ಮುಂದಿನ ತಿಂಗಳು ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಹೊಸ ಎಸ್-ಕ್ರಾಸ್ ಪೆಟ್ರೋಲ್ ವರ್ಷನ್

ಮಾರುತಿ ಸುಜುಕಿ ಕಂಪನಿಯು ಈಗಾಗಲೇ ಬಹುತೇಕ ಕಾರು ಮಾದರಿಗಳನ್ನು ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆ ಮಾಡಿದ್ದು, ಇನ್ನುಳಿದ ಕಾರು ಮಾದರಿಗಳನ್ನು ಸಹ ಶೀಘ್ರದಲ್ಲೇ ಬಿಡುಗಡೆ ಮಾಡುತ್ತಿದೆ. ಇದರಲ್ಲಿ ಹೊಚ್ಚ ಹೊಸ ಎಸ್-ಕ್ರಾಸ್ ಪೆಟ್ರೋಲ್ ಮಾದರಿಯು ಒಂದಾಗಿದ್ದು, ಹೊಸ ಕಾರು ಮುಂದಿನ ತಿಂಗಳು ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ಮುಂದಿನ ತಿಂಗಳು ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಹೊಸ ಎಸ್-ಕ್ರಾಸ್ ಪೆಟ್ರೋಲ್ ವರ್ಷನ್

ಏಪ್ರಿಲ್ 1ರಿಂದ ಜಾರಿಗೆ ಬಂದಿರುವ ಬಿಎಸ್-6 ನಿಯಮ ಹಿನ್ನಲೆಯಲ್ಲಿ ಕಾರು ಮಾರಾಟದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಪರಿಚಯಿಸಿರುವ ಮಾರುತಿ ಸುಜುಕಿಯು ವಿಟಾರಾ ಬ್ರೆಝಾ ಮತ್ತು ಎಸ್-ಕ್ರಾಸ್ ಕಾರಿನಲ್ಲಿ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದೆ. ವಿಟಾರಾ ಬ್ರೆಝಾ ಈಗಾಗಲೇ ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಗೊಂಡಿದ್ದು, ಇದೀಗ ಎಸ್-ಕ್ರಾಸ್ ಮಾದರಿಯು ಸಹ ಹೊಸ ಎಂಜಿನ್‌ನೊಂದಿಗೆ ಬಿಡುಗಡೆಗೆ ಸಿದ್ದವಾಗಿದೆ.

ಮುಂದಿನ ತಿಂಗಳು ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಹೊಸ ಎಸ್-ಕ್ರಾಸ್ ಪೆಟ್ರೋಲ್ ವರ್ಷನ್

ಸದ್ಯ ಕರೋನಾ ವೈರಸ್ ತಡೆಗಟ್ಟಲು ಲಾಕ್‌ಡೌನ್ ವಿಧಿಸಿರುವುದರಿಂದ ಎಸ್-ಕ್ರಾಸ್ ಪೆಟ್ರೋಲ್ ವರ್ಷನ್ ಸೇರಿದಂತೆ ಹಲವಾರು ಕಾರು ಮಾದರಿಗಳ ಬಿಡುಗಡೆಯು ವಿಳಂಬವಾಗಿದ್ದು, ಇದೀಗ ಲಾಕ್‌ಡೌನ್ ಮುಗಿಯುವ ಹಂತಕ್ಕೆ ಬಂದಿರುವುದರಿಂದ ಹೊಸ ಕಾರು ಬಿಡುಗಡೆಗೆ ಮಾರುತಿ ಸುಜುಕಿ ಸಿದ್ದತೆ ನಡೆಸಿದೆ.

ಮುಂದಿನ ತಿಂಗಳು ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಹೊಸ ಎಸ್-ಕ್ರಾಸ್ ಪೆಟ್ರೋಲ್ ವರ್ಷನ್

ಹೊಸ ಕಾರು ವಿಟಾರಾ ಬ್ರೆಝಾ ಜೋಡಣೆ ಮಾಡಲಾಗಿರುವ 1.5-ಲೀಟರ್ ಪೆಟ್ರೋಲ್ ಮಾದರಿಯನ್ನೇ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಬಿಎಚ್‌ಪಿ ಉತ್ಪಾದನೆಯಲ್ಲಿ ಎಸ್-ಕ್ರಾಸ್ ಕಾರು ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲಿದೆ.

MOST READ: ಲಾಕ್‌ಡೌನ್‌ನಿಂದ ಸಂಕಷ್ಟ: ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5,000..!

ಮುಂದಿನ ತಿಂಗಳು ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಹೊಸ ಎಸ್-ಕ್ರಾಸ್ ಪೆಟ್ರೋಲ್ ವರ್ಷನ್

ಜೊತೆಗೆ ಹೊಸ ಕಾರಿನ ಎಂಜಿನ್‌ನಲ್ಲಿ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಎರಡು ಆವೃತ್ತಿಗಳಲ್ಲೂ ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಜೋಡಣೆ ಮಾಡಲಿದ್ದು, ಇದು ಪರ್ಫಾಮೆನ್ಸ್ ಜೊತೆಗೆ ಮೈಲೇಜ್ ಪ್ರಮಾಣದಲ್ಲೂ ಉತ್ತಮ ರೇಟಿಂಗ್ಸ್ ಪಡೆದುಕೊಳ್ಳಲಿದೆ.

ಮುಂದಿನ ತಿಂಗಳು ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಹೊಸ ಎಸ್-ಕ್ರಾಸ್ ಪೆಟ್ರೋಲ್ ವರ್ಷನ್

ಇನ್ನು ಏಪ್ರಿಲ್ 1ರಿಂದ ಬಿಎಸ್-6 ನಿಯಮವು ಕಡ್ಡಾಯವಾಗಿ ಜಾರಿಗೆ ಬಂದ ಹಿನ್ನಲೆಯಲ್ಲಿ ಮಾರುತಿ ಸುಜುಕಿ ಪ್ರಮುಖ ಕಾರುಗಳಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.3-ಲೀಟರ್ ಡೀಸೆಲ್ ಮಾದರಿಯನ್ನು ಸ್ಥಗಿತಗೊಳಿಸಲಾಗಿದ್ದು, ಜನಪ್ರಿಯ ವಿಟಾರಾ ಬ್ರೆಝಾ, ಎಸ್-ಕ್ರಾಸ್, ಸ್ವಿಫ್ಟ್ ಮತ್ತು ಡಿಜೈರ್ ಕಾರಿನಲ್ಲೂ ಕೂಡಾ ಇನ್ಮುಂದೆ ಡೀಸೆಲ್ ಆವೃತ್ತಿಯ ಮಾರಾಟವನ್ನು ಕೈಬಿಟ್ಟು ಕೇವಲ ಪೆಟ್ರೋಲ್ ಆವೃತ್ತಿಯನ್ನು ಮಾತ್ರವೇ ಅಭಿವೃದ್ದಿಪಡಿಸಲಾಗಿದೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಮುಂದಿನ ತಿಂಗಳು ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಹೊಸ ಎಸ್-ಕ್ರಾಸ್ ಪೆಟ್ರೋಲ್ ವರ್ಷನ್

ಮಾಲಿನ್ಯ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿರುವುದೇ ಡೀಸೆಲ್ ಎಂಜಿನ್ ಮಾರಾಟದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಮಾರುತಿ ಸುಜುಕಿ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಕಡಿಮೆ ಸಾಮರ್ಥ್ಯದ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿವೆ.

ಮುಂದಿನ ತಿಂಗಳು ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಹೊಸ ಎಸ್-ಕ್ರಾಸ್ ಪೆಟ್ರೋಲ್ ವರ್ಷನ್

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ನಿರ್ಮಾಣದ ಬಿಎಸ್-4 ಡೀಸೆಲ್ ಕಾರುಗಳ ಎಂಜಿನ್‌ಗಳನ್ನು ಬಿಎಸ್-6 ನಿಯಮಕ್ಕೆ ಉನ್ನತೀಕರಣವು ಆರ್ಥಿಕವಾಗಿ ಹೊರೆಯಾಗಲಿದ್ದು, ಇದೇ ಕಾರಣಕ್ಕೆ ಪೆಟ್ರೋಲ್, ಪೆಟ್ರೋಲ್ ಜೊತೆಗೆ ಸ್ಮಾರ್ಟ್ ಹೈಬ್ರಿಡ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆ ಹೆಚ್ಚಿಸಲಾಗುತ್ತಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಮುಂದಿನ ತಿಂಗಳು ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಹೊಸ ಎಸ್-ಕ್ರಾಸ್ ಪೆಟ್ರೋಲ್ ವರ್ಷನ್

ಒಂದು ವೇಳೆ ಕಡಿಮೆ ಸಾಮರ್ಥ್ಯದ ಡೀಸೆಲ್ ಎಂಜಿನ್‌ಗಳನ್ನು ಉನ್ನತೀಕರಿಸಿದರೂ ಬೆಲೆ ಹೆಚ್ಚಳದಿಂದ ಗ್ರಾಹಕರನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಲಿದ್ದು, ಇದಕ್ಕಾಗಿಯೇ ಮಾರುತಿ ಸುಜುಕಿಯು ರೂ.10 ಲಕ್ಷದೊಳಗಿನ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲು ಮುಂದಾಗುತ್ತಿಲ್ಲ.

ಮುಂದಿನ ತಿಂಗಳು ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಹೊಸ ಎಸ್-ಕ್ರಾಸ್ ಪೆಟ್ರೋಲ್ ವರ್ಷನ್

ಆರ್ಥಿಕವಾಗಿ ಹೊರೆಯಾಗುವ ಡೀಸೆಲ್ ಕಾರುಗಳ ಬದಲಿಗೆ ಪೆಟ್ರೋಲ್, ಪೆಟ್ರೋಲ್ ಸ್ಮಾರ್ಟ್ ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳ ಮೇಲೆ ಹೆಚ್ಚು ಗಮನಹರಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಹೈ ಎಂಡ್ ಕಾರು ಮಾದರಿಗಳಲ್ಲಿ ಮಾತ್ರವೇ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಬಹುದಾದ ಸಾಧ್ಯತೆಗಳಿವೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ಮುಂದಿನ ತಿಂಗಳು ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಹೊಸ ಎಸ್-ಕ್ರಾಸ್ ಪೆಟ್ರೋಲ್ ವರ್ಷನ್

ಮಾರುತಿ ಸುಜುಕಿಯು ಈಗಾಗಲೇ ಹೊಸದಾಗಿ 1.2-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಕಾರು ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಮುಂಬರುವ ದಿನಗಳಲ್ಲಿ ಹ್ಯಾಚ್‌ಬ್ಯಾಕ್ ಕಾರುಗಳನ್ನು ಹೊರತುಪಡಿಸಿ ಸೆಡಾನ್, ಎಸ್‌ಯುವಿ ಮತ್ತು ಎಂಪಿವಿ ಕಾರು ಮಾದರಿಗಳಲ್ಲಿ ಮಾತ್ರವೇ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಬಹುದಾಗಿದೆ.

Article Published On: Thursday, April 23, 2020, 8:45 [IST]
English summary
Maruti S-Cross Petrol Hybrid to launch next month. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+