ಕಾರು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಮಾರುತಿ ಸುಜುಕಿ ಬಲೆನೊ ಹ್ಯಾಚ್‌ಬ್ಯಾಕ್
ಕೈಗೆಟುಕುವ ಬೆಲೆ ಮತ್ತು ಕಡಿಮೆ ನಿರ್ವಹಣೆಯಿಂದಾಗಿ ಭಾರತದಲ್ಲಿ ಬಿಡುಗಡೆಯಾಗಿರುವ ಬಹುತೇಕ ಮಾರುತಿ ಸುಜುಕಿ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿ ಜನಪ್ರಿಯತೆಯೊಂದಿಗೆ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ಇದೀಗ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಾದ ಬಲೆನೊ ಕಾರು ಸಹ ಮಾರಾಟದಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ಸಾಧಿಸಿದೆ.

2015ರ ಅಕ್ಟೋಬರ್‌ನಲ್ಲಿ ಮೊದಲ ಬಾರಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದ ಬಲೆನೊ ಹ್ಯಾಚ್‌ಬ್ಯಾಕ್ ಕಾರು ಮಾದರಿಯು ಐದು ವರ್ಷಗಳ ಅವಧಿಯಲ್ಲಿ ನೀರಿಕ್ಷೆಗೂ ಮಿರಿ ಗ್ರಾಹಕರನ್ನು ಸೆಳೆದಿದ್ದು, ಸದ್ಯ ಭಾರತದಲ್ಲಿ ಮಾರಾಟವಾಗುತ್ತಿರುವ ಟಾಪ್ 10 ಬೆಸ್ಟ್ ಕಾರುಗಳಲ್ಲಿ 5ನೇ ಸ್ಥಾನದಲ್ಲಿದೆ. ಮಾರುತಿ ಸುಜುಕಿ ನಿರ್ಮಾಣದ ಮೊಲದ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಾದ ಬಲೆನೊ ಕಾರು ಇದುವರೆಗೆ ಬರೋಬ್ಬರಿ 8 ಲಕ್ಷ ಯುನಿಟ್ ಮಾರಾಟವಾಗಿದ್ದು, ಅತಿ ಕಡಿಮೆ ಅವಧಿಯಲ್ಲಿ ಗರಿಷ್ಠ ಪ್ರಮಾಣದಲ್ಲಿ ಮಾರಾಟವಾದ ಕಾರು ಮಾದರಿ ಇದಾಗಿದೆ.

ಭಾರತದಲ್ಲಿ ನೆಕ್ಸಾ ಪ್ರೀಮಿಯಂ ಕಾರು ಡೀಲರ್ಸ್ ಮೂಲಕ ಮಾರಾಟಗೊಳ್ಳುತ್ತಿರುವ ಬಲೆನೊ ಕಾರು ಬೆಸ್ಟ್ ಸೆಲ್ಲಿಂಗ್ ಹ್ಯಾಚ್‌ಬ್ಯಾಕ್‌ಗಳಲ್ಲಿ ಅಗ್ರಸ್ಥಾನದಲ್ಲಿದ್ದು, ಭಾರತದಲ್ಲಿ ಅಷ್ಟೇ ಅಲ್ಲದೇ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಯುರೋಪ್ ಮತ್ತು ಲ್ಯಾಟಿನ್ ಅಮೆರಿಕದ ಪ್ರಮುಖ ರಾಷ್ಟ್ರಗಳಲ್ಲೂ ಬಲೆನೊ ಯಶಸ್ವಿಯಾಗಿ ಮಾರಾಟವಾಗುತ್ತಿದೆ.

ಇನ್ನೊಂದು ವಿಶೇಷವೆಂದರೆ, ಮೆಡ್ ಇನ್ ಇಂಡಿಯಾ ಬಲೆನೊ ಕಾರು ಮೊದಲ ಬಾರಿಗೆ ಜಪಾನ್ ಮಾರುಕಟ್ಟೆಯಲ್ಲಿ ಮಾರಾಟವಾದ ಮೊದಲ ಹ್ಯಾಚ್‌ಬ್ಯಾಕ್ ಕಾರು ಮಾದರಿ ಎಂಬ ಹೆಗ್ಗಳಿಕೆ ಹೊಂದಿದ್ದು, ಇತ್ತೀಚೆಗೆ ಈ ಕಾರನ್ನು ಕೆಲವು ತಾಂತ್ರಿಕ ಕಾರಣಗಳಿಗಾಗಿ ಜಪಾನ್ ಮಾರುಕಟ್ಟೆಯಲ್ಲಿ ಸ್ಥಗಿತಗೊಳಿಸಲಾಗಿದೆ.

ಬಲೆನೊ ಕಾರು ಪ್ರೀಮಿಯಂ ವಿನ್ಯಾಸಗಳಿಂದಾಗಿ ಯುವ ಗ್ರಾಹಕರ ನೆಚ್ಚಿನ ಆಯ್ಕೆಯಾಗಿ ಹೊರಹೊಮ್ಮಿದ್ದು, 2018ರ ಏಪ್ರಿಲ್ ತಿಂಗಳ ಅವಧಿಯಲ್ಲಿ ಗರಿಷ್ಠ 20 ಸಾವಿರ ಯುನಿಟ್ ಮಾರಾಟವಾದ ಹೆಗ್ಗಳಿಕೆ ಈ ಕಾರಿಗಿದೆ. ಸದ್ಯ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿರುವ ಬಲೆನೊ ಕಾರು ಮಾದರಿಯು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.

ಬಲೆನೊ ಎಂಜಿನ್ ಮತ್ತು ಪರ್ಫಾಮೆನ್ಸ್
ಮಾರುತಿ ಸುಜುಕಿ ಕಂಪನಿಯು ಸದ್ಯ ತನ್ನ ಪ್ರಮುಖ ಕಾರು ಮಾದರಿಗಳಲ್ಲಿ ಈ ಹಿಂದಿನ 1.3-ಲೀಟರ್ ಡೀಸೆಲ್ ಎಂಜಿನ್ ಮಾರಾಟವನ್ನು ಸ್ಥಗಿತಗೊಳಿಸಿದ್ದು, ಬಹುತೇತಕ ಕಾರು ಮಾದರಿಗಳನ್ನು ಪೆಟ್ರೋಲ್, ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಪ್ರೇರಿತ ಪೆಟ್ರೋಲ್ ಮತ್ತು ಸಿಎನ್‌ಜಿ ಆವೃತ್ತಿಗಳಲ್ಲಿ ಮಾತ್ರವೇ ಮಾರಾಟ ಮಾಡುತ್ತಿರುವುದು ಭಾರೀ ಬದಲಾವಣೆಗೆ ಕಾರಣವಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಮಾರುತಿ ಸುಜುಕಿಯು ಸದ್ಯಕ್ಕೆ ತನ್ನ ಪ್ರಮುಖ ಕಾರು ಮಾದರಿಗಳಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 800ಸಿಸಿ, 1.0-ಲೀಟರ್, 1.2-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಕಾರು ಮಾದರಿಗಳನ್ನು ಮಾತ್ರವೇ ಮಾರಾಟ ಮಾಡುತ್ತಿದೆ.

ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ಫೋರ್ ಸಿಲಿಂಡರ್ ಕೆ12ಸಿ ಡ್ಯುಯಲ್‌ಜೆಟ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರುವ ಬಲೆನೊ ಕಾರು ಮಾದರಿಯು 89-ಬಿಎಚ್‌ಪಿ ಮತ್ತು 113-ಎನ್ಎಂ ಟಾರ್ಕ್‌ನೊಂದಿಗೆ ಗರಿಷ್ಠ 23.87 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಸೆಗ್ಮೆಂಟ್ ಫಸ್ಟ್ ಫೀಚರ್ಸ್ ಹೊಂದಿರುವ ಹೊಸ ಬಲೆನೊ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.70 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.03 ಲಕ್ಷ ಬೆಲೆ ಹೊಂದಿದ್ದು, ಹ್ಯುಂಡೈ ಐ20 ಮತ್ತು ಟಾಟಾ ಆಲ್‌ಟ್ರೊಜ್ ಮಾದರಿಗಳಿಗೆ ಅತ್ಯುತ್ತಮ ಪೈಪೋಟಿ ನೀಡುತ್ತಿದೆ.


Click it and Unblock the Notifications