ಆನ್‌ಲೈನ್ ಕಾರು ಮಾರಾಟಕ್ಕೆ ಡಿಮ್ಯಾಂಡ್- 5 ಸಾವಿರ ಕಾರು ಮಾರಾಟ ಮಾಡಿದ ಮಾರುತಿ ಸುಜುಕಿ
ಮಾಹಾಮಾರಿ ಕರೋನಾ ವೈರಸ್‌ನಿಂದಾಗಿ ಇಡೀ ವಿಶ್ವವೇ ಸಂಕಷ್ಟಕ್ಕೆ ಸಿಲುಕಿದ್ದು, ಬಹುತೇಕ ವಾಣಿಜ್ಯ ವ್ಯಾಪಾರಗಳು ನೆಲಕಚ್ಚಿವೆ. ಭಾರತದಲ್ಲೂ ಲಾಕ್‌ಡೌನ್ ವಿಧಿಸಿದ ದಿನದಿಂದಲೂ ಎಲ್ಲಾ ಮಾದರಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಿದ್ದರಿಂದ ಆಟೋ ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಆರ್ಥಿಕ ಬಿಕ್ಕಟ್ಟು ಶುರುವಾಗಿದೆ.

ವೈರಸ್ ತಡೆಗಾಗಿ ಲಾಕ್‌ಡೌನ್ ಅನಿವಾರ್ಯವಾಗಿದ್ದರಿಂದ ಭಾರತೀಯ ಆಟೋ ಉದ್ಯಮವು ಸಹ ದಿನಂಪ್ರತಿ ನೂರಾರು ಕೋಟಿ ನಷ್ಟ ಅನುಭವಿಸುತ್ತಿದ್ದು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಆಟೋ ಕ್ಷೇತ್ರಕ್ಕೆ ವಿನಾಯ್ತಿ ನೀಡಲಾಗಿದೆಯಾದರೂ ಆರ್ಥಿಕ ಮುಗ್ಗಟ್ಟು ತೀವ್ರ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಹೊಸ ಸುರಕ್ಷಾ ಮಾರ್ಗಸೂಚಿತಂತೆ ಆಟೋ ಉದ್ಯಮವು ಮರು ಚಾಲನೆಗೊಂಡರು ನೀರಿಕ್ಷಿತ ಮಟ್ಟದಲ್ಲಿ ಗ್ರಾಹಕರಿಲ್ಲದೆ ಪರದಾಡುತ್ತಿವೆ.

ಜೊತೆಗೆ ಲಾಕ್‌ಡೌನ್‌ಗೂ ಮೊದಲ ಬುಕ್ಕಿಂಗ್ ಮಾಡಿ ವಾಹನ ಖರೀದಿಯ ಸಂಭ್ರಮದಲ್ಲಿದ್ದ ಗ್ರಾಹಕರು ಇದೀಗ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿದ್ದು, ಮಾರಾಟ ಮಳಿಗೆಗಳು ಪುನಾರಂಭಗೊಂಡ ನಂತರ ವಾಹನ ಖರೀದಿ ಬದಲು ಬುಕ್ಕಿಂಗ್ ಹಣ ವಾಪಸ್ ನೀಡುವಂತೆ ಬೇಡಿಕೆಯಿಡುತ್ತಿದ್ದಾರೆ.

ಸದ್ಯಕ್ಕೆ ವಾಹನ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುತ್ತಿರುವ ಬಹುತೇಕ ಗ್ರಾಹಕರು ಬುಕ್ಕಿಂಗ್ ಹಣ ವಾಪಸ್ ಪಡೆದುಕೊಳ್ಳುತ್ತಿದ್ದು, ಲಾಕ್‌ಡೌನ್ ನಂತರ ವಾಹನ ಮಾರಾಟ ಯೋಜನೆಯಲ್ಲಿದ್ದ ಆಟೋ ಕಂಪನಿಗಳಿಗೆ ಗ್ರಾಹಕರು ಬುಕ್ಕಿಂಗ್ ಹಣ ವಾಪಸ್ ಪಡೆದುಕೊಳ್ಳುವ ಮೂಲಕ ಮತ್ತೊಂದು ಶಾಕ್ ನೀಡಿದ್ದಾರೆ.
MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಲಾಕ್‌ಡೌನ್‌ಗೂ ಮುನ್ನ ದೇಶಾದ್ಯಂತ ಹೊಸ ವಾಹನಗಳಿಗೆ ಬುಕ್ಕಿಂಗ್ ಮಾಡಿದ್ದ ಗ್ರಾಹಕರಲ್ಲಿ ಸುಮಾರು ಶೇ.60ರಿಂದ ಶೇ.70ರಷ್ಟು ಜನ ಇದೀಗ ಬುಕ್ಕಿಂಗ್ ಹಣ ವಾಪಸ್ ನೀಡುವಂತೆ ಬೇಡಿಕೆ ಸಲ್ಲಿಸಿದ್ದು, ಇದು ಆಟೋ ಕಂಪನಿಗಳನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ.

ಲಾಕ್‌ಡೌನ್‌ಗೂ ಮುನ್ನ ದಿನಂಪ್ರತಿ ಸಾವಿರಾರು ವಾಹನಗಳನ್ನು ಮಾರಾಟ ಮಾಡುತ್ತಿದ್ದ ಮಾರುತಿ ಸುಜುಕಿ ಕೂಡಾ ಇದೀಗ ತೀವ್ರ ಹಿನ್ನಡೆ ಅನುಭವಿಸುತ್ತಿದ್ದು, ಮೇ 4ರಿಂದಲೇ ಮಾರಾಟ ಪುನಾರಂಭಿಸಿದ್ದ ಮಾರುತಿ ಸುಜುಕಿಯು ಸಂಕಷ್ಟ ಪರಿಸ್ಥಿತಿಯಲ್ಲೂ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಮೂಲಕ ಇದುವರೆಗೆ 5 ಸಾವಿರ ಯುನಿಟ್ ಬುಕ್ಕಿಂಗ್ ಪಡೆದುಕೊಂಡಿದೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ವೈರಸ್ ಹರಡದಂತೆ ಎಲ್ಲಾ ಮುನ್ನೆಚ್ಚೆರಿಕೆ ಕ್ರಮ ಕೈಗೊಳ್ಳುವ ಮೂಲಕ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದಿರುವ ಮಾರುತಿ ಸುಜುಕಿಯು ಇದುವರೆಗೆ 2,300 ಕಾರುಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಿದ್ದು, ಗ್ರಾಹಕರಿಗೆ ವಾಹನಗಳನ್ನು ವಿತರಣೆ ಮಾಡುವ ಸಂದರ್ಭದಲ್ಲೂ ಗರಿಷ್ಠ ಎಚ್ಚರಿಕೆ ಕ್ರಮಗಳನ್ನು ಅಳವಡಿಸಿಕೊಂಡಿದೆ.

ವೈರಸ್ ಭೀತಿಯ ನಡುವೆ ಆನ್‌ಲೈನ್ ಮೂಲಕ ವಾಹನ ಮಾರಾಟವು ಗ್ರಾಹಕರನ್ನು ಸೆಳೆಯುತ್ತಿದ್ದು, ವೈರಸ್ ಭೀತಿ ಹೋಗಲಾಗಡಿಸಲು ಆಟೋ ಕಂಪನಿಗಳು ತೆಗೆದುಕೊಂಡಿರುವ ಕ್ರಮಗಳು ಹೊಸ ವಾಹನ ಖರೀದಿ ಪ್ರಕ್ರಿಯೆಯನ್ನು ನಿಧಾನವಾಗಿ ಚೇತರಿಕೆ ಕಾಣುವಂತೆ ಮಾಡುವಲ್ಲಿ ಸಹಕಾರಿಯಾಗಿದೆ.
MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಆದರೂ ನೀರಿಕ್ಷಿತ ಮಟ್ಟದ ಗ್ರಾಹಕರನ್ನು ಸೆಳೆಯುವಲ್ಲಿ ಪರದಾಟುತ್ತಿರುವ ಆಟೋ ಕಂಪನಿಗಳು ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಮೂಲಕ ಗ್ರಾಹಕರ ಸೆಳೆಯುತ್ತಿದ್ದು, ಅತಿ ಸರಳವಾದ ವಾಹನ ಖರೀದಿ ಪ್ರಕ್ರಿಯೆಯನ್ನು ಅಳವಡಿಸಿಕೊಂಡಿರುವುದು ಸದ್ಯದ ಪರಿಸ್ಥಿತಿ ಉತ್ತಮ ವೇದಿಕೆಯಾಗಿದೆ ಎನ್ನಬಹುದು.


Click it and Unblock the Notifications