ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಾರುತಿ ಎಸ್-ಪ್ರೆಸ್ಸೊ ಸಿ‍ಎನ್‍‍ಜಿ ಆವೃತ್ತಿ

ಭಾರತದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಹೊಸ ಎಸ್-ಪ್ರೆಸ್ಸೊ ಸಿ‍ಎನ್‍‍ಜಿ ಆವೃತ್ತಿಯನ್ನು ಇತ್ತೀಚೆಗೆ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಇದು ಮಾರುತಿ ಸುಜುಕಿ ಕಂಪನಿಯ ಆರನೇ ಸಿ‍ಎನ್‍‍ಜಿ ಕಾರು ಆಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಾರುತಿ ಎಸ್-ಪ್ರೆಸ್ಸೊ ಸಿ‍ಎನ್‍‍ಜಿ ಆವೃತ್ತಿ

2019ರಲ್ಲಿ ಬಿಡುಗಡೆಯಾದ ಮಾರುತಿ ಎಸ್-ಪ್ರೆಸ್ಸೊ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಎಸ್-ಪ್ರೆಸ್ಸೊ ಕಾರ್ ಅನ್ನು 1.0 ಲೀಟರಿನ ಪೆಟ್ರೋಲ್ ಎಂಜಿನ್‍‍‍ನೊಂದಿಗೆ ಮಾರಾಟ ಮಾಡಲಾಗುತ್ತದೆ. ಕಂಪನಿಯು ಇದೀಗ ಸಿ‍ಎನ್‍‍ಜಿ ಆವೃತ್ತಿಯಲ್ಲಿ ಎಸ್-ಪ್ರೆಸ್ಸೊ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಎಸ್‍-ಪ್ರೆಸ್ಸೊ ಸಿ‍ಎನ್‍‍ಜಿ ಆವೃತ್ತಿಯನ್ನು ಮಾರುತಿ ಸುಜುಕಿ ಕಂಪನಿಯು ಇದೇ ತಿಂಗಳು ಬಿಡುಗಡೆಯಾಗಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಾರುತಿ ಎಸ್-ಪ್ರೆಸ್ಸೊ ಸಿ‍ಎನ್‍‍ಜಿ ಆವೃತ್ತಿ

2020ರ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶಿಸಲಾದ ಎಸ್-ಪ್ರೆಸ್ಸೊ ಹ್ಯಾಚ್‍‍ಬ್ಯಾಕ್ ಕಾರು ಹೊಸ ಪ್ಯಾಕ್ಟರಿ-ಫಿಟ್ ಪರಿಕರಗಳನ್ನು ಒಳಗೊಂಡಿದೆ. ಇದರಲ್ಲಿ ಡೆಕಲ್ಸ್, ರೂಫ್ ಸ್ಪಾಯ್ಲರ್‍ ಮತ್ತು ಡೋರ್ ಪ್ಯಾನೆಲ್‍‍ಗಳು ಸೇರಿವೆ. ಮಾರುತಿ ಸುಜುಕಿ ಕಂಪನಿಯು ಎಸ್-ಪ್ರೆಸ್ಸೊ ಸಿ‍ಎನ್‍‍ಜಿ ಕಾರಿನ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳನ್ನು ಬಹಿರಂಗಪಡಿಸಿಲ್ಲ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಾರುತಿ ಎಸ್-ಪ್ರೆಸ್ಸೊ ಸಿ‍ಎನ್‍‍ಜಿ ಆವೃತ್ತಿ

ಪೆಟ್ರೋಲ್ ಎಂಜಿನ್ ಕಾರಿಗಿಂತ ಸಿ‍ಎನ್‍‍ಜಿ ಕಾರಿನ ಇಂಜಿನ್ ದಕ್ಷತೆಯು ಕಡಿಮೆಯಾಗುವ ಸಾಧ್ಯತೆಗಳಿವೆ. ಸಿ‍ಎನ್‍‍ಜಿ ಆವೃತ್ತಿಯು 67 ಬಿ‍ಹೆಚ್‍ಪಿ ಪವರ್ ಮತ್ತು 90 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸಬಹುದು. ಈ ಕಾರಿನಲ್ಲಿ 5 ಸ್ಪೀಡಿನ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸುವ ಸಾಧ್ಯತೆಗಳಿವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಾರುತಿ ಎಸ್-ಪ್ರೆಸ್ಸೊ ಸಿ‍ಎನ್‍‍ಜಿ ಆವೃತ್ತಿ

ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಸಿ‍ಎನ್‍‍ಜಿ ಆವೃತ್ತಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶಿಸಿದೆ. ಭಾರತೀಯ ಮಾರುಕಟ್ಟೆಯಲ್ಲಿ ಈ ಸಿ‍ಎನ್‍‍ಜಿ ಆವೃತ್ತಿಯನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ. ಮಾರುತಿ ಸುಜುಕಿ ಕಂಪನಿಯು ಆಲ್ಟೋ, ಎರ್ಟಿಗಾ ಮತ್ತು ವ್ಯಾಗ್‍‍‍ನ್ಆರ್ ಕಾರುಗಳನ್ನು ಈಗಾಗಲೇ ಸಿ‍ಎನ್‍‍ಜಿ ಆವೃತ್ತಿಯಲ್ಲಿ ಬಿಡುಗಡೆಗೊಳಿಸಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಾರುತಿ ಎಸ್-ಪ್ರೆಸ್ಸೊ ಸಿ‍ಎನ್‍‍ಜಿ ಆವೃತ್ತಿ

ಸಾಮಾನ್ಯ ಎಸ್-ಪ್ರೆಸ್ಸೊ ಕಾರಿನ ಇಂಟಿರಿಯರ್‍‍‍ನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳಿದ್ದು, ಬಾಡಿ ಕಲರ್ ಡ್ಯಾಶ್‌ಬೋರ್ಡ್, ಸೆಂಟರ್ ಕನ್ಸೊಲ್‌ನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟ್ಯಾಜೊ ಮೀಟರ್, ಇನ್ಸ್ ಟ್ರೂಮೆಂಟ್ ಡಿಸ್‌ಪ್ಲೇ, ಟಚ್ ಸ್ಕ್ರೀನ್ ಇನ್ಪೋಟೇನ್‍‍ಮೆಂಟ್ ಸಿಸ್ಟಂ, ಸ್ಮಾರ್ಟ್‌ಪ್ಲೇ ಸ್ಟುಡಿಯೋ ಸಿಸ್ಟಂ,ಆ್ಯಪಲ್ ಕಾರ್ ಪ್ಲೇ/ಆಂಡ್ರಾಯ್ಡ್ ಆಟೋ, ಆರೇಂಜ್ ಕಲರ್ ಆಕ್ಸೆಂಟ್ ಸೌಲಭ್ಯವಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಾರುತಿ ಎಸ್-ಪ್ರೆಸ್ಸೊ ಸಿ‍ಎನ್‍‍ಜಿ ಆವೃತ್ತಿ

ಇನ್ನೂ ಎಸಿ ವೆಂಟ್ಸ್, ಸ್ಟಿಯರಿಂಗ್ ಮೌಟೆಂಡ್ ಕಂಟ್ರೋಲ್, ಮ್ಯಾನುವಲ್ ಹೊಂದಾಣಿಕೆಯ ರೇರ್ ವೀವ್ ಮಿರರ್, 12ವೊಲ್ಟ್ ಚಾರ್ಜಿಂಗ್ ಸ್ಯಾಕೆಟ್, ಯುಎಸ್‌ಬಿ ಕನೆಕ್ಟ್ ಸಹ ಹೊಂದಿದ್ದು, ಕೇಂದ್ರ ಸರ್ಕಾರದ ಕ್ರ್ಯಾಶ್ ಟೆಸ್ಟ್ ನಿಯಮಗಳಿಗೆ ಅನುಗುಣವಾಗಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಾರುತಿ ಎಸ್-ಪ್ರೆಸ್ಸೊ ಸಿ‍ಎನ್‍‍ಜಿ ಆವೃತ್ತಿ

ಎಸ್-ಪ್ರೆಸೊನಲ್ಲಿ ಕೀ ಲೆಸ್ ಎಂಟ್ರಿ, ಬ್ಲೂ‌ಥೂತ್ ಕನೆಕ್ಟಿವಿಟಿ, ಪವರ್ ವಿಂಡೋ, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಪೀಡ್ ವಾರ್ನಿಂಗ್ ಸಿಸ್ಟಂ, ರೇರ್ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಹಲವು ಫೀಚರ್ಸ್‌ಗಳನ್ನು ನೀಡಲಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮಾರುತಿ ಎಸ್-ಪ್ರೆಸ್ಸೊ ಸಿ‍ಎನ್‍‍ಜಿ ಆವೃತ್ತಿ

ಮಾರುತಿ ಎಸ್-ಪ್ರೆಸ್ಸೊ ಪೆಟ್ರೋಲ್ ಆವೃತ್ತಿಯಲ್ಲಿ ಲಭ್ಯವಿರುವ ನಾಲ್ಕು ರೂಪಾಂತರಗಳು ಸಿಎನ್‍ಜಿ ಆವೃತ್ತಿಯಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಸಮಾನ್ಯವಾದ ಮಾರುತಿ ಎಸ್-ಪ್ರೆಸ್ಸೊ ಪೆಟ್ರೋಲ್ ಆವೃತ್ತಿಯ ಬೆಲೆಗಿಂತ ಸಿ‍ಎನ್‍‍ಜಿಗೆ ರೂ.60,000ದಷ್ಟು ಹೆಚ್ಚಿಸಬಹುದು.

Article Published On: Monday, March 2, 2020, 19:12 [IST]
English summary
Maruti S-Presso CNG Launch Expected This Month In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+