ವೈರಸ್ ಭೀತಿ: ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ನಲ್ಲಿ ಮಾರುತಿ ಸುಜುಕಿ ಕಾರು ಮಾರಾಟ ಹೆಚ್ಚಳ

ಹೆಚ್ಚುತ್ತಿರುವ ಕರೋನಾ ವೈರಸ್ ಪರಿಣಾಮ ಆಟೋ ಉದ್ಯಮದಲ್ಲಿ ಸುರಕ್ಷಿತ ವ್ಯಾಪಾರ-ವಹಿವಾಟು ಇದೀಗ ಹೊಸ ಸವಾಲಾಗಿ ಪರಿಣಮಿಸಿದೆ. ಇದರಿಂದ ಬಹುತೇಕ ಆಟೋ ಕಂಪನಿಗಳು ಆನ್‌ಲೈನ್ ವಹಿವಾಟಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದು, ಗ್ರಾಹಕರು ಕೂಡಾ ವೈರಸ್ ಭಯದಿಂದ ಆನ್‌ಲೈನ್ ಪ್ಲ್ಯಾಟ್‌‌‌ಫಾರ್ಮ್‌ನತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ.

ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ನಲ್ಲಿ ಕಾರು ಮಾರಾಟವು ಹೆಚ್ಚಳ

ಲಾಕ್‌ಡೌನ್ ವಿನಾಯ್ತಿ ನಂತರ ವಾಹನ ಮಾರಾಟದಲ್ಲಿ ಹಲವು ಹೊಸ ಬದಲಾಣೆಗಳನ್ನು ಪರಿಚಯಿಸಿರುವ ಆಟೋ ಕಂಪನಿಗಳು ಸುರಕ್ಷಿತ ವ್ಯಾಪಾರ-ವಹಿವಾಟು ನಡೆಸುತ್ತಿದ್ದು, ಸಂಕಷ್ಟದ ಪರಿಸ್ಥಿತಿಯಲ್ಲೂ ಹೊಸ ಕಾರುಗಳ ಮಾರಾಟ ಪ್ರಮಾಣದಲ್ಲಿ ತುಸು ಚೇತರಿಕೆ ಕಂಡುಬರುತ್ತಿದೆ. ಕಾರು ಮಾರಾಟದಲ್ಲಿ ಅತಿದೊಡ್ಡ ಕಂಪನಿಯಾಗಿರುವ ಮಾರುತಿ ಸುಜುಕಿ ಕೂಡಾ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದೆ.

ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ನಲ್ಲಿ ಕಾರು ಮಾರಾಟವು ಹೆಚ್ಚಳ

ಮಾರುತಿ ಸುಜುಕಿಯ ಕಾರು ಮಾರಾಟವನ್ನು ಸುರಕ್ಷಿತವಾಗಿಸಲು ಕೈಗೊಂಡಿರುವ ಕ್ರಮಗಳು ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಆನ್‌ಲೈನ್ ಪ್ಲ್ಯಾಟ್ ಬಳಕೆ ಮಾಡುವ ಗ್ರಾಹಕರ ಸಂಖ್ಯೆಯು ಶೇ.45 ರಷ್ಟು ಏರಿಕೆಯಾಗಿದೆ.

ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ನಲ್ಲಿ ಕಾರು ಮಾರಾಟವು ಹೆಚ್ಚಳ

ಟೆಸ್ಟ್ ಡ್ರೈವ್ ಹೊರತುಪಡಿಸಿ ಉಳಿದೆಲ್ಲಾ ವಾಹನ ಖರೀದಿ ಮತ್ತು ಮಾರಾಟ ಪ್ರಕ್ರಿಯೆಯು ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಮೂಲಕವೇ ಕೈಗೊಳ್ಳಲಾಗುತ್ತಿದ್ದು, ಟೆಸ್ಟ್ ಡ್ರೈವ್ ಮತ್ತು ವಾಹನಗಳ ವಿತರಣೆ ಸಂದರ್ಭಗಳಲ್ಲಿ ಗರಿಷ್ಠ ಸುರಕ್ಷಾ ಕ್ರಮಗಳೊಂದಿಗೆ ಹಸ್ತಾಂತರ ಮಾಡಲಾಗುತ್ತದೆ.

ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ನಲ್ಲಿ ಕಾರು ಮಾರಾಟವು ಹೆಚ್ಚಳ

ಟೆಸ್ಟ್ ಡ್ರೈವ್‌ಗೆ ವಾಹನಗಳನ್ನು ನೀಡುವ ಮುನ್ನ ಮತ್ತು ವಾಪಸ್ ತೆಗೆದುಕೊಳ್ಳುವಾಗಲೂ ಕಡ್ಡಾಯವಾಗಿ ಟಚ್ ಪಾಯಿಂಟ್‌ಗಳನ್ನು ಸಂಪೂರ್ಣ ಸ್ಯಾನಿಟೈಜ್ ಮಾಡುವ ಮೂಲಕ ಸ್ವಚ್ಚತೆ ಕಾಪಾಡಿಕೊಳ್ಳಲಾಗುತ್ತಿದ್ದು, ಹೊಸ ವಾಹನಗಳನ್ನು ಗ್ರಾಹಕರಿಗೆ ಹಸ್ತಾಂತರ ಮಾಡುವಾಗಲೂ ಅಷ್ಟೇ ಪ್ರಮಾಣದ ಸುರಕ್ಷಾ ಕ್ರಮಗಳನ್ನು ತಗೆದುಕೊಳ್ಳಲಾಗುತ್ತಿದೆ.

ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ನಲ್ಲಿ ಕಾರು ಮಾರಾಟವು ಹೆಚ್ಚಳ

ಹೀಗಾಗಿಯೇ ಹೊಸ ವಾಹನಗಳ ಮಾರಾಟ ಪ್ರಮಾಣವು ವೈರಸ್ ಭೀತಿ ನಡುವೆಯೂ ನಿಧಾನವಾಗಿ ಚೇತರಿಕೆ ಕಾಣುತ್ತಿದ್ದು, ಗ್ರಾಹಕರು ಕೂಡಾ ವೈರಸ್ ಭಯದಿಂದ ಆನ್‌ಲೈನ್ ಪ್ಲ್ಯಾಟ್‌‌‌ಫಾರ್ಮ್‌ನತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ.

ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ನಲ್ಲಿ ಕಾರು ಮಾರಾಟವು ಹೆಚ್ಚಳ

ಇನ್ನು ಕರೋನಾ ಮಹಾಮಾರಿಯಿಂದಾಗಿ ಕೇವಲ ಆಟೋ ಉದ್ಯಮದಲ್ಲಿ ಮಾತ್ರವಲ್ಲ ಎಲ್ಲಾ ವಾಣಿಜ್ಯ ವಹಿವಾಟಿನಲ್ಲೂ ಆರ್ಥಿಕ ಸಂಕಷ್ಟ ಎದುರಾಗಿದ್ದು, ವ್ಯಾಪಾರ ಅಭಿವೃದ್ದಿಯು ಇದೀಗ ಒಂದು ಹೊಸ ಸವಾಲಾಗಿ ಪರಿಣಮಿಸಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ನಲ್ಲಿ ಕಾರು ಮಾರಾಟವು ಹೆಚ್ಚಳ

ಸದ್ಯ ತೀವ್ರ ಕುಸಿತ ಕಂಡಿರುವ ಹೊಸ ವಾಹನ ಮಾರಾಟವು ಮತ್ತೆ ಮೊದಲಿನಂತೆ ಚೇತರಿಸಿಕೊಳ್ಳಲು ತುಸು ಸಮಯಾವಕಾಶ ತೆಗೆದುಕೊಳ್ಳಲಿದ್ದು, ಆಟೋ ತಜ್ಞರ ಪ್ರಕಾರ ವಾಹನ ಮಾರಾಟವು ಮೊದಲಿನ ಸ್ಥಿತಿಗೆ ಬರಲು ಕನಿಷ್ಠ 3 ರಿಂದ 4 ವರ್ಷ ಬೇಕಾಗಬಹುದು ಅಂದಾಜಿಸಿದ್ದಾರೆ.

ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ನಲ್ಲಿ ಕಾರು ಮಾರಾಟವು ಹೆಚ್ಚಳ

ಭಾರತೀಯ ಆಟೋ ಮೊಬೈಲ್ ಉದ್ಯಮದ ನಿರ್ವಹಣೆ ಮಾಡುತ್ತಿರುವ SIAM(ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಟರರ್ಸ್) ಸಂಘವು ಕೂಡಾ ಇದೇ ಅಂಶದ ಮೇಲೆ ಕಳವಳ ವ್ಯಕ್ತಪಡಿಸಿದ್ದು, ಪರಿಸ್ಥಿತಿ ಸುಧಾರಣೆಗೆ ಕೇಂದ್ರ ಸರ್ಕಾರದಿಂದ ಗರಿಷ್ಠ ವಿನಾಯ್ತಿಗಳಿಗೆ ಬೇಡಿಕೆಯಿಡುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ನಲ್ಲಿ ಕಾರು ಮಾರಾಟವು ಹೆಚ್ಚಳ

ಹೊಸ ವಾಹನ ಮಾರಾಟವನ್ನು ಸುಧಾರಿಸುವತ್ತ ಸರ್ಕಾರ ಕೈಗೊಳ್ಳಬಹುದಾದ ಸಲಹೆಗಳ ಪಟ್ಟಿ ಮಾಡಿರುವ ಸೈಮಾ ಸಂಘವು ಕೇಂದ್ರ ಸರ್ಕಾರಕ್ಕೆ ಶೀಘ್ರದಲ್ಲೇ ಪ್ರಾಸ್ತಾಪಿಸುವ ಸಾಧ್ಯತೆಗಳಿದ್ದು, ಜಿಎಸ್‌ಟಿ ಇಳಿಕೆ ಸೇರಿದಂತೆ ಹಲವು ವಿನಾಯ್ತಿಗಳನ್ನು ಕೋರುವ ಸಾಧ್ಯತೆಗಳಿವೆ.

Most Read Articles

Kannada
English summary
Maruti Suzuki Registers 45 Percent Growth In Digital Enquiries During Lockdown. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X