ಬಿಎಸ್-6 ಎಫೆಕ್ಟ್- ಸ್ವಿಫ್ಟ್ ಡೀಸೆಲ್ ವರ್ಷನ್ ಸ್ಥಗಿತಗೊಳಿಸಿದ ಮಾರುತಿ ಸುಜುಕಿ

ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿರುವ ಬಿಎಸ್-6 ನಿಯಮ ಅನ್ವಯ ಮಾರುತಿ ಸುಜುಕಿ ಕಂಪನಿಯು ತನ್ನ ಹೊಸ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆ ಪರಿಚಯಿಸಿದ್ದು, ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಆವೃತ್ತಿಯಲ್ಲಿನ ಡೀಸೆಲ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಲಾಗಿದೆ.

ಬಿಎಸ್-6 ಎಫೆಕ್ಟ್- ಸ್ವಿಫ್ಟ್ ಡೀಸೆಲ್ ವರ್ಷನ್ ಸ್ಥಗಿತಗೊಳಿಸಿದ ಮಾರುತಿ ಸುಜುಕಿ

ಬಿಎಸ್-6 ಎಂಜಿನ್ ಕಾರುಗಳ ಮಾರಾಟದಲ್ಲಿ ಈಗಾಗಲೇ ಹೊಸ ದಾಖಲೆಗೆ ಕಾರಣವಾಗಿರುವ ಮಾರುತಿ ಸುಜುಕಿಯು ಸುಮಾರು 7 ಲಕ್ಷ ಯುನಿಟ್ ಮಾರಾಟ ಮಾಡಿದ್ದು, ಮಾರಾಟಗೊಂಡಿರುವ ಬಹುತೇಕ ಕಾರುಗಳು ಬಿಎಸ್-6 ಪೆಟ್ರೋಲ್ ಮಾದರಿಗಳಾಗಿವೆ. ಹೊಸ ಎಮಿಷನ್ ನಿಯಮದಂತೆ ಕಳೆದ ವರ್ಷದ ಜನವರಿಯಿಂದಲೇ ಬಿಎಸ್-6 ಪೆಟ್ರೋಲ್ ಕಾರುಗಳ ಮಾರಾಟವನ್ನು ಆರಂಭಿಸಿದ್ದ ಮಾರುತಿ ಸುಜುಕಿಯು ಡೀಸೆಲ್ ಕಾರುಗಳ ಮಾರಾಟವನ್ನು ಮಾತ್ರ ಬಿಎಸ್-4 ಎಂಜಿನ್‌ನಲ್ಲೇ ಮುಂದುವರಿಸಿತ್ತು.

ಬಿಎಸ್-6 ಎಫೆಕ್ಟ್- ಸ್ವಿಫ್ಟ್ ಡೀಸೆಲ್ ವರ್ಷನ್ ಸ್ಥಗಿತಗೊಳಿಸಿದ ಮಾರುತಿ ಸುಜುಕಿ

ಆದರೆ ಇದೀಗ ಏಪ್ರಿಲ್ 1ರಿಂದ ಬಿಎಸ್-6 ನಿಯಮವು ಕಡ್ಡಾಯವಾಗಿ ಜಾರಿಗೆ ಬಂದ ಹಿನ್ನಲೆ ಪ್ರಮುಖ ಕಾರುಗಳಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.3-ಲೀಟರ್ ಡೀಸೆಲ್ ಮಾದರಿಯನ್ನು ಸ್ಥಗಿತಗೊಳಿಸಲಾಗಿದ್ದು, ಜನಪ್ರಿಯ ಸ್ವಿಫ್ಟ್ ಕಾರಿನಲ್ಲೂ ಕೂಡಾ ಇನ್ಮುಂದೆ ಡೀಸೆಲ್ ಆವೃತ್ತಿಯು ಖರೀದಿಗೆ ಲಭ್ಯವಿರುವುದಿಲ್ಲ.

MOST READ: ಅತಿ ಕಡಿಮೆ ಬೆಲೆಯಲ್ಲಿ 'ಏರ್ 100' ವೆಂಟಿಲೆಟರ್ ಪರಿಚಯಿಸಿದ ಮಹೀಂದ್ರಾ

ಬಿಎಸ್-6 ಎಫೆಕ್ಟ್- ಸ್ವಿಫ್ಟ್ ಡೀಸೆಲ್ ವರ್ಷನ್ ಸ್ಥಗಿತಗೊಳಿಸಿದ ಮಾರುತಿ ಸುಜುಕಿ

ಮಾಲಿನ್ಯ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿರುವುದೇ ಡೀಸೆಲ್ ಎಂಜಿನ್ ಮಾರಾಟದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಮಾರುತಿ ಸುಜುಕಿ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಕಡಿಮೆ ಸಾಮರ್ಥ್ಯದ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿವೆ.

ಬಿಎಸ್-6 ಎಫೆಕ್ಟ್- ಸ್ವಿಫ್ಟ್ ಡೀಸೆಲ್ ವರ್ಷನ್ ಸ್ಥಗಿತಗೊಳಿಸಿದ ಮಾರುತಿ ಸುಜುಕಿ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ನಿರ್ಮಾಣದ ಬಿಎಸ್-4 ಡೀಸೆಲ್ ಕಾರುಗಳ ಎಂಜಿನ್‌ಗಳನ್ನು ಬಿಎಸ್-6 ನಿಯಮಕ್ಕೆ ಉನ್ನತೀಕರಣವು ಆರ್ಥಿಕವಾಗಿ ಹೊರೆಯಾಗಲಿದ್ದು, ಇದೇ ಕಾರಣಕ್ಕೆ ಪೆಟ್ರೋಲ್, ಪೆಟ್ರೋಲ್ ಜೊತೆಗೆ ಸ್ಮಾರ್ಟ್ ಹೈಬ್ರಿಡ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆ ಹೆಚ್ಚಿಸಲಾಗುತ್ತಿದೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಬಿಎಸ್-6 ಎಫೆಕ್ಟ್- ಸ್ವಿಫ್ಟ್ ಡೀಸೆಲ್ ವರ್ಷನ್ ಸ್ಥಗಿತಗೊಳಿಸಿದ ಮಾರುತಿ ಸುಜುಕಿ

ಒಂದು ವೇಳೆ ಕಡಿಮೆ ಸಾಮರ್ಥ್ಯದ ಡೀಸೆಲ್ ಎಂಜಿನ್‌ಗಳನ್ನು ಉನ್ನತೀಕರಿಸಿದರೂ ಬೆಲೆ ಹೆಚ್ಚಳದಿಂದ ಗ್ರಾಹಕರನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಲಿದ್ದು, ಇದಕ್ಕಾಗಿಯೇ ಮಾರುತಿ ಸುಜುಕಿಯು ರೂ.10 ಲಕ್ಷದೊಳಗಿನ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲು ಮುಂದಾಗುತ್ತಿಲ್ಲ.

ಬಿಎಸ್-6 ಎಫೆಕ್ಟ್- ಸ್ವಿಫ್ಟ್ ಡೀಸೆಲ್ ವರ್ಷನ್ ಸ್ಥಗಿತಗೊಳಿಸಿದ ಮಾರುತಿ ಸುಜುಕಿ

ಆರ್ಥಿಕವಾಗಿ ಹೊರೆಯಾಗುವ ಡೀಸೆಲ್ ಕಾರುಗಳ ಬದಲಿಗೆ ಪೆಟ್ರೋಲ್, ಪೆಟ್ರೋಲ್ ಸ್ಮಾರ್ಟ್ ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳ ಮೇಲೆ ಹೆಚ್ಚು ಗಮನಹರಿಸುತ್ತಿದ್ದು, ಹೈ ಎಂಡ್ ಕಾರು ಮಾದರಿಗಳಲ್ಲಿ ಮಾತ್ರವೇ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಬಿಎಸ್-6 ಎಫೆಕ್ಟ್- ಸ್ವಿಫ್ಟ್ ಡೀಸೆಲ್ ವರ್ಷನ್ ಸ್ಥಗಿತಗೊಳಿಸಿದ ಮಾರುತಿ ಸುಜುಕಿ

ಮಾರುತಿ ಸುಜುಕಿಯು ಈಗಾಗಲೇ ಹೊಸದಾಗಿ 1.2-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಕಾರು ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಮುಂಬರುವ ದಿನಗಳಲ್ಲಿ ಹ್ಯಾಚ್‌ಬ್ಯಾಕ್ ಕಾರುಗಳನ್ನು ಹೊರತುಪಡಿಸಿ ಸೆಡಾನ್, ಎಸ್‌ಯುವಿ ಮತ್ತು ಎಂಪಿವಿ ಕಾರು ಮಾದರಿಗಳಲ್ಲಿ ಮಾತ್ರವೇ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಿದೆ.

ಬಿಎಸ್-6 ಎಫೆಕ್ಟ್- ಸ್ವಿಫ್ಟ್ ಡೀಸೆಲ್ ವರ್ಷನ್ ಸ್ಥಗಿತಗೊಳಿಸಿದ ಮಾರುತಿ ಸುಜುಕಿ

ಹೀಗಾಗಿ ಡೀಸೆಲ್ ಹೊಂದಿರದ ಕಾರು ಮಾದರಿಗಳಲ್ಲಿ ಮೈಲೇಜ್ ಹೆಚ್ಚಿಸುವುದಕ್ಕಾಗಿ ಪೆಟ್ರೋಲ್ ಮತ್ತು ಪೆಟ್ರೋಲ್ ಸ್ಮಾರ್ಟ್ ಹೈಬ್ರಿಡ್ ಆವೃತ್ತಿಯನ್ನು ಪರಿಚಯಿಸಲಾಗುತ್ತಿದ್ದು, ಸ್ವಿಫ್ಟ್ ಮುಂಬರುವ ದಿನಗಳಲ್ಲಿ ಪೆಟ್ರೋಲ್ ಮಾತ್ರವಲ್ಲದೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್‌ನೊಂದಿಗೆ ಡೀಸೆಲ್ ಕಾರುಗಳಷ್ಟೇ ಮೈಲೇಜ್‌ನೊಂದಿಗೆ ಗ್ರಾಹಕರನ್ನು ಸೆಳೆಯಲಿದೆ.

More from DriveSpark

Article Published On: Friday, April 17, 2020, 16:54 [IST]
English summary
Maruti Suzuki diesel variant discontinued in India details. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+