ಹೊಸ ಕಾರು ಖರೀದಿದಾರರಿಗೆ ಭರ್ಜರಿ ಲೋನ್ ಆಫರ್ ನೀಡಿದ ಮಾರುತಿ ಸುಜುಕಿ
ಲಾಕ್‌ಡೌನ್ ಸಂಕಷ್ಟದಲ್ಲಿ ಹೊಸ ವಾಹನಗಳ ಖರೀದಿ ಯೋಜನೆಯಿಂದ ಹಿಂದೆ ಸರಿಯುತ್ತಿರುವ ಗ್ರಾಹಕರನ್ನು ಸೆಳೆಯಲು ಮುಂದಾಗಿರುವ ಮಾರುತಿ ಸುಜುಕಿ ಕಂಪನಿಯು ಹೊಸ ಲೋನ್ ಆಫರ್ ಘೋಷಣೆ ಮಾಡಿದೆ.

ಆಟೋ ಉದ್ಯಮ ಸೇರಿದಂತೆ ಎಲ್ಲಾ ವಲಯದಲ್ಲೂ ಕರೋನಾ ಮಹಾಮಾರಿಯಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದ್ದು, ವ್ಯಾಪಾರ ಅಭಿವೃದ್ದಿಯು ಇದೀಗ ಹೊಸ ಸವಾಲಾಗಿ ಪರಿಣಮಿಸಿದೆ. ಸದ್ಯಕ್ಕೆ ಆಟೋ ಉದ್ಯಮಕ್ಕೆ ಕೆಲವು ವಿನಾಯ್ತಿಗಳನ್ನು ನೀಡಲಾಗಿದ್ದರೂ ಕೂಡಾ ವಾಹನ ಖರೀದಿದಾರರು ಇಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಇದಕ್ಕಾಗಿಯೇ ಸಂಕಷ್ಟದಲ್ಲಿರುವ ಆಟೋ ಕಂಪನಿಗಳು ಕುಸಿದಿರುವ ಹೊಸ ವಾಹನ ಮಾರಾಟವನ್ನು ಸುಧಾರಿಸಲು ವಿವಿಧ ಮಾದರಿಯ ಲೋನ್ ಆಫರ್‌ಗಳನ್ನು ಘೋಷಿಸುತ್ತಿವೆ.

ಲಾಕ್‌ಡೌನ್‌ನಿಂದ ಬಹುತೇಕ ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಉದ್ಯೋಗದ ಅಭದ್ರತೆ ಇದೀಗ ಅತಿ ದೊಡ್ಡ ಸಮಸ್ಯೆಯಾಗಿ ಕಾಡತೋಡಗಿದೆ. ಹೀಗಿರುವಾಗ ಹೊಸ ವಾಹನಗಳ ಮಾರಾಟವನ್ನು ಸರಿದಾರಿಗೆ ತರಲು ಯತ್ನಿಸುತ್ತಿರುವ ಆಟೋ ಕಂಪನಿಯು ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸುತ್ತಿವೆ.

ಹೊಸ ವಾಹನ ಖರೀದಿದಾರರಿಗೆ ಇಎಂಐ ಹೊರೆ ತಗ್ಗಿಸಲು ಅತಿ ಸುಲಭವಾದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ದೇಶದ ಅತಿ ದೊಡ್ಡಕಾರು ಮಾರಾಟ ಕಂಪನಿ ಮಾರುತಿ ಸುಜುಕಿ ಕೂಡಾ ಆಯ್ದ ಕಾರು ಮಾದರಿಗಳ ಮೇಲೆ ವಿಶೇಷ ಲೋನ್ ಆಫರ್ ನೀಡಿದೆ.
MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಚೋಳಮಂಡಲಂ ಇನ್ವೆಸ್ಟಮೆಂಟ್ ಅಂಡ್ ಫೈನಾನ್ಸ್ ಕಂಪನಿ ಲಿಮಿಟೆಡ್ ಜೊತೆಗೂಡಿ ಹೊಸ ಲೋನ್ ಆಫರ್ ಘೋಷಿಸಿರುವ ಮಾರುತಿ ಸುಜುಕಿ ಕಂಪನಿಯು ನಿಮ್ಮ ಇಷ್ಟದ ಕಾರುಗಳನ್ನು ಈಗಲೇ ಖರೀದಿಸಿ ಮತ್ತು ಹಣವನ್ನು ಮುಂದಿನ ವರ್ಷದಿಂದ ಮರುಪಾವತಿಸುವ ಅವಕಾಶ ನೀಡುತ್ತಿದೆ.

ಈ ಆಫರ್ ಆಯ್ದ ಕಾರು ಮಾದರಿಗಳ ಮೇಲೆ ಮಾತ್ರವೇ ಅನ್ವಯವಾಗಲಿದ್ದು, ಗರಿಷ್ಠ ಮಟ್ಟದ ಲೋನ್ ಸೌಲಭ್ಯವು ದೊರೆಯಲಿದೆ. ಇದು ಹೊಸ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಸಾಕಷ್ಟ ಸಹಕಾರಿಯಾಗಲಿದ್ದು, ಹೊಸ ಲೋನ್ ಸೌಲಭ್ಯವು ಮುಂದಿನ ಜೂನ್ 30ರ ತನಕ ಲಭ್ಯವಿರಲಿದೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಇನ್ನು ಕರೋನಾ ವೈರಸ್ ಪರಿಣಾಮದಿಂದಾಗಿ ಆರ್ಥಿಕ ಸಂಕಷ್ಟ ಶುರುವಾಗಿದ್ದು, ಬಹುತೇಕ ಹೊಸ ವಾಹನಗಳ ಖರೀದಿದಾರರು ವಾಹನ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿದ್ದಾರೆ.

ಲಾಕ್‌ಡೌನ್‌ಗೂ ಮೊದಲು ಬುಕ್ಕಿಂಗ್ ಮಾಡಿ ವಾಹನ ಖರೀದಿಯ ಸಂಭ್ರಮದಲ್ಲಿದ್ದ ಲಕ್ಷಾಂತರ ಗ್ರಾಹಕರು ಇದೀಗ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿದ್ದು, ಮಾರಾಟ ಮಳಿಗೆಗಳು ಪುನಾರಂಭಗೊಂಡ ನಂತರವೂ ವಾಹನ ಖರೀದಿ ಬದಲು ಬುಕ್ಕಿಂಗ್ ಹಣ ವಾಪಸ್ ನೀಡುವಂತೆ ಬೇಡಿಕೆಯಿಡುತ್ತಿರುವುದು ಆಟೋ ಕಂಪನಿಗಳನ್ನು ಚಿಂತೆಗೀಡು ಮಾಡಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಇದರಿಂದ ಗ್ರಾಹಕರನ್ನು ಸೆಳೆಯಲು ಬಹುತೇಕ ಆಟೋ ಕಂಪನಿಗಳು ಅತಿ ಸುಲಭವಾದ ಸಾಲಸೌಲಭ್ಯಗಳನ್ನು ನೀಡುತ್ತಿದ್ದು, ಮಾರುತಿ ಸುಜುಕಿ ಕೂಡಾ ತನ್ನ ಜನಪ್ರಿಯ ಕಾರುಗಳ ಮೇಲೆ ವಿಶೇಷ ಲೋನ್ ಆಫರ್ ನೀಡಿದೆ.


Click it and Unblock the Notifications