ಶೀಘ್ರದಲ್ಲೇ ಮತ್ತೆರಡು ಹೊಸ ಬಜೆಟ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಭಾರತದ ನಂ.1 ಕಾರು ಉತ್ಪಾದನಾ ಮತ್ತು ಮಾರಾಟ ಸಂಸ್ಥೆಯಾಗಿರುವ ಮಾರುತಿ ಸುಜುಕಿಯು ಶೀಘ್ರದಲ್ಲೇ ಮತ್ತೆರಡು ಹೊಸ ಬಜೆಟ್ ಕಾರುಗಳನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಒಂದು ಹ್ಯಾಚ್‌ಬ್ಯಾಕ್ ಮತ್ತು ಮತ್ತೊಂದು ಸಬ್ ಕಂಪ್ಯಾಕ್ಟ್ ಮಾದರಿಯು ರಸ್ತೆಗಿಳಿಯಲಿದೆ.

ಶೀಘ್ರದಲ್ಲೇ ಮತ್ತೆರಡು ಹೊಸ ಬಜೆಟ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಸದ್ಯ ಮಾರುಕಟ್ಟೆಯಲ್ಲಿ ಟಾಪ್ 10 ಕಾರುಗಳ ಮಾರಾಟದಲ್ಲಿ ಬರೋಬ್ಬರಿ ಏಳು ಕಾರು ಮಾದರಿಗಳು ಮಾರುತಿ ಸುಜುಕಿ ನಿರ್ಮಾಣದ ಕಾರುಗಳಾಗಿದ್ದು, ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಎರಡು ಕಾರುಗಳು ಸಹ ಬಜೆಟ್ ಬೆಲೆಯೊಂದಿಗೆ ಮಾರಾಟ ಮುಂಚೂಣಿ ಸಾಧಿಸುವ ತವಕದಲ್ಲಿವೆ. ಹೊಸ ಕಾರುಗಳು ರೂ.5 ಲಕ್ಷದಿಂದ ರೂ.8 ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದ್ದು, ಪೆಟ್ರೋಲ್ ಮಾದರಿಯಲ್ಲಿ ಮಾತ್ರವೇ ಮಾರಾಟಗೊಳ್ಳಲಿವೆ.

ಶೀಘ್ರದಲ್ಲೇ ಮತ್ತೆರಡು ಹೊಸ ಬಜೆಟ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಆದರೆ ಹೊಸ ಕಾರುಗಳ ತಾಂತ್ರಿಕ ಮಾಹಿತಿ ಕುರಿತಂತೆ ಯಾವುದೇ ಮಾಹಿತಿ ನೀಡದ ಮಾರುತಿ ಸುಜುಕಿಯು ಬಿಎಸ್-6 ನಿಯಮ ಜಾರಿ ನಂತರವಷ್ಟೇ ಹೊಸ ಕಾರುಗಳ ಅಧಿಕೃತ ರೋಡ್ ಟೆಸ್ಟಿಂಗ್ ಆರಂಭಿಸುವ ಬಗ್ಗೆ ಸುಳಿವು ನೀಡಿದೆ.

ಶೀಘ್ರದಲ್ಲೇ ಮತ್ತೆರಡು ಹೊಸ ಬಜೆಟ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಇನ್ನು ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ಹೊಸ ಎಮಿಷನ್ ಪ್ರಕಾರ ಡೀಸೆಲ್ ಕಾರುಗಳ ಮಾರಾಟದಲ್ಲಿ ಮಹತ್ವದ ತಂದಿರುವ ಮಾರುತಿ ಸುಜುಕಿ ಸಂಸ್ಥೆಯು ಕಡಿಮೆ ಸಾಮರ್ಥ್ಯದ ಡೀಸೆಲ್ ಕಾರುಗಳಿಗೆ ಗುಡ್‌ಬೈ ಹೇಳಿದ್ದು, ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರುಗಳ ಮೇಲೆ ಹೆಚ್ಚು ಒತ್ತು ನೀಡುತ್ತಿದೆ.

ಶೀಘ್ರದಲ್ಲೇ ಮತ್ತೆರಡು ಹೊಸ ಬಜೆಟ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಮಾಲಿನ್ಯ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿರುವುದೇ ಡೀಸೆಲ್ ಎಂಜಿನ್ ಮಾರಾಟದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಮಾರುತಿ ಸುಜುಕಿ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಕಡಿಮೆ ಸಾಮರ್ಥ್ಯದ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬಂದಿವೆ. ಇದಕ್ಕೆ ಕಾರಣ, ಬಿಎಸ್-6 ಉನ್ನತೀಕರಣವು ಕಾರುಗಳ ಬೆಲೆಯಲ್ಲಿ ಸಾಕಷ್ಟು ದುಬಾರಿಯಾಗಲಿದ್ದು, ಡೀಸೆಲ್ ಎಂಜಿನ್‌ಗೆ ಪರ್ಯಾಯವಾಗಿ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಆಯ್ಕೆಯನ್ನು ಹೆಚ್ಚಿಸುತ್ತಿದೆ.

ಶೀಘ್ರದಲ್ಲೇ ಮತ್ತೆರಡು ಹೊಸ ಬಜೆಟ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಒಂದು ವೇಳೆ ಕಡಿಮೆ ಸಾಮರ್ಥ್ಯದ ಡೀಸೆಲ್ ಎಂಜಿನ್‌ಗಳನ್ನು ಉನ್ನತೀಕರಿಸಿದರೂ ಬೆಲೆ ಹೆಚ್ಚಳದಿಂದ ಗ್ರಾಹಕರನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಲಿದ್ದು, ಇದಕ್ಕಾಗಿಯೇ ಮಾರುತಿ ಸುಜುಕಿಯು ರೂ.10 ಲಕ್ಷದೊಳಗಿನ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯ ಬಗೆಗೆ ಹೆಚ್ಚು ತೆಲೆಕೆಡಿಸಿಕೊಳ್ಳುತ್ತಿಲ್ಲ.

ಶೀಘ್ರದಲ್ಲೇ ಮತ್ತೆರಡು ಹೊಸ ಬಜೆಟ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಮಾಹಿತಿಗಳ ಪ್ರಕಾರ, ಮಾರುತಿ ಸುಜುಕಿ ಸಂಸ್ಥೆಯು ಹೈ ಎಂಡ್ ಮಾದರಿಗಳಲ್ಲಿ ಮಾತ್ರವೇ ಹೊಸದಾಗಿ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಿದ್ದು, ಇನ್ನುಳಿದಂತೆ ಕಡಿಮೆ ಎಂಜಿನ್ ಸಾಮಾರ್ಥ್ಯದ ಕಾರುಗಳಲ್ಲಿ ಪೆಟ್ರೋಲ್ ಮತ್ತು ಪೆಟ್ರೋಲ್ ಹೈಬ್ರಿಡ್ ಎಂಜಿನ್ ಆಯ್ಕೆಗಳು ಮುಂದುವರಿಯಲಿವೆ.

ಶೀಘ್ರದಲ್ಲೇ ಮತ್ತೆರಡು ಹೊಸ ಬಜೆಟ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಬಿಎಸ್-6 ನಂತರ ಬೆಲೆ ಹೆಚ್ಚಿದರೂ ಕೂಡಾ ಹೊಸ ಬದಲಾವಣೆಯೊಂದಿಗೆ ಕಾರು ಮಾರಾಟದಲ್ಲಿ ಯಾವುದೇ ಕುಸಿತ ಆಗದಂತೆ ಎಂಜಿನ್ ಆಯ್ಕೆಗಳನ್ನು ಸಿದ್ದಪಡಿಸುತ್ತಿದ್ದು, ಎಂಟ್ರಿ ಲೆವಲ್ ಕಾರುಗಳಲ್ಲಿ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಎಂಜಿನ್ ಮತ್ತು ಹೈ ಎಂಡ್ ಕಾರು ಮಾದರಿಗಳಲ್ಲಿ ಮಾತ್ರ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಡಿಸೇಲ್ ಎಂಜಿನ್ ಆಯ್ಕೆ ನೀಡಲಿದೆ.

ಶೀಘ್ರದಲ್ಲೇ ಮತ್ತೆರಡು ಹೊಸ ಬಜೆಟ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಮಾರುತಿ ಸುಜುಕಿ ಮಾತ್ರವಲ್ಲದೇ ಇನ್ನು ಹಲವು ಕಾರು ಉತ್ಪಾದನಾ ಸಂಸ್ಥೆಗಳು ಸಣ್ಣ ಗಾತ್ರದ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯನ್ನು ಸ್ಥಗಿತಗೊಳಿಸುತ್ತಿದ್ದು, ಡೀಸೆಲ್ ಕಾರುಗಳಿಗೆ ಭವಿಷ್ಯದಲ್ಲಿ ಮಾರುಕಟ್ಟೆ ಇರುವುದಿಲ್ಲ ಎನ್ನುವುದೇ ಈ ಮಹತ್ವದ ಬದಲಾವಣೆಗೆ ಕಾರಣವಾಗಿದೆ.

Article Published On: Wednesday, March 4, 2020, 11:21 [IST]
English summary
Country's largest car maker, Maruti Suzuki is developing two new budget cars for India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+