ಶಾಕಿಂಗ್ ನ್ಯೂಸ್: ಮಾರುತಿ ಸುಜುಕಿ ಕಾರು ಉತ್ಪಾದನಾ ಘಟಕದಲ್ಲಿನ ಸಿಬ್ಬಂದಿಗೆ ಕರೋನಾ ಪಾಸಿಟಿವ್

ಲಾಕ್‌ಡೌನ್ ವಿನಾಯ್ತಿ ನಂತರ ದೇಶಾದ್ಯಂತ ಬಹುತೇಕ ವಾಣಿಜ್ಯ ಚಟುವಟಿಕೆಗಳು ಪುನಾರಂಭಗೊಂಡಿದ್ದು, ಆಟೋ ಉತ್ಪಾದನಾ ಪ್ರಕ್ರಿಯೆಗೂ ವಿನಾಯ್ತಿ ನೀಡಲಾಗಿದೆ. ಆದರೆ ಗರಿಷ್ಠ ಸುರಕ್ಷಾ ಸೌಲಭ್ಯ ಬಳಕೆಯ ನಡುವೆಯೂ ಮಾರುತಿ ಸುಜುಕಿ ಕಾರು ಉತ್ಪಾದನಾ ಘಟಕದಲ್ಲಿ ಉದ್ಯೋಗಿಯೊಬ್ಬರಲ್ಲಿ ಕರೋನಾ ವೈರಸ್ ಪತ್ತೆಯಾಗಿದೆ.

ಮಾರುತಿ ಸುಜುಕಿ ಕಾರು ಉತ್ಪಾದನಾ ಘಟಕದ ಸಿಬ್ಬಂದಿಗೆ ಕರೋನಾ ಪಾಸಿಟಿವ್

ಮಾರುತಿ ಸುಜುಕಿ ತನ್ನ ಮೂರು ಘಟಕಗಳಲ್ಲೂ ಈಗಾಗಲೇ ವಾಹನ ಉತ್ಪಾದನೆ ಮರುಚಾಲನೆ ನೀಡಿದ್ದು, ವೈರಸ್ ಭೀತಿ ಹಿನ್ನಲೆ ಹಲವಾರು ಸುರಕ್ಷಾ ಕ್ರಮಗಳನ್ನು ಜಾರಿಗೊಳಿಸಿ ಉದ್ಯಮ ವ್ಯವಹಾರ ನಡೆಸುತ್ತಿದೆ. ಹೀಗಿರುವಾಗ ಮನೆಸಾರ್ ಘಟಕದಲ್ಲಿನ ಸಿಬ್ಬಂದಿಯೊಬ್ಬರಿಗೆ ವೈರಸ್ ಪತ್ತೆಯಾಗಿರುವ ಆತಂಕಕ್ಕೆ ಕಾರಣವಾಗಿದ್ದು, ಮುಂಜಾಗ್ರತ ಕ್ರಮವಾಗಿ ಕಾರು ಉತ್ಪಾದನಾ ಘಟಕವನ್ನು ತಾತ್ಕಾಲಿಕವಾಗಿ ಬಂದ್ ಮಾಡಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಾರುತಿ ಸುಜುಕಿ ಕಾರು ಉತ್ಪಾದನಾ ಘಟಕದ ಸಿಬ್ಬಂದಿಗೆ ಕರೋನಾ ಪಾಸಿಟಿವ್

ಕರೋನಾ ಪಾಸಿಟಿವ್ ಕೇಸ್ ಪತ್ತೆಯಾದ ಉದ್ಯೋಗಿಯು ಹರಿಯಾಣದಲ್ಲಿನ ಕಂಟೈನ್ಮೆಂಟ್ ಝೋನ್ ನಿವಾಸಿಯಾಗಿದ್ದು, ಕಳೆದ 15ರಿಂದಲೇ ಅನಾರೋಗ್ಯದ ಕಾರಣಕ್ಕೆ ಧೀರ್ಘಾವಧಿಯ ರಜೆ ಪಡೆದುಕೊಂಡಿದ್ದರಂತೆ.

ಮಾರುತಿ ಸುಜುಕಿ ಕಾರು ಉತ್ಪಾದನಾ ಘಟಕದ ಸಿಬ್ಬಂದಿಗೆ ಕರೋನಾ ಪಾಸಿಟಿವ್

ತದನಂತರ ಕರೋನಾ ವೈರಸ್ ಗುಣಲಕ್ಷಣಗಳು ಕಂಡುಬಂದಿದ್ದರಿಂದ ಗಂಟಲು ದ್ರವ ಪರೀಕ್ಷೆ ಮಾಡಿಸಲಾಗಿದ್ದು, 20ರಂದು ಬಂದ ವರದಿಯಲ್ಲಿ ವೈರಸ್ ಇರುವುದು ದೃಡವಾಗಿದೆ. ಉದ್ಯೋಗಿ ಒಬ್ಬರಿಗೆ ಸೋಂಕು ದೃಡವಾಗುತ್ತಿದ್ದಂತೆ ಮಾರುತಿ ಸುಜುಕಿ ಕಂಪನಿಗೂ ತಳಮಳ ಶುರುವಾಗಿದೆ.

ಮಾರುತಿ ಸುಜುಕಿ ಕಾರು ಉತ್ಪಾದನಾ ಘಟಕದ ಸಿಬ್ಬಂದಿಗೆ ಕರೋನಾ ಪಾಸಿಟಿವ್

ಸದ್ಯ ಕರೋನಾ ಪತ್ತೆಯಾದ ಉದ್ಯೋಗಿಯ ಜೊತೆ ನೇರ ಸಂಪರ್ಕದಲ್ಲಿದ್ದ ಹಲವು ಉದ್ಯೋಗಿಗಳನ್ನು ಹೋಂ ಕ್ವಾರಂಟೈನ್ ಮಾಡಲಾಗಿದ್ದು, ಕಾರು ಉತ್ಪಾದನಾ ಘಟಕವನ್ನು ಸಂಪೂರ್ಣವಾಗಿ ನಂಜು ನಿರೋಧಕ ರಸಾಯನಿಕಗಳಿಂದ ಸ್ವಚ್ಚಗೊಳಿಸಿ ಉತ್ಪಾದನಾ ಚಟುವಟಿಕೆಯನ್ನು ಮುಂದುವರಿಸಲಾಗಿದೆ.

ಮಾರುತಿ ಸುಜುಕಿ ಕಾರು ಉತ್ಪಾದನಾ ಘಟಕದ ಸಿಬ್ಬಂದಿಗೆ ಕರೋನಾ ಪಾಸಿಟಿವ್

ಒಂದು ವೇಳೆ ಇತರೆ ಸಿಬ್ಬಂದಿಯಲ್ಲೂ ವೈರಸ್ ಪತ್ತೆಯಾದಲ್ಲಿ ವಾಹನ ಉತ್ಪಾದನೆಯು ಮತ್ತೆ ಸ್ಥಗಿತಗೊಳ್ಳುವ ಎಲ್ಲಾ ಸಾಧ್ಯತೆಗಳಿದ್ದು, ಉತ್ಪಾದನಾ ಘಟಕಗಳಲ್ಲಿ ಪ್ರತಿ ಹಂತದಲ್ಲೂ ಸುರಕ್ಷಾ ಸೌಲಭ್ಯಗಳನ್ನು ಅಳಡಿಸಿದರೂ ವೈರಸ್ ಭೀತಿ ಮಾತ್ರ ಹೆಚ್ಚುತ್ತಲೇ ಇದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಮಾರುತಿ ಸುಜುಕಿ ಕಾರು ಉತ್ಪಾದನಾ ಘಟಕದ ಸಿಬ್ಬಂದಿಗೆ ಕರೋನಾ ಪಾಸಿಟಿವ್

ಜೊತೆಗೆ ಗ್ರಾಹಕರ ಸೇವೆಗಳಿಗೂ ಚಾಲನೆ ನೀಡಿರುವ ಮಾರುತಿ ಸುಜುಕಿಯು ಸೋಂಕು ಹರಡದಂತೆ ಗರಿಷ್ಠ ಎಚ್ಚರಿಕೆ ಕ್ರಮಗಳನ್ನು ಪ್ರಕಟಿಸಿದ್ದು, ವ್ಯವಹಾರದ ಸಂದರ್ಭದಲ್ಲಿ ಸುರಕ್ಷಾ ವಿಚಾರವಾಗಿ ಯಾವುದೇ ರಾಜಿ ಇಲ್ಲ ಎಂಬುವುದನ್ನು ಸ್ಪಷ್ಟಪಡಿಸಿದೆ.

ಮಾರುತಿ ಸುಜುಕಿ ಕಾರು ಉತ್ಪಾದನಾ ಘಟಕದ ಸಿಬ್ಬಂದಿಗೆ ಕರೋನಾ ಪಾಸಿಟಿವ್

ಉತ್ಪಾದನಾ ಘಟಕಗಳಲ್ಲಿ ಶೇ.50ಕ್ಕಿಂತಲೂ ಕಡಿಮೆ ಪ್ರಮಾಣದ ಉದ್ಯೋಗಿಗಳೊಂದಿಗೆ ಉತ್ಪಾದನಾ ಚಟುವಟಿಕೆಗಳನ್ನು ಕೈಗೊಳ್ಳಲಾಗಿದ್ದು, ಉದ್ಯೋಗದ ಸ್ಥಳದಲ್ಲಿ ಸಾಮಾಜಿಕ ಅಂತರದ ಜೊತೆಗೆ ಗುಣಮಟ್ಟದ ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್ ಮತ್ತು ಹ್ಯಾಂಡ್ ಗ್ಲೌಸ್ ಅನ್ನು ಕಡ್ಡಾಯವಾಗಿ ಬಳಕೆ ಮಾಡುತ್ತಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಮಾರುತಿ ಸುಜುಕಿ ಕಾರು ಉತ್ಪಾದನಾ ಘಟಕದ ಸಿಬ್ಬಂದಿಗೆ ಕರೋನಾ ಪಾಸಿಟಿವ್

ಹಾಗೆಯೇ ಅಧಿಕೃತ ವಾಹನಗಳ ಮಾರಾಟ ಮಳಿಗೆಗಳಲ್ಲೂ ಹೆಚ್ಚಿನ ಮಟ್ಟದ ಸುರಕ್ಷಾ ಕ್ರಮಗಳನ್ನು ತೆಗದುಕೊಳ್ಳಲಾಗುತ್ತಿದ್ದು, ನಿಯಮಿತವಾಗಿ ಟೆಸ್ಟಿಂಗ್ ವಾಹನಗಳ ಸ್ವಚ್ಚತೆ, ಸಿಬ್ಬಂದಿಯ ಆರೋಗ್ಯ ತಪಾಸಣೆ, ಸಿಬ್ಬಂದಿ ನಡುವೆ ಸಾಮಾಜಿಕ ಅಂತರ, ಹ್ಯಾಂಡ್ ಸ್ಯಾನಿಟೈಜ್ ಮತ್ತು ಫೇಸ್ ಶೀಲ್ಡ್‌ಗಳನ್ನು ಕಡ್ಡಾಯ ಬಳಕೆ ಮಾಡುತ್ತಿದೆ.

ಮಾರುತಿ ಸುಜುಕಿ ಕಾರು ಉತ್ಪಾದನಾ ಘಟಕದ ಸಿಬ್ಬಂದಿಗೆ ಕರೋನಾ ಪಾಸಿಟಿವ್

ಇದಲ್ಲದೇ ಗ್ರಾಹಕರ ಸೇವೆಗಳನ್ನು ಕೈಗೊಳ್ಳುವ ಸಿಬ್ಬಂದಿ ಕೂಡಾ ನಿಗದಿತ ಸ್ಥಳದಿಂದ ಹೊರಹೊಗುವಾಗ ಮತ್ತು ಒಳಬರುವಾಗ ಥರ್ಮಾಮೀಟರ್‌ನಿಂದ ಟೆಸ್ಟಿಂಗ್ ಕಡ್ಡಾಯವಾಗಿದ್ದು, ಸರ್ವೀಸ್‌ಗೆ ಬರುವ ವಾಹನಗಳನ್ನು ಕೂಡಾ ಪೂರ್ತಿಯಾಗಿ ನಂಜುನಿರೋಧಕ ರಸಾಯನಿಕಗಳಿಂದ ಶುಚಿಗೊಳಿಸಿದ ನಂತರವೇ ರೀಪೆರಿ ಮತ್ತು ವಿತರಣೆ ಮಾಡುತ್ತದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಮಾರುತಿ ಸುಜುಕಿ ಕಾರು ಉತ್ಪಾದನಾ ಘಟಕದ ಸಿಬ್ಬಂದಿಗೆ ಕರೋನಾ ಪಾಸಿಟಿವ್

ಹೀಗಿದ್ದರೂ ವೈರಸ್ ಭೀತಿಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸುಮಾರು 2 ತಿಂಗಳಿನಿಂದ ಭಾರೀ ನಷ್ಟ ಅನುಭವಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಆತಂಕ ಶುರುವಾಗಿದೆ. ಮಾರುತಿ ಸುಜುಕಿ ಮಾತ್ರವಲ್ಲದೆ ಚೆನ್ನೈನಲ್ಲಿರುವ ಹ್ಯುಂಡೈ ಕಾರು ಉತ್ಪಾದನಾ ಘಟಕದಲ್ಲಿನ ಸಿಬ್ಬಂದಿಯೊಬ್ಬರಿಗೂ ಕರೋನಾ ಪಾಸಿಟಿವ್ ಪತ್ತೆಯಾಗಿದೆ.

Most Read Articles

Kannada
English summary
Maruti Suzuki Employee Tests Positive For COVID-19 At Manesar Plant After Restart Of Operations. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X