ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಬಲೆನೊ

ಮಾರುತಿ ಸುಜುಕಿ ಕಂಪನಿಯ ಸರಣಿಯಲ್ಲಿ ಬಲೆನೊ ಜನಪ್ರಿಯ ಮಾದರಿಗಳಲ್ಲಿ ಒಂದಾಗಿದೆ. ಮಾರುತಿ ಸುಜುಕಿ ಬಾಲೆನೊ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಹಲವು ಎಂಜಿನ್ ಆಯ್ಕೆಗಳೊಂದಿಗೆ ಮಾರಾಟ ಮಾಡಲಾಗಿತ್ತು.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಬಲೆನೊ

ಬಿಎಸ್ 6 ನವೀಕರಣದ ನಂತರ ಪ್ರಸ್ತುತ 1.2-ಲೀಟರ್ ಪೆಟ್ರೋಲ್ ಎಂಜಿನ್ ಹೊರತುಪಡಿಸಿ ಉಳಿದೆಲ್ಲವನ್ನು ಕೈಬಿಡಲಾಯಿತು. ಇತ್ತೀಚೆಗೆ ಮಾರುತಿ ಸುಜುಕಿ ಬಲೆನೊ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಸ್ಪಾಟ್ ಟೆಸ್ಟ್ ನಡೆಸಿದೆ. ಬಲೆನೊ ಕಾರು ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಟೀಂ ಬಿಹೆಚ್‍ಪಿ ಸ್ಪೈ ಚಿತ್ರಗಳು ಬಹಿರಂಗಪಡಿಸಿದೆ. ಸ್ಪೈ ಚಿತ್ರ್ರದಲ್ಲಿ ಹೊಸ ಅಲಾಯ್ ವ್ಹೀಲ್ ಬಹಿರಂಗಪಡಿಸಿದೆ. ಇದನ್ನು ಈ ಮೊದಲು ಬಲೆನೊ ಕಾರಿನಲ್ಲಿ ನೋಡಲಾಗಿಲ್ಲ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಬಲೆನೊ

ಮಾರುತಿ ಸುಜುಕಿ ಎಂಜಿನ್ ಅನ್ನು ಪರೀಕ್ಷಿಸಲಾಗುತ್ತದೆ ಎಂಬ ಊಹಾಪೋಹಗಳಿದೆ. ಸ್ಥಗಿತಗೊಂಡ 1.5-ಲೀಟರ್ ಡಿಡಿಎಸ್ ಡೀಸೆಲ್ ಎಂಜಿನ್ ಅನ್ನು ಸ್ಪಾಟ್ ಟೆಸ್ಟ್ ನಡೆಸಲಾಗಿದೆ ಎಂದು ವರದಿಗಳಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಬಲೆನೊ

ಬಿಎಸ್-6 ಮಾಲಿನ್ಯ ನಿಯಮ ಜಾರಿಯಾಗುವಾಗ ಮಾರುತಿ ಸುಜುಕಿ ಕಂಪನಿಯು ಡೀಸೆಲ್ ಎಂಜಿನ್ ಅನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಇದೀಗ ಡೀಸೆಲ್ ಎಂಜಿನ್ ಬೇಡಿಕೆ ಹೆಚ್ಚಾಗಿರುವುದರಿಂದ ಮತ್ತೆ ತರಬಹುದು ಎಂದು ನಿರೀಕ್ಷಿಸುತ್ತೇವೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಬಲೆನೊ

ಇದರಿಂದ ಕಂಪನಿಯು ತನ್ನ ಬಿಎಸ್-6 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಪರೀಕ್ಷಿಸುತ್ತಿರಬಹುದು. ಹಿಂದಿನ ಬಿಎಸ್-4 ಸಿಯಾಜ್ ಸೆಡಾನ್ ಮತ್ತು ಎರ್ಟಿಗಾ ಎಂಪಿವಿಯಲ್ಲಿ ಇದೇ ಎಂಜಿನ್ ಅನ್ನು ಅಳವಡಿಸಲಾಗಿತ್ತು.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಬಲೆನೊ

ಈ 1.5-ಲೀಟರ್ ಡೀಸೆಲ್ ಎಂಜಿನ್ 4000 ಆರ್‌ಪಿಎಂನಲ್ಲಿ 95 ಬಿಹೆಚ್‍ಪಿ ಪವರ್ ಮತ್ತು 1500 ಆರ್‌ಪಿಎಂ ಮತ್ತು 2500 ಆರ್‌ಪಿಎಂನಲ್ಲಿ 225 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಸ್ಟ್ಯಾಂಡರ್ಡ್ ಆಗಿ ಜೋಡಿಸಲಾಗಿದೆ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಬಲೆನೊ

ಬಲೆನೊ ಕಾರಿನಲ್ಲಿ ಎರಡು 1.2-ಲೀಟರ್ ಪೆಟ್ರೋಲ್ ಎಂಜಿನ್‌ಗಳನ್ನು ನೀಡಲಾಗುತ್ತದೆ, ಅದು ವಿಭಿನ್ನ ತಂತ್ರಜ್ಞಾನವನ್ನು ಹೊಂದಿರುತ್ತದೆ ಮತ್ತು ವಿಭಿನ್ನ ಪವರ್ ಉತ್ಪಾದನೆಗಳನ್ನು ಸಹ ನೀಡುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಬಲೆನೊ

1.2-ಲೀಟರ್ ವಿವಿಟಿ ಎಂಜಿನ್ 82 ಬಿಹೆಚ್‌ಪಿ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇನ್ನು ಟಾಪ್-ಸ್ಪೆಕ್ 1.2-ಲೀಟರ್ ಎಂಜಿನ್ ಡ್ಯುಯಲ್ ವಿವಿಟಿ ಮತ್ತು ಮೈಲ್ಡ್-ಹೈಬ್ರಿಡ್ ತಂತ್ರಜ್ಞಾನವನ್ನು ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಬಲೆನೊ

ಇದು 89 ಬಿಹೆಚ್‌ಪಿ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಅದರ ಸಾಲಿನಲ್ಲಿರುವ ಇತರ ಎಂಜಿನ್‌ಗಿಂತ 7 ಬಿಹೆಚ್‌ಪಿ ಹೆಚ್ಚಾಗಿದೆ. ಹೆಚ್ಚುವರಿಯಾಗಿ ಹ್ಯಾಚ್‌ಬ್ಯಾಕ್‌ನಲ್ಲಿನ ಮೈಲ್ಡ್-ಹೈಬ್ರಿಡ್ ಸಿಸ್ಟಂನಿಂದಾಗಿ ಇದು ಉತ್ತಮ ಮೈಲೇಜ್ ಅನ್ನು ಸಹ ನೀಡುತ್ತದೆ..

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಬಲೆನೊ

ಜನಪ್ರಿಯ ಮಾರುತಿ ಸುಜುಕಿ ಬಲೆನೊ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಎಲೈಟ್ ಐ20, ಟಾಟಾ ಆಲ್ಟ್ರೊಜ್, ಫೋಕ್ಸ್‌ವ್ಯಾಗನ್ ಪೊಲೊ ಮತ್ತು ಹೋಂಡಾ ಜಾಝ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Maruti Suzuki Baleno Spied Testing With Alloy Wheels & Possible New Engine. Read In Kannada.
Story first published: Friday, October 9, 2020, 12:11 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X