Just In
- 1 hr ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 2 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 4 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 4 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Movies Puttakkana Makkalu:ಸ್ನೇಹಾ ಕೈ ಸೇರಿಯೇ ಬಿಡ್ತು ವಿಚ್ಛೇದನದ ಪೇಪರ್; ಮುಂದೇನು?
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಹುನೀರಿಕ್ಷಿತ ಮಾರುತಿ ಸುಜುಕಿ ಎಸ್-ಕ್ರಾಸ್ ಪೆಟ್ರೋಲ್ ಮಾದರಿಯ ಖರೀದಿಗೆ ಬುಕ್ಕಿಂಗ್ ಶುರು
2020ರ ದೆಹಲಿ ಆಟೋ ಎಕ್ಸ್ಪೋ ಅನಾವರಣಗೊಂಡಿದ್ದ ಮಾರುತಿ ಸುಜುಕಿ ಎಸ್-ಕ್ರಾಸ್ ಪೆಟ್ರೋಲ್ ಮಾದರಿಯು ಜೂನ್ ಆರಂಭದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಲ್ಲಿದ್ದು, ಹೊಸ ಕಾರು ಖರೀದಿಗಾಗಿ ಈಗಾಗಲೇ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಮಾರುತಿ ಸುಜುಕಿ ಕಂಪನಿಯು ಈಗಾಗಲೇ ಬಹುತೇಕ ಕಾರು ಮಾದರಿಗಳನ್ನು ಬಿಎಸ್-6 ಎಂಜಿನ್ನೊಂದಿಗೆ ಬಿಡುಗಡೆ ಮಾಡಿದ್ದು, ಹೊಚ್ಚ ಹೊಸ ಕಾರು ಮಾದರಿಯಾಗಿರುವ ಎಸ್-ಕ್ರಾಸ್ ಆವೃತ್ತಿಯು ಸಹ ಇದೀಗ ಬಿಡುಗಡೆಯಾಗುತ್ತಿದೆ. ರೂ.11 ಸಾವಿರ ಮುಂಗಡದೊಂದಿಗೆ ಹೊಸ ಕಾರು ಖರೀದಿಗೆ ಬುಕ್ಕಿಂಗ್ ಸಲ್ಲಿಸಬಹುದಾಗಿದ್ದು, ಹೊಸ ಕಾರು ಸದ್ಯಕ್ಕೆ ಪೆಟ್ರೋಲ್ ಮಾದರಿಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದೆ.
ಏಪ್ರಿಲ್ 1ರಿಂದ ಜಾರಿಗೆ ಬಂದಿರುವ ಬಿಎಸ್-6 ನಿಯಮ ಹಿನ್ನಲೆಯಲ್ಲಿ ಕಾರು ಮಾರಾಟದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಪರಿಚಯಿಸಿರುವ ಮಾರುತಿ ಸುಜುಕಿಯು ವಿಟಾರಾ ಬ್ರೆಝಾ ಮತ್ತು ಎಸ್-ಕ್ರಾಸ್ ಕಾರಿನಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದೆ.
ವಿಟಾರಾ ಬ್ರೆಝಾ ಈಗಾಗಲೇ ಹೊಸ ಪೆಟ್ರೋಲ್ ಎಂಜಿನ್ನೊಂದಿಗೆ ಬಿಡುಗಡೆಗೊಂಡಿದ್ದು, ಇದೀಗ ಎಸ್-ಕ್ರಾಸ್ ಮಾದರಿಯು ಸಹ ಹೊಸ ಎಂಜಿನ್ನೊಂದಿಗೆ ಬಿಡುಗಡೆಗೆ ಸಿದ್ದವಾಗಿದೆ.
ಕರೋನಾ ವೈರಸ್ ತಡೆಗಟ್ಟಲು ಲಾಕ್ಡೌನ್ ವಿಧಿಸಿರುವುದರಿಂದ ಎಸ್-ಕ್ರಾಸ್ ಪೆಟ್ರೋಲ್ ವರ್ಷನ್ ಸೇರಿದಂತೆ ಹಲವಾರು ಕಾರು ಮಾದರಿಗಳ ಬಿಡುಗಡೆಯು ವಿಳಂಬವಾಗಿದ್ದು, ಇದೀಗ ಲಾಕ್ಡೌನ್ ವಿನಾಯ್ತಿ ಹಿನ್ನಲೆಯಲ್ಲಿ ಹೊಸ ಕಾರು ಗ್ರಾಹಕರ ಕೈಸೇರಲು ಸಜ್ಜಾಗಿದೆ. ಹೊಸ ಕಾರು ವಿಟಾರಾ ಬ್ರೆಝಾದಲ್ಲಿ ಜೋಡಣೆ ಮಾಡಲಾಗಿರುವ 1.5-ಲೀಟರ್ ಪೆಟ್ರೋಲ್ ಮಾದರಿಯನ್ನೇ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಬಿಎಚ್ಪಿ ಉತ್ಪಾದನೆಯಲ್ಲಿ ಎಸ್-ಕ್ರಾಸ್ ಕಾರು ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲಿದೆ.
MOST READ: ಲಾಕ್ಡೌನ್ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ
ಜೊತೆಗೆ ಹೊಸ ಕಾರಿನ ಎಂಜಿನ್ನಲ್ಲಿ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಎರಡು ಆವೃತ್ತಿಗಳಲ್ಲೂ ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಜೋಡಣೆ ಮಾಡಲಿದ್ದು, ಇದು ಪರ್ಫಾಮೆನ್ಸ್ ಜೊತೆಗೆ ಮೈಲೇಜ್ ಪ್ರಮಾಣದಲ್ಲೂ ಉತ್ತಮ ರೇಟಿಂಗ್ಸ್ ಪಡೆದುಕೊಳ್ಳಲಿದೆ.
ಇನ್ನು ಬಿಎಸ್-6 ಜಾರಿಗೆ ಬಂದ ಹಿನ್ನಲೆಯಲ್ಲಿ ಮಾರುತಿ ಸುಜುಕಿಯು ಈ ಹಿಂದಿನ 1.3-ಲೀಟರ್ ಡೀಸೆಲ್ ಮಾದರಿಯನ್ನ ಸ್ಥಗಿತಗೊಳಿಸಿದ್ದು, ಜನಪ್ರಿಯ ವಿಟಾರಾ ಬ್ರೆಝಾ, ಎಸ್-ಕ್ರಾಸ್, ಸ್ವಿಫ್ಟ್ ಮತ್ತು ಡಿಜೈರ್ ಕಾರಿನಲ್ಲೂ ಕೂಡಾ ಇನ್ಮುಂದೆ ಡೀಸೆಲ್ ಆವೃತ್ತಿಯ ಮಾರಾಟವನ್ನು ಕೈಬಿಟ್ಟು ಕೇವಲ ಪೆಟ್ರೋಲ್ ಆವೃತ್ತಿಯನ್ನು ಮಾತ್ರವೇ ಖರೀದಿಗೆ ಲಭ್ಯವಿರಲಿದೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..
ಮಾಲಿನ್ಯ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿರುವುದೇ ಡೀಸೆಲ್ ಎಂಜಿನ್ ಮಾರಾಟದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಮಾರುತಿ ಸುಜುಕಿ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಕಡಿಮೆ ಸಾಮರ್ಥ್ಯದ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿವೆ.
ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ನಿರ್ಮಾಣದ ಬಿಎಸ್-4 ಡೀಸೆಲ್ ಕಾರುಗಳ ಎಂಜಿನ್ಗಳನ್ನು ಬಿಎಸ್-6 ನಿಯಮಕ್ಕೆ ಉನ್ನತೀಕರಣವು ಆರ್ಥಿಕವಾಗಿ ಹೊರೆಯಾಗಲಿದ್ದು, ಇದೇ ಕಾರಣಕ್ಕೆ ಪೆಟ್ರೋಲ್, ಪೆಟ್ರೋಲ್ ಜೊತೆಗೆ ಸ್ಮಾರ್ಟ್ ಹೈಬ್ರಿಡ್ ಮತ್ತು ಸಿಎನ್ಜಿ ಎಂಜಿನ್ ಆಯ್ಕೆ ಹೆಚ್ಚಿಸಲಾಗುತ್ತಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್ಗೆ ಭರ್ಜರಿ ಆಫರ್ ನೀಡಿದ ಟಾಟಾ
ಮಾರುತಿ ಸುಜುಕಿಯು ಈಗಾಗಲೇ ಹೊಸದಾಗಿ 1.2-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಕಾರು ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಮುಂಬರುವ ದಿನಗಳಲ್ಲಿ ಹ್ಯಾಚ್ಬ್ಯಾಕ್ ಕಾರುಗಳನ್ನು ಹೊರತುಪಡಿಸಿ ಸೆಡಾನ್, ಎಸ್ಯುವಿ ಮತ್ತು ಎಂಪಿವಿ ಕಾರು ಮಾದರಿಗಳಲ್ಲಿ ಮಾತ್ರವೇ ಹೊಸ ಮಾದರಿಯ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಬಹುದಾಗಿದೆ.