Just In
Don't Miss!
- Lifestyle
'ಮಂಗಳವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ '
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಂಕಷ್ಟದ ಸಮಯದಲ್ಲಿ ಬಡವರ ಹಸಿವು ನೀಗಿಸಿದ ಮಾರುತಿ ಸುಜುಕಿ
ಕರೋನಾ ವೈರಸ್ ಮಟ್ಟಹಾಕುವುದಕ್ಕಾಗಿ ಲಾಕ್ ಡೌನ್ ವಿಧಿಸಿರುವ ಕೇಂದ್ರ ಸರ್ಕಾರವು ವೈರಸ್ ಹರಡದಂತೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ವಾಣಿಜ್ಯ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ.

ಲಾಕ್ ಡೌನ್ನಿಂದ ದುಡಿದು ತಿನ್ನುವಂತಹ ವರ್ಗದ ಕೋಟ್ಯಾಂಟರ ಜನರ ಬದುಕು ದುಸ್ತರವಾಗಿದ್ದು, ದಿನದ ಒಂದು ಹೊತ್ತಿನ ಆಹಾರಕ್ಕೂ ಪರದಾಟುವಂತಹ ಶೋಚನೀಯ ಪರಿಸ್ಥಿತಿ ಎದುರಾಗಿದೆ. ಹೀಗಿರುವಾಗ ಬಡವರ ಹಸಿವು ತಣಿಸಲು ಮುಂದಾಗಿರುವ ದೇಶದ ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾದ ಮಾರುತಿ ಸುಜುಕಿಯು ಲಾಕ್ ಡೌನ್ ಆದ ದಿನದಿಂದ ದಿನಂಪ್ರತಿ ದೇಶದ ವಿವಿಧಡೆ 7 ಸಾವಿರ ಜನರಿಗೆ ಊಟ ಮತ್ತು ಅಗತ್ಯ ಅಡುಗೆ ಸಾಮಗ್ರಿಗಳ ಪೊಟ್ಟಣಗಳನ್ನು ವಿತರಣೆ ಮಾಡುತ್ತಿದೆ.

ಇದಲ್ಲದೇ ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಧನಸಹಾಯ ಮತ್ತು ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿವೆ.

ಕರೋನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದ್ದು, ಕರೋನಾ ವಿರುದ್ಧ ಹೋರಾಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಣಿಗೆ ಸಂಗ್ರಹ ಅಭಿಯಾನವನ್ನು ಕೈಗೊಂಡಿವೆ.

ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧದ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬುತ್ತಿದ್ದಾರೆ. ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಯ ಜೊತೆಗೆ ಧನಸಹಾಯವನ್ನು ಕೂಡಾ ಮಾಡುತ್ತಿವೆ.

ದೇಶದ ನಂ.1 ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ ಕೂಡಾ ಅತಿ ಕಡಿಮೆ ಬೆಲೆಯಲ್ಲಿ ವೆಂಟಿಲೆಯಟರ್ಗಳ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿರುವುದಲ್ಲದೆ ಆಗ್ವಾ ಹೆಲ್ತ್ ಕೇರ್ ಸಂಸ್ಥೆಯೊಂದಿಗೆ ಮಹತ್ವದ ಒಡಂಬಡಿಕೆಗೆ ಸಹಿ ಹಾಕಿದೆ.

ದೇಶದ ವಿವಿಧ ಭಾಗದಲ್ಲಿ ಮೂರು ಕಾರು ಉತ್ಪಾದನಾ ಘಟಕಗಳಲ್ಲೂ ಆಗ್ವಾ ಹೆಲ್ತ್ ಕೇರ್ ಸಂಸ್ಥೆಯ ಸಹಯೋಗದೊಂದಿಗೆ ವೆಂಟಿಲೆಟರ್ಗಳನ್ನು ನಿರ್ಮಾಣ ಮಾಡಲಿರುವ ಮಾರುತಿ ಸುಜುಕಿ ಸಂಸ್ಥೆಯು ಪ್ರತಿ ತಿಂಗಳು 10 ಸಾವಿರ ಯುನಿಟ್ ಉತ್ಪಾದನೆ ಮಾಡುವುದಾಗಿ ಘೋಷಣೆ ಮಾಡಿದೆ.

ಜೊತೆಗೆ ಕೃಷ್ಣಾ ಮಾರುತಿ ಲಿಮೆಟೆಡ್ ಕಂಪನಿಯು ಪ್ರತ್ಯೇಕವಾಗಿ 20 ಲಕ್ಷ ಫೇಸ್ಮಾಸ್ಕ್ಗಳನ್ನು ಹರಿಯಾಣ ಸರ್ಕಾರಕ್ಕೆ ಉಚಿತವಾಗಿ ನೀಡುವುದಾಗಿ ಹೇಳಿದ್ದು, ಮತ್ತೊಂದು ಅಂಗಸಂಸ್ಥೆಯಾದ ಎಂಎಸ್ಐಎ ಮತ್ತು ಭಾರತ್ ಸೀಟ್ ಲಿಮಿಟೆಡ್ ಕಂಪನಿಗಳು ವೈದ್ಯಕೀಯ ಸೇವೆಗಳಿಗೆ ಬಳಕೆ ಮಾಡುವ ಪ್ರೋಕ್ಟೆಕ್ಟಿವ್ ಕ್ಲಾಥ್ಗಳನ್ನು ಸಿದ್ದಪಡಿಸಿ ಸರ್ಕಾರಕ್ಕೆ ಪೂರೈಕೆ ಮಾಡಲಿದ್ದಾರೆ.

ಇನ್ನು ದೇಶದ ಪ್ರಮುಖ ಕಾರು ಉತ್ಪಾದನಾ ಕಂಪನಿಗಳು ಸಹ ಕಾರು ಉತ್ಪಾದನೆ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ವೆಂಟಿಲೆಟರ್ಗಳ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದು, ಕರೋನಾ ಸೋಕಿಂತರಿಗೆ ಚಿಕಿತ್ಸೆ ನೀಡಲು ಕೆಲವು ವೈದ್ಯಕೀಯ ಉಪಕರಣ ಕೊರತೆ ಎದುರಾಗಿದೆ.