Just In
- 10 hrs ago
ಬಿಡುಗಡೆಗೆ ಸಜ್ಜಾದ ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ ಬೈಕುಗಳು
- 10 hrs ago
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಫೋರ್ಸ್ ನ್ಯೂ ಜನರೇಷನ್ ಗೂರ್ಖಾ
- 10 hrs ago
ಸೀಮನ್ಸ್ ಕಂಪನಿಯ ಜೊತೆಗೂಡಿ ಆಧುನಿಕ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕವನ್ನು ಅಭಿವೃದ್ದಿಪಡಿಸಲಿದೆ ಓಲಾ
- 11 hrs ago
ಹೊಸ ವಿನ್ಯಾಸದ ಡ್ಯುಯಲ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಒಕಿನಾವ
Don't Miss!
- News
ಆನ್ಲೈನ್ ಮೂಲಕ ವಿದ್ಯಾರ್ಥಿ ಬಸ್ ಪಾಸ್ ಪಡೆಯಿರಿ:ಬಿಎಂಟಿಸಿ
- Lifestyle
ಶುಕ್ರವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್
- Sports
ಐಎಸ್ಎಲ್: ಈಸ್ಟ್ ಬೆಂಗಾಲ್ ಅಜೇಯ ನಡೆಗೆ ಬೆಸ್ಟ್ ಮುಂಬೈ ಸವಾಲು
- Finance
ಬಜೆಟ್ 2021: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಜನವರಿ 30ರಂದು ಸರ್ವ ಪಕ್ಷಗಳ ಸಭೆ
- Movies
ಬಾಂಬೆ ಹೈಕೋರ್ಟ್ ನಲ್ಲಿ ಹಿನ್ನಡೆ: ಸಂಕಷ್ಟದಲ್ಲಿ ಸೋನು ಸೂದ್
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಬಲೆನೊ ಆರ್‌ಎಸ್
ಮಾರುತಿ ಸುಜುಕಿ ಕಂಪನಿಯು ಸದ್ಯ ತನ್ನ ಪ್ರಮುಖ ಕಾರು ಮಾದರಿಗಳಲ್ಲಿ ಡೀಸೆಲ್ ಎಂಜಿನ್ ಮಾರಾಟವನ್ನು ಸ್ಥಗಿತಗೊಳಿಸಿದ್ದು, ಬಹುತೇತಕ ಕಾರು ಮಾದರಿಗಳನ್ನು ಪೆಟ್ರೋಲ್, ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಪ್ರೇರಿತ ಪೆಟ್ರೋಲ್ ಮತ್ತು ಸಿಎನ್‌ಜಿ ಆವೃತ್ತಿಗಳಲ್ಲಿ ಮಾತ್ರವೇ ಮಾರಾಟ ಮಾಡುತ್ತಿರುವುದು ಭಾರೀ ಬದಲಾವಣೆಗೆ ಕಾರಣವಾಗಿದೆ.

ಬಿಎಸ್-6 ಜಾರಿ ನಂತರ ಹಲವು ಕಾರು ಮಾದರಿಗಳ ಮಾರಾಟವು ಸ್ಥಗಿತಗೊಂಡಿದ್ದು, ಮಾರುತಿ ಸುಜುಕಿ ಕೂಡಾ ತನ್ನ ಪ್ರಮುಖ ಡೀಸೆಲ್ ಕಾರು ಮಾದರಿಗಳ ಮಾರಾಟ ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಹೀಗಾಗಿ ಸದ್ಯ ಪೆಟ್ರೋಲ್, ಸ್ಮಾರ್ಟ್ ಹೈಬ್ರಿಡ್ ಪೆಟ್ರೋಲ್ ಮತ್ತು ಸಿಎನ್‌ಜಿ ಕಾರುಗಳನ್ನು ಮಾತ್ರವೇ ಮಾರಾಟ ಮಾಡುತ್ತಿದ್ದು, ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದ್ದ ಬಲೆನೊ ಆರ್‌ಎಸ್ ಕೂಡಾ ಇದೀಗ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿಲ್ಲ.

ಮಾರುತಿ ಸುಜುಕಿಯು ಸದ್ಯಕ್ಕೆ ತನ್ನ ಪ್ರಮುಖ ಕಾರು ಮಾದರಿಗಳಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 800ಸಿಸಿ, 1.0-ಲೀಟರ್, 1.2-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಕಾರು ಮಾದರಿಗಳನ್ನು ಮಾತ್ರವೇ ಮಾರಾಟ ಮಾಡುತ್ತಿದೆ.

ಮುಂಬರುವ ದಿನಗಳಲ್ಲಿ ಹ್ಯಾಚ್‌ಬ್ಯಾಕ್ ಕಾರುಗಳನ್ನು ಹೊರತುಪಡಿಸಿ ಸೆಡಾನ್, ಎಸ್‌ಯುವಿ ಮತ್ತು ಎಂಪಿವಿ ಕಾರು ಮಾದರಿಗಳಲ್ಲಿ ಮಾತ್ರವೇ ಹೊಸ ತಂತ್ರಜ್ಞಾನ ಪ್ರೇರಿತ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಬಿಡುಗಡೆಗೊಳಿಸಬಹುದಾದ ಸಾಧ್ಯತೆಗಳಿವೆ ಎನ್ನಲಾಗಿದೆ.

ಆದರೆ ಈ ಹಿಂದೆ 1.0-ಲೀಟರ್ ಬೂಸ್ಟರ್ ಜೆಟ್ ಪೆಟ್ರೋಲ್ ಎಂಜಿನ್ ಹೊಂದಿದ್ದ ಬಲೆನೊ ಆರ್‌ಎಸ್ ಕಾರು ಮಾದರಿಯನ್ನು ಬಿಎಸ್-6 ಜಾರಿ ನಂತರವೂ ಉನ್ನತೀಕರಿಸದ ಮಾರುತಿ ಸುಜುಕಿಯು ಬೂಸ್ಟರ್ ಜೆಟ್ ತೆಗೆದು ಹಾಕಿ ಬದಲಾಗಿ ಹೊಸದಾಗಿ ಅಭಿವೃದ್ದಿಗೊಳಿಸಲಾದ 1.2-ಲೀಟರ್ ಡ್ಯುಯಲ್ ಜೆಟ್ ಪೆಟ್ರೋಲ್ ಮಾದರಿಯೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಹೊಸದಾಗಿ ಬಿಡುಗಡೆ ಮಾಡಿರುವ 1.2-ಲೀಟರ್ ಡ್ಯುಯಲ್ ಜೆಟ್ ಮಾದರಿಯು 48-ವೋಲ್ಟ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಣೆ ಹೊಂದಿದ್ದು, ಇದೇ ಕಾರು ಇದೀಗ ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿರುವುದು ಕಂಡುಬಂದಿದೆ.

ಇನ್ನು ಕೆಲವು ಮಾಹಿತಿಗಳ ಪ್ರಕಾರ, ಈ ಹಿಂದಿನ 1.0-ಲೀಟರ್ ಬೂಸ್ಟರ್ ಜೆಟ್ ಪೆಟ್ರೋಲ್ ಮಾದರಿಯನ್ನೇ ಬಿಎಸ್-6 ಎಂಜಿನ್ ಉನ್ನತೀಕರಿಸಿ ಬಿಡುಗಡೆ ಮಾಡಲಿದೆ ಎಂದು ಹೇಳಲಾಗಿದ್ದು, 1.2-ಲೀಟರ್ ಡ್ಯುಯಲ್ ಜೆಟ್ ಮಾದರಿಯು ಸಾಮಾನ್ಯ ಬಲೆನೊದಲ್ಲಿ ಮತ್ತು 1.0-ಲೀಟರ್ ಬೂಸ್ಟರ್ ಜೆಟ್ ಮಾದರಿಯು ಹೈ ಎಂಡ್ ಆವೃತ್ತಿಯಾದ ಬಲೆನೊ ಆರ್‌ಎಸ್ ಜೋಡಣೆ ಮಾಡಬಹುದು ಎನ್ನಲಾಗಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಆದರೆ ಹೊಸ ಬಲೆನೊ ಆರ್‌ಎಸ್ ಕಾರಿನ ಎಂಜಿನ್ ಕುರಿತಾಗಿ ಯಾವುದೇ ಮಾಹಿತಿಯಿಲ್ಲವಾದರೂ ಹೊಸ ಕಾರು ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗುವ ಸುಳಿವು ನೀಡಿದ್ದು, ಹೊಸ ಕಾರು ಸಾಮಾನ್ಯ ಬಲೆನೊ ಕಾರಿಗಿಂತಲೂ ಹೆಚ್ಚು ಪರ್ಫಾಮೆನ್ಸ್ ಮತ್ತು ಬಲಿಷ್ಠ ತಾಂತ್ರಿಕ ಸೌಲಭ್ಯಗಳೊಂದಿಗೆ ದುಬಾರಿ ಬೆಲೆ ಹೊಂದಿರಲಿದೆ.