ವಿನೂತನ ಡಿಸೈನ್ ಪ್ರೇರಿತ ಮಾರುತಿ ಸುಜುಕಿ ಡಿಜೈರ್ ಫೇಸ್‌ಲಿಫ್ಟ್ ಬಿಡುಗಡೆ
ದೇಶದ ನಂ.1 ಕಂಪ್ಯಾಕ್ಟ್ ಸೆಡಾನ್ ಆವೃತ್ತಿಯಾಗಿರುವ ಮಾರುತಿ ಸುಜುಕಿ ಡಿಜೈರ್ ಫೇಸ್‌ಲಿಫ್ಟ್ ಆವೃತ್ತಿಯು ನವೀಕೃತ ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಗೊಂಡಿದ್ದು, ಹೊಸ ಕಾರು ವಿನೂತನ ಡಿಸೈನ್‌ನೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಡಿಜೈರ್ ಫೇಸ್‌ಲಿಫ್ಟ್ ಆವೃತ್ತಿಯ ಸದ್ಯಕ್ಕೆ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಾಗಿದ್ದು, ನ್ಯೂ ಜನರೇಷನ್ ಬಲೆನೊದಲ್ಲಿ ಬಳಕೆ ಮಾಡಲಾಗಿರುವ ಕೆ12ಸಿ ಡ್ಯುಯಲ್ ಜೆಟ್ ಎಂಜಿನ್ ಪಡೆದುಕೊಂಡಿದೆ. ಜೊತೆಗೆ ಹಳೆಯ ಆವೃತ್ತಿಗಿಂತಲೂ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಸ ಕಾರಿನಲ್ಲಿ ಜೋಡಿಸಲಾಗಿದ್ದು, ಬಿಎಸ್-4 ಆವೃತ್ತಿಗಿಂತಲೂ ಹೊಸ ಕಾರು ರೂ.6 ಸಾವಿರದಿಂದ ರೂ.21 ಸಾವಿರದಷ್ಟು ದುಬಾರಿ ಬೆಲೆ ಪಡೆದುಕೊಂಡಿದೆ.

ಡಿಜೈರ್ ಹೊಸ ಕಾರು ಪೆಟ್ರೋಲ್ ಎಂಜಿನ್‌ನೊಂದಿಗೆ ಮ್ಯಾನುವಲ್ ಮತ್ತು ಎಜಿಎಸ್(ಆಟೋ) ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.89 ಲಕ್ಷ ಮತ್ತು ಹೈ ಎಂಡ್ ಆವೃತ್ತಿಯು ರೂ. 8.81 ಲಕ್ಷ ಬೆಲೆ ಹೊಂದಿದೆ.

ಡಿಜೈರ್ ಫೇಸ್‌ಲಿಫ್ಟ್ ವೆರಿಯೆಂಟ್ ಮತ್ತು ಬೆಲೆ(ಎಕ್ಸ್‌ಶೋರೂಂ ಪ್ರಕಾರ)
ಎಲ್ಎಕ್ಸ್ಐ ಮ್ಯಾನುವಲ್- ರೂ.5.89 ಲಕ್ಷ
ವಿಎಕ್ಸ್ಐ ಮ್ಯಾನುವಲ್- ರೂ.6.79 ಲಕ್ಷ
ವಿಎಕ್ಸ್ಐ ಆಟೋಮ್ಯಾಟಿಕ್- ರೂ. 7.32 ಲಕ್ಷ
ಜೆಎಕ್ಸ್ಐ ಮ್ಯಾನುವಲ್- ರೂ.7.48 ಲಕ್ಷ
ಜೆಎಕ್ಸ್ಐ ಆಟೋಮ್ಯಾಟಿಕ್- ರೂ.8.01 ಲಕ್ಷ
ಜೆಎಕ್ಸ್ಐ ಪ್ಲಸ್ ಮ್ಯಾನುವಲ್- ರೂ.8.28 ಲಕ್ಷ
ಜೆಎಕ್ಸ್ಐ ಪ್ಲಸ್ ಆಟೋಮ್ಯಾಟಿಕ್- ರೂ.8.81 ಲಕ್ಷ

ಎಂಜಿನ್ ಸಾಮರ್ಥ್ಯ ಮತ್ತು ಮೈಲೇಜ್
ಸದ್ಯ ಬಿಎಸ್-6 ವೈಶಿಷ್ಟ್ಯತೆ 1.2-ಲೀಟರ್ ಫೋರ್ ಸಿಲಿಂಡರ್ ಕೆ12ಸಿ ಡ್ಯುಯಲ್‌ಜೆಟ್ ಪೆಟ್ರೋಲ್ ಎಂಜಿನ್ ಆಯ್ಕೆ ಮಾತ್ರ ಹೊಂದಿರುವ ಡಿಜೈರ್ ಫೇಸ್‌ಲಿಫ್ಟ್ ಕಾರು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 90-ಬಿಎಚ್‌ಪಿ ಉತ್ಪಾದನೆ ಮಾಡಬಲ್ಲದು. ಈ ಮೂಲಕ ಇಂಧನ ದಕ್ಷತೆಯಲ್ಲೂ ಗಮನಸೆಳೆದಿರುವ ಹೊಸ ಕಾರು ಪ್ರತಿ ಲೀಟರ್ ಪೆಟ್ರೋಲ್‌ಗೆ ಮ್ಯಾನುವಲ್ ಮಾದರಿಯು 23.26 ಕಿ.ಮೀ ಮತ್ತು ಆಟೋಮ್ಯಾಟಿಕ್ ಮಾದರಿಯು 24.12 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಹೊಸ ಕಾರಿನಲ್ಲಿ ಇಂಧನ ದಕ್ಷತೆಗಾಗಿ ಐಡೆಲ್ ಸ್ಟಾರ್ಟ್ ಮತ್ತು ಸ್ಟಾಪ್ ತಂತ್ರಜ್ಞಾನವನ್ನು ಬಳಕೆ ಮಾಡಲಾಗಿದ್ದು, ಇದು ಕಂಪ್ಯಾಕ್ಟ್ ಸೆಡಾನ್ ಆವೃತ್ತಿಗಳಲ್ಲೇ ಅತಿ ಹೆಚ್ಚು ಇಂಧನ ದಕ್ಷತೆ ಹೊಂದಿರುವ ಕಾರು ಮಾದರಿಯಾಗಿದೆ.

ಇನ್ನುಳಿದಂತೆ ಹೊಸ ಕಾರಿನ ಗ್ರಿಲ್ ಡಿಸೈನ್ ಅನ್ನು ಸಂಪೂರ್ಣವಾಗಿ ಬದಲಾಣೆಗೊಳಿಸಿರುವ ಕಾರಿನ ಆಕರ್ಷಣೆಯನ್ನು ಹೆಚ್ಚಿಸಿದ್ದು, ಹೊಸ ವಿನ್ಯಾಸದ ಫ್ರಂಟ್ ಬಂಪರ್ ಜೊತೆಗೆ ಹೊಸದಾದ ಫಾಗ್ ಲ್ಯಾಂಪ್ ಮತ್ತು ಡ್ಯುಯಲ್ ಟೋನ್ ಅಯಾಲ್ ವೀಲ್ಹ್ ನೀಡಲಾಗಿದೆ.

ಹಾಗೆಯೇ ಕಾರಿನ ಒಳಭಾಗದ ವಿನ್ಯಾಸದಲ್ಲೂ ಹಲವಾರು ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇಗೆ ಸರ್ಪೋಟ್ ಮಾಡಬಲ್ಲ ಸ್ಮಾರ್ಟ್ ಸ್ಟುಡಿಯೋ ಇನ್ಪೋಟೈನ್‌ಮೆಂಟ್ ಸಿಸ್ಟಂ, ಡ್ಯುಯಲ್ ಟೋನ್ ಆಸನಗಳು, ಫ್ಲಕ್ಸ್ ವುಡ್ ಟ್ರಮ್, ಆಟೋ ಫ್ಲೊಡಿಂಗ್ ರಿಯರ್ ವ್ಯೂ ಮಿರರ್, ಟಿಎಫ್‌ಟಿ ಸ್ಕ್ರೀನ್, ಎಂಡಿಐ ಸೌಲಭ್ಯ ಹೊಂದಿದೆ.

ಪ್ರಯಾಣಿಕ ಸುರಕ್ಷತೆಗೂ ಈ ಬಾರಿ ಹೆಚ್ಚು ಗಮನಹರಿಸಿರುವ ಮಾರುತಿ ಸುಜುಕಿಯು ಹೊಸ ಕಾರಿನಲ್ಲಿ ಎಬಿಎಸ್ ಜೊತೆ ಇಬಿಡಿ, ಫ್ರಂಟ್ ಡ್ಯುಯಲ್ ಏರ್‌ಬ್ಯಾಗ್, ಕ್ರೂಸ್ ಕಂಟ್ರೋಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳಲ್ಲಿ ಹೆಚ್ಚುವರಿಯಾಗಿ ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಪ್ರೋಗ್ರಾಂ ಮತ್ತು ಹಿಲ್ ಹೋಲ್ಡ್ ಅಸಿಸ್ಟ್ ಸೌಲಭ್ಯಗಳನ್ನು ನೀಡಲಾಗಿದೆ.

ಈ ಮೂಲಕ ಕಂಪ್ಯಾಕ್ಟ್ ಸೆಡಾನ್ ಆವೃತ್ತಿಗಳಲ್ಲೇ ಮತ್ತಷ್ಟು ಬಲಿಷ್ಠ ಎಂಜಿನ್‌ನೊಂದಿಗೆ ಗರಿಷ್ಠ ಇಂಧನ ದಕ್ಷತೆ ಹೊಂದಿರುವ ಹೊಸ ಡಿಜೈರ್ ಕಾರು ಮುಂಬರುವ ದಿನಗಳಲ್ಲಿ ಹೊಸ ಮಾದರಿಯ ಡೀಸೆಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಪ್ರತಿಸ್ಪರ್ಧಿ ಆವೃತ್ತಿಗಳಾದ ಹ್ಯುಂಡೈ ಔರಾ, ಹೋಂಡಾ ಅಮೇಜ್, ಫೋರ್ಡ್ ಆಸ್ಪೈರ್ ಮತ್ತು ಟಾಟಾ ಟಿಗೋರ್ ಫೇಸ್‌ಲಿಫ್ಟ್ ಮಾದರಿಗೆ ಮತ್ತಷ್ಟು ಪೈಪೋಟಿ ನೀಡಲಿದೆ.


Click it and Unblock the Notifications