ಬಿಡುಗಡೆಯಾಗಲಿದೆ ಬಿಎಸ್-6 ಮಾರುತಿ ಸುಜುಕಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ

ಮಾರುತಿ ಸುಜುಕಿ ಕಂಪನಿಯು ತನ್ನ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಮಾರುತಿ ಸುಜುಕಿ ತನ್ನ ಹೊಸ ಎಸ್-ಕ್ರಾಸ್ ಕಾರನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಅಭಿವೃದ್ದಿಪಡಿಸಿ ಮುಂದಿನ ತಿಂಗಳು ಭಾರತದಲ್ಲಿ ಬಿಡುಗಡೆಗೊಳಿಸಲಿದೆ.

ಬಿಡುಗಡೆಯಾಗಲಿದೆ ಬಿಎಸ್-6 ಮಾರುತಿ ಸುಜುಕಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ

ಈ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಕಳೆದ ಫೆಬ್ರವರಿ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯ ಜನಪ್ರಿಯ ಎಸ್-ಕ್ರಾಸ್ ಕಾರಿನ ಒಂದು ಯುನಿಟ್ ಕೂಡ ಮಾರಾಟವಾಗಿಲ್ಲ. ಜನಪ್ರಿಯ ಮಾರುತಿ ಸುಜುಕಿ ಕಂಪನಿಗೆ ಎಸ್-ಕ್ರಾಸ್ ಕಾರಿನ ಒಂದು ಯುನಿಟ್‍ ಅನ್ನು ಕೂಡ ಮಾರಾಟ ಮಾಡಲು ಸಾಧ್ಯವಾಗಿಲ್ಲ. ಭಾರತೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಕಾರುಗಳಿಗೆ ಹೋಲಿಸಿದರೆ ಡೀಸೆಲ್ ಕಾರುಗಳಿಗೆ ಬೇಡಿಕೆಯು ಕಡಿಮೆಯಾಗಿದೆ.

ಬಿಡುಗಡೆಯಾಗಲಿದೆ ಬಿಎಸ್-6 ಮಾರುತಿ ಸುಜುಕಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ

ಅಲ್ಲದೇ ಡೀಸೆಲ್ ಎಸ್-ಕ್ರಾಸ್ ಕಾರಿನ ಮಾರಾಟದಲ್ಲಿ ಕುಸಿತ ಕಂಡ ಹಿನ್ನೆಲೆಯಲ್ಲಿ ಫೆಬ್ರವರಿ ತಿಂಗಳ ಕೊನೆಯಲ್ಲಿ ಈ ಮಾದರಿಯನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಮಾರುತಿ ಸುಜುಕಿ ಕಂಪನಿಯು ಎಸ್-ಕ್ರಾಸ್ ಕಾರನ್ನು ಪೆಟ್ರೋಲ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ.

ಬಿಡುಗಡೆಯಾಗಲಿದೆ ಬಿಎಸ್-6 ಮಾರುತಿ ಸುಜುಕಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ

ಮಾರುತಿ ಸುಜುಕಿ ಕಂಪನಿಯು ಹೊಸ ಎಸ್-ಕ್ರಾಸ್ ಕಾರಿನ ಟೀಸರ್ ಅನ್ನು ಕೂಡ ಬಿಡುಗಡೆಗೊಳಿಸಲಾಗಿದೆ. ಹೊಸ ಮಾರುತಿ ಎಸ್-ಕ್ರಾಸ್ ಕಾರನ್ನು ಮುಂದಿನ ತಿಂಗಳು ಭಾರತದಲ್ಲಿ ಬಿಡುಗಡೆಗೊಳಿಸಲಿದೆ.

ಬಿಡುಗಡೆಯಾಗಲಿದೆ ಬಿಎಸ್-6 ಮಾರುತಿ ಸುಜುಕಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ

ಹೊಸ ಎಸ್-ಕ್ರಾಸ್ ನಲ್ಲಿ 1.5 ಪೆಟ್ರೋಲ್ ಬಿಎಸ್- ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 103.5 ಬಿ‍ಹೆಚ್‍‍ಪಿ ಪವರ್ ಮತ್ತು 138 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 5 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅಥವಾ 4 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಬಿಡುಗಡೆಯಾಗಲಿದೆ ಬಿಎಸ್-6 ಮಾರುತಿ ಸುಜುಕಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ

ಈ ಹೊಸ ಕಾರಿನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟಚ್ ಸ್ಕ್ರೀನ್ ಇನ್ಪೋಟೇನ್‍‍ಮೆಂಟ್ ಸಿಸ್ಟಂ, ಸ್ಮಾರ್ಟ್‌ಪ್ಲೇ ಸ್ಟುಡಿಯೋ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋವನ್ನು ಹೊಂದಿದೆ.

ಬಿಡುಗಡೆಯಾಗಲಿದೆ ಬಿಎಸ್-6 ಮಾರುತಿ ಸುಜುಕಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ

ಇನ್ನೂ ಎಸಿ ವೆಂಟ್ಸ್, ಸ್ಟಿಯರಿಂಗ್ ಮೌಟೆಂಡ್ ಕಂಟ್ರೋಲ್ ಅನ್ನು ಅಳವಡಿಸಲಿದೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ಇದರಲ್ಲಿ ಏರ್‍‍ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಎಸ್ಒ‍ಫಿಕ್ಸ್ ಚೈಲ್ಡ್ ಸೀಟ್, ಸ್ಪೀಡ್ ವಾರ್ನಿಂಗ್ ಸಿಸ್ಟಂ ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಹೊಂದಿರಲಿದೆ.

ಬಿಡುಗಡೆಯಾಗಲಿದೆ ಬಿಎಸ್-6 ಮಾರುತಿ ಸುಜುಕಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ

ಕೇಂದ್ರ ಸರ್ಕಾರದ ಕ್ರ್ಯಾಶ್ ಟೆಸ್ಟ್ ನಿಯಮಗಳಿಗೆ ಅನುಗುಣವಾಗಿ ಹಲವಾರು ಸುರಕ್ಷಾ ಫೀಚರ್‍‍ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಈ ಹೊಸ ಕಾರಿನಲ್ಲಿ ಅಲಾಯ್ ವ್ಹೀಲ್, ಫ್ರಂಟ್ ಗ್ರಿಲ್, ಹೆಡ್‍ ಲ್ಯಾಂಪ್, ಎಲ್‍ಇಡಿ ಡಿಆರ್‍ಎಲ್, ಟರ್ನ್ ಸಿಗ್ನಿಲ್ ಮತ್ತು ಟೇಲ್‍‍ಲೈಟ್‍ಗಳನ್ನು ಹೊಂದಿರಲಿದೆ.

ಬಿಡುಗಡೆಯಾಗಲಿದೆ ಬಿಎಸ್-6 ಮಾರುತಿ ಸುಜುಕಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ

ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಎಸ್-ಕ್ರಾಸ್ ಸಿಗ್ಮಾ, ಡೆಲ್ಟಾ, ಝೀಟಾ ಮತ್ತು ಆಲ್ಫಾ ಎಂಬ ನಾಲ್ಕು ವಿವಿಧ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ದೇಶಿಯ ಮಾರುಕಟ್ಟೆಯಲ್ಲಿ ಹೊಸ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯು ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪೈಪೋಟಿ ನೀಡಲಿದೆ.

Article Published On: Friday, April 3, 2020, 10:56 [IST]
English summary
Maruti Suzuki S-cross petrol to launch next month. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+