ಕೋವಿಡ್ 19: 10 ಲಕ್ಷ ಮಾಸ್ಕ್ ಉತ್ಪಾದನೆಗೆ ಚಾಲನೆ ನೀಡಿದ ಕೃಷ್ಣಾ ಮಾರುತಿ
ಮಾರುತಿ ಸುಜುಕಿ ಕಂಪನಿಯ ಸಹಭಾಗಿತ್ವದ ಸಂಸ್ಥೆಯಾದ ಕೃಷ್ಣಾ ಮಾರುತಿಯು ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಹರಿಯಾಣ ಸರ್ಕಾರದ ಕೈಜೋಡಿಸಿದ್ದು, ಉಚಿತವಾಗಿ 10 ಲಕ್ಷ ಮಾಸ್ಕ್‌ಗಳನ್ನು ಉತ್ಪಾದನೆ ಮಾಡಿ ವಿತರಣೆಗೆ ಚಾಲನೆ ನೀಡಿದೆ.

ಕಾರು ಸೀಟ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕೃಷ್ಣಾ ಮಾರುತಿಯು ಮಾರುತಿ ಸುಜುಕಿ ಕಂಪನಿಯ ಸಹಭಾಗಿತ್ವದ ಸಂಸ್ಥೆಯಾಗಿದ್ದು, ಕರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಮಾಸ್ಕ್ ಉತ್ಪಾದನೆ ಮಾಡಿಕೊಡುವುದಾಗಿ ಹೇಳಿತ್ತು. ಇದೀಗ ಮಾಸ್ಕ್ ಉತ್ಪಾದನೆಗೆ ಚಾಲನೆ ನೀಡಿರುವುದಲ್ಲದೆ ಸುಮಾರು 2 ಲಕ್ಷ ಮಾಸ್ಕ್‌ಗಳನ್ನು ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ವಿತರಣೆ ಮಾಡಿದೆ. ಇನ್ನುಳಿದ ಮಾಸ್ಕ್‌ಗಳನ್ನು ಸದ್ಯ ಉತ್ಪಾದನೆ ಪೂರ್ಣಗೊಳಿಸುತ್ತಿದ್ದು, ದಿನಂಪ್ರತಿ 50 ಸಾವಿರ ಮಾಸ್ಕ್‌ಗಳನ್ನು ಉತ್ಪಾದನೆ ಮಾಡಲಾಗುತ್ತಿದೆ.

ಇದಲ್ಲದೆ ಅಗತ್ಯ ಜನರಿಗೆ ಸ್ಯಾಟಿಟೈಜರ್ ಮತ್ತು ಮಾಸ್ಕ್‌ಗಳನ್ನು ವಿತರಣೆ ಮಾಡುತ್ತಿರುವ ಮಾರುತಿ ಸುಜುಕಿ ಕಂಪನಿಯು ಸಹ ಬಡವರ ಹಸಿವುವನ್ನು ನೀಗಿಸುತ್ತಿರುವ ಸಾಕಷ್ಟು ಮೆಚ್ಚುಗೆ ಕಾರಣವಾಗಿದೆ.
MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಧನಸಹಾಯ ಮತ್ತು ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿವೆ.

ಕರೋನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದ್ದು, ಕರೋನಾ ವಿರುದ್ಧ ಹೋರಾಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಣಿಗೆ ಸಂಗ್ರಹ ಅಭಿಯಾನವನ್ನು ಕೈಗೊಂಡಿವೆ.
MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧದ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬುತ್ತಿದ್ದಾರೆ.

ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಯ ಜೊತೆಗೆ ಧನಸಹಾಯವನ್ನು ಕೂಡಾ ಮಾಡುತ್ತಿವೆ.
MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಇದರಲ್ಲಿ ಮಾರುತಿ ಸುಜುಕಿ ಕಂಪನಿಯು ಸಹ ಪ್ರಮುಖವಾಗಿದ್ದು, ತನ್ನ ಸಹಭಾಗಿತ್ವದ ಸಂಸ್ಥೆಗಳ ಜೊತೆಗೂಡಿ ವೈದ್ಯಕೀಯ ಉಪಕರಣಗಳ ಜೊತೆಗೆ ಸಾಮಾಜಿಕ ಸೇವೆಯನ್ನು ನಿರ್ವಹಣೆ ಮಾಡುತ್ತಿದೆ.

ದೇಶದ ವಿವಿಧ ಭಾಗದಲ್ಲಿರುವ 3 ಕಾರು ಉತ್ಪಾದನಾ ಘಟಕಗಳಲ್ಲೂ ಆಗ್ವಾ ಹೆಲ್ತ್ ಕೇರ್ ಸಂಸ್ಥೆಯ ಸಹಯೋಗದೊಂದಿಗೆ ವೆಂಟಿಲೆಟರ್‌ಗಳನ್ನು ನಿರ್ಮಾಣ ಮಾಡುತ್ತಿರುವ ಮಾರುತಿ ಸುಜುಕಿ ಕಂಪನಿಯು ಪ್ರತಿ ತಿಂಗಳು 10 ಸಾವಿರ ಯುನಿಟ್ ಉತ್ಪಾದನೆ ಮಾಡುವುದಾಗಿ ಘೋಷಣೆ ಮಾಡಿದೆ.
MOST READ: ಲಾಕ್‌ಡೌನ್‌ನಿಂದ ಸಂಕಷ್ಟ: ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5,000..!

ಹಾಗೆಯೇ ಮಾರುತಿ ಸುಜುಕಿ ಕಂಪನಿಯ ಮತ್ತೊಂದು ಸಹಭಾಗಿತ್ವದ ಸಂಸ್ಥೆಯಾದ ಭಾರತ್ ಸೀಟ್ ಲಿಮಿಟೆಡ್ ಕಂಪನಿಯು ಸಹ ವೈದ್ಯಕೀಯ ಸೇವೆಗಳಿಗೆ ಬಳಕೆ ಮಾಡುವ ಪ್ರೋಕ್ಟೆಕ್ಟಿವ್ ಕ್ಲಾಥ್‌ಗಳನ್ನು ಸಿದ್ದಪಡಿಸಿ ಸರ್ಕಾರಕ್ಕೆ ಪೂರೈಕೆ ಮಾಡಲು ಸಿದ್ದವಾಗಿದೆ.


Click it and Unblock the Notifications