ಭಾರತದಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಮಾರುತಿ ಸುಜುಕಿ ಜಿಮ್ನಿ

ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಸ್‍‍ಯುವಿಗಳಲ್ಲಿ ಮಾರುತಿ ಸುಜುಕಿ ಜಿಮ್ನಿ ಒಂದಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಮೆಚ್ಚುಗೆಯನ್ನು ಪಡೆದುಕೊಂಡ ಮಾರುತಿ ಸುಜುಕಿ ಸಂಸ್ಥೆಯ ಜಿಮ್ನಿ ಮಿನಿ-ಎಸ್‌ಯುವಿಯನ್ನು ಇತ್ತೀಚೆಗೆ ನಡೆದ 2020ರ ಆಟೋ ಎಕ್ಸ್​ಪೋದಲ್ಲಿ ಅನಾವಣಗೊಳಿಸಿದ್ದರು.

ಭಾರತದಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಮಾರುತಿ ಸುಜುಕಿ ಜಿಮ್ನಿ

ಈ ಮಿನಿ ಎಸ್‍ಯುವಿಯನ್ನು 2018ರಲ್ಲಿ ಜಾಗತಿಕವಾಗಿ ಅನಾವರಣಗೊಂಡಿತು. ಜಿಮ್ನಿ ಮಿನಿ ಎಸ್‍ಯುವಿಯು ಜಾಗತಿಕವಾಗಿ ಅನಾವರಣಗೊಂಡು 1.5 ವರ್ಷಗಳ ಬಳಿಕ ಭಾರತದ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಮಿನಿ-ಎಸ್‌ಯುವಿ 2019 ರ 'ವರ್ಲ್ಡ್ ಅರ್ಬನ್ ಕಾರ್ ಅಫ್ ದಿ ಇಯರ್' ಎಂಬ ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಗ್ರಾಹಕರ ಮೆಚ್ಚುಗೆ ಪಡೆಯುವಲ್ಲಿ ಮಾರುತಿ ಸುಜುಕಿ ಜಿಮ್ನಿ ಯಶಸ್ವಿಯಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಮಾರುತಿ ಸುಜುಕಿ ಜಿಮ್ನಿ

ಅಲ್ಲದೇ 2020ರ ಆಟೋ ಎಕ್ಸ್ ಪೋದಲ್ಲಿ ಹೆಚ್ಚಿನ ಜನರ ಗಮನಸೆಳೆಯುವಲ್ಲಿ ಮಾರುತಿ ಸುಜುಕಿ ಜಿಮ್ನಿ ಯಶ್ವಸಿಯಾಗಿದೆ. ಈ ಜಿಮ್ನಿ ಎಸ್‍‍ಯುವಿಯನ್ನು ನವೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯು ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ ಎಂದು ವರದಿಗಳಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಮಾರುತಿ ಸುಜುಕಿ ಜಿಮ್ನಿ

ಹೊಸ ಜಿಮ್ನಿ ಲ್ಯಾಡರ್-ಫ್ರೇಮ್ ಚಾಸಿಸ್ ಅನ್ನು ಆಧರಿಸಿದೆ. ಜಿಮ್ಮಿ ಅರೆಕಾಲಿಕ 4ಡಬ್ಲೂಡಿ ಸೆಟಪ್ ಅನ್ನು ಹೊಂದಿದೆ. ಇದನ್ನು 2ಹೆಚ್/4ಡಬ್ಲ್ಯೂ ಹೈ/4ಡಬ್ಲ ಲೋ ಹೀಗೆ ಬದಲಾಯಿಸಬಹುದುದಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಮಾರುತಿ ಸುಜುಕಿ ಜಿಮ್ನಿ

ಈ ಮಿನಿ ಎಸ್‍ಯುವಿಯಲ್ಲಿ 3 ಲಿಂಕ್ ಆಕ್ಸಲ್ ಸಸ್ಪೆಂಷನ್ ಅನ್ನು ಹೊಂದಿದೆ. ಇದು ಕಠಿಣ ಭೂಪ್ರದೇಶಗಳಲ್ಲಿ ಸುಗಮವಾಗಿ ಸಾಗಲು ನೆರವಾಗುತ್ತದೆ. ಈ ಮಿನಿ ಎಸ್‍ಯುವಿಯಲ್ಲಿ 1.5 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಮಾರುತಿ ಸುಜುಕಿ ಜಿಮ್ನಿ

ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಅಥವಾ 4 ಸ್ಪೀಡ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಮಿನಿ ಎಸ್‍‍ಯುವಿಯನ್ನು ಡೀಸೆಲ್ ಅಥವಾ ಹೈಬ್ರಿಡ್ ಆಯ್ಕೆಗಳಲ್ಲಿ ಬಿಡುಗಡೆಗೊಳಿಸುವುದಿಲ್ಲ.

ಭಾರತದಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಮಾರುತಿ ಸುಜುಕಿ ಜಿಮ್ನಿ

ಜಿಮ್ನಿ ಮಿನಿ ಎಸ್‍‍ಯುವಿಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷತೆಗಾಗಿ 2 ಎಸ್‍ಆರ್‍ಎಸ್ ಏರ್‍‍ಬ್ಯಾಗ್‍ಗಳು, ಎ‍‍ಬಿಎಸ್ ಜೊತೆ ಇಬಿ‍ಡಿ, ಐಎಸ್‌ಒಎ‍ಫ್ಐಎಕ್ಸ್ ಸೀಟ್ ಮೌಂಟ್ಸ್ ಮತ್ತು ವ್ಯಾಹಿಕಲ್ ಸ್ಟೇಬಿಲಿಟಿ ಕಂಟ್ರೋಲ್ ಪ್ರೋಗ್ರಾಂ ಅನ್ನು ಅಳವಡಿಸಲಾಗಿದೆ. ಹೆಚ್ಚುವರಿ ಸುರಕ್ಷತೆಗಾಗಿ ಸುಜುಕಿ ಸೇಫ್ಟಿ ಸಪೋರ್ಟ್ ಅನ್ನು ಪರಿಚಯಿಸಿದೆ. ಈ ಮಿನಿ ಎಸ್‍ಯುವಿಗೆ ಕ್ರ್ಯಾಶ್ ಟೆಸ್ಟ್ ನಲ್ಲಿ ಮೂರು ಸ್ಟಾರ್ ಲಭಿಸಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಮಾರುತಿ ಸುಜುಕಿ ಜಿಮ್ನಿ

ವಿಶೇಷ ಅಂದ್ರೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಮಾರುತಿ ಸುಜುಕಿ ಜಿಮ್ನಿಯು ಭಾರತೀಯ ರಸ್ತೆಗಳಿಗೆ ಸರಿಹೊಂದುವ ಹಾಗೆ ವಿಶೇಷವಾಗಿ ತಯಾರಿಸಲಿದ್ದಾರೆ. ಜನಪ್ರಿಯ ಜಿಪ್ಸಿ ಎಸ್‍ಯುವಿಯ ಉತ್ತರಾಧಿಕಾರಿಯಾಗಿ ಬಿಡುಗಡೆಗೊಳಿಸಲಿರುವ ಜಿಮ್ನಿ ಎಸ್‍‍ಯುವಿಯು ಜಿಪ್ಸಿ ವಾಹನದಷ್ಟು ಜನಪ್ರಿಯತೆಯನ್ನು ಗಳಿಸುತ್ತಾ ಎಂಬುದನ್ನು ಕಾದು ನೋಡಬೇಕು.

ಭಾರತದಲ್ಲಿ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಮಾರುತಿ ಸುಜುಕಿ ಜಿಮ್ನಿ

ಇಂಡಿಯನ್-ಸ್ಪೆಕ್ ಸುಜುಕಿ ಜಿಮ್ನಿ ಗುಜರಾತ್‌ನ ಕಂಪನಿಯ ಸ್ಥಾವರದಲ್ಲಿ ಸ್ಥಳೀಯವಾಗಿ ಅಭಿವೃದ್ಧಿಪಡಿಸುವ ಸಾಧ್ಯತೆಗಳಿದೆ. ಭಾರತದಲ್ಲಿ ತಯಾರಾಗುತ್ತಿರುವ ಮಾರುತಿ ಸುಜುಕಿ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಸ್ಪರ್ಧಾತ್ಮಕವಾಗಿ ಬೆಲೆ ನಿಗದಿಪಡಿಸಬಹುದು ಮತ್ತು ಇದು ಎಸ್‍ಯುವಿ ವಿಭಾಗದಲ್ಲಿ ಅತ್ಯಂತ ಆಕರ್ಷಕ ಕೊಡುಗೆಯಾಗಿ ಹೊರಹೊಮ್ಮಲಿದೆ.

Article Published On: Saturday, February 22, 2020, 11:16 [IST]
English summary
Maruti Jimny India launch expected by Nov 2020. Read in Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+