ಮಾರುತಿ ಸುಜುಕಿ ಎಸ್-ಕ್ರಾಸ್ ಪೆಟ್ರೋಲ್ ಮಾದರಿಯ ತಾಂತ್ರಿಕ ಅಂಶಗಳು ಬಹಿರಂಗ
ಮಾರುತಿ ಸುಜುಕಿ ಬಹುನೀರಿಕ್ಷಿತ ಎಸ್-ಕ್ರಾಸ್ ಪೆಟ್ರೋಲ್ ಮಾದರಿಯು ಮುಂದಿನ ತಿಂಗಳು ಜೂನ್ ಆರಂಭದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಲ್ಲಿದ್ದು, ಹೊಸ ಎಂಜಿನ್ ಪ್ರೇರಿತ ಎಸ್-ಕ್ರಾಸ್ ಕಾರು ಖರೀದಿಗಾಗಿ ಈಗಾಗಲೇ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಈಗಾಗಲೇ ತನ್ನ ಬಹುತೇಕ ಕಾರು ಮಾದರಿಗಳನ್ನು ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಗೊಳಿಸಿರುವ ಮಾರುತಿ ಸುಜುಕಿಯು ಹೊಸ ಕಾರು ಮಾದರಿಯಾಗಿರುವ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯು ಸಹ ಇದೀಗ ಬಿಡುಗಡೆ ಮಾಡುತ್ತಿದೆ. ಏಪ್ರಿಲ್ 1ರಿಂದ ಜಾರಿಗೆ ಬಂದಿರುವ ಬಿಎಸ್-6 ನಿಯಮ ಹಿನ್ನಲೆಯಲ್ಲಿ ಕಾರು ಮಾರಾಟದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಪರಿಚಯಿಸಿರುವ ಮಾರುತಿ ಸುಜುಕಿಯು, ವಿಟಾರಾ ಬ್ರೆಝಾ ಮತ್ತು ಎಸ್-ಕ್ರಾಸ್ ಕಾರಿನಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದೆ.

ವಿಟಾರಾ ಬ್ರೆಝಾ ಕಾರು ಮಾದರಿಯು ಈಗಾಗಲೇ ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಗೊಂಡಿದ್ದು, ಇದೀಗ ಎಸ್-ಕ್ರಾಸ್ ಮಾದರಿಯು ಸಹ ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಗಾಗಿ ಸಿದ್ದವಾಗಿದೆ.

ಕರೋನಾ ವೈರಸ್ ತಡೆಗಟ್ಟಲು ಲಾಕ್‌ಡೌನ್ ವಿಧಿಸಿರುವುದರಿಂದ ಎಸ್-ಕ್ರಾಸ್ ಪೆಟ್ರೋಲ್ ವರ್ಷನ್ ಸೇರಿದಂತೆ ಹಲವಾರು ಕಾರು ಮಾದರಿಗಳ ಬಿಡುಗಡೆಯು ವಿಳಂಬವಾಗಿದ್ದು, ಇದೀಗ ಲಾಕ್‌ಡೌನ್ ವಿನಾಯ್ತಿ ಹಿನ್ನಲೆಯಲ್ಲಿ ಹೊಸ ಎಸ್-ಕ್ರಾಸ್ ಕಾರು ಬಿಡುಗಡೆಯ ಸಿದ್ದತೆಯಲ್ಲಿದೆ.

ಹೊಸ ಎಸ್-ಕ್ರಾಸ್ ಕಾರಿನಲ್ಲಿ ವಿಟಾರಾ ಬ್ರೆಝಾದಲ್ಲಿ ಜೋಡಣೆ ಮಾಡಲಾಗಿರುವ 1.5-ಲೀಟರ್ ಪೆಟ್ರೋಲ್ ಮಾದರಿಯನ್ನೇ ಜೋಡಣೆ ಮಾಡಲಾಗುತ್ತಿದ್ದು, ಇದು ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನದೊಂದಿಗೆ 103-ಬಿಎಚ್‌ಪಿ ಮತ್ತು 138-ಎನ್‌ಎಂ ಟಾರ್ಕ್‌ನೊಂದಿಗೆ ಅತ್ಯುತ್ತಮ ಮೈಲೇಜ್ ಪಡೆದುಕೊಂಡಿದೆ.

ಜೊತೆಗೆ ಹೊಸ ಕಾರು 5-ಸ್ಪೀಡ್ ಮ್ಯಾನುವಲ್ ಮತ್ತು 4-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, ಎರಡು ಮಾದರಿಯಲ್ಲೂ ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಜೋಡಣೆ ಮಾಡಬಹುದಾಗಿದೆ. ಇದು ಪರ್ಫಾಮೆನ್ಸ್ ಜೊತೆಗೆ ಮೈಲೇಜ್ ಪ್ರಮಾಣದಲ್ಲೂ ಉತ್ತಮ ರೇಟಿಂಗ್ಸ್ ಪಡೆದುಕೊಳ್ಳಲಿದೆ.
MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಇನ್ನು ಬಿಎಸ್-6 ಜಾರಿಗೆ ಬಂದ ಹಿನ್ನಲೆಯಲ್ಲಿ ಮಾರುತಿ ಸುಜುಕಿಯು ಈ ಹಿಂದಿನ 1.3-ಲೀಟರ್ ಡೀಸೆಲ್ ಮಾದರಿಯನ್ನ ಸ್ಥಗಿತಗೊಳಿಸಿದ್ದು, ಡೀಸೆಲ್ ಆವೃತ್ತಿಗಳ ಮಾರಾಟವನ್ನು ಕೈಬಿಟ್ಟು ಕೇವಲ ಪೆಟ್ರೋಲ್ ಮತ್ತು ಸ್ಮಾರ್ಟ್ ಹೈಬ್ರಿಡ್ ಮಾದರಿಗಳನ್ನು ಮಾತ್ರವೇ ಮಾರಾಟ ಮಾಡಲು ನಿರ್ಧರಿಸಿದೆ.

ಮಾಲಿನ್ಯ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿರುವುದೇ ಡೀಸೆಲ್ ಎಂಜಿನ್ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಮಾರುತಿ ಸುಜುಕಿ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಕಡಿಮೆ ಸಾಮರ್ಥ್ಯದ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿವೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಮಾರುತಿ ಸುಜುಕಿಯು ಸದ್ಯಕ್ಕೆ 800ಸಿಸಿ, 1.0-ಲೀಟರ್, 1.2-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಕಾರು ಮಾದರಿಗಳನ್ನು ಮಾತ್ರವೇ ಮಾರಾಟ ಮಾಡುತ್ತಿದ್ದು, ಮುಂಬರುವ ದಿನಗಳಲ್ಲಿ ಹ್ಯಾಚ್‌ಬ್ಯಾಕ್ ಕಾರುಗಳನ್ನು ಹೊರತುಪಡಿಸಿ ಸೆಡಾನ್, ಎಸ್‌ಯುವಿ ಮತ್ತು ಎಂಪಿವಿ ಕಾರು ಮಾದರಿಗಳಲ್ಲಿ ಮಾತ್ರವೇ ಹೊಸ ತಂತ್ರಜ್ಞಾನ ಪ್ರೇರಿತ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಬಿಡುಗಡೆಗೊಳಿಸಬಹುದಾದ ಸಾಧ್ಯತೆಗಳಿವೆ.


Click it and Unblock the Notifications