2020-21ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಭಾರೀ ಪ್ರಮಾಣದ ನಷ್ಟ ಅನುಭವಿಸಿದ ಮಾರುತಿ ಸುಜುಕಿ

ಕರೋನಾ ವೈರಸ್ ಪರಿಣಾಮ ಆಟೋ ಉದ್ಯಮವು ಭಾರೀ ಪ್ರಮಾಣದ ನಷ್ಟ ಅನುಭವಿಸಿದ್ದು, ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ ಕಂಪನಿಯು ಕೂಡಾ 2020-21ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಸುಮಾರು ರೂ.249.4 ಕೋಟಿಯಷ್ಟು ನಷ್ಟ ಅನುಭವಿಸಿದೆ.

ಕಾರು ಮಾರಾಟದಲ್ಲಿ ಭಾರೀ ಪ್ರಮಾಣದ ನಷ್ಟ ಅನುಭವಿಸಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಂಪನಿಯು ಲಾಕ್‌ಡೌನ್ ತೆರವುಗೊಂಡ ನಂತರ 2020-21ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ ಒಟ್ಟು 76,599 ವಾಹನಗಳನ್ನು ವಾಹನಗಳನ್ನು ಮಾರಾಟ ಮಾಡುವ ಮೂಲಕ ರೂ. 3,677.5 ಕೋಟಿ ವಹಿವಾಟು ನಡೆಸಿದೆ. ಇದು ಕಳೆದ ವರ್ಷದ ಇದೇ ಅವಧಿಯಲ್ಲಿನ ಕಾರು ಮಾರಾಟದ ವಹಿವಾಟಿಗಿಂತಲೂ ರೂ.249.4 ಕೋಟಿ ಇಳಿಕೆ ಕಂಡುಬಂದಿದ್ದು, ಕಳೆದ ವರ್ಷದ ಕಾರು ಮಾರಾಟದಲ್ಲಿ ರೂ. 1,435 ಕೋಟಿ ಲಾಭಾಂಶ ಕಂಡುಕೊಂಡಿತ್ತು.

ಭಾರೀ ಪ್ರಮಾಣದ ನಷ್ಟ ಅನುಭವಿಸಿದ ಮಾರುತಿ ಸುಜುಕಿ

ಆದರೆ ಕರೋನಾ ವೈರಸ್‌ನಿಂದಾಗಿ ವಾಹನ ಉತ್ಪಾದನೆ ಮತ್ತು ಮಾರಾಟವು ಕೆಲವು ದಿನಗಳ ವರೆಗೆ ಸಂಪೂರ್ಣವಾಗಿ ಸ್ತಗಿತಗೊಂಡ ಪರಿಣಾಮ ಭಾರೀ ಪ್ರಮಾಣದ ಆರ್ಥಿಕ ಸಂಕಷ್ಟ ಎದುರಾಗಿದ್ದು, ಮಾರುತಿ ಸುಜುಕಿ ಮಾತ್ರವಲ್ಲದೇ ಬಹುತೇಕ ಆಟೋ ಕಂಪನಿಗಳು ಶೇ. 60ರಿಂದ ಶೇ.90ರಷ್ಟು ವಾಹನ ಮಾರಾಟದಲ್ಲಿ ಕುಸಿತ ಕಂಡಿವೆ.

ಭಾರೀ ಪ್ರಮಾಣದ ನಷ್ಟ ಅನುಭವಿಸಿದ ಮಾರುತಿ ಸುಜುಕಿ

ಸದ್ಯ ವೈರಸ್ ಭೀತಿ ಹೆಚ್ಚಿದ್ದರೂ ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ವಾಹನ ಮಾರಾಟವನ್ನು ಕೈಗೊಳ್ಳಲಾಗುತ್ತಿದ್ದು, ವೈರಸ್ ಭೀತಿ ನಡುವೆ ಉದ್ಯಮ ವ್ಯವಹಾರವನ್ನು ಕೈಗೊಳ್ಳುವುದು ಹೊಸ ಸವಾಲಾಗಿ ಪರಿಣಮಿಸಿದೆ.

ಭಾರೀ ಪ್ರಮಾಣದ ನಷ್ಟ ಅನುಭವಿಸಿದ ಮಾರುತಿ ಸುಜುಕಿ

ಇನ್ನು ವೈರಸ್ ಭೀತಿಯಿಂದಾಗಿ ಬಹುತೇಕ ಆಟೋ ಕಂಪನಿಗಳು ಆನ್‌ಲೈನ್ ವಹಿವಾಟಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದು, ಗ್ರಾಹಕರು ಕೂಡಾ ವೈರಸ್ ಭಯದಿಂದ ಆನ್‌ಲೈನ್ ಪ್ಲ್ಯಾಟ್‌‌‌ಫಾರ್ಮ್‌ನತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ.

MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

ಭಾರೀ ಪ್ರಮಾಣದ ನಷ್ಟ ಅನುಭವಿಸಿದ ಮಾರುತಿ ಸುಜುಕಿ

ಲಾಕ್‌ಡೌನ್ ವಿನಾಯ್ತಿ ನಂತರ ವಾಹನ ಮಾರಾಟದಲ್ಲಿ ಹಲವು ಹೊಸ ಬದಲಾಣೆಗಳನ್ನು ಪರಿಚಯಿಸಿರುವ ಆಟೋ ಕಂಪನಿಗಳು ಸುರಕ್ಷಿತ ವ್ಯಾಪಾರ-ವಹಿವಾಟು ನಡೆಸುತ್ತಿದ್ದು, ಸಂಕಷ್ಟದ ಪರಿಸ್ಥಿತಿಯಲ್ಲೂ ಹೊಸ ಕಾರುಗಳ ಮಾರಾಟ ಪ್ರಮಾಣದಲ್ಲಿ ತುಸು ಚೇತರಿಕೆ ಕಂಡುಬರುತ್ತಿದೆ. ಕಾರು ಮಾರಾಟದಲ್ಲಿ ಅತಿದೊಡ್ಡ ಕಂಪನಿಯಾಗಿರುವ ಮಾರುತಿ ಸುಜುಕಿ ಕೂಡಾ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದೆ.

ಭಾರೀ ಪ್ರಮಾಣದ ನಷ್ಟ ಅನುಭವಿಸಿದ ಮಾರುತಿ ಸುಜುಕಿ

ಮಾರುತಿ ಸುಜುಕಿಯ ಕಾರು ಮಾರಾಟವನ್ನು ಸುರಕ್ಷಿತವಾಗಿಸಲು ಕೈಗೊಂಡಿರುವ ಕ್ರಮಗಳು ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಆನ್‌ಲೈನ್ ಪ್ಲ್ಯಾಟ್ ಬಳಕೆ ಮಾಡುವ ಗ್ರಾಹಕರ ಸಂಖ್ಯೆಯು ಶೇ.45 ರಷ್ಟು ಏರಿಕೆಯಾಗಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಭಾರೀ ಪ್ರಮಾಣದ ನಷ್ಟ ಅನುಭವಿಸಿದ ಮಾರುತಿ ಸುಜುಕಿ

ಟೆಸ್ಟ್ ಡ್ರೈವ್ ಹೊರತುಪಡಿಸಿ ಉಳಿದೆಲ್ಲಾ ವಾಹನ ಖರೀದಿ ಮತ್ತು ಮಾರಾಟ ಪ್ರಕ್ರಿಯೆಯು ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಮೂಲಕವೇ ಕೈಗೊಳ್ಳಲಾಗುತ್ತಿದ್ದು, ಟೆಸ್ಟ್ ಡ್ರೈವ್ ಮತ್ತು ವಾಹನಗಳ ವಿತರಣೆ ಸಂದರ್ಭಗಳಲ್ಲೂ ಗರಿಷ್ಠ ಪ್ರಮಾಣದ ಸುರಕ್ಷಾ ಕ್ರಮಗಳೊಂದಿಗೆ ಹಸ್ತಾಂತರ ಮಾಡಲಾಗುತ್ತದೆ.

ಭಾರೀ ಪ್ರಮಾಣದ ನಷ್ಟ ಅನುಭವಿಸಿದ ಮಾರುತಿ ಸುಜುಕಿ

ಟೆಸ್ಟ್ ಡ್ರೈವ್‌ಗೆ ವಾಹನಗಳನ್ನು ನೀಡುವ ಮುನ್ನ ಮತ್ತು ವಾಪಸ್ ತೆಗೆದುಕೊಳ್ಳುವಾಗಲೂ ಕಡ್ಡಾಯವಾಗಿ ಟಚ್ ಪಾಯಿಂಟ್‌ಗಳನ್ನು ಸಂಪೂರ್ಣ ಸ್ಯಾನಿಟೈಜ್ ಮಾಡುವ ಮೂಲಕ ಸ್ವಚ್ಚತೆ ಕಾಪಾಡಿಕೊಳ್ಳಲಾಗುತ್ತಿದ್ದು, ಹೊಸ ವಾಹನಗಳನ್ನು ಗ್ರಾಹಕರಿಗೆ ಹಸ್ತಾಂತರ ಮಾಡುವಾಗಲೂ ಅಷ್ಟೇ ಪ್ರಮಾಣದ ಸುರಕ್ಷಾ ಕ್ರಮಗಳನ್ನು ತಗೆದುಕೊಳ್ಳಲಾಗುತ್ತಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಭಾರೀ ಪ್ರಮಾಣದ ನಷ್ಟ ಅನುಭವಿಸಿದ ಮಾರುತಿ ಸುಜುಕಿ

ಹೀಗಾಗಿಯೇ ಹೊಸ ವಾಹನಗಳ ಮಾರಾಟ ಪ್ರಮಾಣವು ವೈರಸ್ ಭೀತಿ ನಡುವೆಯೂ ನಿಧಾನವಾಗಿ ಚೇತರಿಕೆ ಕಾಣುತ್ತಿದ್ದು, ಗ್ರಾಹಕರು ಕೂಡಾ ವೈರಸ್ ಭಯದಿಂದ ಆನ್‌ಲೈನ್ ಪ್ಲ್ಯಾಟ್‌‌‌ಫಾರ್ಮ್‌ನತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ.

Most Read Articles

Kannada
English summary
Maruti Suzuki India Limited Posts Rs 249.4 Crore Loss For First Quarter Of Financial Year 2020-21.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X