೆ. ಇಗ್ನಿಸ್‍ ಕಾರನ್ನು ಮಿಡ್-ಸೈಕಲ್ ಅಪ್‍‍ಡೇಟ್‍ಗೊಳಿಸಿದ ಬಳಿಕ ಮುಂಭಾಗದಲ್ಲಿ ಕೆಲವು ಬದಲಾವಣೆಗಳು ಆಗಿದೆ. ಕಾರಿನ ಮುಂಭಾಗ ಬಂಪರ್‍‍‍ನ ಸ್ಪೋರ್ಟಿ ಲುಕ್ ಅನ್ನು ಹೆಚ್ಚಿಸಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಕಾರಿನ ಹಿಂಭಾಗದಲ್ಲಿ ಕೆಲವು ಸೂಕ್ಷ್ಮ ಬದಲಾವಣೆಗಳನ್ನು ಮಾಡಲಾಗಿದೆ. ಹೊಸ ಫೀಚರ್ಸ್‍‍ಗಳು ಮತ್ತು ಹಲವಾರು ಸುರಕ್ಷತಾ ಫೀಚರ್ಸ್‍‍ಗಳನ್ನು ಅಳವಡಿಸಲಾಗಿದೆ. ಮಾರುತಿ ಸುಜುಕಿ ಇಗ್ನಿಸ್ ಇತ್ತೀಚೆಗೆ ಸ್ಪಾಟ್ ಟೆಸ್ಟ್ ನಡೆಸಿದ್ದರು.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಹೊಸ ಇಗ್ನಿಸ್ ಫೇಸ್‍‍ಲಿಫ್ಟ್ ಕಾರಿನಲ್ಲಿ ಇಂಟಿರಿಯರ್ ಕ್ಯಾಬಿನ್ ಅನ್ನು ನವೀಕರಿಸಬಹುದು. ಇನ್ನೂ ಕಾರಿನ ಇಂಟಿರಿಯರ್‍‍ನಲ್ಲಿ ಅ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ‍‍ಯೊಂದಿಗೆ ಸ್ಮಾರ್ಟ್‍‍ಪ್ಲೇ ಟಚ್‍‍ಸ್ಕ್ರೀನ್ ಇನ್ಫೋಟೇನ್‍‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಇದೇ ಇನ್ಫೋಟೇನ್‍ ಸಿಸ್ಟಂ ಅನ್ನು ಮಾರುತಿ ಸುಜುಕಿ ಬಲೆನೊ ಕಾರಿನಲ್ಲಿಯೂ ಅಳವಡಿಸಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಹೊಸ ಇಗ್ನಿಸ್ ಫೇಸ್‍ಲಿಫ್ಟ್ ಕಾರಿನಲ್ಲಿ 1.2 ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 6,000 ಆರ್‍‍ಪಿಎಂನಲ್ಲಿ 83 ಬಿ‍ಹೆಚ್‍‍ಪಿ ಪವರ್ ಮತ್ತು 4,200 ಆರ್‍‍‍ಪಿಎಂನಲ್ಲಿ 113 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ. ಇದರೊಂದಿಗೆ 5 ಸ್ಪೀಡ್ ಎಎಂಟಿಯನ್ನು ಆಯ್ಕೆಯಾಗಿ ನೀಡಲಾಗಿದೆ. ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್ ಕಾರಿನ ಬೆಲೆಯು ತುಸು ಹೆಚ್ಚಿರಲಿದೆ.

ಆಟೋ ಎಕ್ಸ್‌ಪೋ 2020: ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುವುದರಿಂದ ಮಾರುತಿ ಸುಜುಕಿ ಇಗ್ನಿಸ್ ಕಾರು ತುಸು ದುಬಾರಿಯಾಗಿರಲಿದೆ. ಮಾರುತಿ ಸುಜುಕಿ ಇಗ್ನಿಸ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಕಂಪನಿಯ ಹ್ಯಾಚ್‍‍ಬ್ಯಾಕ್‍ಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
2020 Maruti Ignis (facelift) to be launched at Auto Expo 2020 on 7 February. Read in Kannada.
Story first published: Saturday, February 1, 2020, 16:53 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X