Just In
Don't Miss!
- News
ಜನಸೇವಕ್ ಸಮಾವೇಶದಲ್ಲಿ ಅಮಿತ್ ಶಾ ಭಾಷಣ; ಮುಖ್ಯಾಂಶಗಳು
- Movies
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2020-21ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಭಾರೀ ಪ್ರಮಾಣದ ನಷ್ಟ ಅನುಭವಿಸಿದ ಮಾರುತಿ ಸುಜುಕಿ
ಕರೋನಾ ವೈರಸ್ ಪರಿಣಾಮ ಆಟೋ ಉದ್ಯಮವು ಭಾರೀ ಪ್ರಮಾಣದ ನಷ್ಟ ಅನುಭವಿಸಿದ್ದು, ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ ಕಂಪನಿಯು ಕೂಡಾ 2020-21ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಸುಮಾರು ರೂ.249.4 ಕೋಟಿಯಷ್ಟು ನಷ್ಟ ಅನುಭವಿಸಿದೆ.

ಮಾರುತಿ ಸುಜುಕಿ ಕಂಪನಿಯು ಲಾಕ್‌ಡೌನ್ ತೆರವುಗೊಂಡ ನಂತರ 2020-21ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ ಒಟ್ಟು 76,599 ವಾಹನಗಳನ್ನು ವಾಹನಗಳನ್ನು ಮಾರಾಟ ಮಾಡುವ ಮೂಲಕ ರೂ. 3,677.5 ಕೋಟಿ ವಹಿವಾಟು ನಡೆಸಿದೆ. ಇದು ಕಳೆದ ವರ್ಷದ ಇದೇ ಅವಧಿಯಲ್ಲಿನ ಕಾರು ಮಾರಾಟದ ವಹಿವಾಟಿಗಿಂತಲೂ ರೂ.249.4 ಕೋಟಿ ಇಳಿಕೆ ಕಂಡುಬಂದಿದ್ದು, ಕಳೆದ ವರ್ಷದ ಕಾರು ಮಾರಾಟದಲ್ಲಿ ರೂ. 1,435 ಕೋಟಿ ಲಾಭಾಂಶ ಕಂಡುಕೊಂಡಿತ್ತು.

ಆದರೆ ಕರೋನಾ ವೈರಸ್‌ನಿಂದಾಗಿ ವಾಹನ ಉತ್ಪಾದನೆ ಮತ್ತು ಮಾರಾಟವು ಕೆಲವು ದಿನಗಳ ವರೆಗೆ ಸಂಪೂರ್ಣವಾಗಿ ಸ್ತಗಿತಗೊಂಡ ಪರಿಣಾಮ ಭಾರೀ ಪ್ರಮಾಣದ ಆರ್ಥಿಕ ಸಂಕಷ್ಟ ಎದುರಾಗಿದ್ದು, ಮಾರುತಿ ಸುಜುಕಿ ಮಾತ್ರವಲ್ಲದೇ ಬಹುತೇಕ ಆಟೋ ಕಂಪನಿಗಳು ಶೇ. 60ರಿಂದ ಶೇ.90ರಷ್ಟು ವಾಹನ ಮಾರಾಟದಲ್ಲಿ ಕುಸಿತ ಕಂಡಿವೆ.

ಸದ್ಯ ವೈರಸ್ ಭೀತಿ ಹೆಚ್ಚಿದ್ದರೂ ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ವಾಹನ ಮಾರಾಟವನ್ನು ಕೈಗೊಳ್ಳಲಾಗುತ್ತಿದ್ದು, ವೈರಸ್ ಭೀತಿ ನಡುವೆ ಉದ್ಯಮ ವ್ಯವಹಾರವನ್ನು ಕೈಗೊಳ್ಳುವುದು ಹೊಸ ಸವಾಲಾಗಿ ಪರಿಣಮಿಸಿದೆ.

ಇನ್ನು ವೈರಸ್ ಭೀತಿಯಿಂದಾಗಿ ಬಹುತೇಕ ಆಟೋ ಕಂಪನಿಗಳು ಆನ್‌ಲೈನ್ ವಹಿವಾಟಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದು, ಗ್ರಾಹಕರು ಕೂಡಾ ವೈರಸ್ ಭಯದಿಂದ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ನತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ.
MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

ಲಾಕ್‌ಡೌನ್ ವಿನಾಯ್ತಿ ನಂತರ ವಾಹನ ಮಾರಾಟದಲ್ಲಿ ಹಲವು ಹೊಸ ಬದಲಾಣೆಗಳನ್ನು ಪರಿಚಯಿಸಿರುವ ಆಟೋ ಕಂಪನಿಗಳು ಸುರಕ್ಷಿತ ವ್ಯಾಪಾರ-ವಹಿವಾಟು ನಡೆಸುತ್ತಿದ್ದು, ಸಂಕಷ್ಟದ ಪರಿಸ್ಥಿತಿಯಲ್ಲೂ ಹೊಸ ಕಾರುಗಳ ಮಾರಾಟ ಪ್ರಮಾಣದಲ್ಲಿ ತುಸು ಚೇತರಿಕೆ ಕಂಡುಬರುತ್ತಿದೆ. ಕಾರು ಮಾರಾಟದಲ್ಲಿ ಅತಿದೊಡ್ಡ ಕಂಪನಿಯಾಗಿರುವ ಮಾರುತಿ ಸುಜುಕಿ ಕೂಡಾ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದೆ.

ಮಾರುತಿ ಸುಜುಕಿಯ ಕಾರು ಮಾರಾಟವನ್ನು ಸುರಕ್ಷಿತವಾಗಿಸಲು ಕೈಗೊಂಡಿರುವ ಕ್ರಮಗಳು ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಆನ್‌ಲೈನ್ ಪ್ಲ್ಯಾಟ್ ಬಳಕೆ ಮಾಡುವ ಗ್ರಾಹಕರ ಸಂಖ್ಯೆಯು ಶೇ.45 ರಷ್ಟು ಏರಿಕೆಯಾಗಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಟೆಸ್ಟ್ ಡ್ರೈವ್ ಹೊರತುಪಡಿಸಿ ಉಳಿದೆಲ್ಲಾ ವಾಹನ ಖರೀದಿ ಮತ್ತು ಮಾರಾಟ ಪ್ರಕ್ರಿಯೆಯು ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಮೂಲಕವೇ ಕೈಗೊಳ್ಳಲಾಗುತ್ತಿದ್ದು, ಟೆಸ್ಟ್ ಡ್ರೈವ್ ಮತ್ತು ವಾಹನಗಳ ವಿತರಣೆ ಸಂದರ್ಭಗಳಲ್ಲೂ ಗರಿಷ್ಠ ಪ್ರಮಾಣದ ಸುರಕ್ಷಾ ಕ್ರಮಗಳೊಂದಿಗೆ ಹಸ್ತಾಂತರ ಮಾಡಲಾಗುತ್ತದೆ.

ಟೆಸ್ಟ್ ಡ್ರೈವ್‌ಗೆ ವಾಹನಗಳನ್ನು ನೀಡುವ ಮುನ್ನ ಮತ್ತು ವಾಪಸ್ ತೆಗೆದುಕೊಳ್ಳುವಾಗಲೂ ಕಡ್ಡಾಯವಾಗಿ ಟಚ್ ಪಾಯಿಂಟ್‌ಗಳನ್ನು ಸಂಪೂರ್ಣ ಸ್ಯಾನಿಟೈಜ್ ಮಾಡುವ ಮೂಲಕ ಸ್ವಚ್ಚತೆ ಕಾಪಾಡಿಕೊಳ್ಳಲಾಗುತ್ತಿದ್ದು, ಹೊಸ ವಾಹನಗಳನ್ನು ಗ್ರಾಹಕರಿಗೆ ಹಸ್ತಾಂತರ ಮಾಡುವಾಗಲೂ ಅಷ್ಟೇ ಪ್ರಮಾಣದ ಸುರಕ್ಷಾ ಕ್ರಮಗಳನ್ನು ತಗೆದುಕೊಳ್ಳಲಾಗುತ್ತಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೀಗಾಗಿಯೇ ಹೊಸ ವಾಹನಗಳ ಮಾರಾಟ ಪ್ರಮಾಣವು ವೈರಸ್ ಭೀತಿ ನಡುವೆಯೂ ನಿಧಾನವಾಗಿ ಚೇತರಿಕೆ ಕಾಣುತ್ತಿದ್ದು, ಗ್ರಾಹಕರು ಕೂಡಾ ವೈರಸ್ ಭಯದಿಂದ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ನತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ.