Just In
Don't Miss!
- Movies
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- News
ಕರ್ನಾಟಕ ಆಕ್ರಮಿತ ಪ್ರದೇಶ ಶೀಘ್ರ ಮಹಾರಾಷ್ಟ್ರಕ್ಕೆ ಸೇರ್ಪಡೆ: ಉದ್ಧವ್ ಠಾಕ್ರೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಂಕಷ್ಟದಲ್ಲೂ ನೆಕ್ಸಾ ಕಾರು ಮಾರಾಟ ಮಳಿಗೆಗಳನ್ನು ಹೆಚ್ಚಿಸಲು ಮುಂದಾದ ಮಾರುತಿ ಸುಜುಕಿ
ಬಜೆಟ್ ಬೆಲೆಯ ಕಾರು ಉತ್ಪಾದನೆ ಮತ್ತು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿಯು ಮುಂಬರುವ ದಿನಗಳಲ್ಲಿ ಹೊಸ ವಾಹನಗಳ ಮಾರಾಟದಲ್ಲಿ ಹೆಚ್ಚಳವಾಗುವ ನೀರಿಕ್ಷೆಯೊಂದಿಗೆ ವಿವಿಧ ಹೊಸ ಯೋಜನೆಗೆ ಚಾಲನೆ ನೀಡುತ್ತಿದ್ದು, ಪ್ರೀಮಿಯಂ ಕಾರುಗಳ ಮಾರಾಟ ಹೆಚ್ಚಳಕ್ಕಾಗಿ ಮತ್ತಷ್ಟು ಹೊಸ ನೆಕ್ಸಾ ಶೋರೂಂಗಳನ್ನು ತೆರೆಯಲು ಮುಂದಾಗಿದೆ.

ಆಟೋ ತಜ್ಞರ ಪ್ರಕಾರ, ಕರೋನಾ ವೈರಸ್ ಪರಿಣಾಮ ಮುಂಬರುವ ದಿನಗಳಲ್ಲಿ ಸ್ವಂತ ವಾಹನಗಳ ಬಳಕೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದರಿಂದ ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುವ ನೀರಿಕ್ಷೆಯಿದ್ದು, ಮಾರುತಿ ಸುಜುಕಿ ಸೇರಿದಂತೆ ಹಲವು ಕಂಪನಿಗಳು ಬಜೆಟ್ ಬೆಲೆಯ ವಾಹನಗಳ ಮಾರಾಟ ಹೆಚ್ಚಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸುತ್ತಿವೆ. ಮಾರುತಿ ಸುಜುಕಿ ಈಗಾಗಲೇ ದೇಶದ ಬಹುತೇಕ ನಗರಗಳಲ್ಲಿ ಮಾರಾಟ ಜಾಲವನ್ನು ಹೊಂದಿದ್ದು, ಅರೆನಾ ಮಾದರಿಯಲ್ಲಿ ನೆಕ್ಸಾ ಶೋರೂಂಗಳ ಸಂಖ್ಯೆಯನ್ನು ಸಹ ಹೆಚ್ಚಿಸುವ ನೀರಿಕ್ಷೆಯಲ್ಲಿದೆ.

ಸದ್ಯ ಕರೋನಾ ವೈರಸ್‌ನಿಂದಾಗಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನಿಂದ ವಾಹನ ಮಾರಾಟವು ಇಳಿಕೆಯಾಗಿದ್ದರೂ ಮುಂಬರುವ ದಿನಗಳಲ್ಲಿ ಮಾರಾಟ ಪ್ರಮಾಣ ಹೆಚ್ಚುವ ಎಲ್ಲಾ ಸಾಧ್ಯತೆಗಳಿದ್ದು, ನೆಕ್ಸಾ ಕಾರು ಮಾರಾಟ ಮಳಿಗೆಗಳ ಸಂಖ್ಯೆ ಹೆಚ್ಚಿಸಲು ಮಾರುತಿ ಸುಜುಕಿ ಉತ್ಸುಕವಾಗಿದೆ.

ಮಾರುತಿ ಸುಜುಕಿಯು ಕಾರು ಮಾರಾಟದಲ್ಲಿ ಎರಡು ಹಂತದ ಮಾರಾಟ ಮಳಿಗೆಗಳನ್ನು ಹೊಂದಿದ್ದು, ಅರೆನಾದಲ್ಲಿ ಸಾಮಾನ್ಯ ಮಾದರಿಯ ಕಾರು ಮಾದರಿಗಳಾದ ಆಲ್ಟೊ, ವ್ಯಾಗನ್ಆರ್, ಸೆಲೆರಿಯೊ, ಸ್ವಿಫ್ಟ್, ಬ್ರೆಝಾ, ಡಿಜೈರ್, ಎರ್ಟಿಗಾ ಮಾರಾಟ ಮಾಡಿದ್ದಲ್ಲಿ ನೆಕ್ಸಾ ಶೋರೂಂನಲ್ಲಿ ಪ್ರೀಮಿಯಂ ಕಾರು ಮಾದರಿಗಳಾದ ಇಗ್ನಿಸ್, ಬಲೆನೊ, ಸಿಯಾಜ್ ಮತ್ತು ಬಿಡುಗಡೆಯಾಗಲಿರುವ ಎಸ್-ಕ್ರಾಸ್ ಕಾರು ಮಾರಾಟ ಸೌಲಭ್ಯ ಹೊಂದಿದೆ.

ದೇಶಾದ್ಯಂತ ಮಾರುತಿ ಸುಜುಕಿ ಸದ್ಯ 2,600 ಅರೆನಾ ಕಾರು ಮಾರಾಟ ಮತ್ತು ಸೇವಾ ಕೇಂದ್ರಗಳನ್ನು ಹೊಂದಿದ್ದರೆ 370 ನೆಕ್ಸಾ ಶೋರೂಂಗಳು ಕಾರ್ಯನಿರ್ವಹಿಸುತ್ತಿವೆ. ನೆಕ್ಸಾ ಶೋರೂಂಗಳು ಕೇವಲ ಮೆಟ್ರೋ ನಗರಗಳಲ್ಲಿ ಮತ್ತು 2ನೇ ಹಂತದ ನಗರಗಳಲ್ಲಿ ಮಾತ್ರವೇ ಮಾರಾಟ ಸೌಲಭ್ಯವನ್ನು ಹೊಂದಿದ್ದು, ಮುಂಬರುವ ದಿನಗಳಲ್ಲಿ 2ನೇ ಹಂತದ ಮತ್ತಷ್ಟು ಹೊಸ ನಗರಗಳ ಜೊತೆ 3ನೇ ಹಂತದ ನಗರಗಳಲ್ಲೂ ನೆಕ್ಸಾ ಶೋರೂಂ ತೆರೆಯಲು ನಿರ್ಧರಿಸಲಾಗಿದೆ.

ನೆಕ್ಸಾ ಶೋರೂಂಗಳಿಗೆ ಚಾಲನೆ ನೀಡಿದ 5 ವರ್ಷಗಳಲ್ಲಿ ಮಾರುತಿ ಸುಜುಕಿ ಮಾರಾಟ ಪ್ರಮಾಣವನ್ನು ಹೆಚ್ಚಿಸಿರುವುದರ ಜೊತೆಗೆ ಗ್ರಾಹಕರಿಗೆ ವಿಭಿನ್ನ ಕಾರು ಖರೀದಿ ಅನುಭವ ಪರಿಚಯಿಸಿದ್ದು, ನೆಕ್ಸಾ ಮೂಲಕ ಇದುವರೆಗೆ 11 ಲಕ್ಷ ಕಾರುಗಳನ್ನು ಮಾರಾಟ ಮಾಡಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಈ ಮೂಲಕ ಮಾರುತಿ ಸುಜುಕಿ ಕಾರು ಮಾರಾಟದ ಶೇ.20 ರಷ್ಟು ಪಾಲನ್ನು ತನ್ನದಾಗಿಸಿಕೊಂಡಿರುವ ನೆಕ್ಸಾ ಶೋರೂಂಗಳು ಮುಂಬರುವ ದಿನಗಳಲ್ಲಿ ಮತ್ತಷ್ಟು ಗ್ರಾಹಕರ ಸೆಳೆಯುವ ನೀರಿಕ್ಷೆಯಲ್ಲಿದ್ದು, ಹೊಸ ಮಾರಾಟ ಮಳಿಗೆಗಳು ಕಾರು ಬೇಡಿಕೆ ಹೆಚ್ಚಿಸುವುದರ ಜೊತೆಗೆ ಗ್ರಾಹಕರ ಸೇವೆಗಳನ್ನು ಅತಿ ಸುಲಭವಾಗಿ ಒದಗಿಸುವ ಬಗ್ಗೆ ಮಾರುತಿ ಸುಜುಕಿಯು ಯೋಜನೆ ರೂಪಿಸಿದೆ.

ಇನ್ನು ಬಿಎಸ್-6 ಎಮಿಷನ್ ನಿಯಮ ಜಾರಿ ನಂತರ ಹೊಸ ಕಾರುಗಳ ಮಾರಾಟದಲ್ಲಿ ಭಾರೀ ಬದಲಾವಣೆ ತಂದಿರುವ ಮಾರುತಿ ಸುಜುಕಿಯು ಡೀಸೆಲ್ ಎಂಜಿನ್ ಆಯ್ಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದ್ದು, ಸದ್ಯಕ್ಕೆ ಪೆಟ್ರೋಲ್, ಸ್ಮಾರ್ಟ್ ಹೈಬ್ರಿಡ್ ಪ್ರೇರಿತ ಪೆಟ್ರೋಲ್ ಮತ್ತು ಸಿಎನ್‌ಜಿ ಕಾರುಗಳನ್ನು ಮಾತ್ರ ಮಾರಾಟ ಮಾಡುತ್ತಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಮಾರುತಿ ಸುಜುಕಿಯು ಸದ್ಯಕ್ಕೆ 800ಸಿಸಿ, 1.0-ಲೀಟರ್, 1.2-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಕಾರು ಮಾದರಿಗಳನ್ನು ಮಾತ್ರವೇ ಮಾರಾಟ ಮಾಡುತ್ತಿದ್ದು, ಮುಂಬರುವ ದಿನಗಳಲ್ಲಿ ಹ್ಯಾಚ್‌ಬ್ಯಾಕ್ ಕಾರುಗಳನ್ನು ಹೊರತುಪಡಿಸಿ ಸೆಡಾನ್, ಎಸ್‌ಯುವಿ ಮತ್ತು ಎಂಪಿವಿ ಕಾರು ಮಾದರಿಗಳಲ್ಲಿ ಮಾತ್ರವೇ ಹೊಸ ತಂತ್ರಜ್ಞಾನ ಪ್ರೇರಿತ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಬಿಡುಗಡೆಗೊಳಿಸಬಹುದಾದ ಸಾಧ್ಯತೆಗಳಿವೆ ಎನ್ನಲಾಗಿದೆ.