Just In
- 10 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 11 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 12 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 13 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಎನ್ಜಿ ಆವೃತ್ತಿಯಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಜನಪ್ರಿಯ ಮಾರುತಿ ಎಸ್-ಪ್ರೆಸ್ಸೊ
ದೇಶಾದ್ಯಂತ ಲಾಕ್ಡೌನ್ ನಿಯಮಗಳಲ್ಲಿ ಸಡಿಲಿಕೆಗೊಳಿಸಿದಾಗ ಸರ್ಕಾರದ ಅದೇಶಗಳನ್ನು ಪಾಲಿಸಿ ಮಾರುತಿ ಸುಜುಕಿ ಕಂಪನಿಯು ಕಾರುಗಳ ಉತ್ಪಾದನೆಯನ್ನು ಇತ್ತೀಚೆಗೆ ಪ್ರಾರಂಭಿಸಿದ್ದರು. ಮಾರುತಿ ಕಂಪನಿಯು ತನ್ನ ಘಟಕದಲ್ಲಿ ಹೊಸ ಎಸ್-ಪ್ರೆಸ್ ಸಿಎನ್ಜಿ ಆವೃತ್ತಿಗಳ ಉತ್ಪಾದನೆಯನ್ನು ಕೂಡ ಪ್ರಾರಂಭಿಸಿದೆ.
ಭಾರತದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಹೊಸ ಎಸ್-ಪ್ರೆಸ್ಸೊ ಸಿಎನ್ಜಿ ಆವೃತ್ತಿಯನ್ನು ಇತ್ತೀಚೆಗೆ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಇದು ಮಾರುತಿ ಸುಜುಕಿ ಕಂಪನಿಯ ಆರನೇ ಸಿಎನ್ಜಿ ಕಾರು ಆಗಿದೆ. 2019ರಲ್ಲಿ ಬಿಡುಗಡೆಯಾದ ಮಾರುತಿ ಎಸ್-ಪ್ರೆಸ್ಸೊ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ.
ಎಸ್-ಪ್ರೆಸ್ಸೊ ಕಾರ್ ಅನ್ನು 1.0 ಲೀಟರಿನ ಪೆಟ್ರೋಲ್ ಎಂಜಿನ್ನೊಂದಿಗೆ ಮಾರಾಟ ಮಾಡಲಾಗುತ್ತದೆ. ಕಂಪನಿಯು ಇದೀಗ ಸಿಎನ್ಜಿ ಆವೃತ್ತಿಯಲ್ಲಿ ಎಸ್-ಪ್ರೆಸ್ಸೊ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ.
MOST READ: ಹೋಂಡಾ ಡಬ್ಲ್ಯುಆರ್-ವಿ ಫೇಸ್ಲಿಫ್ಟ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ
2020ರ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶಿಸಲಾದ ಎಸ್-ಪ್ರೆಸ್ಸೊ ಹ್ಯಾಚ್ಬ್ಯಾಕ್ ಕಾರು ಹೊಸ ಪ್ಯಾಕ್ಟರಿ-ಫಿಟ್ ಪರಿಕರಗಳನ್ನು ಒಳಗೊಂಡಿದೆ. ಇದರಲ್ಲಿ ಡೆಕಲ್ಸ್, ರೂಫ್ ಸ್ಪಾಯ್ಲರ್ ಮತ್ತು ಡೋರ್ ಪ್ಯಾನೆಲ್ಗಳು ಸೇರಿವೆ. ಮಾರುತಿ ಸುಜುಕಿ ಕಂಪನಿಯು ಎಸ್-ಪ್ರೆಸ್ಸೊ ಸಿಎನ್ಜಿ ಕಾರಿನ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳನ್ನು ಬಹಿರಂಗಪಡಿಸಿಲ್ಲ.
ಪೆಟ್ರೋಲ್ ಎಂಜಿನ್ ಕಾರಿಗಿಂತ ಸಿಎನ್ಜಿ ಕಾರಿನ ಇಂಜಿನ್ ದಕ್ಷತೆಯು ಕಡಿಮೆಯಾಗುವ ಸಾಧ್ಯತೆಗಳಿವೆ. ಸಿಎನ್ಜಿ ಆವೃತ್ತಿಯು 67 ಬಿಹೆಚ್ಪಿ ಪವರ್ ಮತ್ತು 90 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಬಹುದು. ಈ ಕಾರಿನಲ್ಲಿ 5 ಸ್ಪೀಡಿನ ಮ್ಯಾನುವಲ್ ಗೇರ್ಬಾಕ್ಸ್ ಅನ್ನು ಅಳವಡಿಸುವ ಸಾಧ್ಯತೆಗಳಿವೆ.
MOST READ: ಭಾರತದಲ್ಲಿ ಬಿಡುಗಡೆಯಾಯ್ತು ಬಹುನಿರೀಕ್ಷಿತ ಸ್ಕೋಡಾ ಕರೋಕ್ ಎಸ್ಯುವಿ
ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಸಿಎನ್ಜಿ ಆವೃತ್ತಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶಿಸಿದೆ. ಭಾರತೀಯ ಮಾರುಕಟ್ಟೆಯಲ್ಲಿ ಈ ಸಿಎನ್ಜಿ ಆವೃತ್ತಿಯನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಮಾರುತಿ ಸುಜುಕಿ ಕಂಪನಿಯು ಆಲ್ಟೋ, ಎರ್ಟಿಗಾ ಮತ್ತು ವ್ಯಾಗ್ನ್ಆರ್ ಕಾರುಗಳನ್ನು ಈಗಾಗಲೇ ಸಿಎನ್ಜಿ ಆವೃತ್ತಿಯಲ್ಲಿ ಬಿಡುಗಡೆಗೊಳಿಸಿದೆ.
ಸಾಮಾನ್ಯ ಎಸ್-ಪ್ರೆಸ್ಸೊ ಪೆಟ್ರೋಲ್ ಆವೃತ್ತಿಯಲ್ಲಿ ಇಂಟಿರಿಯರ್ನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ಗಳಿದ್ದು, ಬಾಡಿ ಕಲರ್ ಡ್ಯಾಶ್ಬೋರ್ಡ್, ಸೆಂಟರ್ ಕನ್ಸೊಲ್ನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಇನ್ಸ್ ಟ್ರೂಮೆಂಟ್ ಡಿಸ್ಪ್ಲೇ, ಟಚ್ ಸ್ಕ್ರೀನ್ ಇನ್ಪೋಟೇನ್ಮೆಂಟ್ ಸಿಸ್ಟಂ, ಸ್ಮಾರ್ಟ್ಪ್ಲೇ ಸ್ಟುಡಿಯೋ ಸಿಸ್ಟಂ,ಆ್ಯಪಲ್ ಕಾರ್ ಪ್ಲೇ/ಆಂಡ್ರಾಯ್ಡ್ ಆಟೋ, ಆರೇಂಜ್ ಕಲರ್ ಆಕ್ಸೆಂಟ್ ಸೌಲಭ್ಯವಿದೆ.
MOST READ: ಭಾರತದಲ್ಲಿ ಬಿಡುಗಡೆಯಾಯ್ತು ಅತಿ ವೇಗದ ಹೊಸ ಮರ್ಸಿಡಿಸ್ ಎಎಂಜಿ ಜಿಟಿ-ಆರ್ ಕಾರು
ಇನ್ನು ಎಸ್-ಪ್ರೆಸೊನಲ್ಲಿ ಕೀ ಲೆಸ್ ಎಂಟ್ರಿ, ಬ್ಲೂಥೂತ್ ಕನೆಕ್ಟಿವಿಟಿ, ಪವರ್ ವಿಂಡೋ, ಡ್ಯುಯಲ್ ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಪೀಡ್ ವಾರ್ನಿಂಗ್ ಸಿಸ್ಟಂ, ರೇರ್ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಹಲವು ಫೀಚರ್ಸ್ಗಳನ್ನು ನೀಡಲಾಗಿದೆ.
ಮಾರುತಿ ಎಸ್-ಪ್ರೆಸ್ಸೊ ಪೆಟ್ರೋಲ್ ಆವೃತ್ತಿಯಲ್ಲಿ ಲಭ್ಯವಿರುವ ನಾಲ್ಕು ರೂಪಾಂತರಗಳು ಸಿಎನ್ಜಿ ಆವೃತ್ತಿಯಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಸಮಾನ್ಯ ಮಾರುತಿ ಎಸ್-ಪ್ರೆಸ್ಸೊ ಪೆಟ್ರೋಲ್ ಆವೃತ್ತಿಗಿಂತ ಸಿಎನ್ಜಿ ಆವೃತ್ತಿಯು ತುಸು ದುಬಾರಿಯಾಗಿರಲಿದೆ.