ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಡಿಸೈನ್ ಪ್ರೇರಿತ ಡಿಜೈರ್ ಫೇಸ್‌ಲಿಫ್ಟ್

ಕಂಪ್ಯಾಕ್ಟ್ ಸೆಡಾನ್ ಆವೃತ್ತಿಯಲ್ಲಿ ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಡಿಜೈರ್ ಫೇಸ್‌ಲಿಫ್ಟ್ ಆವೃತ್ತಿಯು ಮುಂಬರುವ ಏಪ್ರಿಲ್ ಅಂತ್ಯಕ್ಕೆ ಬಿಡುಗಡೆಯಾಗುವ ಸುಳಿವು ಸಿಕ್ಕಿದ್ದು, ಹೊಸ ಕಾರು ವಿನೂತನ ವಿನ್ಯಾಸದೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಡಿಸೈನ್ ಪ್ರೇರಿತ ಡಿಜೈರ್ ಫೇಸ್‌ಲಿಫ್ಟ್

ಕಳೆದ 2017ರಲ್ಲಿ ನ್ಯೂ ಜನರೇಷನ್ ಡಿಜೈರ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದ ಮಾರುತಿ ಸುಜುಕಿ ಸಂಸ್ಥೆಯು ಇದೀಗ ಫೇಸ್‌ಲಿಫ್ಟ್ ಆವೃತ್ತಿಯನ್ನು ಅಭಿವೃದ್ದಿಗೊಳಿಸಿದ್ದು, ಹೊಸ ಕಾರಿನ ಮುಂಭಾಗ ಗ್ರಿಲ್ ಮತ್ತು ಬಂಪರ್ ಹೊಸ ಡಿಸೈನ್ ಪಡೆದುಕೊಂಡಿದೆ. ಜೊತೆಗೆ ಹೊಸ ಕಾರಿನಲ್ಲಿ ಈ ಬಾರಿ ಹೊಸ ಎಂಜಿನ್ ಆಯ್ಕೆ ನೀಡಲಾಗುತ್ತಿದ್ದು, ಬಿಎಸ್-6 ನಿಯಮ ಜಾರಿಯಾಗುತ್ತಿರುವುದು ಡಿಜೈರ್ ಎಂಜಿನ್ ಆಯ್ಕೆ ಸಾಕಷ್ಟು ಬದಲಾವಣೆಗೊಳ್ಳಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಡಿಸೈನ್ ಪ್ರೇರಿತ ಡಿಜೈರ್ ಫೇಸ್‌ಲಿಫ್ಟ್

ಡಿಜೈರ್ ಆವೃತ್ತಿಯಲ್ಲಿ ಸದ್ಯ 1.2-ಲೀಟರ್ ಪೆಟ್ರೋಲ್ ಮತ್ತು 1.3-ಲೀಟರ್ ಮಲ್ಟಿ ಜೆಟ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗುತ್ತಿದ್ದು, ಬಿಎಸ್-6 ನಿಯಮ ಜಾರಿಯಾಗುತ್ತಿರುವ ಹಿನ್ನಲೆಯಲ್ಲಿ 1.3-ಲೀಟರ್ ಡೀಸೆಲ್ ಎಂಜಿನ್ ಅನ್ನು ಸ್ಥಗಿತಗೊಳಿಸಲಾಗುತ್ತಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಡಿಸೈನ್ ಪ್ರೇರಿತ ಡಿಜೈರ್ ಫೇಸ್‌ಲಿಫ್ಟ್

1.3-ಲೀಟರ್ ಬದಲಾಗಿ ಹೊಸ ಡಿಜೈರ್ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, ಹೊಸ ಎಂಜಿನ್ ಆಯ್ಕೆಯಿಂದಾಗಿ ಡಿಜೈರ್ ಫೇಸ್‌ಲಿಫ್ಟ್ ಆವೃತ್ತಿಯು ಮತ್ತಷ್ಟು ಬಲಿಷ್ಠ ಕಾರು ಮಾದರಿಯಾಗಿರಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಡಿಸೈನ್ ಪ್ರೇರಿತ ಡಿಜೈರ್ ಫೇಸ್‌ಲಿಫ್ಟ್

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಿಎಸ್-4 ಡೀಸೆಲ್ ಕಾರುಗಳ ಉನ್ನತೀಕರಣವು ತುಸು ಸವಾಲಾಗಿದ್ದು, ಬಿಎಸ್-6 ಡೀಸೆಲ್ ಎಂಜಿನ್‌ಗಳು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಿಎಸ್-4 ಡೀಸೆಲ್ ಎಂಜಿನ್‌ಗಿಂತಲೂ ಸಾಕಷ್ಟು ಸುಧಾರಣೆಯೊಂದಿಗೆ ಮಾಲಿನ್ಯ ಹೊರಸೂಸುವಿಕೆಯಲ್ಲಿ ಮಹತ್ವದ ಬದಲಾವಣೆ ಪಡೆದುಕೊಳ್ಳುತ್ತಿವೆ. ಇದೇ ಕಾರಣಕ್ಕೆ ಮಾರುತಿ ಸುಜುಕಿ ಸೇರಿದಂತೆ ಹಲವು ಕಾರು ಉತ್ಪಾದನಾ ಸಂಸ್ಥೆಗಳು ಸದ್ಯಕ್ಕೆ ಪೆಟ್ರೋಲ್ ಎಂಜಿನ್ ಕಾರುಗಳನ್ನು ಮಾತ್ರವೇ ಬಿಎಸ್-6 ನಿಯಮಕ್ಕೆ ಉನ್ನತೀಕರಿಸಿ ಮಾರಾಟ ಮಾಡುತ್ತಿವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಡಿಸೈನ್ ಪ್ರೇರಿತ ಡಿಜೈರ್ ಫೇಸ್‌ಲಿಫ್ಟ್

ಮುಂಬರುವ ಏಪ್ರಿಲ್ ನಂತರವಷ್ಟೇ ಡೀಸೆಲ್ ಕಾರುಗಳನ್ನು ಹೊಸ ನಿಯಮದಂತೆ ಬಿಡುಗಡೆ ಮಾಡಲಿದ್ದು, ಹೊಸ ಕಾರುಗಳು ಸುಧಾರಿತ ತಂತ್ರಜ್ಞಾನ ಪ್ರೇರಿತ ಎಂಜಿನ್ ಆಯ್ಕೆಯಿಂದಾಗಿ ತುಸು ದುಬಾರಿ ಬೆಲೆ ಪಡೆದುಕೊಳ್ಳಲಿವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಡಿಸೈನ್ ಪ್ರೇರಿತ ಡಿಜೈರ್ ಫೇಸ್‌ಲಿಫ್ಟ್

ಬಿಎಸ್-6 ಪೆಟ್ರೋಲ್ ಕಾರುಗಳು ಬಿಎಸ್-4 ಕಾರುಗಳಿಂತಲೂ ರೂ.15 ಸಾವಿರದಿಂದ ರೂ.20 ಸಾವಿರದಷ್ಟು ದುಬಾರಿಯಾಗಿದ್ದರೆ ಡೀಸೆಲ್ ಎಂಜಿನ್ ಮಾತ್ರ ಪ್ರಸ್ತುತ ಮಾರುಕಟ್ಟೆಯಲ್ಲಿನ ಬಿಎಸ್-4 ಕಾರುಗಳಿಂತಲೂ ರೂ.90 ಸಾವಿರದಿಂದ ರೂ.1.50 ಲಕ್ಷದಷ್ಟು ದುಬಾರಿಯಾಗಲಿವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಡಿಸೈನ್ ಪ್ರೇರಿತ ಡಿಜೈರ್ ಫೇಸ್‌ಲಿಫ್ಟ್

ಇದೇ ಕಾರಣಕ್ಕೆ ಮಾರುತಿ ಸುಜುಕಿ ಸಂಸ್ಥೆಯು ಅಗ್ಗದ ಬೆಲೆಯ ಕಾರುಗಳಲ್ಲಿ ಡೀಸೆಲ್ ಎಂಜಿನ್‌ಗಳನ್ನು ಉನ್ನತೀಕರಿಸುವ ಯೋಜನೆಯನ್ನು ಕೈಬಿಟ್ಟಿದ್ದು, ಕೇವಲ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಕಾರುಗಳ ಮೇಲೆ ಹೆಚ್ಚು ಒತ್ತು ನೀಡುತ್ತಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಡಿಸೈನ್ ಪ್ರೇರಿತ ಡಿಜೈರ್ ಫೇಸ್‌ಲಿಫ್ಟ್

ರೂ.10 ಲಕ್ಷದೊಳಗಿನ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯ ಬಗೆಗೆ ಹೆಚ್ಚು ತಲೆಕೆಡಿಸಿಕೊಳ್ಳದೇ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳಿಗೆ ವಿಶೇಷ ಗಮನಹರಿಸಿದ್ದು, ಎಂಟ್ರಿ ಲೆವೆಲ್ ಕಾರುಗಳಲ್ಲಿ 1.0-ಲೀಟರ್, 1.2-ಲೀಟರ್ ಮತ್ತು ಹೈ ಎಂಡ್ ಮಾದರಿಗಳಲ್ಲಿ ಮಾತ್ರವೇ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು 1.6-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್ ಬಿಡುಗಡೆ ಮಾಡಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಡಿಸೈನ್ ಪ್ರೇರಿತ ಡಿಜೈರ್ ಫೇಸ್‌ಲಿಫ್ಟ್

ಒಂದು ವೇಳೆ ಮಾರುತಿ ಸುಜುಕಿ ಸಂಸ್ಥೆಯು ಬಿಎಸ್-6 ನಿಯಮ ಅನುಸಾರವಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ 1.3-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಉನ್ನತೀಕರಣ ಮಾಡಿದರೂ ಸಹ ಬೆಲೆಯಲ್ಲಿ ಭಾರೀ ಏರಿಕೆಯಾಗಲಿದ್ದು, ಇದರಿಂದ ಗ್ರಾಹಕರನ್ನು ಕಳೆದುಕೊಳ್ಳಬೇಕಾಗುತ್ತದೆ.

Article Published On: Tuesday, February 18, 2020, 11:38 [IST]
English summary
Maruti Suzuki Dzire Facelift Launch Expected in April. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+