ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಮಾರುತಿ ಸುಜುಕಿ ಕಂಪನಿಯು ತನ್ನ ಇಗ್ನಿಸ್ ಫೇಸ್‍‍ಲಿಫ್ಟ್ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ. ಜನಪ್ರಿಯ ಮಾರುತಿ ಸುಜುಕಿ ಕಂಪನಿಯ ಬಹುನಿರೀಕ್ಷಿತ ಇಗ್ನಿಸ್ ಫೇಸ್‍‍ಲಿಫ್ಟ್ ಅನ್ನು ಹೊಸ ವಿನ್ಯಾಸ ಮತ್ತು ಹೊಸ ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಗೊಳಿಸಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಹೊಸ ಇಗ್ನಿಸ್ ಕಾರು ಐಎಂ-4 ಕಾನ್ಸೆಪ್ಟ್ ಆಧರಿಸಿದೆ. ಹಳೆಯ ಮಾದರಿಗೆ ಹೋಲಿಸಿದರೆ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ. ಇದರಲ್ಲಿ ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್ ಕಾರಿನ ಮುಂಭಾಗ ಹೊಸ ಬಂಪರ್ ಮತ್ತು ಮರುವಿನ್ಯಾಸ ಮಾಡಲಾಗಿರುವ ಫ್ರಂಟ್ ಗ್ರಿಲ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಮುಂಭಾಗದಲ್ಲಿ ಫಾಕ್ಸ್ ಪ್ಲೇಟ್‍‍ಗಳನ್ನು ಕೂಡ ಅಳವಡಿಸಿದೆ. ಇನ್ನು ಕಾರಿನ ಹೆಡ್‍‍‍ಲ್ಯಾಂಪ್ ಮತ್ತು ಪ್ರೊಜೆಕ್ಟರ್‍ ಹಾಗೆಯೇ ಎಲ್ಇಡಿ ಡಿಆರ್‍ಎಲ್‍‍ಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಹಿಂಭಾಗದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಇದರಲ್ಲಿ ಹೊಸ ಟೇಲ್‍‍ಲ್ಯಾಂಪ್, ನವೀಕರಿಸಿದ ಬಂಪರ್ ಮತ್ತು ರೂಫ್ ರೂಫ್ ಮೌಂಟೆಡ್ ಸ್ಪಾಯ್ಲರ್ ಜೊತೆಗೆ ರಿಫ್ಲೆಕ್ಟರ್‌ಗಳಿವೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಹೊಸ ಇಗ್ನಿಸ್ ಫೇಸ್‍ಲಿಫ್ಟ್ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.4.83 ಲಕ್ಷದಿಂದ ರೂ.7.13 ಲಕ್ಷಗಳಾಗಿದೆ. ಭಾರತದಲ್ಲಿ ಹೊಸದಾಗಿ ಪ್ರಾರಂಭಿಸಿದ ನೆಕ್ಸಾ ಪ್ರೀಮಿಯಂ ಡೀಲರ್‍‍ಗಳ ಮೂಲಕ ಈ ಕಾರನ್ನು ಮಾರಾಟ ಮಾಡಲಾಗುತ್ತದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಬಜೆಟ್ ಆಧಾರಿತ ಹ್ಯಾಚ್‍‍ಬ್ಯಾಕ್‍‍ಗಳಿಂದಾಗಿ ಮಾರುತಿ ಸುಜುಕಿ ಕಂಪನಿಯು ಹೆಚ್ಚು ಹೆಸರುವಾಸಿಯಾಗಿದೆ. ಹೊಸ ಇಗ್ನಿಸ್ ಕಾರು ಹೊಸ ಬಣ್ಣದ ಆಯ್ಕೆಗಳನ್ನು ಹೊಂದಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಇದರಲ್ಲಿ ಲ್ಯೂಸೆಂಟ್ ಆರೆಂಜ್ ಮತ್ತು ಟರ್ಕಿಷ್ ಬ್ಲೂ ಬಣ್ಣಗಳಿವೆ. ಇನ್ನೂ ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆಯಲ್ಲಿ ಸ್ಟಾರ್‌ಗೇಜ್ ಬ್ಲೂ ಜೊತೆ ಬ್ಲ್ಯಾಕ್ ರೂಫ್, ಸ್ಟಾರ್‌ಗೇಜ್ ಬ್ಲೂ ಜೊತೆಗೆ ಸಿಲ್ವರ್ ರೂಫ್ ಮತ್ತು ಲ್ಯೂಸೆಂಟ್ ಆರೇಂಜ್ ಜೊತೆಗೆ ಬ್ಲ್ಯಾಕ್ ರೂಫ್ ಬಣ್ಣಗಳಿವೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಹೊಸ ಇಗ್ನಿಸ್ ಫೇಸ್‍‍ಲಿಫ್ಟ್ ಕಾರಿನಲ್ಲಿ ಇಂಟಿರಿಯರ್ ಕ್ಯಾಬಿನ್ ಅನ್ನು ನವೀಕರಿಸಲಾಗಿದೆ. ಇದರಲ್ಲಿ 7.0 ಇಂಚಿನ ಟಚ್‍‍ಸ್ಕ್ರೀನ್ ಜೊತೆಗೆ ಮಾರುತಿಯ ಸ್ಮಾರ್ಟ್‌ಪ್ಲೇ ಸ್ಟುಡಿಯೋ ಇನ್ಫೋಟೇನ್‍‍ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಇದರೊಂದಿಗೆ ಆನ್-ಬೋರ್ಡ್ ನ್ಯಾವಿಗೇಷನ್ ಹೊಂದಿದೆ ಮತ್ತು ವಾಯ್ಸ್ ಕಮಾಂಡ್ ಅನ್ನು ಅಳವಡಿಸಲಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಹೊಸ ಇಗ್ನಿಸ್ ಫೇಸ್‍ಲಿಫ್ಟ್ ಕಾರು 1.2 ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 6,000 ಆರ್‍‍ಪಿಎಂನಲ್ಲಿ 83 ಬಿ‍ಹೆಚ್‍‍ಪಿ ಪವರ್ ಮತ್ತು 4,200 ಆರ್‍‍‍ಪಿಎಂನಲ್ಲಿ 113 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಜೋಡಿಸಲಾಗಿದೆ. ಇದರೊಂದಿಗೆ 5 ಸ್ಪೀಡ್ ಎಎಂಟಿಯನ್ನು ಆಯ್ಕೆಯಾಗಿ ನೀಡಲಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಮಾರುತಿ ಸುಜುಕಿ ಇಗ್ನಿಸ್ ಫೇಸ್‍‍ಲಿಫ್ಟ್

ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುವುದರಿಂದ ಮಾರುತಿ ಸುಜುಕಿ ಇಗ್ನಿಸ್ ಕಾರು ತುಸು ದುಬಾರಿಯಾಗಿದೆ. ಮಾರುತಿ ಸುಜುಕಿ ಇಗ್ನಿಸ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕಂಪನಿಯ ಹ್ಯಾಚ್‍‍ಬ್ಯಾಕ್‍ಗಳಿಗೆ ಪೈಪೋಟಿ ನೀಡಲಿದೆ.

Article Published On: Saturday, February 15, 2020, 10:26 [IST]
English summary
Maruti Ignis BS6 Launched At Rs 4.83 L. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+