ಗುರುಗ್ರಾಮ್ 1ನೇ ಘಟಕದಲ್ಲೂ ಕಾರು ಉತ್ಪಾದನೆಗೆ ಚಾಲನೆ ನೀಡಿದ ಮಾರುತಿ ಸುಜುಕಿ

ಇಡೀ ವಿಶ್ವವನ್ನೇ ಆತಂಕಕ್ಕೆ ತಳ್ಳಿರುವ ಮಾಹಾಮಾರಿ ಕರೋನಾ ವೈರಸ್ ಮಟ್ಟ ಹಾಕುವುದಕ್ಕಾಗಿ ಸದ್ಯ ನಾಲ್ಕನೇ ಹಂತದ ಲಾಕ್‌ಡೌನ್ ವಿಧಿಸಿರುವ ಕೇಂದ್ರ ಸರ್ಕಾರವು ಆರ್ಥಿಕ ಪುನಶ್ಚೇತನಕ್ಕಾಗಿ ಕೈಗಾರಿಕಾ ವಲಯಕ್ಕೆ ಷರತ್ತುಬದ್ದ ವಿನಾಯ್ತಿಗಳನ್ನು ಘೋಷಿಸಿದ್ದು, ಆಟೋ ಕಂಪನಿಗಳು ಕೂಡಾ ಹೊಸ ಮಾರ್ಗಸೂಚಿ ಅನುಸಾರವಾಗಿ ವಾಹನ ಉತ್ಪಾದನೆ ಮತ್ತು ಮಾರಾಟಕ್ಕೆ ಚಾಲನೆ ನೀಡಿವೆ.

ಗುರುಗ್ರಾಮ್ 1ನೇ ಘಟಕದಲ್ಲೂ ಕಾರು ಉತ್ಪಾದನೆಗೆ ಚಾಲನೆ ನೀಡಿದ ಮಾರುತಿ ಸುಜುಕಿ

ದೇಶದ ಅತಿದೊಡ್ಡ ಕಾರು ಉತ್ಪಾದನಾ ಕಂಪನಿ ಮಾರುತಿ ಸುಜುಕಿ ಕೂಡಾ ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ ಕಾರು ಉತ್ಪಾದನೆಯನ್ನು ಮನೆಸಾರ್ ಮತ್ತು ಗುರುಗ್ರಾಮ್ 2ನೇ ಘಟಕದಲ್ಲಿ ಕಳೆದ ವಾರವೇ ಪುನಾರಂಭಿಸಿದ್ದು, ಇದೀಗ ಗುರುಗ್ರಾಮ್‌ನಲ್ಲಿರುವ 1ನೇ ಉತ್ಪಾದನಾ ಘಟಕದಲ್ಲೂ ಗರಿಷ್ಠ ಮಟ್ಟದ ಸುರಕ್ಷಾ ಸೌಲಭ್ಯಗಳೊಂದಿಗೆ ಉತ್ಪಾದನಾ ಪ್ರಕ್ರಿಯೆಗ ಮರುಚಾಲನೆ ನೀಡಿದೆ. ಇದಕ್ಕಾಗಿಯೇ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸೋಂಕು ಹರಡದಂತೆ ಗರಿಷ್ಠ ಎಚ್ಚರಿಕೆ ವಹಿಸಲಾಗಿದೆ.

ಗುರುಗ್ರಾಮ್ 1ನೇ ಘಟಕದಲ್ಲೂ ಕಾರು ಉತ್ಪಾದನೆಗೆ ಚಾಲನೆ ನೀಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಂಪನಿಯು ಹರಿಯಾಣ ರಾಜ್ಯದಲ್ಲಿ ಒಟ್ಟು ಮೂರು ವಾಹನ ಉತ್ಪಾದನಾ ಘಟಕಗಳನ್ನು ಹೊಂದಿದ್ದು, ಮನೆಸಾರ್‌ನಲ್ಲಿ ಒಂದು ಮತ್ತು ಗುರುಗ್ರಾಮ್ ಒಟ್ಟು ಎರಡು ಘಟಕಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.

ಗುರುಗ್ರಾಮ್ 1ನೇ ಘಟಕದಲ್ಲೂ ಕಾರು ಉತ್ಪಾದನೆಗೆ ಚಾಲನೆ ನೀಡಿದ ಮಾರುತಿ ಸುಜುಕಿ

ಮನೆಸಾರ್ ಮತ್ತು ಗುರುಗ್ರಾಮ್ 1ನೇ ಘಟಕದಲ್ಲಿ ಕಾರುಗಳ ಉತ್ಪಾದನೆಯಾದಲ್ಲಿ ಗುರುಗ್ರಾಮ್ 2ನೇ ಘಟಕದಲ್ಲಿ ಮೋಟಾರ್‌ಸೈಕಲ್ ಉತ್ಪಾದನಾ ಪ್ರಕ್ರಿಯೆಯನ್ನು ಹೊಂದಿದ್ದು, ಈ ಮೊದಲು ಮನೆಸಾರ್ ಮತ್ತು ಗುರುಗ್ರಾಮ್ 2ನೇ ಘಟಕದಲ್ಲಿ ಮಾತ್ರವೇ ಉತ್ಪಾದನೆ ಅವಕಾಶ ಸಿಕ್ಕಿತ್ತು.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಗುರುಗ್ರಾಮ್ 1ನೇ ಘಟಕದಲ್ಲೂ ಕಾರು ಉತ್ಪಾದನೆಗೆ ಚಾಲನೆ ನೀಡಿದ ಮಾರುತಿ ಸುಜುಕಿ

ಇದೀಗ ಗುರುಗ್ರಾಮ್ 2ನೇ ಘಟಕದಲ್ಲೂ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ಉತ್ಪಾದನಾ ಘಟಕಗಳಲ್ಲಿ ಶೇ.50ಕ್ಕಿಂತ ಕಡಿಮೆ ಪ್ರಮಾಣದ ಉದ್ಯೋಗಿಗಳೊಂದಿಗೆ ಉತ್ಪಾದನಾ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ.

ಗುರುಗ್ರಾಮ್ 1ನೇ ಘಟಕದಲ್ಲೂ ಕಾರು ಉತ್ಪಾದನೆಗೆ ಚಾಲನೆ ನೀಡಿದ ಮಾರುತಿ ಸುಜುಕಿ

ವೈರಸ್ ಹರಡದಂತೆ ಮುನ್ನೆಚ್ಚಿರಿಕೆ ಕ್ರಮವಾಗಿ ಹಲವಾರು ಪ್ರೊಟೋಕಾಲ್ ಜಾರಿಗೆ ತರಲಾಗಿದ್ದು, ಸಾಮಾಜಿಕ ಅಂತರದ ಜೊತೆಗೆ ಗುಣಮಟ್ಟದ ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್ ಮತ್ತು ಹ್ಯಾಂಡ್ ಗ್ಲೌಸ್ ಬಳಕೆಯನ್ನು ಕಡ್ಡಾಯಗೊಳಿಸಲಾಗಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಗುರುಗ್ರಾಮ್ 1ನೇ ಘಟಕದಲ್ಲೂ ಕಾರು ಉತ್ಪಾದನೆಗೆ ಚಾಲನೆ ನೀಡಿದ ಮಾರುತಿ ಸುಜುಕಿ

ಹಾಗೆಯೇ ಅಧಿಕೃತ ವಾಹನಗಳ ಮಾರಾಟ ಮಳಿಗೆಗಳಲ್ಲೂ ಹೆಚ್ಚಿನ ಮಟ್ಟದ ಸುರಕ್ಷಾ ಕ್ರಮಗಳನ್ನು ತೆಗದುಕೊಳ್ಳಲಾಗುತ್ತಿದ್ದು, ನಿಯಮಿತವಾಗಿ ಟೆಸ್ಟಿಂಗ್ ವಾಹನಗಳ ಸ್ವಚ್ಚತೆ, ಸಿಬ್ಬಂದಿಯ ಆರೋಗ್ಯ ತಪಾಸಣೆ, ಸಿಬ್ಬಂದಿ ನಡುವೆ ಸಾಮಾಜಿಕ ಅಂತರ, ಹ್ಯಾಂಡ್ ಸ್ಯಾನಿಟೈಜ್ ಮತ್ತು ಫೇಸ್ ಶೀಲ್ಡ್‌ಗಳನ್ನು ಕಡ್ಡಾಯವಾಗಿ ಬಳಕೆ ಮಾಡಬೇಕಿದೆ.

ಗುರುಗ್ರಾಮ್ 1ನೇ ಘಟಕದಲ್ಲೂ ಕಾರು ಉತ್ಪಾದನೆಗೆ ಚಾಲನೆ ನೀಡಿದ ಮಾರುತಿ ಸುಜುಕಿ

ಇನ್ನು ವೈರಸ್ ಭೀತಿಯಿಂದಾಗಿ ವಾಹನಗಳನ್ನು ನೇರವಾಗಿ ಶೋರೂಂನಲ್ಲಿ ಮಾರಾಟ ವ್ಯವಹಾರವನ್ನು ಕೈಬಿಟ್ಟಿರುವ ವಾಹನ ಕಂಪನಿಗಳು ಸುರಕ್ಷಾ ಮಾರ್ಗಸೂಚಿಯೆಂತೆ ಆನ್‌ಲೈನ್ ಬುಕ್ಕಿಂಗ್ ಪಡೆದುಕೊಂಡು ಗ್ರಾಹಕರ ಮನೆ ಬಾಗಿಲಿಗೆ ಉತ್ಪನ್ನಗಳನ್ನು ತಲುಪಿಸುತ್ತಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಗುರುಗ್ರಾಮ್ 1ನೇ ಘಟಕದಲ್ಲೂ ಕಾರು ಉತ್ಪಾದನೆಗೆ ಚಾಲನೆ ನೀಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕೂಡಾ ಕರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜೊತೆಗೂಡಿ ತನ್ನದೆ ಆದ ಪಾತ್ರವಹಿಸುತ್ತಿದ್ದು, ತನ್ನ ಸಹಭಾಗಿತ್ವದ ಸಂಸ್ಥೆಗಳ ಜೊತೆಗೂಡಿ ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್, ವೈದ್ಯರ ಬಳಸುವ ಪ್ರೊಟೆಕ್ವಿವ್ ಕ್ಲಾಥ್ ಸೇರಿದಂತೆ ವೆಂಟಿಲೇಟರ್‌ಗಳನ್ನು ನಿರ್ಮಾಣ ಮಾಡಿ ಸರ್ಕಾರಕ್ಕೆ ಪೂರೈಕೆ ಮಾಡುತ್ತಿದೆ.

Article Published On: Monday, May 18, 2020, 17:39 [IST]
English summary
Maruti Suzuki Resume Operations At Gurugram Plant. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+