ಎಲೆಕ್ಟ್ರಿಕ್ ವಾಹನಗಳ ಭವಿಷ್ಯ ಗ್ರಾಹಕರ ಕೈಯಲ್ಲಿ ಎಂದ ಖ್ಯಾತ ಕಾರು ತಯಾರಕ ಕಂಪನಿ

ಕಳೆದ ಕೆಲವು ತಿಂಗಳುಗಳಿಂದ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದವು. ಆದರೆ ಕೋವಿಡ್ 19ನಿಂದಾಗಿ ಎಲ್ಲಾ ರೀತಿಯ ವಾಹನ ಮಾರಾಟವು ಕುಸಿತಗೊಂಡಿತು. ಕೋವಿಡ್ 19 ಎಲೆಕ್ಟ್ರಿಕ್ ವಾಹನಗಳ ಭವಿಷ್ಯದ ಮೇಲೆ ಯಾವುದೇ ಪರಿಣಾಮವನ್ನುಂಟು ಮಾಡುವುದಿಲ್ಲವೆಂದು ಎಂದು ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಅಭಿಪ್ರಾಯಪಟ್ಟಿದೆ.

ಎಲೆಕ್ಟ್ರಿಕ್ ವಾಹನಗಳ ಭವಿಷ್ಯ ಗ್ರಾಹಕರ ಕೈಯಲ್ಲಿ ಎಂದ ಖ್ಯಾತ ಕಾರು ತಯಾರಕ ಕಂಪನಿ

ಇತ್ತೀಚೆಗೆ ಈ ಬಗ್ಗೆ ಮಾತನಾಡಿದ್ದ ಮಾರುತಿ ಸುಜುಕಿ ಕಂಪನಿಯ ಅಧ್ಯಕ್ಷರಾದ ಆರ್.ಸಿ.ಭಾರ್ಗವರವರು, ಎಲೆಕ್ಟ್ರಿಕ್ ವಾಹನಗಳ ಬೇಡಿಕೆಯನ್ನು ಹೆಚ್ಕು ಮಾಡುವುದು ಅಥವಾ ಕಡಿಮೆ ಮಾಡುವುದು ಗ್ರಾಹಕರು. ಕೈಗೆಟಕುವ ಬೆಲೆ, ಬ್ಯಾಟರಿ ಮುಂತಾದ ಕಾರಣಗಳಿಂದಾಗಿ ಗ್ರಾಹಕರು ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸಲಿದ್ದಾರೆ ಎಂದು ಹೇಳಿದ್ದರು.

ಎಲೆಕ್ಟ್ರಿಕ್ ವಾಹನಗಳ ಭವಿಷ್ಯ ಗ್ರಾಹಕರ ಕೈಯಲ್ಲಿ ಎಂದ ಖ್ಯಾತ ಕಾರು ತಯಾರಕ ಕಂಪನಿ

ಭಾರತದ ಬಹುತೇಕ ಪ್ರಮುಖ ಕಾರು ತಯಾರಕ ಕಂಪನಿಗಳು ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯನ್ನು ಪ್ರವೇಶಿಸಿದ್ದು, ಉತ್ತಮ ಪ್ರತಿಕ್ರಿಯೆಯನ್ನು ಪಡೆಯುತ್ತಿವೆ. ಹ್ಯುಂಡೈ ಕಂಪನಿಯ ಕೋನಾ ಇವಿ, ಎಂಜಿ ಮೋಟಾರ್ ಝಡ್‌ಎಸ್‌ಇವಿ ಹಾಗೂ ಟಾಟಾ ಮೋಟಾರ್ಸ್ ನೆಕ್ಸಾನ್ ಇವಿಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿದೆ.

MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ಎಲೆಕ್ಟ್ರಿಕ್ ವಾಹನಗಳ ಭವಿಷ್ಯ ಗ್ರಾಹಕರ ಕೈಯಲ್ಲಿ ಎಂದ ಖ್ಯಾತ ಕಾರು ತಯಾರಕ ಕಂಪನಿ

ಮಾರುತಿ ಸುಜುಕಿ ಕಂಪನಿಯು ಇನ್ನೂ ಯಾವುದೇ ಎಲೆಕ್ಟ್ರಿಕ್ ವಾಹನವನ್ನು ಬಿಡುಗಡೆಗೊಳಿಸಿಲ್ಲ. ಆದರೆ ಕಂಪನಿಯು ಎಲೆಕ್ಟ್ರಿಕ್ ವಾಹನವನ್ನು ಬಿಡುಗಡೆಗೊಳಿಸಲು ತಯಾರಿ ನಡೆಸುತ್ತಿದೆ. ಕಂಪನಿಯು 2020ರ ಆಟೋ ಎಕ್ಸ್‌ಪೋದಲ್ಲಿ ಫ್ಯೂಟ್ರೋ-ಇ ಎಲೆಕ್ಟ್ರಿಕ್ ಕಾನ್ಸೆಪ್ಟ್ ಕಾರ್ ಅನ್ನು ಪರಿಚಯಿಸಿತ್ತು. ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ವ್ಯಾಗನ್ಆರ್ ಎಲೆಕ್ಟ್ರಿಕ್ ಕಾರ್ ಅನ್ನು ಬಿಡುಗಡೆಗೊಳಿಸುವ

ನಿರೀಕ್ಷೆಗಳಿವೆ.

ಎಲೆಕ್ಟ್ರಿಕ್ ವಾಹನಗಳ ಭವಿಷ್ಯ ಗ್ರಾಹಕರ ಕೈಯಲ್ಲಿ ಎಂದ ಖ್ಯಾತ ಕಾರು ತಯಾರಕ ಕಂಪನಿ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾರುತಿ ಸುಜುಕಿ ಕಂಪನಿಯ ಅಧ್ಯಕ್ಷರು ಕಂಪನಿಗಳು ಸಿದ್ಧತೆಗಳನ್ನು ಮಾಡಿಕೊಳ್ಳಬಹುದು, ಸರ್ಕಾರವು ರಿಯಾಯಿತಿಯನ್ನು ನೀಡಬಹುದು. ಆದರೆ ಗ್ರಾಹಕರು ಇವುಗಳನ್ನು ಖರೀದಿಸುತ್ತಾರೆಯೇ ಇಲ್ಲವೇ ಎಂಬುದು ಪ್ರಶ್ನೆಯಾಗಿದೆ. ಈ ಕಾರಣಕ್ಕೆ ಕೋವಿಡ್ 19 ಎಲೆಕ್ಟ್ರಿಕ್ ವಾಹನಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದು ಹೇಳಿದರು.

MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಎಲೆಕ್ಟ್ರಿಕ್ ವಾಹನಗಳ ಭವಿಷ್ಯ ಗ್ರಾಹಕರ ಕೈಯಲ್ಲಿ ಎಂದ ಖ್ಯಾತ ಕಾರು ತಯಾರಕ ಕಂಪನಿ

ಮಾರುತಿ ಸುಜುಕಿಯ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರ್ ಅನ್ನು ಕ್ಯಾಬ್ ಚಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸುವ ಸಾಧ್ಯತೆಗಳಿವೆ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಭವಿಷ್ಯವನ್ನು ಗ್ರಾಹಕರು ನಿರ್ಧರಿಸುತ್ತಾರೆ ಎಂದು ಮಾರುತಿ ಸುಜುಕಿ ಕಂಪನಿಯ ಅಧಿಕಾರಿಗಳು ನಂಬಿದ್ದಾರೆ. ಆರಂಭದಲ್ಲಿ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರ್ ಅನ್ನು ಖಾಸಗಿ ಗ್ರಾಹಕರಿಗೆ ಮಾರಾಟ ಮಾಡಲಾಗುವುದಿಲ್ಲ.

ಎಲೆಕ್ಟ್ರಿಕ್ ವಾಹನಗಳ ಭವಿಷ್ಯ ಗ್ರಾಹಕರ ಕೈಯಲ್ಲಿ ಎಂದ ಖ್ಯಾತ ಕಾರು ತಯಾರಕ ಕಂಪನಿ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ದೊಡ್ಡ ಸಮಸ್ಯೆ ಎಂದರೆ ಚಾರ್ಜಿಂಗ್ ಮೂಲಸೌಕರ್ಯ. ಎಲೆಕ್ಟ್ರಿಕ್ ವಾಹನಗಳು ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟ ಮಾಡುವ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನ ಹಾಗೂ ಚಾರ್ಜರ್‌ಗಳ ಖರೀದಿಯ ಮೇಲೆ ಹೆಚ್ಚು ರಿಯಾಯಿತಿಯನ್ನು ನೀಡುತ್ತಿವೆ.

Most Read Articles

Kannada
English summary
Maruti Suzuki Boss says demand for electric vehicles to depend on customers. Read in Kannada.
Story first published: Saturday, June 6, 2020, 16:29 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X