ಕೋವಿಡ್ 19: ಸಂಕಷ್ಟದ ಸಮಯದಲ್ಲೂ ಬಡವರ ಹಸಿವು ನೀಗಿಸುತ್ತಿದೆ ಮಾರುತಿ ಸುಜುಕಿ
ಮಾಹಾಮಾರಿ ಕರೋನಾ ವೈರಸ್ ತಗ್ಗಿಸುವುದಕ್ಕಾಗಿ ಲಾಕ್‌ಡೌನ್ ವಿಧಿಸಿರುವ ಕೇಂದ್ರ ಸರ್ಕಾರವು ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಿ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸಂಕಷ್ಟಕ್ಕೆ ಸಿಲುಕಿರುವ ದುಡಿಯುವ ವರ್ಗದ ಜನರು ದಿನದ ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ.

ಲಾಕ್‌ಡೌನ್‌ನಿಂದ ದುಡಿದು ತಿನ್ನುವಂತಹ ವರ್ಗದ ಕೋಟ್ಯಾಂಟರ ಜನರ ಬದುಕು ದುಸ್ತರವಾಗಿದ್ದು, ದಿನದ ಒಂದು ಹೊತ್ತಿನ ಆಹಾರಕ್ಕೂ ಪರದಾಟುವಂತಹ ಶೋಚನೀಯ ಪರಿಸ್ಥಿತಿ ಎದುರಾಗಿದೆ. ಹೀಗಿರುವಾಗ ಬಡವರ ಹಸಿವು ತಣಿಸುತ್ತಿರುವ ದೇಶದ ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾದ ಮಾರುತಿ ಸುಜುಕಿಯು ಲಾಕ್‌ಡೌನ್ ಆದ ದಿನದಿಂದಲೂ ಇದುವರೆಗೂ ದಿನಂಪ್ರತಿ ದೇಶದ ವಿವಿಧಡೆ 7 ಸಾವಿರ ಜನರಿಗೆ ಊಟ, ನೀರು ಮತ್ತು ಅಗತ್ಯ ಅಡುಗೆ ಸಾಮಗ್ರಿಗಳ ಪೊಟ್ಟಣಗಳನ್ನು ವಿತರಣೆ ಮಾಡುತ್ತಿದೆ.

ಜೊತೆಗೆ ಅಗತ್ಯ ಜನರಿಗೆ ಸ್ಯಾಟಿಟೈಜರ್ ಮತ್ತು ಮಾಸ್ಕ್‌ಗಳನ್ನು ವಿತರಣೆ ಮಾಡುತ್ತಿರುವ ಮಾರುತಿ ಸುಜುಕಿ ಕಂಪನಿಯು ಬಡವರ ಹಸಿವು ನೀಗಿಸುತ್ತಿರುವ ಸಾಕಷ್ಟು ಮೆಚ್ಚುಗೆ ಕಾರಣವಾಗಿದೆ.
MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಇದಲ್ಲದೇ ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಧನಸಹಾಯ ಮತ್ತು ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿವೆ.

ಕರೋನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದ್ದು, ಕರೋನಾ ವಿರುದ್ಧ ಹೋರಾಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಣಿಗೆ ಸಂಗ್ರಹ ಅಭಿಯಾನವನ್ನು ಕೈಗೊಂಡಿವೆ.
MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧದ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬುತ್ತಿದ್ದಾರೆ. ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಯ ಜೊತೆಗೆ ಧನಸಹಾಯವನ್ನು ಕೂಡಾ ಮಾಡುತ್ತಿವೆ.

ದೇಶದ ನಂ.1 ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ ಕೂಡಾ ಬಡವರಿಗೆ ಹಸಿವು ನೀಗಿಸುವುದಲ್ಲದೆ ಅತಿ ಕಡಿಮೆ ಬೆಲೆಯಲ್ಲಿ ವೆಂಟಿಲೆಯಟರ್‌ಗಳ ನಿರ್ಮಾಣಕ್ಕೂ ಚಾಲನೆ ನೀಡಿದೆ.
MOST READ: ವೈದ್ಯರ ನೆರವಿಗೆ ಬರಲಿದೆ ಮಹೀಂದ್ರಾ ನಿರ್ಮಾಣದ ವಿಶೇಷ ಏರೋಸೊಲ್ ಬಾಕ್ಸ್

ದೇಶದ ವಿವಿಧ ಭಾಗದಲ್ಲಿರುವ 3 ಕಾರು ಉತ್ಪಾದನಾ ಘಟಕಗಳಲ್ಲೂ ಆಗ್ವಾ ಹೆಲ್ತ್ ಕೇರ್ ಸಂಸ್ಥೆಯ ಸಹಯೋಗದೊಂದಿಗೆ ವೆಂಟಿಲೆಟರ್‌ಗಳನ್ನು ನಿರ್ಮಾಣ ಮಾಡುತ್ತಿರುವ ಮಾರುತಿ ಸುಜುಕಿ ಕಂಪನಿಯು ಪ್ರತಿ ತಿಂಗಳು 10 ಸಾವಿರ ಯುನಿಟ್ ಉತ್ಪಾದನೆ ಮಾಡುವುದಾಗಿ ಘೋಷಣೆ ಮಾಡಿದೆ.

ಜೊತೆಗೆ ಕೃಷ್ಣಾ ಮಾರುತಿ ಲಿಮೆಟೆಡ್ ಕಂಪನಿಯು ಪ್ರತ್ಯೇಕವಾಗಿ 20 ಲಕ್ಷ ಫೇಸ್‌ಮಾಸ್ಕ್‌ಗಳನ್ನು ಹರಿಯಾಣ ಸರ್ಕಾರಕ್ಕೆ ಉಚಿತವಾಗಿ ನೀಡುವುದಾಗಿ ಹೇಳಿದ್ದು, ಮತ್ತೊಂದು ಅಂಗಸಂಸ್ಥೆಯಾದ ಎಂಎಸ್ಐಎ ಮತ್ತು ಭಾರತ್ ಸೀಟ್ ಲಿಮಿಟೆಡ್ ಕಂಪನಿಗಳು ವೈದ್ಯಕೀಯ ಸೇವೆಗಳಿಗೆ ಬಳಕೆ ಮಾಡುವ ಪ್ರೋಕ್ಟೆಕ್ಟಿವ್ ಕ್ಲಾಥ್‌ಗಳನ್ನು ಸಿದ್ದಪಡಿಸಿ ಸರ್ಕಾರಕ್ಕೆ ಪೂರೈಕೆ ಮಾಡಲಿದ್ದಾರೆ.


Click it and Unblock the Notifications