ವೆಂಟಿಲೇಟರ್ ಉತ್ಪಾದನೆಗೆ ಮುಂದಾದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಂಪನಿಯು ದೇಶೀಯ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಅಗ್ರ ಸ್ಥಾನದಲ್ಲಿದೆ. ಈಗ ಭಾರತದಲ್ಲಿ ಕರೋನಾ ವೈರಸ್ ಗೆ ತುತ್ತಾಗಿರುವ ಸಂತ್ರಸ್ತರನ್ನು ರಕ್ಷಿಸುವ ಕಾರ್ಯಕ್ಕೆ ಕೈಹಾಕಿದೆ. ಈ ಸದ್ಭಾವನೆ ಆಧಾರಿತ ಉಪಕ್ರಮ ಮತ್ತು ಅದರ ವಿವರಗಳನ್ನು ಸಹ ನೀವು ಪರಿಶೀಲಿಸಬಹುದು.

ವೆಂಟಿಲೇಟರ್ ಉತ್ಪಾದನೆಗೆ ಮುಂದಾದ ಮಾರುತಿ ಸುಜುಕಿ

ಇಡೀ ಜಗತ್ತನ್ನೇ ತತ್ತರಿಸುವಂತೆ ಮಾಡಿರುವ ಕರೋನಾ ಮಹಾಮಾರಿಯನ್ನು ತಡೆಯಲು ವೈದ್ಯರು ಹಾಗೂ ವಿಜ್ಞಾನಿಗಳು ಸಕಲ ರೀತಿಯಲ್ಲೂ ಪ್ರಯತ್ನಿಸುತ್ತಿದ್ದಾರೆ. ಆದರೆ ಜನರು ಇದನ್ನು ಗಂಭೀರವಾಗಿ ಪರಿಗಣಿಸದೆ ಬೇಕಾಬಿಟ್ಟಿಯಾಗಿ ತಿರುಗಾಡುತ್ತಿದ್ದಾರೆ. ಇದರಿಂದಾಗಿ ಕರೋನಾ ವೈರಸ್ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ವೆಂಟಿಲೇಟರ್ ಉತ್ಪಾದನೆಗೆ ಮುಂದಾದ ಮಾರುತಿ ಸುಜುಕಿ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿವೆ. ಕರೋನಾ ವೈರಸ್ ಸೋಂಕಿತರ ಸಂಖ್ಯೆಯು ಇಟಲಿ ಸೇರಿದಂತೆ ಹಲವು ದೇಶಗಳಲ್ಲಿ ಹೆಚ್ಚಾಗಿದೆ. ಕರೋನಾ ಸಂತ್ರಸ್ತರನ್ನು ರಕ್ಷಿಸಲು ವೆಂಟಿಲೇಟರ್ ಸೇರಿದಂತೆ ಹಲವು ವೈದ್ಯಕೀಯ ಸಲಕರಣೆಗಳ ಅಗತ್ಯವಿದೆ.

ವೆಂಟಿಲೇಟರ್ ಉತ್ಪಾದನೆಗೆ ಮುಂದಾದ ಮಾರುತಿ ಸುಜುಕಿ

ಆದರೆ ಇವುಗಳು ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಿಲ್ಲ. ಭಾರತದಲ್ಲಿ ಕರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯಕೀಯ ಉಪಕರಣಗಳು ಖರೀದಿಸಲಾಗುತ್ತಿದೆ.

ವೆಂಟಿಲೇಟರ್ ಉತ್ಪಾದನೆಗೆ ಮುಂದಾದ ಮಾರುತಿ ಸುಜುಕಿ

ಈ ನಿಟ್ಟಿನಲ್ಲಿ, ಆಟೋ ಮೊಬೈಲ್ ಕಂಪನಿಗಳು ವೆಂಟಿಲೇಟರ್‌ ಸೇರಿದಂತೆ ಹಲವು ವೈದ್ಯಕೀಯ ಉಪಕರಣಗಳನ್ನು ಪೂರೈಸಲು ತಯಾರಿ ನಡೆಸುತ್ತಿವೆ. ಇತ್ತೀಚೆಗಷ್ಟೇ ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯು ಈ ಯೋಜನೆಗೆ ಕೈಹಾಕಿತ್ತು.

ವೆಂಟಿಲೇಟರ್ ಉತ್ಪಾದನೆಗೆ ಮುಂದಾದ ಮಾರುತಿ ಸುಜುಕಿ

ಇದಾದ ನಂತರ ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಕಂಪನಿಯು ಸಹ ವೈದ್ಯಕೀಯ ಉಪಕರಣಗಳನ್ನು ತಯಾರಿಸಲು ಮುಂದಾಗಿರುವ ಬಗ್ಗೆ ವರದಿಗಳಾಗಿವೆ. ಕರೋನಾ ವಿರುದ್ಧದ ಹೋರಾಟದಲ್ಲಿ ತನ್ನ ಜೊತೆಗೆ ಕೈ ಜೋಡಿಸುವಂತೆ ಕೇಂದ್ರ ಸರ್ಕಾರವು ಕಾರು ತಯಾರಕ ಕಂಪನಿಗಳಿಗೆ ಮನವಿ ಮಾಡಿದೆ.

ವೆಂಟಿಲೇಟರ್ ಉತ್ಪಾದನೆಗೆ ಮುಂದಾದ ಮಾರುತಿ ಸುಜುಕಿ

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಮಾರುತಿ ಸುಜುಕಿ ಕಂಪನಿಯ ಅಧ್ಯಕ್ಷ ಆರ್.ಸಿ.ಭಾರ್ಗವರವರು ವೆಂಟಿಲೇಟರ್‌ಗಳು ಸೇರಿದಂತೆ ವೈದ್ಯಕೀಯ ಉಪಕರಣಗಳನ್ನು ಒದಗಿಸುವುದರ ಬಗ್ಗೆ ಎರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು.

ವೆಂಟಿಲೇಟರ್ ಉತ್ಪಾದನೆಗೆ ಮುಂದಾದ ಮಾರುತಿ ಸುಜುಕಿ

ಈಗ ಮಾರುತಿ ಸುಜುಕಿ ಕಂಪನಿಯ ಎಂಜಿನಿಯರ್‌ಗಳು ವೆಂಟಿಲೇಟರ್ ಸೇರಿದಂತೆ ಹಲವು ವೈದ್ಯಕೀಯ ಉಪಕರಣಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಇವುಗಳನ್ನು ಮಾರುತಿ ಸುಜುಕಿ ಕಂಪನಿಯ ಉತ್ಪಾದನಾ ಘಟಕಗಳಲ್ಲಿ ಉತ್ಪಾದಿಸುವ ಸಾಧ್ಯತೆಗಳಿವೆ.

ವೆಂಟಿಲೇಟರ್ ಉತ್ಪಾದನೆಗೆ ಮುಂದಾದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಂಪನಿಯು ಗುರಗಾಂವ್ ಹಾಗೂ ಮಾನೇಸರ್ ಗಳಲ್ಲಿ ಉತ್ಪಾದನಾ ಘಟಕಗಳನ್ನು ಹೊಂದಿದೆ. ಸದ್ಯಕ್ಕೆ ಕಾರು ಉತ್ಪಾದನೆಯನ್ನು ನಿಲ್ಲಿಸಲಾಗಿದ್ದು, ಕರೋನಾದ ತೀವ್ರತೆಗೆ ಅನುಗುಣವಾಗಿ, ವೈದ್ಯಕೀಯ ಉಪಕರಣಗಳನ್ನು ತಯಾರಿಸುವ ಸಾಧ್ಯತೆಗಳಿವೆ.

ಮೂಲ: ಎನ್‌ಡಿಟಿವಿ

Most Read Articles

Kannada
English summary
Maruti Suzuki plans to make ventilators for corona patients. Read in Kannada.
Story first published: Thursday, March 26, 2020, 16:52 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X