ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಇಕೋ
ಮಾರುತಿ ಸುಜುಕಿ ಕಂಪನಿಯ ಇಕೋ ಮಾದರಿಯು ಮಾರಾಟದಲ್ಲಿ ಹೊಸ ಮೈಲುಗಲ್ಲು ಸಾಧಿಸಿದೆ. ಮಾರುತಿ ಸುಜುಕಿ ಕಂಪನಿಯು ಕಳೆದ 10 ವರ್ಷಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಇಕೋ ಮಾದರಿಯ 7 ಲಕ್ಷ ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಮಾರುತಿ ಸುಜುಕಿ ಕಂಪನಿಯು ಇಕೋ ವ್ಯಾನ್ ಅನ್ನು ಭಾರತದಲ್ಲಿ 2010ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿದ್ದರು. ಮಾರುತಿ ಸುಜುಕಿ ಕಂಪನಿಯು ಕೇವಲ ಎರಡು ವರ್ಷಗಳಲ್ಲಿ ಇಕೋ ಮಾದರಿಯ 1 ಲಕ್ಷ ಯೂನಿಟ್‌ಗಳನ್ನು ಮಾರಾಟ ಮಾಡಿದ್ದರು. 2014ರಲ್ಲಿ ಮಾರುತಿ ಮತ್ತೆ 1 ಲಕ್ಷ ಯುನಿಟ್ ಇಕೋವನ್ನು ಮಾರಾಟ ಮಾಡಿತು. ಏಕೆಂದರೆ ಅದರ ಬೇಡಿಕೆ ಮಾರುಕಟ್ಟೆಯಲ್ಲಿ ಬೆಳೆಯುತ್ತಲೇ ಇತ್ತು.

ಬೇಡಿಕೆ ಹೆಚ್ಚಾದಾಗ ಬೇಡಿಕೆಗೆ ತಕ್ಕಂತೆ ಪೂರೈಸಲು ಇಕೋ ಮಾದರಿಯ ಕಾರ್ಗೋ ಎಂಬ ಹೊಸ ರೂಪಾಂತರವನ್ನು ಪರಿಚಯಿಸಿದ್ದರು. ನಂತರ ಮೂರು ವರ್ಷಗಳಲ್ಲಿ ಸತತವಾಗಿ 1 ಲಕ್ಷ ಯೂನಿಟ್ ಇಕೋವನ್ನು ಮಾರಾಟವನ್ನು ಮಾಡಿದ್ದರು.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

2018ರ ವೇಳೆಗೆ ಮಾರುತಿ ಸುಜುಕಿ ಕಂಪನಿಯು ಒಟ್ಟು 5 ಲಕ್ಷ ಯುನಿಟ್‌ಗಳನ್ನು ಮಾರಾಟ ಮಾಡಿದರು. ಇನ್ನು ಮಾರುತಿ ಸುಜುಕಿ ಕಂಪನಿಯು ತನ್ನ ಅತ್ಯಂತ ಜನಪ್ರಿಯ ಮಾದರಿಗಳಲ್ಲಿ ಒಂದಾದ ಇಕೋ ವ್ಯಾನ್ ಅನ್ನು ಸಿಎನ್‌ಜಿ ಆವೃತ್ತಿಯಲ್ಲಿ ಈ ವರ್ಷದ ಮಾರ್ಚ್ ತಿಂಗಳಲ್ಲಿ ಬಿಡುಗಡೆಗೊಳಿಸಿತ್ತು.

ಈ ಮಾದರಿಯಲ್ಲಿ ಹೆಚ್ಚು ಸ್ಪೇಸ್ ಹಾಗೂ ಅಲ್ಟ್ರಾ ಎಫಿಶಿಯನ್ಸಿ ಎಂಜಿನ್ ಇದರ ಜನಪ್ರಿಯತೆಗೆ ಮುಖ್ಯ ಕಾರಣಗಳಾಗಿವೆ. ಈ ಕಾರಣಕ್ಕೆ ಮಾರುತಿ ಸುಜುಕಿ ಕಂಪನಿಯು ಇಕೋ ಕಾರ್ ಅನ್ನು ಸಿಎನ್‌ಜಿ ಆಯ್ಕೆಯೊಂದಿಗೆ ಬಿಡುಗಡೆಗೊಳಿಸಿದೆ. ಸಿಎನ್‌ಜಿ ಕಾರುಗಳು, ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ವಾಹನಗಳಿಗಿಂತ ಕಡಿಮೆ ಮಾಲಿನ್ಯವನ್ನು ಉಂಟು ಮಾಡುತ್ತವೆ.
MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಈ ಇಕೋ ಮಾದರಿಯಲ್ಲಿ 5ರಿಂದ 7 ಸೀಟುಗಳನ್ನು ಹೊಂದಿದೆ. ಈ ಕಾರಿನಲ್ಲಿ 1.2 ಲೀಟರ್ ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 73 ಬಿಹೆಚ್‌ಪಿ ಮತ್ತು 101 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನಲ್ಲಿ 5 ಸ್ಪೀಡಿನ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್ ಅಳವಡಿಸಲಾಗಿದೆ.

ಇಕೋ ಸಿಎನ್‌ಜಿ ಮಾದರಿಯು ಪ್ರತಿ ಲೀಟರ್‌ಗೆ 21.8 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಇಕೋ ಮಾದರಿಯ ಒಟ್ಟು ಮಾರಾಟದಲ್ಲಿ ಶೇ.17 ರಷ್ಟು ಸಿಎನ್‌ಜಿ ರೂಪಾಂತರ ಕೊಡುಗೆಯನ್ನು ನೀಡಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಮಾರುತಿ ಸುಜುಕಿ ಇಕೋ ಕಾರು ಭಾರತದ ಮಧ್ಯಮ ವರ್ಗದವರನ್ನು ಗುರಿಯಾಗಿಸಿಕೊಂಡು ಬಿಡುಗಡೆಗೊಳಿಸಲಾಗಿದೆ. ಈ ಕಾರಿನಲ್ಲಿ ಸ್ಲೈಡಿಂಗ್ ಟೂರ್ಸ್, ಇಬಿಡಿ ಹೊಂದಿರುವ ಎಬಿಎಸ್ ಬ್ರೇಕಿಂಗ್, ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಡ್ರೈವರ್ ಹಾಗೂ ಕೋ ಡ್ರೈವರ್‌ಗಳಿಗಾಗಿ ಸೀಟ್ ಬೆಲ್ಟ್ ರಿಮ್ಯಾಂಡರ್, ಹೈಸ್ಪೀಡ್ ಅಲರ್ಟ್ ಸೇರಿದಂತೆ ಹಲವಾರು ಫೀಚರ್ ಗಳಿವೆ.

ಒಮ್ನಿ ವ್ಯಾನ್ ಸ್ಥಗಿತಗೊಂಡ ಬಳಿಕ ಮಾರುತಿ ಸುಜುಕಿ ಕಂಪನಿಯ ಇಕೋ ಭಾರತೀಯ ಮಾರುಕಟ್ಟೆಯಲ್ಲಿರುವ ಏಕೈಕ ವ್ಯಾನ್ ಆಗಿದೆ. ಮಾರುತಿ ಸುಜುಕಿ ಕಂಪನಿಯ ಕಾರುಗಳ ಸರಣಿಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಮಾದರಿಗಳಲ್ಲಿ ಒಂದಾಗಿದೆ. ಇಕೋ ದೇಶದಲ್ಲಿ ಮಾರಾಟವಾಗುವ ವಾಹನಗಳ ಟಾಪ್-10 ಪಟ್ಟಿಯಲ್ಲಿ ಸ್ಥಿರವಾಗಿ ಸ್ಥಾನ ಪಡೆದುಕೊಂಡಿದೆ.


Click it and Unblock the Notifications